ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ತನಿಖೆ ನಂತರ ಸತ್ಯಾಂಶ ತಿಳಿಯಲಿದೆ ಎಂದ ಸಿಎಂ

ಬೆಂಗಳೂರು : ಮುರುಘಾಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಕುರಿತಾಗಿನ ಸತ್ಯಾಂಶ ಏನು ಎಂಬುದು ತನಿಖೆ ಬಳಿಕ ಹೊರಬಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಪ್ರಕರಣದ ತನಿಖೆ ಮಾಡಲು ಪೊಲೀಸರು ಸಂಪೂರ್ಣ ಸ್ವತಂತ್ರರಾಗಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಲಿದ್ದು, ಆ … Continued

ಗೌರಿ-ಗಣೇಶನ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್‌ಗಳ ಸಂಚಾರ: ಟಿಕೆಟ್​ನಲ್ಲಿ ವಿಶೇಷ ಡಿಸ್ಕೌಂಟ್‌

ಬೆಂಗಳೂರು: ಗೌರಿ- ಗಣೇಶ ಹಬ್ಬದ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆಗೆ ವ್ಯವಸ್ಥೆ ಮಾಡಲಾಗಿದೆ.ಅಲ್ಲದೆ, ಈ ಬಾರಿ ಟಿಕೆಟ್​ ದರದಲ್ಲಿ ವಿಶೇಷ ರಿಯಾಯಿತಿಯನ್ನೂ ನೀಡಿದೆ. ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್‌ 29 ಮತ್ತು 30 ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 500 ಹೆಚ್ಚುವರಿ ವಾಹನಗಳ … Continued

ಶಿರಸಿಯಲ್ಲಿ ಪೆಟ್ರೋಲ್‌-ಡೀಸೆಲ್‌ ದರ ಹೆಚ್ಚಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಗಮನಸೆಳೆದ ಡಾ.ರವಿಕಿರಣ ಪಟವರ್ಧನ್: ಇಳಿಯಿತು ದರ…!

ಶಿರಸಿ: ಸಾಮಾನ್ಯ ವ್ಯಕ್ತಿಯೊಬ್ಬರ ಸಮಾಜಮುಖಿ ಚಿಂತನೆಗೆ ಕೇಂದ್ರ ಸ್ಪಂದಿಸಿರುವ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಆಗುತ್ತಿದ್ದ ನಷ್ಟ ತಪ್ಪಿಸಿದೆ. ಸಮಾಜಮುಖಿ ಚಿಂತನೆಗಳಿಂದ ಗುರುತಿಸಿಕೊಂಡಿರುವ ಶಿರಸಿಯ ಖ್ಯಾತ ಆಯುರ್ವೇದ ವೈದ್ಯ ಡಾ.ರವಿಕಿರಣ ಪಟವರ್ಧನ, ಕಳೆದ ಜೂನ್ ಮೊದಲ ವಾರದಲ್ಲಿ ಶಿರಸಿಯಲ್ಲಿ ಕರ್ನಾಟಕದಲ್ಲಿಯೇ ಅತಿ ಹೆಚ್ಚು ಪೆಟ್ರೋಲ್ ಮತ್ತು ಡಿಸೇಲ್ ದರ ಇರುವುದನ್ನು ಉಲ್ಲೇಖಿಸಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಇನ್ನೂ ನಾಲ್ಕು ದಿನ ಇನ್ನೂ ಜೋರಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕೋಲಾರ, ಚಾಮರಾಜ ನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್‌ ನೀಡಲಾಗಿದೆ.  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಹಾಸನ … Continued

ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ: ಎರಡು ದಿನದಲ್ಲಿ ತೀರ್ಮಾನ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ಇನ್ನೆರೆಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ಸಂಬಂಧ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಜೊತೆ ಈ ವಿಚಾರದ ಬಗ್ಗೆ ಚರ್ಚಿಸಿದ ನಂತರ ಅವರ … Continued

ಪಿಎಸ್​ಐ ನೇಮಕಾತಿ ಪರೀಕ್ಷೆ ಹಗರಣ: ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದವಳ ಬಂಧನ

ಕಲಬುರ್ಗಿ: ಪಿಎಸ್​ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳಿಂದ ನಾಪತ್ತೆಯಾಗಿದ್ದ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಅವಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 17ನೇ ಆರೋಪಿಯಾಗಿರುವ ರಚನಾ ಹನುಮಂತಳನ್ನು ಸಿಐಡಿ (CID) ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ … Continued

ಹೊಲದಲ್ಲಿ ಮಲಗಿದ್ದ ಮಹಿಳೆ ಮೈಮೇಲೆ ಹೆಡೆ ಎತ್ತಿ ನಿಂತ ಸರ್ಪ…!

ಕಲಬುರಗಿ: ಹೊಲದಲ್ಲಿ ಮಲಗಿದ್ದ ಮಹಿಳೆಯೊಬ್ಬಳ ಮೇಲೆ ಹಾವು ಹೆಡೆ ಎತ್ತಿ ನಿಂತ ಅಪರೂಪದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಈ ವಿಸ್ಮಯಕಾರಿ ಘಟನೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಅಪರೂಪದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ ಗ್ರಾಮದಲ್ಲಿ ನಡೆದಿದೆ. ಭಾಗಮ್ಮ ಬಡದಾಳ ಎಂಬ ಮಧ್ಯವಯಸ್ಸಿನ ಮಹಿಳೆ, ಮಧ್ಯಾಹ್ನದ … Continued

ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್ ವಿರುದ್ಧ ದೂರು ದಾಖಲು

ಚಿತ್ರದುರ್ಗ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿಯೂ ಆಗಿರುವ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರನ್ನು ಆಧರಿಸಿ ಎಸ್.ಕೆ.ಬಸವರಾಜನ್ ವಿರುದ್ಧ ಸೆಕ್ಷನ್ 354 (ಅತ್ಯಾಚಾರಕ್ಕೆ ಯತ್ನ) ಹಾಗೂ ಬಸವರಾಜನ್ ಮತ್ತು ಸೌಭಾಗ್ಯ ಪ್ರಕರಣ ದಾಖಲಿಸಲಾಗಿದೆ. … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 100 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡ ಡಿಆರ್‌ಐ

ಬೆಂಗಳೂರು: ಮೂರು ವಾರಗಳ ಅವಧಿಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಬೆಂಗಳೂರು ಘಟಕವು ರಾಜ್ಯದಲ್ಲಿ ಎರಡನೇ ಅತಿ ದೊಡ್ಡ, ಮಾರುಕಟ್ಟೆಯಲ್ಲಿ ಸುಮಾರು 100 ಕೋಟಿ ಮೌಲ್ಯದ 14 ಕಿಲೋಗ್ರಾಂಗಳಷ್ಟು ಮಾದಕ ವಸ್ತು ಹೆರಾಯಿನ್ ವಶಪಡಿಸಿಕೊಂಡಿದೆ. . ಇಥಿಯೋಪಿಯಾದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದ ತೆಲಂಗಾಣ ಮೂಲದವರ ಸಾಮಾನು ಸರಂಜಾಮುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಗಸ್ಟ್ 19 … Continued

ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆರೋಪ ಅಪ್ಪಟ ಸುಳ್ಳು, ಮಠದ ವಿರೋಧಿ ಶಕ್ತಿಗಳಿಂದ ಮಕ್ಕಳನ್ನು ದರ್ಬಳಕೆ ಮಾಡಿಕೊಂಡು ದೂರು: ವಕೀಲ ವಿಶ್ವನಾಥಯ್ಯ

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮಾಡುತ್ತಿರುವ ಲೈಂಗಿಕ ದೌರ್ಜನ್ಯದ ಆರೋಪ ಅಪ್ಪಟ ಸುಳ್ಳು. ಪೀಠಾಧ್ಯಕ್ಷರಿಗೆ ಮಾನಸಿಕ ಕಿರುಕುಳ ನೀಡುವ ಉದ್ದೇಶದಿಂದಲೇ ಈ ಪ್ರಕರಣ ಹೆಣೆಯಲಾಗಿದೆ ಎಂದು ಮುರುಘಾ ಮಠದ ಸಲಹಾ ಸಮಿತಿಯ ಸದಸ್ಯ ಹಾಗೂ ವಕೀಲ ಎನ್.ಬಿ.ವಿಶ್ವನಾಥಯ್ಯ ಹೇಳಿದ್ದಾರೆ. ಶನಿವಾರ ಸಲಹಾ ಸಮಿತಿಯ ಸಭೆಯ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ … Continued