ಯಲ್ಲಾಪುರ: ಗುಳ್ಳಾಪುರ ಸಮೀಪ ಬೈಕ್‌ಗೆ ಲಾರಿ ಡಿಕ್ಕಿ, ಇಬ್ಬರ ಸಾವು

ಯಲ್ಲಾಪುರ: ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ ೬೩ ಮೇಲೆ ಉತ್ತರ ಕನ್ನಡ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪದ ಇಂಚರ ಹೊಟೇಲ್ ಬಳಿ ನಡೆದಿದೆ. ಮೃತರನ್ನು ಮಹಂತೇಶ ರೇವಣಪ್ಪ ಶೀಲವಂತರ( ೨೩) ಹುಬ್ಬಳ್ಳಿ, ಹಾಗೂ ಸುಮಿತ್ ಅಶೋಕ ಬಸವಾ (೨೫) ಹಳೆ ಹುಬ್ಬಳ್ಳಿ ಎಂದು ಗುರುತಿಸಲಾಗಿದೆ. … Continued

ಧಾರವಾಡ: ಎಸ್‌ಡಿಎಂ ಆಸ್ಪತ್ರೆಯಿಂದ ಬೆಳಗಾವಿ ಯುವಕನಿಗೆ ಕಸಿ ಮಾಡಲು ಜಿರೋ ಟ್ರಾಫಿಕ್‌ನಲ್ಲಿ ತೆರಳಿತು ಯುವತಿಯ ಹೃದಯ

ಧಾರವಾಡ: ಮೆದುಳು ನಿಷ್ಕ್ರಿಯಗೊಂಡ ಯುವತಿಯ ಅಂಗಾಂಗಳು ನಾಲ್ಕು ಜನರಿಗೆ ಜೀವದಾನ ಮಾಡಿವೆ. ಇದಕ್ಕಾಗಿ ಝೀರೊ ಟ್ರಾಫಿಕ್ ಮೂಲಕ ಇಲ್ಲಿನ ಎಸ್‌ಡಿಎಂ ಆಸ್ಪತ್ರೆಯಿಂದ ಅಂಗಾಂಗಗಳನ್ನು ಸಾಗಿಸಲಾಯಿತು. 17 ವರ್ಷದ ಹುಡುಗಿ ಇಲ್ಲಿನ ಎಸ್‌ಡಿಎಂ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವಳ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಪ್ರಕಟಿಸಿದರು. ಹೀಗಾಗಿ ಅವಳ … Continued

ಹಾಡಹಗಲೇ ಶಹಾಬಾದ್‌ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಭೀಕರ ಹತ್ಯೆ

ಕಲಬುರಗಿ: ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ, ಶಹಾಬಾದ್ ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ (42) ಎಂಬವರನ್ನು ಸೋಮವಾರ ಹಾಡಹಗಲೇ ತಲ್ವಾರ್‌ನಿಂದ ಇರಿದು ಹತ್ಯೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕಾರಣ ತಿಳಿದು ಬಂದಿಲ್ಲ. ಚಿತ್ತಾಪುರ ತಾಲೂಕಿನ ಶಹಾಬಾದ್ ರೈಲ್ವೆ ನಿಲ್ದಾಣದ ಬಳಿ ಕುಳಿತಿದ್ದ ಗಿರೀಶ ಅವರನ್ನು ದುಷ್ಕರ್ಮಿಗಳು ತಲ್ವಾರ್‌ನಿಂದ ಹತ್ತಾರು … Continued

‘ಅಗ್ನಿಪಥʼ ಯೋಜನೆ ವಿರೋಧಿಸಿ ಬರೆದ ವಿಪಕ್ಷಗಳ ಪತ್ರಕ್ಕೆ ಸಹಿ ಹಾಕಲು ನಿರಾಕರಿಸಿದ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ…!

ನವದೆಹಲಿ: ಸಶಸ್ತ್ರ ಪಡೆಗಳಿಗೆ ಅಗ್ನಿಪಥ ನೇಮಕಾತಿ ಯೋಜನೆಗೆ ಸಂಬಂಧಿಸಿದಂತೆ ತನ್ನ ಪ್ರತಿಭಟನಾ ಪತ್ರಕ್ಕೆ ಕಾಂಗ್ರೆಸ್ ಇಂದು, ಸೋಮವಾರ ದೊಡ್ಡ ಮುಖಭಂಗವನ್ನು ಎದುರಿಸಿದೆ. ಪಕ್ಷದ ಹಿರಿಯ ನಾಯಕ ಮನೀಶ್ ತಿವಾರಿ ಅವರು ಯೋಜನೆಯ ಬಗ್ಗೆ ಸಂಸದೀಯ ಸಮಿತಿಗೆ ಮಾಹಿತಿ ನೀಡಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಬರೆದ ಪತ್ರಕ್ಕೆ ಸಹಿ ಹಾಕಲು ನಿರಾಕರಿಸಿದ್ದಾರೆ. ಅಗ್ನಿಪಥ ಯೋಜನೆ … Continued

ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ, ಉತ್ತರ ಕನ್ನಡ ಜಿಲ್ಲೆ ಕ್ಯಾಸಲ್‌ರಾಕ್‌ನಲ್ಲಿ ಅತಿ ಹೆಚ್ಚು ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ( Bangal Kolli ) ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನಗಳ ವರೆಗೆ ಮಳೆ ಜೋರಾಗಿ ಸುರಿಯಲಿದೆ ಎಂದು ಹೇಳಲಾಗಿದೆ. ರಾಜ್ಯದ ಕರಾವಳಿ, ಮಳೆನಾಡು ಪ್ರದೇಶಗಳು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ರಾಜ್ಯದ ಕರಾವಳಿಯಲ್ಲಿ ಕಳೆದ ಐದಾರು ದಿನಗಳಿಂದ ನಿರಂತರವಾಗಿ ಮಳೆಯಾಗಿದ್ದು ಸತತ ನಾಲ್ಕು ದಿನಗಳ ಕಾಲ … Continued

ಕಾರವಾರ: ಅಣಶಿ ಘಟ್ಟದಲ್ಲಿ ಗುಡ್ಡ ಕುಸಿತ, ವಾಹನ ಸಂಚಾರ ಸ್ಥಗಿತ

ಕಾರವಾರ: ಕಾರವಾರ-ಬೆಳಗಾವಿ ರಾಜ್ಯ ಹೆದ್ದಾರಿಯ ಅಣಶಿ ಘಟ್ಟದಲ್ಲಿ ಎರಡು ಕಡೆಗಳಲ್ಲಿ ಇಂದು, ಸೋಮವಾರ ಬೆಳಗ್ಗೆ ಗುಡ್ಡ ಕುಸಿದಿದ್ದು ವಾಹನ ಸಂಚಾರಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುಡ್ಡ ಕುಸಿತವಾಗಿದೆ. ಇದು ಕಾರವಾರದಿಂದ ಜೊಯಿಡಾ ಮೂಲಕ ದಾಂಡೇಲಿ, ಬೆಳಗಾವಿ, ಧಾರವಾಡಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಾಗಿದೆ. ಒಂದು ವಾರದ ಹಿಂದೆಯೂ ಇಲ್ಲಿ ದೊಡ್ಡ ಗಾತ್ರದ ಕಲ್ಲುಗಳು … Continued

ಉರುಳಿ ಬೈಕ್ ಮೇಲೆ ಬಿದ್ದ ಕಾರ್‌ : ಬೈಕ್‌ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಉಡುಪಿಯ ಕರಾವಳಿ ಬೈಪಾಸಿನಲ್ಲಿ ಹೋಗುತ್ತಿದ್ದ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ  ಉರುಳಿ ಬೈಕ್ ನ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ಯುವಕ  ವಿಜಯಪುರ ಮೂಲದ ಸುನೀಲಕುಮಾರ್ (24) ಎಂದು ಹೇಳಲಾಗಿದೆ. ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ತಾಯಿ‌ ಮತ್ತು … Continued

ನಾಳೆಯಿಂದ ಮಳೆ ಪೀಡಿತ ಜಿಲ್ಲೆಗಳಿಗೆ ಸಿಎಂ ಬೊಮ್ಮಾಯಿ ಪ್ರವಾಸ

ಬೆಂಗಳೂರು: ಸತತ ಮಳೆಯಿಂದ ತತ್ತರಿಸಿರುವ ಕೊಡುಗು, ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 10 ದಿನಗಳಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿ ಸಲಹೆ ಸೂಚನೆ ನೀಡಲಾಗಿದೆ. ನಾಳೆಯಿಂದ ಅತಿ … Continued

ಜುಲೈ15ರ ವರೆಗೆ ರಾಜ್ಯದ ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಇಂದು ಸೋಮವಾರದಿಂದ ಜುಲೈ 15ರ ವರೆಗೆ ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಅಲ್ಲದೆ ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಜುಲೈ 12ರಂದು ಚಿಕ್ಕಮಗಳೂರು, ಕೊಡಗು ಮತ್ತು … Continued

ಜುಲೈ 12 ರವರೆಗೆ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಬಂದ್

ಶಿವಮೊಗ್ಗ : ಆಗುಂಬೆ ಘಾಟ್‌ ಹನ್ನೊಂದನೇ ತಿರುವಿನಲ್ಲಿ‌ ಗುಡ್ಡ ಕುಸಿದ ಪರಿಣಾಮ ರಸ್ತೆ ಸಂಚಾರ ಬಂದ್ ಆಗಿದೆ. ಭಾರಿ ಮಳೆ ಸುರಿಯುತ್ತಿರುವ ಕಾರಣ ಮಣ್ಣು ತೆರವು ಕಾರ್ಯಾಚರಣೆ ವಿಳಂಬವಾಗಿದ್ದು, ಆಗುಂಬೆ ಘಾಟಿಯಲ್ಲಿ ಎಲ್ಲ ವಾಹನಗಳ ಸಂಚಾರವನ್ನು ಜುಲೈ 12ರ ವರೆಗೆ ನಿರ್ಬಂಧ ವಿಧಿಸಲಾಗಿದೆ. ಜುಲೈ 12 ರಿಂದ 30ರ ವರೆಗೆ ಆಗುಂಬೆ ಘಾಟಿಯಲ್ಲಿ ಲಘು ವಾಹನಗಳ … Continued