ಭದ್ರಾವತಿ : ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ತಂದೆ- ಮಗ ಸಾವು

ಶಿವಮೊಗ್ಗ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ-ಮಗ ಸಾವಿಗೀಡಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ನಡೆದ ವರದಿಯಾಗಿದೆ. ಭದ್ರಾವತಿಯ ರೈಲ್ವೆ ನಿಲ್ದಾಣದಲ್ಲಿ ಮೋಹನಪ್ರಸಾದ (70) ಹಾಗೂ ಅಮರನಾತ (31) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಂದೆ ಮಗ ಇಬ್ಬರೂ ತಾಳಗುಪ್ಪ -ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ತೆರಳಲು … Continued

ಈ ವಿದ್ಯಾರ್ಥಿಗಳಿಗೆ ಮಾತ್ರ ಅಕ್ಟೋಬರ್‌ 31ರವರೆಗೆ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ, ಉಳಿದವರಿಗೆ ಹೊಸ ಬಸ್‌ಪಾಸ್‌ ಪಡೆಯಲು ಸೂಚನೆ

ಹುಬ್ಬಳ್ಳಿ: ಅಂತಿಮ ವರ್ಷದ ಪದವಿ/ ಡಿಪ್ಲೋಮಾ/ ಸ್ನಾತಕೋತ್ತರ/ ವೃತ್ತಿಪರ ಕೋರ್ಸ್/ ಸಂಜೆ ಕಾಲೇಜು/ ಕಾನೂನು ವಿದ್ಯಾರ್ಥಿಗಳ ಪರೀಕ್ಷೆಗಳು ಬಾಕಿ ಇರುವುದರಿಂದ ವಿದ್ಯಾರ್ಥಿಗಳಿಗೆ ತರಗತಿ ಹಾಗೂ ಪರೀಕ್ಷೆಗಳಿಗೆ ಹಾಜರಾಗಲು ಅವಧಿ ವಿಸ್ತರಿಸಿಕೊಂಡ ರಶೀದಿ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಪಾಸುಗಳನ್ನು ತೋರಿಸಿ ಅಕ್ಟೋಬರ್‌ 31ರ ವರೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಗರ/ಹೊರವಲಯ/ಸಾಮಾನ್ಯ/ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು … Continued

ಬೆಳಗಾವಿ: ಬೈಕ್ ಮೇಲೆ ಹೊರಟಿದ್ದ ಯುವಕನ ಮೇಲೆ ಮರ ಬಿದ್ದು ಸಾವು

ಬೆಳಗಾವಿ : ಬೈಕ್ ಮೇಲೆ ಹೊರಟಿದ್ದ ಯುವಕನ ಮೇಲೆ ಮರಬಿದ್ದ ಪರಿಣಾಮ ಆತ ಮೃತಪಟ್ಟ ಘಟನೆ ಮಂಗಳವಾರ ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಆರ್ ಟಿಒ ಕಚೇರಿ ಬಳಿ ನಡೆದಿದೆ. ಇಬ್ಬರು ಯುವಕರು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚನ್ನಮ್ಮ ವೃತ್ತದ ಕಡೆ ಬೈಕಿನಲ್ಲಿ ಹೊರಟಿದ್ದರು. ಈ ಸಂದರ್ಭದಲ್ಲಿ ಮರ ಬೈಕ್ ಮೇಲೆ ಬಿದ್ದ ಪರಿಣಾಮ … Continued

ನೋಯಿಡಾದಲ್ಲಿ ವಿಶ್ವ ಡೇರಿ ಶೃಂಗ ಸಭೆ: ಕೆಎಂಎಫ್‍ನ ನಂದಿನಿ ಮಳಿಗೆ ವೀಕ್ಷಿಸಿದ ಪ್ರಧಾನಿ ಮೋದಿ

ನವದೆಹಲಿ: ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ಸೋಮವಾರ ಆರಂಭವಾದ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್‍ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ನೀಡಿದ ಪ್ರಧಾನಿ ಮೋದಿ ಮಾತನಾಡಿದರು. ಹೈನುಗಾರಿಕೆಯನ್ನೇ ಅವಲಂಬಿತರಾಗಿರುವ ರೈತ ಸಮುದಾಯ ಅದರಲ್ಲೂ ವಿಶೇಷವಾಗಿ … Continued

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆ ಮಾರ್ಪಾಡು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 26ರಿಂದ ಅಕ್ಟೋಬರ್‌ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಈ ಸಂಬಂಧ ಸೂಚನೆ ನೀಡಿದ್ದಾರೆ. ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್‌ ಕಾಮತ್‌ ಅವರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಗೆ ರಜೆ ನೀಡಲು ಮನವಿ ಮಾಡಿಕೊಂಡಿದ್ದರು. ಅದಕ್ಕೆ … Continued

ಪ್ರೌಢಶಾಲೆ ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ: 2500 ಶಿಕ್ಷಕರ ನೇಮಕಾತಿಗೆ ಮುಂದಾದ ಸರ್ಕಾರ

ಬೆಂಗಳೂರು: ಈಗಾಲೇ ರಾಜ್ಯ ಸರ್ಕಾರದಿಂದ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ 15,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈಗ ಅದರ ಬೆನ್ನಲ್ಲೇ ಮತ್ತೆ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ ಹೇಳಿದ್ದಾರೆ. ರಾಜ್ಯ ಸರ್ಕಾರದಿಂದ ಶಿಕ್ಷಕರ ಕೊರತೆ ನೀಗಿಸುವ … Continued

ಲೋಕಾಯುಕ್ತ ಪೊಲೀಸ್‌ ದಾಳಿ: ಬಿಬಿಎಂಪಿ ಜಂಟಿ ಆಯುಕ್ತ, ಪಿಎ ವಿಚಾರಣೆ

ಬೆಂಗಳೂರು: ಸ್ಥಿರಾಸ್ತಿಯೊಂದರ ಖಾತೆ ಬದಲಾವಣೆಗೆ ₹ 4 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಬಿಬಿಎಂಪಿ ಪಶ್ಚಿಮ ವಿಭಾಗದ (ಮಲ್ಲೇಶ್ವರ) ಜಂಟಿ ಆಯುಕ್ತ ಎಸ್‌.ಎಂ. ಶ್ರೀನಿವಾಸ ಮತ್ತು ಅವರ ಆಪ್ತ ಸಹಾಯಕ ಉಮೇಶ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ವರದಿಯಾಗಿದೆ. ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿಯಲ್ಲೇ ಇಬ್ಬರನ್ನೂ ಬಂಧಿಸಲಾಗಿದ್ದು, ₹ 4 … Continued

ಕನ್ನಡದ ಖ್ಯಾತ ನಟ ರಮೇಶ ಅರವಿಂದ ಸೇರಿ ಮೂವರು ಸಾಧಕರಿಗೆ ರಾಣಿ ಚೆನ್ನಮ್ಮ ವಿವಿಯಿಂದ ಗೌರವ ಡಾಕ್ಟರೇಟ್

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 10 ನೇ ಘಟಿಕೋತ್ಸವ ಬುಧವಾರ(ಸೆ.14) ಮಧ್ಯಾಹ್ನ 12 ಗಂಟೆಗೆ ಸುವರ್ಣಸೌಧದ ಸಭಾಂಗಣದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಹಾಗೂ 48 ಪಿಹೆಚ್.ಡಿ ಪದವಿಗಳನ್ನು ಪ್ರದಾನ ಮಾಡಲಾಗುತ್ತದೆ. ವಿಶ್ವವಿದ್ಯಾಲಯದ 43,607 ವಿದ್ಯಾರ್ಥಿಗಳಿಗೆ ಪದವಿ, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 11 ಸುವರ್ಣ ಪದಕಗಳನ್ನು ಪ್ರದಾನ … Continued

ಬೆಂಗಳೂರು ರಾಜಕಾಲುವೆ ಅತಿಕ್ರಮ ತೆರವು ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಕಟ್ಟಡ ಹಾಗೂ ಮನೆ ಕಟ್ಟಿದವರ ಮೇಲೆ ಹಾಗೂ ಕಾಲುವೆ ನೀರನ್ನು ಹರಿದು ಹೋಗಲು ತೊಂದರೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದರಲ್ಲಿ ಭೇದಿ-ಬಾವ … Continued

ರಾಯಚೂರು: ಭಾರತ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯ ಬ್ಯಾನರ್​ನಲ್ಲಿ ಸಿದ್ದರಾಮಯ್ಯ ಭಾವಚಿತ್ರ ಇಲ್ಲ, ಅಭಿಮಾನಿಗಳ ಬೇಸರ

ರಾಯಚೂರು: ‘ಭಾರತ ಐಕ್ಯತಾ ಯಾತ್ರೆ’ಯ ಪೂರ್ವಭಾವಿ ಸಭೆಯ ಬ್ಯಾನರ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರ ನಾಪತ್ತೆಯಾಗಿರುವ ವಿದ್ಯಮಾನ ನಡೆದ ಬಗ್ಗೆ ವರದಿಯಾಗಿದೆ. ನಡೆದಿದೆ. ಇದರಿಂದಾಗಿ ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಬೇಸರವಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ ಐಕ್ಯತಾ ಯಾತ್ರೆ ನಿಮಿತ್ತ ಡಿ.ಕೆ.ಶಿವಕುಮಾರ ಸ್ಥಳ ಪರಿಶೀಲನೆಗೆ ಆಗಮಿಸಿದ್ದಾರೆರಾಯಚೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ … Continued