ಪ್ರಥಮ ಪಿಯು ತರಗತಿ ದಾಖಲಾತಿ ಅವಧಿ ವಿಸ್ತರಣೆ : ಸಚಿವ ನಾಗೇಶ

ಬೆಂಗಳೂರು: ಬೆಂಗಳೂರು: ಸಿಬಿಎಸ್‌ಇ (CBSE) ಹಾಗೂ ಐಸಿಎಸ್‌ಇ (ICSE) 10ನೇ ತರಗತಿ ಪರೀಕ್ಷೆಯ ಫಲಿತಾಂಶ ಇನ್ನೂ ಪ್ರಕಟವಾಗದ ಕಾರಣ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಥಮ ಪಿಯುಸಿ ತರಗತಿ ದಾಖಲಾತಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಟ್ವಿಟ್ಟರಿನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ ಅವರು, ಸಿಬಿಎಸ್‌ಇ ಹಾಗೂ ಐಸಿಎಸ್‌ಇ … Continued

ಹೊಸ ಮೊಬೈಲ್‌ ಕೊಡಿಸಲಿಲ್ಲವೆಂದು ತಂದೆಯ ಜನ್ಮದಿನದಂದೇ ಮಗ ಆತ್ಮಹತ್ಯೆ

ಖಾನಾಪುರ:ಹೊಸ ಮೊಬೈಲ್ ಬೇಕು ಎಂದು ಹಟ ಹಿಡಿದ ವಿದ್ಯಾರ್ಥಿಯೊಬ್ಬ ಮೊಬೈಲ್‌ ಕೊಡಿಸಲಿಲ್ಲವೆಂದು ತಂದೆಯ ಜನ್ಮದಿನದಂದೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ಹಲಕರ್ಣಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದವನನ್ನು ಮರಾಠಾ ಮಂಡಳ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಥಮೇಶ ರಾಜು ಕೋಳಿ (17) ಎಂದು ಗುರುತಿಸಲಾಗಿದೆ. ಎರಡು ದಿನಗಳಿಂದ ಪ್ರಥಮೇಶ ಮೊಬೈಲ್ ಬೇಕು … Continued

ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಪಲ್ಟಿ: ಇಬ್ಬರಿಗೆ ಗಾಯ

ಉಡುಪಿ: ಹಿಂದುಳಿದ ವರ್ಗಗಳು ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಅವರ ಎಸ್ಕಾರ್ಟ್‌ ವಾಹನ ಅಪಘಾತಕ್ಕೀಡಾದ ಘಟನೆ ಇಲ್ಲಿಗೆ ಸಮೀಪದ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದೆ. ಘಟನೆಯಲ್ಲಿ ಎಸ್ಕಾರ್ಟ್‌ನ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವ ಕೋಟ ಅವರ ಬೆಂಗಾವಲು ವಾಹನದ ಮುಂದೆ ಸಂಚರಿಸುತ್ತಿದ್ದ ಲಾರಿ ಸೂಚನೆ ನೀಡದೆ … Continued

ಮಾದಾರ ಚನ್ನಯ್ಯ ಗುರುಪೀಠದಲ್ಲಿ 20ಕ್ಕೂ ಹೆಚ್ಚು ಮಠಾಧೀಶರ ಜತೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ ಭಾಗವತ್ ಸಂವಾದ

ಚಿತ್ರದುರ್ಗ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಸರಸಂಘಸಂಚಾಲಕ ಮೋಹನ ಭಾಗವತ್ ಅವರು ಇಂದು, ಮಂಗಳವಾರ ನಗರದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದಲ್ಲಿ ವಿವಿಧ ಮಠಾಧೀಶರೊಂದಿಗೆ ಸಂವಾದ ನಡೆಸಿದರು. ಸೋಮವಾರ ರಾತ್ರಿಯೇ ನಗರಕ್ಕೆ ಆಗಮಿಸಿದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ ಭಾಗವತ್ ಅವರು ಚಿತ್ರದುರ್ಗದ ಮಾದರ ಚೆನ್ನಯ್ಯ ಗುರುಪೀಠದಲ್ಲಿ ವಾಸ್ತವ್ಯ ಮಾಡಿದ್ದರು. ಶ್ರೀ ಬಸವಮೂರ್ತಿ ಮಾದಾರ … Continued

52 ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿ ರದ್ದು ಪಡಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು:  ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ನೇಮಕ ಮಾಡಲಾಗಿದ್ದ ರಾಜ್ಯಮಟ್ಟದ ನಿಗಮ- ಮಂಡಳಿ- ಪ್ರಾಧಿಕಾರಗಳಳ ಅಧ್ಯಕ್ಷರ-ಉಪಾಧ್ಯಕ್ಷರ ನಾಮನಿರ್ದೇಶನವನ್ನ ರದ್ದು ಮಾಡಿ ಇಂದಿನಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಯಡಿಯೂರಪ್ಪ ಅವರ ಬೆಂಬಲಿಗರಲ್ಲಿ ಮೂವರನ್ನು ಮುಂದುವರಿಸಲಾಗಿದೆ. ನಿಗಮ-ಮಂಡಳಿ-ಪ್ರಾಧಿಕಾರಕ್ಕೆ ನಡೆದಿದ್ದ ನಾಮನಿರ್ದೇಶನ ರದ್ದತಿಯನ್ನು ಹಠಾತ್‌ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಆಪ್ತ ಕಾರ್ಯದರ್ಶಿ … Continued

ಎಸಿಬಿ ವಿರುದ್ಧ ಟೀಕಾಪ್ರಹಾರ: ವಿಚಾರಣೆ 3 ದಿನ ಮುಂದೂಡಲು ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಾಮೀನು ಅರ್ಜಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು, ಕರ್ನಾಟಕದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಎಡಿಜಿಪಿ ವಿರುದ್ಧ ನಡೆಸುತ್ತಿರುವ ವಿಚಾರಣೆಯನ್ನು 3 ದಿನಗಳ ಕಾಲ ಮುಂದೂಡುವಂತೆ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್‍ಗೆ ಸೂಚನೆ ನೀಡಿದೆ. ಜಾಮೀನು ವಿಷಯದಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್‌ಪಿ ಸಂದೇಶ್ ಅವರು ಜುಲೈ 7 … Continued

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಬಜರಂಗದಳ ಕಾರ್ಯಕರ್ತ ಕಾಂತರಾಜು ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಸೋಮವಾರ ರಾತ್ರಿ ರಾಜೀವ್ ಗಾಂಧಿ ಬಡಾವಣೆಯಲ್ಲಿ ಕಾಂತರಾಜು ಮೂತ್ರ ವಿಸರ್ಜನೆಗೆಂದು ಹೋದಾಗ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ವೇಳೆ ಸ್ನೇಹಿತರು, ಕುಟುಂಬಸ್ಥರು ಬಂದ ನಂತರ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಘಟನೆಯಲ್ಲಿ … Continued

ಹಳಿಯಾಳ: ಮನೆ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಸಾವು

ಕಾರವಾರ: ನಿರಂತರ ಮಳೆಯ ಪರಿಣಾಮ ಮನೆಯ ಮಣ್ಣಿನ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರುಕ್ಮಿಣಿ ವಿಠ್ಠಲ್ ಮಾಚಕ (37), ಶ್ರೀದೇವಿ ವಿಠ್ಠಲ್ ಮಾಚಕ (13) ಎಂದು ಗುರುತಿಸಲಾಗಿದೆ. ಮನೆ ಗೋಡೆ ಕುಸಿದು, ಮನೆ ಗೋಡೆ ಪಕ್ಕದಲ್ಲಿ ಮಲಗಿದ್ದ ತಾಯಿ … Continued

ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೊನಾ ಸೋಂಕು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸೋಮವಾರ ತಮಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಅವರೇ ಟ್ವೀಟ್‌ನಲ್ಲಿ ಸ್ವತಃ ಖಚಿತಪಡಿಸಿದ್ದಾರೆ. ವೈದ್ಯರ ಸಲಹೆಯಂತೆ ಮುಂದಿನ 10 ದಿನಗಳ ಕಾಲ ಮನೆಯಲ್ಲೇ ಚಿಕಿತ್ಸೆ ಪಡೆಯುವುದಾಗಿ ಅವರು ತಿಳಿಸಿದ್ದಾರೆ. ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನುಸೋಮವಾರ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, … Continued

ನಟ ಸುದೀಪ್‌ಗೆ ಅವಹೇಳನ: ಪೊಲೀಸರಿಗೆ ದೂರು ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ

ಬೆಂಗಳೂರು: ನಟ ಸುದೀಪ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿಯಾದ ಮಾತುಗಳನ್ನಾಡುತ್ತಿರುವ ಚರಣ್‌ ಹಾಗೂ ಅಹೋರಾತ್ರ ಎಂಬುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್‌ ಸೋಮವಾರ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ಆನ್‌ಲೈನ್‌ ಗೇಮ್‌ಗಳ ವಿಚಾರದಲ್ಲಿ ಸುದೀಪ್‌ ಅವರ ವಿರುದ್ಧ ಚರಣ್‌ ಹಾಗೂ ಅಹೋರಾತ್ರ ಎಂಬವರು ಸಾಮಾಜಿಕ … Continued