ನೀಟ್‌ ಫಲಿತಾಂಶ : ಋುಷಿಕೇಶ್‌ ರಾಜ್ಯಕ್ಕೇ ಪ್ರಥಮ, ದೇಶಕ್ಕೆ ಮೂರನೇ ಸ್ಥಾನ

ಬೆಂಗಳೂರು: ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನಡೆಯುವ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್‌) ಫಲಿತಾಂಶ ಬುಧವಾರ ತಡರಾತ್ರಿ ಪ್ರಕಟವಾಗಿದ್ದು, ರಾಜ್ಯದ 72 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಅಖಲ ಭಾರತ ಮಟ್ಟದ ಟಾಪ್‌ ಐದು ರ್ಯಾಂಕ್‌ನಲ್ಲಿ ರಾಜ್ಯದ ಇಬ್ಬರು, ಟಾಪ್‌ 10 ರ್ಯಾಂಕ್‌ನಲ್ಲಿ ಮೂವರು ಮತ್ತು ಟಾಪ್‌ 50 ರಾರ‍ಯಂಕ್‌ನಲ್ಲಿ ಒಂಬತ್ತು ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ. … Continued

ಕನ್ನಡದಲ್ಲಿ ಬರೆದ ಚೆಕ್‌ ಅಮಾನ್ಯ; ಎಸ್‌ಬಿಐಗೆ ₹85 ಸಾವಿರ ದಂಡ ವಿಧಿಸಿದ ಗ್ರಾಹಕರ ಆಯೋಗ

ಧಾರವಾಡ: ಚೆಕ್‌ನಲ್ಲಿ ಕನ್ನಡ ಭಾಷೆ ಬಳಸಿರುವುದಕ್ಕೆ ಅಮಾನ್ಯ ಮಾಡಿದ್ದ ಭಾರತೀಯ ಸ್ಟೇಟ್‌ ಬ್ಯಾಂಕ್‌ಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ವಿಧಿಸಿದೆ. ಧಾರವಾಡದ ಕಲ್ಯಾಣ ನಗರ ನಿವಾಸಿ, ಇಂಗ್ಲಿಷ್‌ ಪ್ರಾಧ್ಯಾಪಕರಾದ ವಾದಿರಾಚಾರ್ಯ ಇನಾಮಾದಾರ ಅವರ ಚೆಕ್‌ ಅನ್ನು ಅಮಾನ್ಯ ಮಾಡಿದ್ದ ಎಸ್‌ಬಿಐ ನಡೆಗೆ ಆಕ್ಷೇಪಿಸಿ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ … Continued

ಬೆಂಗಳೂರು-ಮೈಸೂರು ದಶಪಥ ರಸ್ತೆ ಕಾಮಗಾರಿ ಲೋಪ : ಕೇಂದ್ರ ಸಾರಿಗೆ ಸಚಿವ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ಬೆಂಗಳೂರು: ಮೈಸೂರು- ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ನಡೆದಿದೆ ಎಂದು ಹೇಳಲಾದ ಲೋಪಗಳ ಕುರಿತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಿದರು. ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿದ್ದ ಸಚಿವ ಗಡ್ಕರಿ ಅವರನ್ನು ಖಾಸಗಿ ಹೊಟೇಲ್‍ನಲ್ಲಿ ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು, … Continued

ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ: ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ ಭೇಟಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಯೋಗಕ್ಷೇಮ ವಿಚಾರಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬಹುಭಾಷಾ ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರು ನೆಲಮಂಗಲದ … Continued

ಬಸ್ ಏರಲು ಯತ್ನಿಸಿದ ಯುವಕನನ್ನು ಒದ್ದು ರಸ್ತೆಗೆ ಬೀಳಿಸಿದ ಸಾರಿಗೆ ಸಂಸ್ಥೆ ನಿರ್ವಾಹಕ: ದೃಶ್ಯ ಕ್ಯಾಮರಾದಲ್ಲಿ ಸೆರೆ

ಮಂಗಳೂರು: ಸರ್ಕಾರಿ ಬಸ್ ಏರಲು ಯತ್ನಿಸಿದ ಯುವಕನನ್ನು ಕೆಎಸ್ಆರ್‌ಟಿಸಿ ನಿರ್ವಾಹಕರೊಬ್ಬರು ಕಾಲಿಂದ ಒದ್ದು ಬಸ್‌ನಿಂದ ಹೊರಗೆ ಹಾಕಿದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ಬಸ್ ಏರಲು ಯತ್ನಿಸಿದ ಯುವಕನ ಕಪಾಳಕ್ಕೆ ಹೊಡೆದ ನಿರ್ವಾಹಕ ಹೊಡೆದು, ಕಾಲಿಂದ ಒದ್ದಿದ್ದಾನೆ. ಒದ್ದ ರಭಸಕ್ಕೆ ಪ್ರಯಾಣಿಕ ಬಸ್‌ನಿಂದ … Continued

ಬದಲಾಗುತ್ತಿರುವ ಮಳೆಯ ಮಾದರಿ ಬಗ್ಗೆ ಅಧ್ಯಯನ ಮಾಡುವಂತೆ ಕೇಂದ್ರ ತಂಡಕ್ಕೆ ಮನವಿ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿನ ವಿಚಿತ್ರ ಮಳೆಯ ಬಗ್ಗೆ ಅಧ್ಯಯನ ನಡೆಸುವಂತೆ ಮಳೆ ಹಾನಿಯ ಅಂದಾಜಿಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮನವಿ ಮಾಡಿದ್ದಾರೆ. ರಾಜ್ಯದ ಬಹುತೇಕ ಕೆರೆಗಳು ತುಂಬಿ ತುಳುಕುತ್ತಿದ್ದು, ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ವಿಶೇಷ ಹಣ ಬಿಡುಗಡೆಗೆ ಶಿಫಾರಸು ಮಾಡುವಂತೆ ತಂಡಕ್ಕೆ ಅವರು ಮನವಿ ಮಾಡಿದರು. ರಾಜ್ಯ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 11ರ ವರೆಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಭಾಗದಲ್ಲೂ ಮುಂದಿನ 4 ದಿನಗಳ ಕಾಲ (ಸೆಪ್ಟೆಂಬರ್‌ 11) ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಮಲೆನಾಡು ಭಾಗಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ … Continued

ಸಕಲ ಸರ್ಕಾರಿ ಗೌರವಗಳೊಂದಿಗೆ ಉಮೇಶ ಕತ್ತಿ ಅಂತ್ಯಕ್ರಿಯೆ

ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ತೋಟದ ಮನೆಯಲ್ಲಿ ಬುಧವಾರ ಸಂಜೆ ನೆರವೇರಿತು. ಕುಶಾಲತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಧಾರ್ಮಿಕ ಪದ್ಧತಿಯಂತೆ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು. ಅಂತಿಮ ವಿಧಿವಿಧಾನ ಬೆಲ್ಲದ ಬಾಗೇವಾಡಿ ಗ್ರಾಮದ ಮಹಾಂತ ವಿರಕ್ತ ಮಠದ ಶಿವಾನಂದ ಸ್ವಾಮೀಜಿ … Continued

ಕೃಷಿ, ವಿಜ್ಞಾನ, ತಂತ್ರಜ್ಞಾನ,ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನ

ಹುಬ್ಬಳ್ಳಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಪ್ರತಿ‌ 2 ವರ್ಷಗಳಿಗೊಮ್ಮೆ ಶ್ರೇಷ್ಠ ಪುಸ್ತಕ ಪ್ರಶಸ್ತಿ ನೀಡಲಾಗುತ್ತಿದೆ. ಅದರಂತೆ ಜನವರಿ 2021 ರಿಂದ ಡಿಸೆಂಬರ್ 2022 ರಲ್ಲಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಲೇಖಕರು ನಿಗದಿತ ಅರ್ಜಿ ನಮೂನೆಯೊಂದಿಗೆ ಪುಸ್ತಕದ 4 ಪ್ರತಿಗಳನ್ನು 2023 … Continued

ವಿಶ್ವಾಸ ಕೊಟ್ಟು ವಿಶ್ವಾಸ ಗಳಿಸಿದವರು ಡಾ.ನ.ವಜ್ರಕುಮಾರ: ಧಾರವಾಡದ ನುಡಿ-ನಮನ ಕಾರ್ಯಕ್ರಮದಲ್ಲಿ ಡಾ.ವೀರೇಂದ್ರ ಹೆಗ್ಗಡೆ

ಧಾರವಾಡ: ಜನತಾ ಶಿಕ್ಷಣ ಸಂಸ್ಥೆಯನ್ನು ಕಟ್ಟುವಲ್ಲಿ ಡಾ. ನ.ವಜ್ರಕುಮಾರ ಅವರ ಕಾರ್ಯ ಅದ್ಭುತವಾದದ್ದು ಮತ್ತು ಪ್ರಮುಖವಾದದ್ದು. ಇವತ್ತು ಅವರ ದೇಹ ನಮ್ಮ ಜೊತೆಗೆ ಇರದಿದ್ದರೂ, ಅವರ ಅಸ್ತಿತ್ವ, ವ್ಯಕ್ತಿತ್ವವನ್ನು ಈ ಸಂಸ್ಥೆಯ ಮೂಲಕ ಉಳಿಸಿ ಹೋಗಿದ್ದಾರೆ. ಅವರು ತಮ್ಮ ಕಾರ್ಯದಿಂದ ಜನಮನದಲ್ಲಿ ಅಜರಾಮರರಾಗಿದ್ದಾ ಎಂದು ಧಾರವಾಡದ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಹೇಳಿದರು. ಇಲ್ಲಿಯ ಜನತಾ … Continued