ಶಿವಮೊಗ್ಗ ಗಲಭೆ ಪ್ರಕರಣ: ಚೂರಿ ಇರಿತದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು

ಶಿವಮೊಗ್ಗ: ನಗರದಲ್ಲಿ ಸೋಮವಾರ ಬಟ್ಟೆ ಅಂಗಡಿ ಕೆಲಸಗಾರ ಪ್ರೇಮ್ ಸಿಂಗ್‌ಗೆ ಚೂರಿ ಇರಿದ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಮಾರ್ನಮಿಬೈಲು ನಿವಾಸಿ ಚರ್ಬಿ ಅಲಿಯಾಸ್ ಮೊಹಮ್ಮದ್ ಜಬಿ (30) ಗುಂಡೇಟು ತಿಂದ ಆರೋಪಿಯಾಗಿದ್ದಾನೆ. ಪ್ರೇಮ್ ಸಿಂಗ್‍ಗೆ ಚೂರಿ ಇರಿದ ಪ್ರಕರಣದ ಎನ್.ಟಿ.ರಸ್ತೆಯ ಫಲಕ್ ಪ್ಯಾಲೇಸ್ ಬಳಿ ಆರೋಪಿ ಜಬೀವುಲ್ಲಾ ಬಂಧಿಸಲು … Continued

ಶಿವಮೊಗ್ಗ : ಯುವಕನಿಗೆ ಚಾಕು ಇರಿತ ಪ್ರಕರಣ ; ಇಬ್ಬರ ಬಂಧನ

 ಶಿವಮೊಗ್ಗ : ನಗರದಲ್ಲಿ ಸೋಮವಾರ ನಡೆದ ಗಲಾಟೆ ಸಮಯದಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನ ಮೇಲೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕ್ರಾಂತಿಕಾರಿ ವೀರ ಸಾವರ್ಕರ್‌ ಫ್ಲೆಕ್ಸ್‌ ವಿವಾದ ಭುಗಿಲೆದ್ದ ಕೆಲ ಹೊತ್ತಿನ ಬಳಿಕ ಶಿವಮೊಗ್ಗದಲ್ಲಿ ಇಬ್ಬರಿಗೆ ಚೂರಿ ಇರಿತ ಪ್ರಕರಣ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತಡರಾತ್ರಿ … Continued

ಭೀಕರ ರಸ್ತೆ ಅಪಘಾತದಲ್ಲಿ ದೇವರ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಐವರ ಸಾವು

ಬೀದರ್: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದೇವರ ದರ್ಶನಕ್ಕೆ ಹೊರಟಿದ‌ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಹಾಗೂ ಐವರು ಗಾಯಗೊಂಡಿದ್ದಾರೆ. ಬೀದರಿನ ತಾಲೂಕಿನ ಬಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಎರ್ಟಿಗಾ ಕಾರು ಮತ್ತು ಕಂಟೇನರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಗು ಆಸ್ಪತ್ರೆಯಲ್ಲಿ … Continued

ಶಿವಮೊಗ್ಗದಲ್ಲಿ ಗಲಭೆ: ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣದ ಶಾಲಾ ಕಾಲೇಜಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಕೋಮು ಗಲಭೆಯ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣದ ಶಾಲಾ ಕಾಲೇಜಿಗೆ ನಾಳೆ, ಮಂಗಳವಾರ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆದಿದೆ. ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ವೀರ್ ಸಾವರ್ಕರ … Continued

ಕೋಲಾರ: ದೇಶದಲ್ಲೇ ಅತಿ ದೊಡ್ಡ ತ್ರಿವರ್ಣ ಧ್ವಜ ಅನಾವರಣ

ಕೋಲಾರ: ದೇಶ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕೋಲಾರ ದೇಶದಲ್ಲೇ ಬೃಹತ್ ಧ್ವಜ ಪ್ರದರ್ಶಿಸುವ ಮೂಲಕ ಲಿಮ್ಕಾ ದಾಖಲೆ ಸ್ಥಾಪಿಸಿದೆ. ಕೋಲಾರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬೃಹತ್ ತ್ರಿವರ್ಣಧ್ವಜ ಅನಾವರಣಗೊಳಿಸಲಾಯಿತು. ಈ ಬೃಹತ್ ತ್ರಿವರ್ಣ ಧ್ವಜಕ್ಕೆ ಸೇನಾ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ ಮಾಡಲಾಯಿತಿ. ಈ ದೃಶ್ಯವನ್ನು ಸಾವಿರಾರು ಜನರು ಕಣ್ತುಂಬಿಕೊಂಡಿದ್ದಾರೆ. ಜಿಲ್ಲಾಡಳಿತದಿಂದ ಆಯೋಜನೆ ಮಾಡಲಾಗಿದ್ದ … Continued

ಕಲಘಟಗಿ: 9 ಕಿಮೀ ಉದ್ದದ ರಾಷ್ಟ್ರಧ್ವಜ ಮೆರವಣಿಗೆಯಲ್ಲಿ ಹೊತ್ತು ಸಾಗಿದ ಜನರು

ಹುಬ್ಬಳ್ಳಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಇಂದು ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ 9 ಕಿ.ಮೀ. ಉದ್ದದ ರಾಷ್ಟ್ರಧ್ವಜವನ್ನು ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರು ಮೆರವಣಿಗೆಯಲ್ಲಿ  ಹೊತ್ತು ಸಾಗಿದರು. ಕಾಂಗ್ರೆಸ್ ಮುಖಂಡ ಸಂತೋಷ ಲಾಡ್ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾದ ಜಾಥಾ ತಾಲೂಕಿನ ದಾಸ್ತಿಕೊಪ್ಪದಿಂದ ಆರಂಭಗೊಂಡಿತು.ಸುಮಾರು 12 ಸಾವಿರ ಮಹಿಳೆಯರು ರಾಷ್ಟ್ರಧ್ವಜದೊಂದಿಗೆ ಪೂರ್ಣಕುಂಭ ಹೊತ್ತು … Continued

ಅಪಘಾತಕ್ಕೀಡಾದ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ

ಶಿವಮೊಗ್ಗ: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಗೃಹ ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಈ ಪರಿಣಾಮ, ಬೆಂಗಾವಲು ವಾಹನ ಜಖಂಗೊಂಡಿದೆ. … Continued

ಶಿವಮೊಗ್ಗದಲ್ಲಿ ಮತ್ತೆ ಭುಗಿಲೆದ್ದ ಫೋಟೋ ವಿವಾದ: ಇಬ್ಬರಿಗೆ ಚೂರಿ ಇರಿತ, ಉದ್ವಿಗ್ನ, ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ವಿಚಾರದಲ್ಲಿ ಎರಡು ಕೋಮಿನ ನಡುವೆ ಜಟಾಪಟಿಯಾಗಿ  ಪ್ರಹಾರ ನಡೆದ ಘಟನೆ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸೋಮವಾರ ನಡೆದಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಹೇಳಲಾಗಿದೆ. ಇಲ್ಲಿನ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಎರಡು ಕೋಮುಗಳ ನಡುವೆ ಗಲಾಟೆ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144, ನಿಷೇದಾಜ್ಞೆ ಜಾರಿ … Continued

ಆನೆ ದಾಳಿಗೆ ರೈತ ಸಾವು: ಕಾಡಿನೊಳಗೆ ಅರ್ಧ ಕಿಮೀ ದೂರ ಮೃತದೇಹ ಎಳೆದೊಯ್ದ ಒಂಟಿ ಸಲಗ…!

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ವ್ಯಕ್ತಿ ಸಾವಿಗೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ದಾಳಿ ಮಾಡಿ ಸಾಯಿಸಿದ ಕಾಡಾನೆ ನಂತರ ಸುಮಾರು ಅರ್ಧ ಕಿಮೀಗಿಂತಲೂ ದೂರ ಮೃತ ದೇಹವನ್ನು ಕಾಡಿನಲ್ಲಿ ಎಳೆದೊಯ್ದಿದೆ ಎಂದು ಹೇಳಲಾಗಿದೆ. ಮೃತ ವ್ಯಕ್ತಿಯನ್ನು ಆನಂದ ದೇವಾಡಿಗ (52 ವರ್ಷ) ಎಂದು ಗುರುತಿಸಲಾಗಿದೆ. ಇವರು ಮನೆಯ … Continued

ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು

ಮಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ವರದಿಯಾಗಿದೆ. ಮೃತರನ್ನು ನಿವೃತ್ತ ಸೈನಿಕ ಗಂಗಾಧರ ಗೌಡ ಎಂದು ಗುರುತಿಸಲಾಗಿದೆ. ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. … Continued