ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ; 15ಕ್ಕೆ 15 ಸ್ಥಾನಗಳಲ್ಲೂ ರಮೇಶ ಕತ್ತಿ ಬಣಕ್ಕೆ ಜಯ

ಬೆಳಗಾವಿ: ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ರಮೇಶ ಕತ್ತಿ (Ramesh Katti) ಬಣ ಐತಿಹಾಸಿಕ ದಾಖಲೆ ಮಾಡಿದೆ. ಒಟ್ಟು 15 ಜನ ನಿರ್ದೇಶಕರ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ 15ಕ್ಕೆ 15ರಲ್ಲಿಯೂ ರಮೇಶ್ ಕತ್ತಿ ಬಣ ಜಯಗಳಿಸಿದೆ. ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ರಮೇಶ ಕತ್ತಿ ಅವರ ಪಾಲಿಗೆ ಅಗ್ನಿ ಪರೀಕ್ಷೆಯಾಗಿ ಪರಿಣಮಿಸಿತ್ತು. ಆ … Continued

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : ಎಲ್ಲ ನೇಮಕಾತಿಗಳಲ್ಲಿ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್ ನೀಡಿದ್ದು, ನಾಗರಿಕ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ … Continued

ಖ್ಯಾತ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಬೆಂಗಳೂರು : ಕನ್ನಡದ ರಂಗಭೂಮಿಯ ಹಿರಿಯ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು, ಸೋಮವಾರ (ಸೆಪ್ಟೆಂಬರ್‌ ೨೯) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಯಶವಂತ ಸರದೇಶಪಾಂಡೆ ಅವರಿಗೆ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಐದಾರು ದಿನ ಭಾರೀ ಮಳೆ : ಹವಾಮಾನ ಇಲಾಖೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ (ಸೆಪ್ಟೆಂಬರ್‌ 28ರಿಂದ) ಅಕ್ಟೋಬರ್ 4ರ ವರೆಗೆ ಭಾರೀ ಮಳೆಯಾಗಲಿದೆ. ಇನ್ನೂ 4 ದಿನಗಳ ಕಾಲ ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅಕ್ಟೋಬರ್ 2ರ ವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. … Continued

ಇನೋವಾ ವಾಹನ ಮೇಲೆ ಕಂಟೇನರ್‌ ಮಗುಚಿ ಓರ್ವ ಸಾವು, ನಾಲ್ವರಿಗೆ ಗಾಯ

ಬೆಳಗಾವಿ : ಹೆದ್ದಾರಿಯ ಒಂದು ಬದಿಯಲ್ಲಿ ಹೊರಟಿದ್ದ ಕಂಟೇನರ್ ಲಾರಿ ಇನ್ನೊಂದು ಬದಿಯಲ್ಲಿ ಹೊರಟಿದ್ದ ಇನೋವಾ ಕಾರಿನ‌ ಮೇಲೆ ಮುಗುಚಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟು, ಇತರ ನಾಲ್ವರು ಗಾಯಗೊಂಡ ಘಟನೆ ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ನಿಪ್ಪಾಣಿ ಕಡೆಯಿಂದ ಸಂಕೇಶ್ವರ ಕಡೆಗೆ … Continued

ಬೆಂಗಳೂರು-ಮುಂಬೈ ಮಧ್ಯೆ ನೂತನ ಸೂಪರ್‌ ಫಾಸ್ಟ್ ರೈಲು ಆರಂಭಕ್ಕೆ ಗ್ರೀನ್‌ ಸಿಗ್ನಲ್‌

ಬೆಂಗಳೂರು : ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವಾಲಯವು ಅನುಮೋದನೆ ನೀಡಿದೆ. ಇದರಿಂದ ಸುಮಾರು 30 ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆ ಬಹುತೇಕ ಈಡೇರುವ ಹಂತಕ್ಕೆ ಬಂದುನಿಂತಂತಾಗಿದೆ. ಬಿಜೆಪಿ ನಾಯಕ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಶನಿವಾರ ಈ ವಿಷಯ ಪ್ರಕಟಿಸಿದ್ದಾರೆ. ಸಂಸತ್ತು, … Continued

ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ : ಗೀತಾ ಶಿವರಾಜಕುಮಾರ ಘೋಷಣೆ

ಶಿವಮೊಗ್ಗ : ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಗೀತಾ ಶಿವರಾಜಕುಮಾರ ಘೋಷಿಸಿದ್ದಾರೆ. ಇಂದು, ಶನಿವಾರ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಶ್ವೇತಾ ಬಂಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಶಿವರಾಜ್‌ಕುಮಾರ್ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಪುತ್ರಿಯಾದ ಗೀತಾ ಶಿವರಾಜಕುಮಾರ (Geetha Shivarajkumar) ಇನ್ಮುಂದೆ ಶಿವಮೊಗ್ಗದಲ್ಲಿ … Continued

ಸದ್ದಿಲ್ಲದೆ ಸಿದ್ಧವಾಯ್ತೆ ಅಘನಾಶಿನಿ-ವೇದಾವತಿ ನದಿ ತಿರುವು ಯೋಜನೆಯ ಸಾಧ್ಯತಾ ವರದಿ …!

ಶಿರಸಿ : ಪಶ್ಚಿಮ ಘಟ್ಟದ ಅತ್ಯಂತ ಸಂವೇದನಶೀಲ ಮತ್ತು ಜೀವವೈವಿಧ್ಯದಿಂದ ತುಂಬಿದ ಪ್ರದೇಶವಾದ ಉತ್ತರ ಕನ್ನಡ ಜಿಲ್ಲೆಯಲ್ಲಿ, ನದಿ ತಿರುವು ಯೋಜನೆ ಬಗ್ಗೆ  ಚರ್ಚೆಗಳು ಮುನ್ನೆಲೆಗೆ ಬಂದಿವೆ. ಇದರ ಬೆನ್ನಲ್ಲೇ ಅಘನಾಶಿನಿ ನದಿಯನ್ನು ಚಿತ್ರದುರ್ಗ ಜಿಲ್ಲೆಯ ವೇದಾವತಿ ನದಿಗೆ ತಿರುಗಿಸುವ ಪ್ರಸ್ತಾಪಿತ ಯೋಜನೆಯ ಸಾಧ್ಯತಾ ವರದಿ ಸಿದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು  ವೃಕ್ಷಲಕ್ಷ  ಆಂದೋಲನವು  … Continued

ಕೊಡಲಿಯಿಂದ ಕೊಚ್ಚಿ ಮಕ್ಕಳನ್ನು ಕೊಂದ ತಂದೆ

ಯಾದಗಿರಿ: ಸಂಶಯದ ಹುಳ ತಲೆಹೊಕ್ಕು ತಂದೆಯೊಬ್ಬ ತನ್ನಿಬ್ಬರು ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪತ್ನಿಯ ಶೀಲದ ಬಗ್ಗೆ ಶಂಕೆ ಉಂಟಾದ ಕಾರಣ ಈ ಘೋರ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಈತನ ಸಂಶಯ ಪಿಶಾಚಿಗೆ ಏನೂ ಅರಿಯದ ಪುಟ್ಟ ಮಕ್ಕಳು ಬಲಿಯಾಗಿದ್ದಾರೆ. … Continued

ಹೊಸಪೇಟೆ : ಅಡುಗೆ ಅನಿಲ ಸಿಲಿಂಡರ್ ಸ್ಫೋಟ, 8 ಮಂದಿಗೆ ಗಾಯ

ಹೊಸಪೇಟೆ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಮಂದಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಇಂದು, ಶನಿವಾರ ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಮನೆ ಕುಸಿದು ಬಿದ್ದಿದೆ. ಮನೆಯ ಯಜಮಾನಿಯ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಬೆಳಗ್ಗಿನ ಜಾವ ಮನೆಯಲ್ಲಿ ಎಲ್ಲರೂ ಮಲಗಿರುವಾಗ … Continued