ಆನೆಗೊಂದಿ: ತಡರಾತ್ರಿ ಊಟ ಇಲ್ಲ ಎಂದಿದ್ದಕ್ಕೆ ಅಡುಗೆ ಸಿಬ್ಬಂದಿ ಕೂಡಿಹಾಕಿ ಡಾಬಾಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…!

ಕೊಪ್ಪಳ: ರಾತ್ರಿ ಹನ್ನೊಂದುವರೆ ಗಂಟೆಯ ಬಳಿಕ ಊಟ ಇಲ್ಲ ಎಂದು ಹೇಳಿದ್ದಕ್ಕೆ ಆಕ್ರೋಶಗೊಂಡ ಅಪರಿಚಿತರು ಡಾಬಾಕ್ಕೆ ಬೆಂಕಿ ಹಚ್ಚಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ತಡರಾತ್ರಿ ಊಟ ನಿರಾಕರಿಸಿದ್ದರಿಂದ ಸಿಟ್ಟುಗೊಂಡ ಕಿಡಿಗೇಡಿ ಯುವಕರು ಅಡುಗೆ ಸಿಬ್ಬಂದಿಗೆ ಗೊತ್ತಾಗದಂತೆ ಕೋಣೆಯ ಹೊರಗಿನಿಂದ ಚಿಲಕ ಹಾಕಿ ಕೂಡಿಹಾಕಿದ್ದಾರೆ. ಬಳಿಕ ಡಾಬಾಕ್ಕಿದ್ದ ನೀರಿನ ಸಂಪರ್ಕ … Continued

ಇಂಗ್ಲಿಷ್ ಕಲಿಕೆ ಕಷ್ಟವೆಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕ

ತುಮಕೂರು: ಇಂಗ್ಲಿಷ್​ ಓದಲು ಕಷ್ಟವಾಗುತ್ತದೆ ಎಂದು 7ನೇ ತರಗತಿ ವಿದ್ಯಾರ್ಥಿಯೊಬ್ಬ ವಿಷ ಕುಡಿದು ಆತ್ಮಹತ್ಯಗೆ ಯತ್ನಿಸಿದ ಘಟನೆ ಘಟನೆ ತುಮಕೂರಿನ ಊರ್ಡಿಗೆರೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಅಜಯ ಎಂಬ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕ, ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ. ಈತ ಊರ್ಡಿಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಾನೆ. ಇಂಗ್ಲಿಷ್ ಓದಲು … Continued

ಉದ್ಯಮಿ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕುಂದಾಪುರ: ಹಿರಿಯ ಉದ್ಯಮಿ ಕಟ್ಟೆ ಭೋಜಣ್ಣ (80) ಬುಧವಾರ ಬೆಳಿಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್ ನಲ್ಲಿ ಗುಂಡು ಹಾರಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಟ್ಟೆ ಭೋಜಣ್ಣ ಅವರು ಬೆಂಗಳೂರಿನಲ್ಲಿ ಹಲವಾರು ಹೋಟೆಲ್, ಬಟ್ಟೆ ಅಂಗಡಿಗಳನ್ನು ಹೊಂದಿದ್ದು. … Continued

ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಸಾವು, ಮೂವರಿಗೆ ಗಾಯ; ಚಾಲಕ ಪರಾರಿ

ಬಾಗಲಕೋಟೆ: ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿರುವ ಘಟನೆ ಹುನಗುಂದ ತಾಲೂಕಿನ ಕ್ಯಾದಿಗೇರಿ ಕ್ರಾಸ್ ನಲ್ಲಿ ಬುಧವಾರ (ಮೇ 25) ಸಂಜೆ ನಡೆದಿದೆ. ಮೃತ ವಿದ್ಯಾರ್ಥಿನಿಯರನ್ನು ನೇತ್ರಾವತಿ ರಗಟಿ ‌(14), ಅಂಜಲಿ ಸೂಡಿ (14) ಎಂದು ಹೇಳಲಾಗಿದೆ. ಶಾಲೆ ಮುಗಿಸಿ ಐಹೊಳೆಯಿಂದ -ಚಿಲ್ಲಾಪುರಕ್ಕೆ … Continued

ಪಕ್ಷ ನಿರಾಸೆ ಮಾಡುವುದಿಲ್ಲ, ಕರ್ನಾಟಕ ಬಿಜೆಪಿಯಲ್ಲಿ ವಿಜಯೇಂದ್ರಗೆ ದೊಡ್ಡ ಪಾತ್ರ ನೀಡಲಿದೆ ಎಂಬ ವಿಶ್ವಾಸವಿದೆ-ಯಡಿಯೂರಪ್ಪ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಒಂದು ದಿನದ ನಂತರ ಬಿಜೆಪಿಯ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಮತ್ತು ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಪಕ್ಷದಲ್ಲಿ ದೊಡ್ಡ ಪಾತ್ರದ ಸಾಧ್ಯತೆ ಬಗ್ಗೆ ಹೇಳಿದ್ದಾರೆ. ರಾಜ್ಯ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಜೂನ್ 3ರಂದು ನಡೆಯಲಿರುವ ದ್ವೈವಾರ್ಷಿಕ … Continued

ಮಂಗಳೂರಿನ ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ: ತಾಂಬೂಲ ಪ್ರಶ್ನೆಗೆ ಕೇರಳದ ಪ್ರಖ್ಯಾತ ಜ್ಯೋತಿಷ್ಯಿಯಿಂದ ಉತ್ತರ

ಮಂಗಳೂರು: ಮಳಲಿ ಮಸೀದಿ ನವೀಕರಣದ ವೇಳೆ ದೇವಾಲಯದ ಮಾದರಿ ರಚನೆ ಪತ್ತೆಯಾದ ಹಿನ್ನೆಲೆಯಲ್ಲಿ ದೈವ ಸಾನಿಧ್ಯ ದೃಢೀಕರಣಕ್ಕಾಗಿ ಬುಧವಾರ ಬೆಳಗ್ಗೆ 8 ಗಂಟೆಯಿಂದ ರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಆರಂಭವಾಗಿದ್ದು, ಈ ವೇಳೆ ಕೇರಳ ದೈವಜ್ಞರು ಸ್ಥಳದಲ್ಲಿ ಈ ಹಿಂದೆ ದೇವದಾಲಯವಿತ್ತು, ವಿವಾದದಿಂದ ದೇವಾಲಯ ನಾಶಪಡಿಸಲಾಗಿದೆ ಎಂದು ಹೇಳಿದ್ದಾರೆ. ಕಳೆದ ತಿಂಗಳು ನವೀಕರಣಕ್ಕಾಗಿ ಅಸಯ್ಯಿದ್ … Continued

ಪಠ್ಯಪುಸ್ತಕದಿಂದ ಈಗ ದೇವನೂರು ಮಹಾದೇವ ಬರಹ ಕೈಬಿಡಲು ಆಗುವುದಿಲ್ಲ: ಶಿಕ್ಷಣ ಸಚಿವ ನಾಗೇಶ

ಮೈಸೂರು: ಕರ್ನಾಟಕದ ವಿದ್ಯಾರ್ಥಿಗಳಿಗೆ ವಿತರಿಸುವ ಪಠ್ಯಪುಸ್ತಕಗಳ ಮುದ್ರಣ ಈಗಾಗಲೇ ಪೂರ್ಣಗೊಂಡಿದೆ. ಹೀಗಾಗಿ ಈ ಹಂತದಲ್ಲಿ ದೇವನೂರು ಮಹಾದೇವ ಅವರ ಬರಹವನ್ನು ಕೈಬಿಡಲು ಸಾಧ್ಯವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತನ್ನ ಪಾಠ ತೆಗೆಯುವಂತೆ ಸಾಹಿತಿ ದೇವನೂರು ಹೇಳಿಕೆ ನೀಡಿದ್ದಾರೆ. ಅವರು ಮೊದಲೇ ಹೀಗೆ ಹೇಳಿದ್ದರೆ ಈ … Continued

ಹೊಲದಲ್ಲಿ ಉಳುಮೆ ಮಾಡಿ ಭಗವಂತನಿಗೆ ನಮನ ಸಲ್ಲಿಸಿದ ಕನ್ನಡದ ಸ್ಟಾರ್‌ ನಟಿ ಶ್ರುತಿ…! ವೀಕ್ಷಿಸಿ

ಕನ್ನಡದ ನಟಿ ಶ್ರುತಿ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡು ಹೊಲಕ್ಕಿಳಿದು ಉಳುಮೆ ಮಾಡಲು ಆರಂಭಿಸಿದ್ದಾರೆ. ತಾನು ಕೃಷಿ ಮಾಡುತ್ತಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅವರು ಹಂಚಿಕೊಂಡಿದ್ದಾರೆ. ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಹೆಸರು ಮಾಡಿರುವ ನಟಿ ಶ್ರುತಿ, ಈಗ ಸಿನಿಮಾ ಮತ್ತು ರಿಯಾಲಿಟಿ ಶೋ ಎರಡರಲ್ಲೂ ಸಖತ್ ಬ್ಯುಸಿ. ಇದರ ಮಧ್ಯೆಯೇ ಕೃಷಿಯಲ್ಲಿ ತೊಡಗಿಕೊಳ್ಳಲು ಮನಸ್ಸು ಮಾಡಿದ್ದಾರೆ. … Continued

ಕುವೆಂಪು ಪಠ್ಯ ಪರಿಷ್ಕರಣೆ ಮಾಡಿಲ್ಲ, ಅವರಿಗೆ ಅವಮಾನ ಮಾಡಿಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: 4ನೇ ತರಗತಿಯ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯ ಪುಸ್ತಕವನ್ನು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಣೆ ಮಾಡಿದೆ ಎಂಬ ವಿಚಾರ ಸತ್ಯಕ್ಕೆ ದೂರವಾದದ್ದು ಎಂದು ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ. ಕುವೆಂಪು ಅವರ ಯಾವುದೇ ಪಠ್ಯವನ್ನು ಕೈಬಿಟ್ಟಿಲ್ಲ. ಅವರ ಪಠ್ಯವನ್ನು ಪರಿಷ್ಕರಣೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದೆ. ಈ … Continued

ನನ್ನ ಕಥನ ಭಾಗವನ್ನು ಪಠ್ಯದಿಂದ ಕೈಬಿಡಿ : ಸರ್ಕಾರಕ್ಕೆ ಪತ್ರ ಬರೆದ ದೇವನೂರು ಮಹದೇವ

ಬೆಂಗಳೂರು: ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸಾಹಿತಿ ದೇವನೂರ ಮಹಾದೇವ ತಮ್ಮ ಕಥವನ್ನು ಪಠ್ಯಕ್ಕೆ ಸೇರ್ಪಡೆಗೆ ಮಾಡುವುದು ಬೇಡ ಎಂದು ಪತ್ರ ಬರೆದಿದ್ದಾರೆ. ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ … Continued