ಶಿರಸಿ: ಖ್ಯಾತ ಆಯುರ್ವೇದ ವೈದ್ಯ ಡಾ.ಸಾಂಬಮೂರ್ತಿ ನಿಧನ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಹೆಸರಾಂತ ಆಯುರ್ವೇದ ವೈದ್ಯರಾಗಿದ್ದ ಹಾಗೂ ಶಿರಸಿಯ ಸಮೀಕ್ಷಾ ಆಯುರ್ವೇದ ಚಿಕಿತ್ಸಾಲಯದ ಸಂಸ್ಥಾಪಕರಾಗಿದ್ದ ಡಾ.ಸಾಂಬಮೂರ್ತಿ ಗಾಯತ್ರಿ (57) ಇಂದು, ಸೋಮವಾರ  ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು, ಪ್ರಖ್ಯಾತ ಆಯುರ್ವೇದ ತಜ್ಞೆ ಪತ್ನಿ ಡಾ.ಸಾವಿತ್ರಿ, ಪುತ್ರ ಸಂಯಮ ಹಾಗೂ ಪುತ್ರಿ ಸಂಜ್ಞಾ ಅವರನ್ನು ಅಗಲಿದ್ದಾರೆ. ಮೂಲತಃ ಗೋಕರ್ಣದವರಾದ ಡಾ.ಸಾಂಬಮೂರ್ತಿಯವರು ಗುರು ಶಿಷ್ಯ ಪರಂಪರೆಯಡಿ ತಮ್ಮ … Continued

ದತ್ತಪೀಠದ ಹೋಮ ನಡೆಯುವ ಪವಿತ್ರ ಜಾಗದಲ್ಲಿ ಮಾಂಸಾಹಾರ ಮಾಡಿದ ಆರೋಪ: ವ್ಯಾಪಕ ಆಕ್ರೋಶ, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹ

ಚಿಕ್ಕಮಗಳೂರು: ಬಾಬಾ ಬುಡನ್‌ಗಿರಿಯಲ್ಲಿರುವ ವಿವಾದಿತ ದತ್ತಪೀಠ ಪ್ರದೇಶ ಮತ್ತೆ ಸುದ್ದಿಯಾಗಿದೆ. ದತ್ತಪೀಠದ ಹೋಮ-ಹವನ ನಡೆಯುವ ಪವಿತ್ರ ಜಾಗದಲ್ಲಿ ಮಾಂಸದೂಟ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ವಿವಾದಿತ ಜಾಗದಲ್ಲಿ ಕೋರ್ಟ್ ಆದೇಶ ಉಲ್ಲಂಘಿಸಿದ್ದು, ಹೋಮ-ಹವನ ನಡೆಯುವ ತಾತ್ಕಾಲಿಕ ಶೆಡ್‌ನಲ್ಲಿ ಮಾಂಸದೂಟ ಮಾಡಲಾಗಿದೆ ಎಂಬ ಮಾತು ಕೇಳಿ ಬಂದಿದೆ. ವಿವಾದಿತ ಗೋರಿ ಬಳಿ ಕಿಡಿಗೇಡಿಗಳು ಮಾಂಸದೂಟ ಮಾಡಿದ್ದಾರೆ … Continued

ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್ ಸೇರಿ ಐವರು IPS ಅಧಿಕಾರಿಗಳು, 37 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಐದು ಐಪಿಎಸ್‌ ಅಧಿಕಾರಿಗಳು ಹಾಗೂ 37 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂತ್‌ ( Kamal Panth ) ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ … Continued

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ; ನಾಳೆ ಬಿಜೆಪಿ ಸೇರುವುದಾಗಿ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನ ಮತ್ತು ಪರಿಷತ್ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿ ಸೋಮವಾರ ರಾಜೀನಾಮೆ ನೀಡಿದ್ದಾರೆ ಹಾಗೂ ನಾಳೆ, ಮಂಗಳವಾರ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ಇಂದು,ಸೋಮವಾರ ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವರಾಜ ಹೊರಟ್ಟಿ, ಸಭಾಪತಿ ಸ್ಥಾನಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದರು. ಹಾಗೂ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ … Continued

ಕಾರು ಡಿಕ್ಕಿ: ಏಳು ಎಮ್ಮೆಗಳು ಸ್ಥಳದಲ್ಲೇ ಸಾವು

ಶಿವಮೊಗ್ಗ: ಗಾಡಿಕೊಪ್ಪದ ತುಂಗಾ ನಾಲೆ ಬಳಿ ಕಾರು ಡಿಕ್ಕಿ ಹೊಡೆದು ಏಳು ಎಮ್ಮೆಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ವರದಿಯಾಗಿದೆ. ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಕಾರು ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಬಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ . ರಸ್ತೆ ಮಧ್ಯೆ ಎಮ್ಮೆಗಳು ಒಮ್ಮೆಗೇ ಬಂದಿದ್ದರಿಂದ ಚಾಲಕನಿಗೆ ಅದು … Continued

ಪಿಎಸ್ಐ ಅಭ್ಯರ್ಥಿಗಳಿಂದ ಪ್ರಧಾನಿಗೆ ರಕ್ತದಲ್ಲಿ ‘ಉಗ್ರ’ ಸಂದೇಶ..! ಆ ಪತ್ರದಲ್ಲಿ ಏನಿದೆ?

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ತಪ್ಪು ಎಸಗಿದವರಿಂದಾಗಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ತೊಂದರೆಯಾಗಿದೆ. ಪ್ರಾಮಾಣಿಕರಿಗೆ ನ್ಯಾಯ ಸಿಗದ ಹಿನ್ನೆಲೆಯಲ್ಲಿ ನೊಂದ ಅಭ್ಯರ್ಥಿಗಳು ಪ್ರಧಾನಿಗೆ ರಕ್ತದಲ್ಲಿ ಬರೆದಿದ್ದಾರೆ ಎಂದು ಹೇಳಲಾದ ಪತ್ರವೊಂದು ವೈರಲ್ ಆಗಿದೆ. ನ್ಯಾಯ ದೊರಕದೇ ಇದ್ದಲ್ಲಿ ಉಗ್ರ ಮತ್ತು ನಕ್ಸಲ್ ಸಂಘಟನೆ ಸೇರುವುದಾಗಿ ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸುಮಾರು ಎರಡು ಪುಟಗಳಿರುವ ಪತ್ರವನ್ನು ಪ್ರಧಾನಿ ನರೇಂದ್ರ … Continued

ಹನುಮನ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಾಣ: ಸಿಎಂ ಬೊಮ್ಮಾಯಿ

ಧಾರವಾಡ: ಹನುಮನ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಭಾನುವಾರ ಹುಬ್ಬಳ್ಳಿಯ ಗೋಕುಲದಲ್ಲಿ ಜೀರ್ಣೋದ್ಧಾರ ವಾಗಿರುವ ದಾರಾವತಿ ಹನುಮಂತನ ದೇವಸ್ಥಾನಕ್ಕೆ ಭೇಟಿ ನೀಡಿ ಹನುಮಂತ ದೇವರ ಆಶೀರ್ವಾದ ಪಡೆದ ನಂತರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಹನುಮ ಜನಿಸಿದ್ದು ಕರ್ನಾಟಕದಲ್ಲಿ. ಆತ ಜನಿಸಿದ … Continued

ಪೊಲೀಸ್‌ ಇನ್ಸ್‌ಪೆಕ್ಟರ್‌ ಮೇಲೆ ವಾಹನ ನುಗ್ಗಿಸಿದ ಗೋ ಕಳ್ಳರು: ಎಸ್‌ಐಗೆ ಗಾಯ, ಕಳ್ಳರು ಪರಾರಿ

ಮಂಗಳೂರು : ಅಕ್ರಮ ಗೋ ಸಾಗಾಟದ ವಾಹನ ತಡೆದು ನಲ್ಲಿಸಲು ಯತ್ನಿಸಿದ ಎಸ್‌ಐ ಅವರಿಗೆ ಗೋ ಸಾಗಾಟದ ವಾಹನ ತಾಗಿ ಗಾಯಗೊಂಡ ಘಟನೆ ರವಿವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುದ್ಕೋಳಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಪುಂಜಾಲಕಟ್ಟೆ ಠಾಣಾ ಎಸ್‌ಐ ಸುತೇಶ್‌ ಅವರು ಗಾಯಗೊಂಡಿದ್ದು, ಈ ವೇಳೆ ಗೋ ಕಳ್ಳರು … Continued

ಪ್ರಿಯತಮ ಅಪಘಾತದಲ್ಲಿ ಸಾವು, ಆಘಾತದಿಂದ ಪ್ರಿಯತಮೆ ಆತ್ಮಹತ್ಯೆಗೆ ಶರಣು

ತುಮಕೂರು: ಇಬ್ಬರು ಯುವ ಪ್ರೇಮಿಗಳು ಸತಿ-ಪತಿಗಳಾಗಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಆದರೆ ವಿಧಿ ಬೇರೆಯದನ್ನೇ ಬಗೆದಿತ್ತು.. ಪ್ರಿಯಕರ ಅಪಘಾತದಲ್ಲಿ ಮೃತಪಟ್ಟಿದ್ದಾನೆ, ಆ ಸುದ್ದಿ ಕೇಳಿದ ಪ್ರಿಯತೆಮೆಯೂ ಆಘಾತದಿಂದ ಆತ್ಮಹತ್ಯೆಗೆ ಶರಣಾಗಿರುವ ದುರಂತದ ಘಟನೆ ತುಮಕೂರಿನ ಅರೆಹಳ್ಳಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ (23) ಹಾಗೂ ಅರೆಹಳ್ಳಿ ಗ್ರಾಮದ ಸುಷ್ಮಾ (22) … Continued

ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಯತ್ತ ಈಗ ಬಿಜೆಪಿ ಗಮನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸದ್ಯ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯತ್ತ ಬಿಜೆಪಿ ಗಮನಹರಿಸಿದ್ದು, ಈ ಸಂಬಂಧ ಕೋರ್ ಕಮಿಟಿ ಸಭೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ. ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು. ಸದ್ಯ ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ನಿನ್ನೆಯೇ ಈ ಸಂಬಂಧ … Continued