ಕೆಎಸ್‌ಆರ್‌ಟಿಸಿಯಲ್ಲಿ ‘ನಿವೃತ್ತ ಚಾಲಕ’ರಿಗೆ ತಾತ್ಕಾಲಿಕ ಆಧಾರದ ಮೇಲೆ ಕೆಲಸಕ್ಕೆ ಸೇರಲು ಅವಕಾಶ

ಬೆಂಗಳೂರು: ಸಾರ್ವಜನಿಕ ಪ್ರಯಾಣಿಕರ ಅಗತ್ಯಕ್ಕನಗುಣವಾಗಿ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ, ಕೆಎಸ್ಆರ್‌ಟಿಸಿಯಿಂದ ನಿವೃತ್ತ ಚಾಲಕರನ್ನು ಮತ್ತೆ ನಿಯೋಜಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ 63 ವರ್ಷ ವಯೋಮಿತಿ ಮೀರದ ನಿವೃತ್ತ ಚಾಲಕರು ಸೂಕ್ತ ದಾಖಲೆಯೊಂದಿಗೆ ವಿಭಾಗಿಯ ನಿಯಂತ್ರಣಾಧಿಕಾರಿಗಳಲ್ಲಿ ವರದಿ ಮಾಡಿಕೊಳ್ಳಲು ತಿಳಿಸಿದೆ.ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಪ್ರಕಟಣೆ … Continued

ಸುಗ್ರೀವಾಜ್ಞೆಗೆ ಬಿತ್ತು ರಾಜ್ಯಪಾಲರ ಅಂಕಿತ: ಮತಾಂತರ ನಿಷೇಧ ಈಗ ಕರ್ನಾಟಕದಲ್ಲಿ ಕಾನೂನು

ಬೆಂಗಳೂರು : ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅಂತಿಮಮುದ್ರೆ ಒತ್ತಿದ್ದಾರೆ. ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನ ಪಾಸ್‌ ಮಾಡಿತ್ತು. ಈಗ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದರಿಂದ ಈಗ ಅದು ಕಾನೂನು ಆಗಿ ರಾಜ್ಯದಲ್ಲಿ ಜಾರಿಗೆ ಬರಲಿದೆ. ಈ ಮೂಲಕ ಕರ್ನಾಟಕವು ಮತಾಂತರ ವಿರೋಧಿ … Continued

ವಕೀಲೆ ಕುಟುಂಬದ ಮೇಲೆ ಹಲ್ಲೆ: ಕೆಎಸ್‌ಎಚ್‌ಆರ್‌ಸಿ ಎಡಿಜಿಪಿಗೆ ಆಯೋಗದಿಂದ ನೋಟಿಸ್‌

ಬೆಂಗಳೂರು: ಬಾಗಲಕೋಟೆಯಲ್ಲಿ ವಕೀಲೆ ಸಂಗೀತಾ ಶಿಕ್ಕೇರಿ ಮತ್ತು ಅವರ ಕುಟುಂಬದವರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ದೂರಿನ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ (ಕೆಎಸ್‌ಎಚ್‌ಆರ್‌ಸಿ) ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ, ಹುಬ್ಬಳ್ಳಿಯ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮತ್ತು ಬಾಗಲಕೋಟೆ ನಗರಸಭೆ ಆಯುಕ್ತರಿಗೆ ಕೆಎಸ್‌ಎಚ್‌ಆರ್‌ಸಿ ಸೋಮವಾರ ನೋಟಿಸ್‌ ಜಾರಿ ಮಾಡಿದೆ. ಹಲ್ಲೆಗೊಳಗಾದ … Continued

ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ ಮಲ್ಕಾಪುರೆ ನೇಮಕ

ಬೆಂಗಳೂರು: ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ಬಿಜೆಪಿಯ ಪರಿಷತ್‌ ಸದಸ್ಯ ರಘುನಾಥರಾವ್ ಮಲ್ಕಾಪುರೆ ಅವರನ್ನು ನಿಯುಕ್ತಿ ಮಾಡಲಾಗಿದೆ. ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾಗಲಿರುವ ಕಾರಣದಿಂದ ರಾಜೀನಾಮೆ ನೀಡಿದ್ದರು. ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ ರಾವ್ ಮಲ್ಕಾಪುರೆ ಅವರು ಇಂದು, ಮಂಗಳವಾರ … Continued

ನೀರು ಕುಡಿಯಲು ಹೋದ ಮೂವರು ಬಾಲಕಿಯರು ಕೃಷಿಹೊಂಡದಲ್ಲಿ ಬಿದ್ದು ಸಾವು

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದ ಹೊರವಲಯದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೂವರ ಬಾಲಕಿಯರು ಮೃತಪಟ್ಟಿದ್ದಾರೆ. ಮೃತರನ್ನು ಅತ್ತಿಕಟ್ಟಿ ತಾಂಡಾದ ಸುನಿತಾ ಲಮಾಣಿ (13) ಅಂಕಿತಾ ಲಮಾಣಿ (10) ಹಾಗೂ ಡೋಣಿ ತಾಂಡಾದ ಸುನಿತಾ (11) ಎಂದು ಹೇಳಲಾಗಿದೆ. ಕುರಿ ಮರಿ ಮೇಯಿಸಲು ಹೋಗಿದ್ದ ಮೂವರು ಬಾಲಕಿಯರು,ಆಟವಾಡುತ್ತ ಕೃಷಿ ಹೊಂಡಕ್ಕೆ ತೆರಳಿದ್ದರು. … Continued

ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆ ನಂತರ ಸಾವಿಗೀಡಾದ ಕನ್ನಡ ಕಿರುತೆರೆಯ ನಟಿ

ಬೆಂಗಳೂರು :ಕನ್ನಡದ ಗೀತಾ ಮತ್ತು ದೊರೆಸಾನಿ ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ಕಿರುತರೆ ನಟಿ ಚೇತನಾ ರಾಜ್‌ (22)ಅಕಾಲಿಕವಾಗಿ ನಿಧನರಾಗಿದ್ದಾರೆ. ಸೋಮವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಫ್ಯಾಟ್‌ ಸರ್ಜರಿಗೆ ಒಳಗಾಗಿದ್ದ ಕಿರುತರೆ ನಟಿ ಚೇತನಾ ರಾಜ್‌ ರವರು ಶಸ್ತ್ರಚಿಕಿತ್ಸೆಯ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸೋಮವಾರ ಬೆಳಿಗ್ಗೆ ಸುಮಾರು 9:30 ಕ್ಕೆ ತಮ್ಮ … Continued

ಮೈಸೂರು: ರಾತ್ರಿ ಭಾರೀ ಮಳೆ, ಬೆಳ್ಳಂಬೆಳಿಗ್ಗೆ ಕೊಚ್ಚಿಹೋದ ಸೇತುವೆ

ಮೈಸೂರು: ಸೋಮವಾರ  ರಾತ್ರಿ ಸುರಿದ ಭಾರೀ ಮಳೆಗೆ ನಗರದ ಪ್ರಮುಖ ರಸ್ತೆಯೊಂದರ ಸೇತುವೆಯೇ ಕೊಚ್ಚಿಹೋಗಿದೆ. ಮೈಸೂರಿನ ಹೊರವಲಯದಲ್ಲಿರುವ ಬೋಗಾದಿ ಕೆರೆ ತುಂಬಿ ಹರಿಯುತ್ತಿದ್ದು, ಇದರಿಂದ ರಿಂಗ್ ರಸ್ತೆಯಿಂದ ಅಮೃತಾನಂದಮಯಿ ವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ನಗರದ ಬೋಗಾದಿ ನಾಗಲಿಂಗೇಶ್ವರ ದೇವಸ್ಥಾನದ ಸಮೀಪದ (ಅಮೃತನಂದಮಯಿ ಶಾಲೆಯ ಹಿಂಭಾಗ) ಇರುವ ಸೇತುವೆ ಕೊಚ್ಚಿ ಹೋಗಿದೆ.ರಸ್ತೆಯ ಮಧ್ಯದ ಸೇತುವೆಯೇ ನೀರಿನಲ್ಲಿ ಕೊಚ್ಚಿಹೋಗಿದ್ದು, … Continued

ಕನ್ನಡಿಗ ಅನಿಲ್ ಹೆಗ್ಡೆಗೆ ಬಿಹಾರ ರಾಜ್ಯಸಭಾ ಟಿಕೆಟ್

ಪಾಟ್ನಾ: ಬಿಹಾರದಿಂದ ರಾಜ್ಯಸಭೆಗೆ ಈ ಬಾರಿ ಆಡಳಿತಾರೂಢ ಜೆಡಿಯು ದಕ್ಷಿಣ ಕನ್ನಡ ಮೂಲದ ಅನಿಲ ಹೆಗ್ಡೆ ಅವರಿಗೆ ಟಿಕೆಟ್ ನೀಡಿದೆ. ಮೂಲತಃ ಉಡುಪಿ ಜಿಲ್ಲೆಯವರಾದ  ಅನಿಲ್ ಹೆಗ್ಡೆ ಅವರು ಸುದೀರ್ಘ ಅವಧಿ ವರೆಗೆ ಜಾರ್ಜ್ ಫರ್ನಾಂಡಿಸ್ ಅವರ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮಹೇಂದ್ರ ಪ್ರಸಾದ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಇಗ ಜೆಡಿಯು ಅನಿಲ್ ಹೆಗ್ಡೆ … Continued

ನಾಳೆ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ನಾಳೆಯಿಂದ (ಮೇ 18) ಇನ್ನಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇದು ಮೇ 18ರಿಂದ ಇನ್ನಷ್ಟು ಜೋರಾಗಲಿದೆ ಎಂದು ಹೇಳಿದೆ. ಮೇ 18ರಂದು ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ … Continued

ಭಟ್ಕಳ: ಪೊಲೀಸ್ ಜೀಪ್ ಡಿಕ್ಕಿ, ಮಹಿಳೆ ಸಾವು

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ಪೊಲೀಸ್ ಜೀಪ್ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿರುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರಿಗೆ ಪೈಲಟ್ ಮಾಡುವ ಸಲುವಾಗಿ ಬೆಳಕೆ ಕಡೆಯಿಂದ ಸಾರದಹೊಳೆ ಕಡೆಗೆ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತ ಮಹಿಳೆಯನ್ನು ವೆಂಕಟಾಪುರ   ನಿವಾಸಿ ವಿಜಯಾ ಹೊನ್ನಾವರಕರ … Continued