ವೀಡಿಯೊ..| ರಣಜಿ ಫೈನಲ್‌ ನಲ್ಲಿ ಜಮ್ಮು-ಕಾಶ್ಮೀರ ತಂಡಕ್ಕೆ ಹುರಿದುಂಬಿಸಲು ಹುಬ್ಬಳ್ಳಿಗೆ ಬಂದ ಸಿಎಂ ಓಮರ್ ಅಬ್ದುಲ್ಲಾ…!

ಹುಬ್ಬಳ್ಳಿ : ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ಕ್ರಿಕೆಟ್ ತಂಡಗಳ ನಡುವೆ ಇಲ್ಲಿನ ಕೆ.ಎಸ್.ಸಿ.ಎ (KSCA) ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯವನ್ನು ವೀಕ್ಷಿಸಲು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಶುಕ್ರವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿದ್ದು, ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ … Continued

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ನಾಳೆ (ಫೆ.28)ಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾ.17ರ ವರೆಗೆ ಪರೀಕ್ಷೆ ನಡೆಯಲಿದೆ. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಪರೀಕ್ಷೆನಡೆಯಲಿದ್ದು, 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2,92,645 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,11,174, ಕಲಾ ವಿಭಾಗದಲ್ಲಿ 1,42,982 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಪರೀಕ್ಷೆಯು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ … Continued

ಕುಂದಾಪುರ : ಗಂಗೊಳ್ಳಿಯಲ್ಲಿ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ

ಕುಂದಾಪುರ : ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ನೀರು ತುಂಬಿ ಮುಳುಗಡೆಯಾಗಿದೆ ಎಂದು ವರದಿಯಾಗಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಐವರು ಮೀನುಗಾರರನ್ನು ಮತ್ತೊಂದು ಬೋಟಿನಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ. ಬೋಟಿನಲ್ಲಿದ್ದ ಮೀನುಗಾರರಾದ ಪ್ರಕಾಶ, ರಂಜಿತ್, ರಾಘವೇಂದ್ರ, ರಾಮ ಹಾಗೂ ಶ್ರೀನಿವಾಸ ಎಂಬವರನ್ನು ರಕ್ಷಿಸಲಾಗಿದೆ. ಫೆ.23ರ ರಾತ್ರಿ … Continued

ಬೆಂಗಳೂರು : ಕೇರಳ ಪೊಲೀಸರ ಕಾರ್ಯಾಚರಣೆ ; 1 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ

ಬೆಂಗಳೂರು : ಅಂತಾರಾಜ್ಯ ಮಾದಕವಸ್ತು ಜಾಲದ ವಿರುದ್ಧ ಕೇರಳ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಅಸ್ಸಾಂ ಮೂಲದ ಪೆಡ್ಲರ್ ಧೀರೇಶ ಕುಟುಮ್ (27) ಎಂಬಾತನನ್ನು ಬಂಧಿಸಿದ್ದಾರೆ. ಕೇರಳದ ಮಾದಕವಸ್ತು ನಿಗ್ರಹ ದಳದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಬಂಧಿತನಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ … Continued

ಕಪ್ಪೆಕೆರೆ ಸೇರಿ ಮೂವರು ಸಾಧಕರು ಯಕ್ಷಮಂಗಳ ಪ್ರಶಸ್ತಿಗೆ ಆಯ್ಕೆ, ಕೃಷ್ಣಪ್ರಕಾಶರಿಗೆ ಕೃತಿ ಪ್ರಶಸ್ತಿ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಭಾಗವತರಾದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣಪ್ರಕಾಶ ಉಳಿಯತ್ತಾಯ ಅವರ … Continued

ಯಲ್ಲಾಪುರ : ಶಿರಸಿ ಮಾರಿಜಾತ್ರೆಯಲ್ಲಿ ಕಳ್ಳತನಕ್ಕೆ ಯೋಜಿಸಿದ್ದ ಅಂತಾರಾಜ್ಯ ಕಳ್ಳರ ಬಂಧನ

ಯಲ್ಲಾಪುರ : ಇಲ್ಲಿ ದರೋಡೆ ನಡೆಸಿ ಮುಂದೆ ಶಿರಸಿ ಮಾರಿಕಾಂಬಾ ದೇವಿ ಜಾತ್ರೆಯಲ್ಲಿ ದರೋಡೆ ಮಾಡಲು ಯೋಜಿಸಿದ್ದ ಎಂಟು ಜನ ಅಂತಾರಾಜ್ಯ ದರೋಡೆಕೋರರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ ಬಳಿಯ  ಕೆ ಮಿಲನ್ ಹೋಟೆಲ್ ಹತ್ತಿರ ಬುಧವಾರ ಬೆಳಗಿನ ಜಾವ ಪೋಲಿಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.  ಪಿಎಸ್ಐ ಸಿದ್ದಪ್ಪ ಗುಡಿ ತಮ್ಮ ತಂಡದೊಂದಿಗೆ … Continued

ವೀಡಿಯೊ | ಕರ್ನಾಟಕದ ಸುಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಆರಂಭ : ಗದ್ದುಗೆಯಲ್ಲಿ ದೇವಿ ವಿರಾಜಮಾನ

ಶಿರಸಿ: ಕರ್ನಾಟಕದ ಅತಿದೊಡ್ಡ ಜಾತ್ರೆಯಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯು ರಥೋತ್ಸವ ಬುಧವಾರ ಅತ್ಯಂತ ಸಡಗಡ ಸಂಭ್ರಮದಿಂದ ಚಾಲನೆಗೊಂಡಿತು. ರಥದಲ್ಲಿ ಆಗಮಿಸಿದ ಭಕ್ತರ ಆರಾಧ್ಯ ದೈವ ಮಾರಿಕಾಂಬಾ ದೇವಿಯು  ಜಾತ್ರಾ  ಗದ್ದುಗೆಗೆ ಆಗಮಿಸಿ ಬುಧವಾರ ಪ್ರತಿಷ್ಠಾಪನೆಗೊಂಡಿದ್ದಾಳೆ..  ಶ್ರೀ ಮಾರಿಕಾಂಬೆಯ ದರ್ಶನಕ್ಕಾಗಿ ಆಗಮಿಸಿದ ಲಕ್ಷಾಂತರ ಭಕ್ತರು ಈ ರಥೋತ್ಸವಕ್ಕೆ ಸಾಕ್ಷಿಯಾಗುವ ಮೂಲಕ … Continued

ವೀಡಿಯೊ | ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ : ಕರ್ನಾಟಕ ಆಟಗಾರನಿಗೆ ತಲೆಯಿಂದ ಡಿಚ್ಚಿ ಹೊಡೆದ ಜಮ್ಮು ತಂಡದ ನಾಯಕ

ಹುಬ್ಬಳ್ಳಿ: ಇಲ್ಲಿನ ಕೆ.ಎಸ್.ಸಿ.ಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ನಡುವಿನ 2025-26ರ ಸಾಲಿನ ರಣಜಿ ಟ್ರೋಫಿ ಫೈನಲ್ ಪಂದ್ಯದ ಎರಡನೇ ದಿನದಂದು ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಜಮ್ಮು-ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಅವರು ಕರ್ನಾಟಕದ ಫೀಲ್ಡರ್ ಕೆ.ವಿ. ಅನೀಶ್ ಅವರಿಗೆ ತಲೆಯಿಂದ ಡಿಚ್ಚಿ ಹೊಡೆದ (Headbutt) ಪ್ರಸಂಗ ನಡೆದಿದೆ. ಜಮ್ಮು-ಕಾಶ್ಮೀರ ಇನಿಂಗ್ಸ್‌ನ 101ನೇ … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡ್ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಫೆಬ್ರವರಿ 27 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಂತರ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಬಂಗಾಳಕೊಲ್ಲಿಯ ಮೇಲೆ ಉತ್ತರ ಶ್ರೀಲಂಕಾದ ಬಳಿ ಕೇಂದ್ರೀಕೃತವಾಗಿರುವ ವಾಯುಭಾರ ಕುಸಿತವು ಕ್ರಮೇಣ ಪೂರ್ವಕ್ಕೆ ಬದಲಾಗುತ್ತಿದೆ. ಈ ಚಲನೆಯೊಂದಿಗೆ, ಬಂಗಾಳಕೊಲ್ಲಿಯಿಂದ ಬೀಸುವ ತೇವಾಂಶ-ವಾಹಕ ಗಾಳಿಯು ದುರ್ಬಲಗೊಳ್ಳಬಹುದು, … Continued

ಕಾಂತಾರ ಮಿಮಿಕ್ರಿ ಪ್ರಕರಣ ; ನಟ ರಣವೀರ್‌ ಸಿಂಗ್‌ ಗೆ ಕರ್ನಾಟಕ ಹೈಕೋರ್ಟ್‌ ತರಾಟೆ

ಬೆಂಗಳೂರು : ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಂಧನದಿಂದ ತಾತ್ಕಾಲಿಕ ಸಮಾಧಾನ ನೀಡಿದೆಯಾದರೂ, ಅವರ ವರ್ತನೆಯ ಬಗ್ಗೆ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, “ಸೆಲೆಬ್ರಿಟಿಯಾದ ತಕ್ಷಣ ಧಾರ್ಮಿಕ ನಂಬಿಕೆಗಳನ್ನು ಅಪಹಾಸ್ಯ ಮಾಡುವ ಹಕ್ಕು ಯಾರಿಗೂ ಇಲ್ಲ” ಎಂದು ಹೇಳಿದ್ದಾರೆ. ಕೋರ್ಟ್ … Continued