ನಾಳೆಯಿಂದ ಮೊಸರು, ಮಜ್ಜಿಗೆ, ಲಸ್ಸಿ ದರದಲ್ಲಿ ಹೆಚ್ಚಳ

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ(KMF)ಯು ನಂದಿನಿ ಮೊಸರು, ನಂದಿನಿ ಮಜ್ಜಿಗೆ ಮತ್ತು ನಂದಿನಿ ಲಸ್ಸಿ ದರಗಳನ್ನು ನಾಳೆಯಿಂದ ಹೆಚ್ಚಿಸಲು ನಿರ್ಧರಿಸಿದೆ. ಕೇಂದ್ರ ಸರಕಾರದ ಹಣಕಾಸು ಸಚಿವಾಲಯವು ಮೊಸರು, ಮಜ್ಜಿಗೆ ಮತ್ತು ಸಿಹಿಲಸ್ಸಿ ಉತ್ಪನ್ನಗಳ ಮೇಲೆ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ವಿಧಿಸಿರುವುದರಿಂದ ನಂದಿನಿ ಮೊಸರು, ಮಜ್ಜಿಗೆ, ಲಸ್ಸಿ ಪಟ್ಟಣಗಳ ದರವನ್ನು ಪರಿಷ್ಕರಿಸಲಾಗಿದೆ … Continued

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್‌: ಪೊಲೀಸರಿಂದ ಫೈರಿಂಗ್

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಜರಿಗೆ ತೆರಳುವ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕೊಣಾಜೆ‌ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ. 14ಕ್ಕೂ ಹೆಚ್ಚು ಪ್ರಕರಣದ ಆರೋಪಿ ರೌಡಿಶೀಟರ್ ಮುಕ್ತಾರ್ ಎಂಬವರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. … Continued

ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರು: ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿಯೊಂದರಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ‌ಸಮ್ಮೇಳನ ಸಭಾಂಗಣದಲ್ಲಿ ಶಾರ್ಟ್‌ ಸರ್ಕಿಟ್‌ ಪರಿಣಾಮದಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಸದ್ಯ ಯಾವುದೇ ಹೆಚ್ಚಿನ ಅನಾಹುತವಾಗಿಲ್ಲ. ವಿಷಯ ಗೊತ್ತಾಗಿ ಸಿಬ್ಬಂದಿ ಕೂಡಲೇ ನಂದಿಸಿದ್ದಾರೆ. ಹೀಗಾಗಿ ಇಡೀ ಕೊಠಡಿಗೆ ಬೆಂಕಿ ಆವರಿಸಿ, ಅನಾಹುತವಾಗುವುದು ತಪ್ಪಿದೆ.

ತುಮಕೂರು: ಹರಿಯುವ ನೀರಿನ ಫೋಟೊ ತೆಗೆಯಲು ಹೋಗಿ ಚರಂಡಿಯಲ್ಲಿ ಕೊಚ್ಚಿ ಹೋದ ಆಟೊ ಚಾಲಕ

ತುಮಕೂರು: ಮಳೆಯಿಂದಾಗಿ ರೈಲ್ವೆ ಅಂಡರ್ ಪಾಸ್‌ನಲ್ಲಿ ನಿಂತಿದ್ದ ನೀರಿನ ಫೋಟೊ ತೆಗೆಯುವ ಆತುರದಲ್ಲಿ ಜಾರಿಬಿದ್ದು ಆಟೊ ಚಾಲಕರೊಬ್ಬರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಶನಿವಾರ ನಗರದ ಹೆಗಡೆ ಕಾಲೊನಿ ರೈಲ್ವೆ ಅಂಡರ್ ಪಾಸ್ ಸಮೀಪ ಸಂಭವಿಸಿದೆ. ಶಾಂತಿನಗರದ ಆಟೋ ಚಾಲಕ ಅಮ್ಜದ್ ಖಾನ್ (44) ನೀರಿನಲ್ಲಿ ಕೊಚ್ಚಿಕೊಂಡು ಹೋದವರು ಎಂದು ಹೇಳಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ, … Continued

ರಾಜ್ಯದಲ್ಲಿ ಇಂದು ಹೊಸದಾಗಿ 1,374 ಕೊರೊನಾ ಪ್ರಕರಣಗಳು ದಾಖಲು, ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಇಂದು, ಶನಿವಾರ 1,374 ತಾಜಾ ಕೊರೊನಾ ಪ್ರಕರಣಗಳು ದಾಖಲಾಗಿದೆ. ಬೆಂಗಳೂರಿನಲ್ಲೇ 1,234 ಪ್ರಕರಣಗಳು ವರದಿಯಾಗಿವೆ. ಇದೇವೇಳೆ ರಾಜ್ಯದಲ್ಲಿ 777 ಮಂದಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದಾರೆ. ಹಾಗೂ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,296ಕ್ಕೆ ತಲುಪಿದೆ. ಬೆಂಗಳೂರಿನ ಬಳಿಕ ರಾಜ್ಯದಲ್ಲಿ ಅತೀ ಹೆಚ್ಚು … Continued

ವಿದ್ಯುತ್ ತಂತಿ ತಗುಲಿ ಇಬ್ಬರು ಸಾವು

ಬೆಳಗಾವಿ : ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿರೂರು ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತರನ್ನು ಫಕ್ಕೀರಪ್ಪ ಸಿದ್ದಪ್ಪ ಚಂದರಗಿ(54) ಮತ್ತು ಮಹದೇವ ದುರ್ಗಪ್ಪ ಮೇತ್ರಿ (40) ಎಂದು ಗುರುತಿಸಲಾಗಿದೆ. ಗ್ರಾಮಸ್ಥರು ಹೆಸ್ಕಾಂ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಸವದತ್ತಿ ಪೋಲಿಸರು … Continued

ಭೂ ಕುಸಿತ: ರಾಷ್ಟ್ರೀಯ ಹೆದ್ದಾರಿ-69ರ ಹೊನ್ನಾವರ-ಜೋಗ ಮಧ್ಯೆ ರಸ್ತೆ ಸಂಚಾರ ಸ್ಥಗಿತ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಮೀಪದ ಸೂಳೆಮುರ್ಕಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ-69 ರಲ್ಲಿ ಗುಡ್ಡ ಕುಸಿತವಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುರಕ್ಷತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 69 ರಲ್ಲಿ ಹೊನ್ನಾವರ ತಾಲೂಕಿನ ಗೇರುಸೊಪ್ಪದಿಂದ ಸಿದ್ದಾಪುರ ತಾಲೂಕಿನ ಮಾವಿನಗುಂಡಿ ವರೆಗೆ ರಸ್ತೆ ಸಂಚಾರ ನಿಷೇಧಿಸಲಾಗಿದೆ. ರಸ್ತೆಯ ಕೆಳಭಾಗದ ಗುಡ್ಡ ಕುಸಿದ್ದರಿಂದ … Continued

ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ : ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ರ‍್ಯಾಲಿ

ಬೆಂಗಳೂರು : ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ವತಿಯಿಂದ ವಿಶೇಷ ರ‍್ಯಾಲಿ ಆಯೋಜಿಸಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸರ್ಕಾರದ ಒಂದು ವರ್ಷದ ಸಾಧನೆಯ ಸರ್ಕಾರಿ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ ಹಾಗೂ ಪಕ್ಷದ ಕಾರ್ಯಕ್ರಮ … Continued

ಆದೇಶದಲ್ಲಿ ಆದ ತಪ್ಪುಗಳನ್ನು ಸರಿಪಡಿಸಿದ ಸರ್ಕಾರ

ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವೀಡಿಯೋ ಮಾಡಬಾರದೆಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆದ ಆದೇಶದಲ್ಲಿ ವ್ಯಾಕರಣ ದೋಷ ಹೆಚ್ಚಿದ್ದರಿಂದ ಭಾರೀ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ಈಗ ಸರ್ಕಾರ ಮತ್ತೊಮ್ಮೆ ತಿದ್ದುಪಡಿ ಮಾಡಲು ಆದೇಶಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗೆಳು ವೀಡಿಯೊ ಚಿತ್ರೀಕರಣ ಹಾಗೂ ಫೋಟೋ ತೆಗೆಯುವಂತಿಲ್ಲ ಎಂದು ಶುಕ್ರವಾರ (ಜುಲೈ 15ರಂದು) … Continued

ಐದಾರು ಸಾಲುಗಳ ಸರ್ಕಾರದ ಕನ್ನಡದ ಆದೇಶ ಪ್ರತಿಯಲ್ಲಿ ಎಷ್ಟೊಂದು ತಪ್ಪುಗಳು…!

ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಸಾರ್ವಜನಿಕರು ಅಪ್ಪಿ ತಪ್ಪಿಯು ವೀಡಿಯೊ ಚಿತ್ರೀಕರಣ ಅಥವಾ ಫೋಟೋ ತೆಗೆಯಬಾರದೆಂಬ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ. ಆದರೆ ಆತುರದಲ್ಲಿ ಆದೇಶ ಪ್ರತಿಯಲ್ಲಿ ತಪ್ಪುಗಳೇ ಕಂಡುಬಂದಿವೆ. ವೀಡಿಯೊ ಚಿತ್ರೀಕರಣ ಅಥವಾ ಫೋಟೋ ತೆಗೆಯಬಾರದೆಂಬ ಆದೇಶ ಹಿಂಪಡೆಯುವ ಪಡೆಯುವ ಬಗ್ಗೆ ಹೊರಡಿಸಲಾಗಿದ್ದ ಆದೇಶ ಪತ್ರದಲ್ಲಿ ಸಾಕಷ್ಟು ವ್ಯಾಕರಣ ದೋಷಗಳು ಕಂಡು ಬಂದಿವೆ. … Continued