ಬೆಂಗಳೂರಲ್ಲಿ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಇಂದು, ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ 9 ಕಡೆ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ ಲಂಚದ ಆಮಿಷವೊಡ್ಡಿ ಮತ್ತು ಪ್ರಭಾವ ಬೀರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ 9 ಮಧ್ಯವರ್ತಿಗಳ ಮೇಲೆ ಮಂಗಳವಾರ ಬೆಳಗ್ಗೆ ಎಸಿಬಿ ಎಸ್ಪಿ ಉಮಾ ಪ್ರಶಾಂಶ ನೇತೃತ್ವದಲ್ಲಿ 100ಕ್ಕೂ … Continued

ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ವಿರುದ್ಧದ ನಿರ್ಣಯ ಕಾನೂನುಬಾಹಿರ: ಸಿಎಂ ಬೊಮ್ಮಾಯಿ

ಬೆಂಗಳೂರು: ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿರುದ್ಧ ನಿರ್ಣಯ ತೆಗೆದುಕೊಂಡಿರುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಕಸಿದುಕೊಳ್ಳುವ ಇದು ಜನ ವಿರೋಧಿ ನಿರ್ಣಯವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ. ಈ ನಿರ್ಣಯ ಕಾನೂನು ಬಾಹಿರವಾಗಿದೆ ಎಂದು ಹೇಳಿದ್ದಾರೆ. ತಮಿಳುನಾಡು … Continued

ಉಕ್ರೇನ್‌ನಿಂದ ಮರಳಿದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯದ 60 ವೈದ್ಯಕೀಯ ಕಾಲೇಜುಗಳಲ್ಲಿ ಉಚಿತ ಅವಕಾಶ: ಡಾ.ಕೆ.ಸುಧಾಕರ

ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ನಿಂದ ಕರ್ನಾಟಕಕ್ಕೆ ವಾಪಸ್ ಆಗಿರುವ ವೈದ್ಯಕೀಯ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರಿಸುವ ನಿಟ್ಟಿನಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳ ಜೊತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೋಮವಾರ ಸಮಾಲೋಚನೆ ನಡೆಸಿದೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ವಿಚಾರವಾಗಿ ಚರ್ಚೆ … Continued

ಮೇಕೆದಾಟು ಯೋಜನೆ: ತಮಿಳುನಾಡು ವಿಧಾನಸಭೆಯಲ್ಲಿ ಕರ್ನಾಟಕದ ವಿರುದ್ಧ ಸರ್ವಾನುಮತದ ನಿರ್ಣಯ ಅಂಗೀಕಾರ

ಚೆನ್ನೈ: ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಮೇಕೆದಾಟು ಅಣೆಕಟ್ಟು ಯೋಜನೆಗೆ ಕರ್ನಾಟಕ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿರುವುದನ್ನು ಖಂಡಿಸಿ ತಮಿಳುನಾಡು ವಿಧಾನಸಭೆ ಸೋಮವಾರ ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ ಮತ್ತು ಪ್ರಸ್ತಾವನೆಯನ್ನು ತಿರಸ್ಕರಿಸುವಂತೆ ಕೇಂದ್ರವನ್ನು ಒತ್ತಾಯಿಸಿದೆ. ನಿರ್ಣಯವನ್ನು ಪ್ರಾಯೋಗಿಕವಾಗಿ ಮಂಡಿಸಿದ ಜಲಸಂಪನ್ಮೂಲ ಸಚಿವ ದುರೈಮುರುಗನ್, ನೆರೆಯ ರಾಜ್ಯವು ತಮಿಳುನಾಡಿಗೆ ದಶಕಗಳಿಂದ ಸಮಸ್ಯೆಗಳನ್ನು ಉಂಟುಮಾಡುತ್ತಿದೆ ಎಂದು ಆರೋಪಿಸಿದರು ಮತ್ತು … Continued

ರಸ್ತೆ ದಾಟುತ್ತಿದ್ದ ಪಾದಚಾರಿಗಳ ಮೇಲೆ ಹರಿದ ಬಿಬಿಎಂಪಿ ಲಾರಿ; ಬಾಲಕಿ ಸಾವು, 8 ಮಂದಿಗೆ ಗಾಯ

ಬೆಂಗಳೂರು: ಡಿವೈಡರ್ ಮೂಲಕ‌ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿ ಮೇಲೆ‌ ಬಿಬಿಎಂಪಿ‌ ಕಸದ ಲಾರಿ ಹರಿದು ಬಾಲಕಿ ಸ್ಥಳದಲ್ಲಿಯೇ ಸಾವಿಗೀಡಾದ ದುರ್ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ಇತರ 8 ಮಂದಿಗೆ ಗಾಯವಾಗಿದೆ. ಮೃತ ಬಾಲಕಿಯನ್ನು 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ಅಕ್ಷಯಾ ಎಂದು ಗುರುತಿಸಲಾಗಿದೆ. ನಿನ್ನೆ (ಭಾನುವಾರ) ರಾತ್ರಿ ಮಳೆಯಾಗಿದ್ದರಿಂದ‌ ಹೆಬ್ಬಾಳ ಪೊಲೀಸ್ … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ‌ ಬರೆಯುವ ವಿದ್ಯಾರ್ಥಿಗಳಿಗೆ ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ಉಚಿತ ಪ್ರಯಾಣದ ವ್ಯವಸ್ಥೆ

ಹುಬ್ಬಳ್ಳಿ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮಾರ್ಚ್‌ 28ರಿಂದ ಏಪ್ರಿಲ್‌ 11ರ ವರೆಗೆ ನಡೆಯುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಸ್ಥೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಅಂದರೆ 28-03-2022 ರಿಂದ 11-04-2022ರ ವರೆಗೆ ಪರೀಕ್ಷೆಗೆ … Continued

ಶಿವಮೊಗ್ಗ: ಪ್ರಿಯಕರನ ಮದುವೆ ದಿನದಂದೇ ಯುವತಿ ಆತ್ಮಹತ್ಯೆ…ಪ್ರಿಯಕರ ಮದುವೆ ಮಂಟಪದಿಂದಲೇ ಪರಾರಿ

ಶಿವಮೊಗ್ಗ : ಬೇರೆ ಯುವತಿ ಜೊತೆಗೆ ಪ್ರಿಯಕರನ ಮದುವೆ ಆಗುತ್ತಿರುವುದರಿಂದ ಮನನೊಂದು ಪ್ರಿಯತಮೆ  ಆತನ ಮದುವೆ ದಿನದಂದೇ ಆತ್ಮಹತ್ಯೆಗೆ ಶರಣಾದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಪ್ರಿಯಕರ ಮದುವೆ ಮಂಟಪದಿಂದಲೇ ಕಾಲ್ಕಿತ್ತಿದ್ದಾನೆ..! ಶಿವಮೊಗ್ಗದ ಓ.ಟಿ.ರಸ್ತೆಯ ರೂಪಶ್ರೀ ಎಂಬವರು ಮನನೊಂದು ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಅವರು ನಾಲ್ಕು … Continued

ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಕ್ಕೆ ಇಬ್ಬರು ಸಜೀವ ದಹನ, ಮೂವರಿಗೆ ಗಾಯ

ಉಡುಪಿ: ಕಾಪು ಸಮೀಪದ ಮಲ್ಲಾರುವಿನ ಫಕೀರನ ಕಟ್ಟೆಯಲ್ಲಿದ್ದ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡು, ಮೂವರು ಗಾಯಗೊಂಡ ಘಟನೆ ಸೋಮವಾರ (ಮಾರ್ಚ್‌ ೨೧) ನಡೆದಿದೆ. ಮೃತರನ್ನು ರಜಾಕ್ ಹಾಗೂ ಅಂಗಡಿಯ ಪಾಲುದಾರರಾದ ರಜಬ್ ಎಂದು ಹೇಳಲಾಗಿದೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅದರಲ್ಲಿ ಒಬ್ಬರು ಗ್ರಾಪಂ ಸದಸ್ಯರೂ ಇದ್ದಾರೆ ಎಂದು … Continued

ಸ್ವಗ್ರಾಮ ಚಳಗೇರಿಗೆ ನವೀನ್ ಪಾರ್ಥಿವ ಶರೀರ ಆಗಮನ: ಪಾರ್ಥಿವ ಶರೀರಕ್ಕೆ ಅಂತಿಮ ಪೂಜೆ, ಸಂಬಂಧಿಕರ ಆಕ್ರಂದನ

ಹಾವೇರಿ: ಉಕ್ರೇನ್ ಮತ್ತು ರಷ್ಯಾ ಯುದ್ಧದಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರವನ್ನ ಇಂದು, ಸೋಮವಾರ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕು ಚಳಗೇರಿಗೆ ಸ್ವಗ್ರಾಮಕ್ಕೆ ಕರೆತರಲಾಯಿತು. ವೀರಶೈವ ಸಂಪ್ರದಾಯದ ವಿಧಿವಿಧಾನದಂತೆ ಕುಟುಂಬಸ್ಥರು ಅಂತಿಮ ಪೂಜಾ ಕಾರ್ಯಗಳನ್ನ ನೆರವೇರಿಸಿದರು. ಕುಟುಂಬಸ್ಥರರಿಂದ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು. ಚಳಗೇರಿ ಗ್ರಾಮದಲ್ಲಿರುವ ನವೀನ್​ ನಿವಾಸದಲ್ಲಿ ಸುಮಾರು … Continued

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ಅತ್ಯಂತ ಸಂತೋಷದ ಸಂಗತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಶಿರಸಿ: ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ಅತ್ಯಂತ ಸಂತೋಷದ ಸಂಗತಿ. ಪ್ರಸ್ತಾಪವಿದ್ದರೆ ಅದ‌ನ್ನು ಸ್ವಾಗತಿಸುವುದಾಗಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಸಮಯದಲ್ಲಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಗವದ್ಗೀತೆ ಪಠ್ಯದಲ್ಲಿ ಅಳವಡಿಸುವುದನ್ನು ಯಾವ ರೀತಿ ಮಾಡಬೇಕು ಎಂದು ಶಿಕ್ಷಣ … Continued