ವಿವಿಧ ನಿಗಮ ಮಂಡಳಿಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ. ಪಕ್ಷ ನಿಷ್ಠ ನಾಯಕರುಗಳಿಗೆ ಮಣೆ ಹಾಕಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ಶ್ರಮಿಸುತ್ತಿರುವರಿಗೆ ನಿಗಮ ಮಂಡಳಿ ನೀಡಲಾಗಿದೆ. ಜುಲೈ 12 ರಂದು ರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು 47 ನಿಗಮ ಮಂಡಳಿಯ ಅಧ್ಯಕ್ಷರು, … Continued

ಕೃಷ್ಣ ಮೃಗ ಚರ್ಮ ಮಾರಾಟದ ಬೃಹತ್ ಜಾಲ ಭೇದಿಸಿದ ಬೆಳಗಾವಿ ಅರಣ್ಯ ಸಂಚಾರಿದಳ

ಬೆಳಗಾವಿ :  ಬೆಳಗಾವಿ ಅರಣ್ಯ ಸಂಚಾರಿ (ಜಾಗೃತ) ದಳದ ತಂಡ ಕೃಷ್ಣ ಮೃಗ ಚರ್ಮ ಮಾರಾಟ ಮಾಡುವ ಬೃಹತ್ ಜಾಲವನ್ನು ಬೇಧಿಸಿದೆ. ಹಾವೇರಿ ಜಿಲ್ಲೆಯ ಒಟ್ಟು ಐವರನ್ನು ಬಂಧಿಸಲಾಗಿದೆ. ಅವರಿಂದ 3 ಕೃಷ್ಣ ಮೃಗದ ಚರ್ಮಗಳನ್ನು, ಪ್ರಾಣಿಗಳನ್ನು ಬೇಟೆಯಾಡಲು ಬಳಸುವ 4 ತಂತಿಯ ಉರುಳುಗಳನ್ನು ಮತ್ತು 1 ದ್ವಿಚಕ್ರ ವಾಹನವನ್ನು ರಾಣೇಬೆನ್ನೂರಲ್ಲಿ ವಶಪಡಿಸಿಕೊಳ್ಳಲಾಗಿದೆ. ಬಂಧಿತರು ಕೃಷ್ಣ … Continued

ಉತ್ತರ ಕನ್ನಡದಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಕುರಿತು ಶೀಘ್ರವೇ ತೀರ್ಮಾನ: ಆರೋಗ್ಯ ಸಚಿವ ಡಾ.ಸುಧಾಕರ

ಕಾರವಾರ: ಸಾಮಾಜಿಕ ಜಾಲತಾಣದಲ್ಲಿ ಈಗ ಉತ್ತರ ಕನ್ನಡದ ಜನರಿಂದ ನಡೆಯುತ್ತಿರುವ ‘ನೋ ಹಾಸ್ಪಿಟಲ್ ನೋ ವೋಟ್‌ ’ ಅಭಿಯಾನ ದಿನದಿಂದ ದಿನಕ್ಕೆ ವ್ಯಾಪಕತೆ ಪಡೆಯುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ ಟ್ವೀಟ್‌ ಮಾಡಿದ್ದಾರೆ. ಕೆಲದಿನಗಳ ಹಿಂದೆ ಶಿರೂರಿನಲ್ಲಿ ಆಂಬುಲೆನ್ಸ್‌ ಅಪಘಾತದ ನಂತರ ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಬೇಕು … Continued

ಮಲಗಿದ್ದವರ ಮೇಲೆ ಗೂಡ್ಸ್‌ ಟೆಂಪೋ ಹರಿಸಿದ ಚಾಲಕ: ಓರ್ವ ಸಾವು

ಕೊಪ್ಪಳ: ತಾಲೂಕಿನ‌ ಐತಿಹಾಸಿಕ ಹುಲಗೆಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಮಲಗಿದ್ದವರ ಮೇಲೆ ವಾಹನ ಹರಿದು ಓರ್ವ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬಳ್ಳಾರಿಯ ಸಿರಗುಪ್ಪದ ತಿಪ್ಪಣ್ಣ (75) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕುಕನೂರಿನ ಗಾವರಾಳದ ಹನುಮವ್ವ, ಶಿರಗುಪ್ಪಾದ ಮಲ್ಲವ್ವ ಹಾಗೂ ತುಕಾರಾಂ ಗಾಯಗೊಂಡಿದ್ದಾರೆ. ಇವರು ದೇವಿಯ ದರ್ಶನಕ್ಕೆ ಬಂದಿದ್ದರು ಎಂದು ಹೇಳಲಾಗಿದ್ದು, ದೇವಸ್ಥಾನದ ಆವರಣದಲ್ಲಿದ್ದ ಬಳೆ ಅಂಗಡಿ ಮುಂದೆ … Continued

ಬುರ್ಖಾಧಾರಿ ಯುವಕನಿಂದ ಆಲಮಟ್ಟಿ ಡ್ಯಾಂ ಆವರಣದಲ್ಲಿ ಆತಂಕ: ಠಾಣೆಯಲ್ಲಿ ವಿಚಾರಣೆ ವೇಳೆ ಗೊತ್ತಾಯ್ತು ಆತನ ನೋವಿನ ಕತೆ

ವಿಜಯಪುರ: ಅಣೆಕಟ್ಟು ಪ್ರವೇಶ ದ್ವಾರದಲ್ಲಿ ಬುರ್ಖಾಧಾರಿ ಆತಂಕ ಮೂಡಿಸಿದ ಘಟನೆ ವಿಜಯಪುರ ಜಿಲ್ಲೆ ಆಲಮಟ್ಟಿ ಡ್ಯಾಂ ಬಳಿ ನಡೆದಿದೆ. ಸೋಮವಾರ ಬೆಳಗಿನ ಜಾವ ಬುರ್ಖಾ ಧರಿಸಿ ಆಲಮಟ್ಟಿ ಅಣೆಕಟ್ಟು ಆವರಣಕ್ಕೆ ಹೋಗುತ್ತಿದ್ದ ವ್ಯಕ್ತಿಯನ್ನು ಸ್ಥಳದಲ್ಲಿದ್ದ ಪೊಲೀಸರು ಸೇರಿದಂತೆ ಹಲವರು ನೋಡಿದ್ದಾರೆ. ಇಷ್ಟು ಬೇಗ ಅಣೆಕಟ್ಟೆ ಒಳಗೆ ಪ್ರವೇಶ ನೀಡುವುದಿಲ್ಲ ಎಂದು ಪ್ರವೇಶ ದ್ವಾರದ ಬಳಿ ತಪಾಸಣೆ … Continued

ಈ ದಿನ ರಾಜ್ಯದ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಜೂನ್‌ ತಿಂಗಳಲ್ಲಿ ನಡೆಸಲಾಗಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಸೋಮವಾರ ಮಾಹಿತಿ ನೀಡಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ … Continued

ಉತ್ತರ ಕನ್ನಡ ಜಿಲ್ಲೆಗೆ ಬೇಕು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅಭಿಯಾನ: ಜನರ ಹೋರಾಟಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂಪೂರ್ಣ ಬೆಂಬಲ

ಕಾರವಾರ: ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಹೋರಾಟ ನಡೆಸುತ್ತಿರುವುದಕ್ಕೆ ನನ್ನ ಸಂಪೂರ್ಣ ಬೆಂಬಲವಿದ್ದು, ರಾಜ್ಯ ಸರ್ಕಾರ ಆದ್ಯತೆಯ ಮೇರೆಗೆ ಜನರ ಬೇಡಿಕೆಯನ್ನು ಈಡೇರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ … Continued

ಬೆಂಗಳೂರಿನ ತಿಲಕ ​ನಗರದಲ್ಲಿ ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಸಿಸಿಬಿ

ಬೆಂಗಳೂರು: ತಿಲಕ್ ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರಗಾಮಿ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಅಸ್ಸಾಂನ ಅಖ್ತರ್ ಹುಸೇನ್ ಲಷ್ಕರ, ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ತಿಲಕ್ ನಗರದ ಬಿಟಿಪಿ ಏರಿಯಾದ ಮನೆಯೊಂದರ ಮೂರನೇ ಮಹಡಿಯಲ್ಲಿ ವಾಸವಿದ್ದ. ಶಂಕಿತ ಉಗ್ರನ … Continued

ಇಡಿಯಿಂದ ಸೋನಿಯಾ ಗಾಂಧಿ ವಿಚಾರಣೆ ಮುಗಿಯುವವರೆಗೂ ಕಾಂಗ್ರೆಸ್‌ನಿಂದ ಮೌನ ಧರಣಿ: ಡಿಕೆಶಿ

ಬೆಂಗಳೂರು : ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಕರೆಯುವ ಮೂಲಕ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ವಿಚಾರಣೆ ಪೂರ್ಣಗೊಳ್ಳುವವರೆಗೂ ಕಾಂಗ್ರೆಸಿಗರು ಮೌನ ಧರಣಿ ನಡೆಸಲಿದ್ದಾರೆ  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದೊಗೆ ಮಾತನಾಡಿದ ಅವರು, ಜುಲೈ 26ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ … Continued

ಉತ್ತರ ಕನ್ನಡಕ್ಕೆ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು: ಜನರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ ಸಿದ್ದರಾಮಯ್ಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನಂತರ ಈಗ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ … Continued