ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ಬೆಂಗಳೂರು : ಪದ್ಮಶ್ರೀ ಪುರಸ್ಕೃತ ಕವಿ, ವಿಧಾನ ಪರಿಷತ್‌ ಮಾಜಿ ಸದಸ್ಯ ದೊಡ್ಡರಂಗೇ ಗೌಡ ಅವರು ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು, ತುಮಕೂರು ಜಿಲ್ಲೆ … Continued

ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ಬೆಳಗಾವಿ: ವಸತಿ ಇಲಾಖೆಯಲ್ಲಿ ಹಣ ನೀಡಿದವರಿಗಷ್ಟೇ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂದು ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಅವರ ಆಡಿಯೋ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಈಗ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಮತ್ತೋರ್ವ ಶಾಸಕ ತಮ್ಮ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆ ಬೆದರಿಕೆ ಹಾಕಿದ್ದಾರೆ. ಆಡಳಿತ ವ್ಯವಸ್ಥೆ … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಮೂರು ದಿನ 6 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಜೂ 23ರಂದು ಭಾರೀ ಮಳೆಯಾಗಲಿದೆ. ಎರಡು ಜಿಲ್ಲೆಗಳಿಗೆ … Continued

ಮಣಿಪಾಲ | ಹಣಕ್ಕಾಗಿ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿದ ಮಗ : ಮರಣೋತ್ತರ ಪರೀಕ್ಷೆಯಿಂದ ಪ್ರಕರಣ ಬೆಳಕಿಗೆ

ಉಡುಪಿ : ಮಗನೊಬ್ಬ ಹಣಕ್ಕಾಗಿ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪದ್ಮಾಬಾಯಿ(45) ಎಂದು ಗುರುತಿಸಲಾದ ಮಹಿಳೆ ಕೊಲೆಯಾಗಿದ್ದು, ಮಗ ಈಶ ನಾಯಕ್‌ (26) ಕೊಲೆ ಆರೋಪಿಯಾಗಿದ್ದಾನೆ. ಜೂ.18ರಂದು ರಾತ್ರಿ ಪದ್ಮಾಬಾಯಿ ಸೊಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಂದು … Continued

ದೇಶದಲ್ಲಿ ಮೇಘ ಸ್ಫೋಟ, ಊಹಿಸಲಾಗದ ದುಃಖ, ಸಕ್ರಾಂತಿ ನಂತರ ರಾಜಕೀಯ ಬದಲಾವಣೆ : ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ: ರಾಜ್ಯ, ದೇಶ, ವಿದೇಶಗಳಲ್ಲಿ ಸಂಭವಿಸಬಹುದಾದ ವಿದ್ಯಮಾನಗಳ ಬಗ್ಗೆ ಕೋಡಿಮಠದ ಸ್ವಾಮೀಜಿ (Kodi Mutt Swamiji) ಭವಿಷ್ಯ ನುಡಿದಿದ್ದಾರೆ. ಮುಂದಿನ 6 ತಿಂಗಳ ಬಗ್ಗೆ ಭವಿಷ್ಯ ನುಡಿದಿರುವ ಕೋಡಿಮಠದ ಶ್ರೀಗಳು, ದೇಶದಲ್ಲಿ ಮೇಘಸ್ಪೋಟವಾಗಲಿದೆ. ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಊಹಿಸಲಾಗದ ನೋವು ಭಾರತಕ್ಕೆ ಕಾಡಲಿದೆ ಎಂದು ಹೇಳಿದ್ದಾರೆ. … Continued

ಬೆಂಗಳೂರು | ಮಚ್ಚಿನಿಂದ ಆಕಳಿನ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳು ; ಹಸು ಸಾವು

ಬೆಂಗಳೂರು: ಕಿಡಿಗೇಡಿಗಳು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಸ್ತ್ರಚಿಕಿತ್ಸೆ ನಡೆಸಿದರೂ ಫಲಕಾರಿಯಾಗದೆ ಹಸು ಮೃತಪಟ್ಟಿದೆ ಎಂದು ಹೇಳಲಾಗಿದೆ. ಸೂಲಿವಾರದ ಡೇರಿ ಅಧ್ಯಕ್ಷರಾದ ಮರಿಬಸವಯ್ಯ ಎಂಬವರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದಿದ್ದು, ಹಳೆಯ ವೈಷಮ್ಯಕ್ಕೆ ಹಸುವಿನ ಕೆಚ್ಚಲ ಕೊಯ್ದಿದ್ದಾರೆ ಎಂದು ಮಾಲೀಕರು ಆರೋಪಿಸಿದ್ದಾರೆ. ಸುಮಾರು … Continued

ಕನಸಿನಲ್ಲಿ ಕಾಣಿಸಿಕೊಂಡ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ

ಯಾದಗಿರಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಮರಳಿ ಬಂದಿರುವ ವಿದ್ಯಮಾನ ಯಾದಗಿರಿಯಲ್ಲಿ ನಡೆದಿದೆ. ಇಲ್ಲಿನ ಗಿರಿನಗರ ಕಾಲೊನಿಯಲ್ಲಿರುವ ಬುಡ್ಗ ಜಂಗಮ ಸಮಾಜದ ವೆಂಕಟೇಶ ಎಂಬುವರು ಕುಟುಂಬ ಸಮೇತ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಈಗ ಮತ್ತೆ ಹಿಂದೂ ಧರ್ಮಕ್ಕೆ ವಾಪಸ್‌ ಆಗಿದ್ದಾರೆ. ಇದಕ್ಕೆ ಕಾರಣ ಆಂಜನೇಯನಂತೆ. ಕನಸಿನಲ್ಲಿ ಆಂಜನೇಯ ಪದೇಪದೇ ಕಾಣಿಸಿಕೊಂಡಿದ್ದರಿಂದ ಹಿಂದೂ … Continued

ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಸಮ್ಮತಿ

ಬೆಂಗಳೂರು : ಮನೆಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆ ಮುಂದುವರಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಹೇಳಿದೆ. ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬಂಧ ದಾಖಲಾಗಿರುವ ಎಫ್‌ಐಆರ್‌, ಆನಂತರ ಸಲ್ಲಿಕೆಯಾಗಿರುವ ಆರೋಪ ಪಟ್ಟಿ ಹಾಗೂ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಜೆಡಿಎಸ್‌ ಶಾಸಕ … Continued

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜೂನ್‌ 21ರಿಂದ 4 ದಿನ ಜೋರಾದ ಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೂನ್‌ 21ರಂದು ಬಲವಾದ ಗಾಳಿಯೊಂದಿಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. … Continued

500 ರೂ. ಲಂಚ ಪಡೆದ ಪ್ರಕರಣ : ನಿವೃತ್ತಿಯಾಗಿ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ

ಬೆಳಗಾವಿ : 30 ವರ್ಷದ ಹಿಂದೆ ಪಡೆದಿದ್ದ 500 ರೂ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತಿಯಾದ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆಯಾಗಿದೆ. ಅಣ್ಣ-ತಮ್ಮಂದಿರ ಹೆಸರಿಗೆ ಜಮೀನು ಖಾತೆ ಮಾಡಿಕೊಡಲು 500 ರೂ. ಲಂಚ ಪಡೆದಿದ್ದ ಗ್ರಾಮ ಲೆಕ್ಕಿಗನಿಗೆ ಸುಪ್ರೀಂ ಕೋರ್ಟ್‌ ಶಿಕ್ಷೆ ವಿಧಿಸಿದೆ. ನಾಗೇಶ ಶಿವಂಗೇಕರ ಎಂಬವರು ಜೈಲು ಪಾಲಾದ ನಿವೃತ್ತ … Continued