ಪಿಎಸ್‌ಐ ನೇಮಕಾತಿ ಹಗರಣ: ಅಮೃತ್‌ ಪೌಲ್ ವಿರುದ್ಧ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ 1,406 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ ಸಿಐಡಿ ಪೊಲೀಸರು

ಬೆಂಗಳೂರು: ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕರಣದ ಹಗರಣದಲ್ಲಿ ಆರೋಪಿಯಾಗಿ, ಅಮಾನತುಗೊಂಡಿರುವ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಮೃತ್‌ ಪೌಲ್‌ ವಿರುದ್ಧ ಸಿಐಡಿ ಪೊಲೀಸರು ಸುಮಾರು 1,406 ಪುಟಗಳ ಪ್ರತ್ಯೇಕ ಆರೋಪ ಪಟ್ಟಿಯನ್ನು ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಬುಧವಾರ ಸಲ್ಲಿಸಿದ್ದಾರೆ. ತನಿಖಾಧಿಕಾರಿ ಡಿವೈಎಸ್‌ಪಿ ಬಿ. ಕೆ. … Continued

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಮುಂದಿನ ವಿಚಾರಣೆ ವರೆಗೆ ಮಧ್ಯಂತರ ತಡೆ ನೀಡಿದೆ. ಕೋಲಾರದ ಚಂದನ್‌ ವಿ, ವಸಂತ ನಾಯಕ್‌, ಆಶಾ ಸಣಕಲ್ಲ ಮತ್ತು ಇತರರು ಪ್ರತ್ಯೇಕವಾಗಿ ಮರು ಪರೀಕ್ಷೆ ರದ್ದು ಕೋರಿ … Continued

ಸಿಇಟಿ ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಅಕ್ಟೋಬರ್‌ 1ರಂದು ಪ್ರಕಟ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2022 ಪರಿಷ್ಕೃತ ರ್‍ಯಾಂಕ್‌ ಪಟ್ಟಿಯ ಫ‌ಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಕ್ಟೋಬರ್‌ 1ಕ್ಕೆ ಮುಂದೂಡಿದೆ. ಈ ಹಿಂದೆ ಸೆಪ್ಟೆಂಬರ್‌ 29ರಂದು ಪಟ್ಟಿ ಪ್ರಕಟಿಸುವುದಾಗಿ ಹೇಳಲಾಗಿತ್ತು. ಆದರೆ ಪಟ್ಟಿ ಪ್ರಕಟಿಸಲು ತಾಂತ್ರಿಕ ಕೆಲಸಗಳು ನಡೆಯಬೇಕಿರುವ ಹಿನ್ನೆಲೆಯಲ್ಲಿ ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಕೆಇಎ ಮೂಲಗಳಿಂದ ತಿಳಿದುಬಂದಿದೆ. ಪರಿಷ್ಕೃತ ರ್‍ಯಾಂಕ್‌ ಪಟ್ಟಿಗಾಗಿ ಸುಮಾರು 2 … Continued

ಕನಕಪುರದ ಡಿಕೆ ಶಿವಕುಮಾರ ನಿವಾಸದಲ್ಲಿ ಸಿಬಿಐ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ

ರಾಮನಗರ: ಕನಕಪುರದಲ್ಲಿನ ಡಿ.ಕೆ.ಶಿವಕುಮಾರ ನಿವಾಸದ ಮೇಲೆ ಸಿಬಿಐ (CBI) ಅಧಿಕಾರಿಗಳ ತಂಡ ಬುಧವಾರ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ ಎಂದು ವರದಿಯಾಗಿದೆ. ಬುಧವಾರ ಬೆಳಗ್ಗೆ 11ರ ಸುಮಾರಿಗೆ ಎಂಟು ಮಂದಿ ಅಧಿಕಾರಿಗಳ ತಂಡ ಕನಕಪುರ ತಹಸೀಲ್ದಾರ್ ಅವರನ್ನು ಕರೆದುಕೊಂಡು ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿ ಕೆಲವೊಂದು ದಾಖಲೆಗಳ ಪರಿಶೀಲನೆ ಮಾಡಿದೆ. ಅಲ್ಲದೆ, ಅವರ ಕನಕಪುರ, ದೊಡ್ಡಆಲಹಳ್ಳಿ, … Continued

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಬೆಂಬಲಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಸರ್ವಾನುಮತದ ನಿರ್ಣಯ ಅಂಗೀಕಾರ

ಹುಬ್ಬಳ್ಳಿ: ಬಹುನಿರೀಕ್ಷಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣಕ್ಕೆ ಸಂಪೂರ್ಣವಾಗಿ ಬೆಂಬಲಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ತನ್ನ ೯೩ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಅಂಗೀಕಾರ ಮಾಡಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು, ಈ ಯೋಜನೆ ಜಾರಿಯಾಗುವುದರಿಂದ ಉತ್ತರ ಕರ್ನಾಟಕ ಸಂಪೂರ್ಣ ಅಭಿವೃದ್ಧಿಯಾಗಲಿದೆ. ಅಷ್ಟೇ ಅಲ್ಲದೆ ಉದ್ಯಮಿಗಳ ಅಭಿವೃದ್ಧಿಗೆ … Continued

ಕಾರವಾರ: ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ- ರಾಷ್ಟ್ರೀಯ ವನ್ಯಜೀವಿ ಮಂಡಳಿ ಸಮಿತಿಯಿಂದ ಸಂಘ-ಸಂಸ್ಥೆಗಳಿಂದ ಅಹವಾಲು ಸ್ವೀಕಾರ

ಕಾರವಾರ :ಕರ್ನಾಟಕ ಹೈಕೋರ್ಟ್‌ ಆದೇಶದ ಮೇರೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸಮಿತಿಯು ಅಂಕೋಲಾ- ಹುಬ್ಬಳ್ಳಿ ರೇಲ್ವೆ ಯೋಜನೆಯಿಂದ ವನ್ಯಜೀವಿಗಳ ಮೇಲೆ ಆಗಬಹದಾದ ಪರಿಣಾಮದ ಕುರಿತು ಸ್ಥಳ ಪರಿಶೀಲನೆ ನಡೆಸಿದ ನಂತರ ವರದಿ ನೀಡಲಾಗುವುದು ಎಂದು ಭಾರತೀಯ ಅರಣ್ಯ ಸೇವಾ ಡಿಐಜಿ ರಾಕೇಶ ಜಗನ್ಯ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಸಭಾಭವನದಲ್ಲಿ ಬುಧವಾರ ನಡೆದ ಅಂಕೊಲಾ-ಹುಬ್ಬಳ್ಳಿ ರೇಲ್ವೆ ಯೋಜನೆಯ … Continued

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 5 ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಳೈ ಸುಳಿಗಾಳಿಯಿಂದ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆಗಳು ದಟ್ಟವಾಗಿವೆ. ಉತ್ತರ ಮತ್ತು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ನಾಲ್ಕೈದು ದಿನ ಬಿರುಸಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂಗಾರು ಅಂತ್ಯದ ವೇಳೆ ಮತ್ತೆ ಈಗ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ,ಮತ್ತು ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ … Continued

ರಾಜ್ಯದ ಪ್ರವಾಸಿ ಗೈಡ್‍ಗಳ ಮಾಸಿಕ ವೇತನ ಶೀಘ್ರವೇ 5000 ರೂ.ಗಳಿಗೆ ಹೆಚ್ಚಳ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ತಾಣಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಪ್ರಚುರಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ಗೈಡ್‍ಗಳಿಗೆ ನೀಡಲಾಗುತ್ತಿರುವ ಮಾಸಿಕ ವೇತನವನ್ನು 2000 ರೂ.ಗಳಿಂದ 5000 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗೈಡ್‍ಗಳಿಗೆ ಈವರೆಗೂ ತಿಂಗಳಿಗೆ 2000 … Continued

ಪ್ರಯಾಣಿಕರೇ ಗಮನಿಸಿ.. ದಸರಾ ಹಬ್ಬಕ್ಕೆ ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ 500 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ

ಹುಬ್ಬಳ್ಳಿ: ಅಕ್ಟೋಬರ್ ತಿಂಗಳಿನ ಮೊದಲ ವಾರದಲ್ಲಿ ಗಾಂಧಿ ಜಯಂತಿ ಮತ್ತು ನವರಾತ್ರಿ/ ದಸರಾ ಹಬ್ಬಕ್ಕೆ ರಜೆಗಳು ಇದ್ದು, ಸಾರ್ವಜನಿಕರು ಹಬ್ಬ ಆಚರಿಸಲು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 500 ಹೆಚ್ಚುವರಿ … Continued

ಸಾಕಷ್ಟು ಮಾಹಿತಿ ಸಂಗ್ರಹಿಸಿದ ನಂತರವೇ ಪಿಎಫ್​ಐ, ಇತರ ಎಂಟು ಸಂಘಟನೆಗಳ ನಿಷೇಧ: ಸಿಎಂ ಬೊಮ್ಮಾಯಿ

ಬೆಂಗಳೂರು: ಪಿಎಫ್​ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ. ಪಿಎಫ್​ಐ ನಿಷೇಧ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಪಿಎಫ್​​ಐ ನಿಷೇಧಿಸುವಂತೆ ವಿರೋಧ ಪಕ್ಷದವರೂ ಸೇರಿದಂತೆ ಎಲ್ಲರೂ ಮನವಿ ಮಾಡಿದ್ದೆವು. ಪಿಎಫ್​ ಸಂಘಟನೆಯನ್ನು ಯಾವಾಗ ನಿಷೇಧಿಸುವಿರಿ ಎಂದು ಹಲವರು ಪ್ರಶ್ನಿಸುತ್ತಿದ್ದರು. ಈ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಿದೆ ಎಂದರು. … Continued