ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಪೇಜಾವರ ಸ್ವಾಮೀಜಿ ಭೇಟಿ

ಬೆಂಗಳೂರು: ಅನಾರೋಗ್ಯದ ಕಾರಣ ವೈದ್ಯರ ಸಲಹೆಯಂತೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರ ಪದ್ಮನಾಭ ನಗರದ ಮನೆಗೆ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ … Continued

ಆರ್​ಎಸ್​ಎಸ್​ ಪ್ರಮುಖನ ಕಾರಿನ ಮೇಲೆ ‘ಕಿಲ್ ಯು’ ಎಂಬ ಜಿಹಾದಿ ಬರಹ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಆರ್‌ಎಸ್ಎಸ್ ಕಾರ್ಯಕರ್ತನ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕೂ ಚಕ್ರದ ಗಾಳಿ ಬಿಟ್ಟು ಕಾರಿನ ಮೇಲೆ ಕಿಲ್ ಯು, ಜಿಹಾದಿ ಎಂದು ಬರೆಯಲಾಗಿದೆ ಎಂದು ವರದಿಯಾಗಿದೆ. ಕಡೂರಿನ ಲಕ್ಷ್ಮೀಶ ನಗರದ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರದ ಗಾಳಿ ತೆಗೆದ ದುಷ್ಕರ್ಮಿಗಳು ಬಳಿಕ ಈ ರೀತಿ ಬರೆದಿದ್ದಾರೆ. ಕಿಲ್ … Continued

ನಾಲೆಜ್‌ ಪಾರ್ಕ್ ಸ್ಥಾಪನೆಯತ್ತ ನಮ್ಮ ಚಿಂತನೆ ಇರಲಿ: ಧಾರವಾಡದ ಐಐಐಟಿ ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು

ಧಾರವಾಡ: ಡಿಜಿಟಲ್ ತಂತ್ರಜ್ಞಾನದಲ್ಲಿ ಭಾರತವು ಮುಂಚೂಣಿಯಲ್ಲಿದ್ದು, ಇನ್ನೂ ಗುಣಮಟ್ಟದ ತಂತ್ರಜ್ಞರನ್ನು ತಯಾರು ಮಾಡಿದರೆ ಇನ್ನೂ ಎತ್ತರಕ್ಕೇರಲು ಸಾಧ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಪ್ರಾಯಪಟ್ಟರು. ಧಾರವಾಡದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಹಾಗೂ ಅದರ ನೂತನ ಕ್ಯಾಂಪಸ್‌ ಅನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ, ನ್ಯಾನೊ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಜೈವಿಕ … Continued

ಜೆಡಿಎಸ್ ಪಂಚರತ್ನ ಯಾತ್ರೆಗೆ ಮಹೂರ್ತ ಫಿಕ್ಸ್

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ದಿನವಾದ ನವೆಂಬರ್ 1ರಂದು ಜೆಡಿಎಸ್ ಮಹತ್ವಾಕಾಂಕ್ಷಿ ಕಾರ್ಯಕ್ರಮ ಪಂಚರತ್ನ ಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ಪದಾಧಿಕಾರಿಗಳ ಸಭೆಯ ನಂತರ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಪಂಚರತ್ನ ಯಾತ್ರೆ ನವೆಂಬರ್ 1ರಿಂದ ನಡೆಸಲು ನಿರ್ಧಾರ ಮಾಡಲಾಗಿದೆ. ನಾವು … Continued

ಹುಬ್ಬಳ್ಳಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪೌರ ಸನ್ಮಾನ

ಹುಬ್ಬಳ್ಳಿ: ಪೌರ ಸನ್ಮಾನ ಮಾಡಿ ಕೇವಲ ಒರಿಸ್ಸಾದ ಬಡ ಕುಟುಂಬದ ಹೆಣ್ಣುಮಗಳನ್ನು ಸನ್ಮಾನಿಸಿಲ್ಲ. ಇಡೀ ಭಾರತದ ಎಲ್ಲಾ ಹೆಣ್ಣುಮಕ್ಕಳನ್ನು ಗೌರವಿಸಿದ್ದೀರಿ. ‘ನಿಮ್ಮೆಲ್ಲರ ಪ್ರೀತಿ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಸೋಮವಾರ ಆಯೋಜಿಸಲಾಗಿದ್ದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಧಾರವಾಡ ಜಿಲ್ಲೆ ವಿದ್ಯಾಕಾಶಿ ಎಂದು … Continued

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ಹೆಸರು ಬದಲಾವಣೆ ಮಾಡಿದ ಸರ್ಕಾರ

ಬೆಂಗಳೂರು: ಕಳೆದ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ (SSLC) ಹಾಗೂ ಪಿಯು ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ಅನುಮೋದನೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಈಗ ರಾಜ್ಯ ಸರ್ಕಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರು ಬದಲಾವಣೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ಈಗ ರಾಜ್ಯ … Continued

ವಿಶ್ವವಿಖ್ಯಾತ ಮೈಸೂರು ದಸರೆಗೆ ವಿಧ್ಯುಕ್ತವಾಗಿ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ಐತಿಹಾಸಿಕ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಬೆಳಿಗ್ಗೆ ವಿಧ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಬೆಳಿಗ್ಗೆ 9.45 ರಿಂದ‌10.05ರ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಸ್ತುವಾರಿ ಸಚಿವ … Continued

ಗಂಗಾವತಿಯ ಹಣ್ಣಿನ ವ್ಯಾಪಾರಿ ಶಿವಮೊಗ್ಗ ಪೊಲೀಸರ ವಶಕ್ಕೆ

ಗಂಗಾವತಿ: ಕೊಪ್ಪಳ ಜಿಲ್ಲೆಯ ಗಂಗಾವತಿಯ ಮೈಬೂಬ್‌ ನಗರದ ನಿವಾಸಿ ಹಾಗೂ ಬಾಳೆಹಣ್ಣಿನ ವ್ಯಾಪಾರಿ ಶಬ್ಬೀರ್‌ ಎಂಬಾತನನ್ನು ಶಿವಮೊಗ್ಗ ಪೊಲೀಸರು ಭಾನುವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ನಿಷೇಧಿತ ಐಎಸ್‌ ಸಂಘಟನೆ ಜೊತೆ ನಂಟು ಹೊಂದಿದ ಆರೋಪದಲ್ಲಿ ಶಬ್ಬೀರ್‌ ಎಂಬಾತನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದು, ಶಿವಮೊಗ್ಗದಲ್ಲಿ ಬಂಧನಕ್ಕೆ ಒಳಗಾಗಿರುವ ಯುವಕರ ಜೊತೆ ಈತ ನಂಟು … Continued

ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ರಾಷ್ಟ್ರಪತಿಯಾಗಿ ಎಲ್ಲ ರಾಜ್ಯಗಳಲ್ಲಿ ಕರ್ನಾಟಕಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು. ಸೋಮವಾರದಿಂದ ಮೂರು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಧಿಕೃತ ಪ್ರಕಟಣೆಯ ಪ್ರಕಾರ, ಅವರು ಸರಣಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಧಾರವಾಡದಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಧಾರವಾಡದ ಹೊಸ ಕ್ಯಾಂಪಸ್ ಅನ್ನು ಸಹ ಉದ್ಘಾಟಿಸಲಿದ್ದಾರೆ. … Continued

ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಸಾವು

ಶಿವಮೊಗ್ಗ: ಹನ್ನೊಂದು ತಿಂಗಳ ಮಗು ನೀರಿನ ತೊಟ್ಟಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಜೋಗಿಹಳ್ಳಿಯ ಛಾಯಾಗ್ರಾಹಕ ದೇವರಾಜ ಹಾಗೂ ಅನುಷಾ ದಂಪತಿಯ 11 ತಿಂಗಳ ಮಗ ಅಕ್ಷಯ ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಅಸುನೀಗಿದೆ. ಭಾನುವಾರ ಮಹಾಲಯ ಅಮವಾಸ್ಯೆ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಾಹನ ತೊಳೆಯುವುದು ಹಾಗೂ ಪೂಜೆ ಪುನಸ್ಕಾರದಲ್ಲಿ … Continued