ಬೆಂಗಳೂರು: ಅಜ್ಜಿ ಸಾವನ್ನು ಕಣ್ಣಾರೆ ಕಂಡ ಮೊಮ್ಮಗಳೂ ಆತ್ಮಹತ್ಯೆ

ಬೆಂಗಳೂರು : ರಭಸವಾಗಿ ತಳ್ಳಿದ ಪರಿಣಾಮ ಗೋಡೆಗೆ ತಲೆ ಬಡಿದು ತೀವ್ರ ಪೆಟ್ಟುಬಿದ್ದು ಅಜ್ಜಿ ಸ್ಥಳದಲ್ಲೇ ಮೃತಪಟ್ಟಿದ್ದನ್ನು ಕಂಡ ಮೊಮ್ಮಗಳು ಗಾಬರಿಗೊಂಡು ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮಾರುತಿ ನಗರದ ಜಯಮ್ಮ (70) ಮೃತಪಟ್ಟ ವೃದ್ಧೆ ಎಂದು ಗುರುತಿಸಲಾಗಿದೆ. ಕೊಟ್ಟಿಗೆಪಾಳ್ಯದ ಮಮತಾ(24) ಆತ್ಮಹತ್ಯೆಗೆ … Continued

ಕರ್ನಾಟಕದ 346 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿರುವ ಮಾಹಿತಿ ಲಭ್ಯ

ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ನಲ್ಲಿ ಈವರೆಗೆ ರಾಜ್ಯದ 346 ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್‌ ಅಧಿಕಾರ ಮನೋಜ್‌ ರಂಜನ್‌ ತಿಳಿಸಿದ್ದಾರೆ. ಉಕ್ರೇನ್‌ನಲ್ಲಿರುವವರ ಬಗ್ಗೆ ಶುಕ್ರವಾರ ಮಧ್ಯಾಹ್ನ 3 ಗಂಟೆ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕರೆಗಳು ಬಂದಿವೆ. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ಗೆ ತೆರಳಿರುವವರ ವಿದ್ಯಾರ್ಥಿಗಳ ತಂದೆ-ತಾಯಿ, ಪೋಷಕರು, … Continued

ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಸಿಎಂ ಬೊಮ್ಮಾಯಿ ತಾತ್ವಿಕ ಒಪ್ಪಿಗೆ: ಷಡಕ್ಷರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು, ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾಹಿತಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈಚೆಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದೆವು. ಮುಖ್ಯಮಂತ್ರಿಗಳು … Continued

ಶಿವಮೊಗ್ಗದಲ್ಲಿ ಕರ್ಫ್ಯೂ ಸಡಿಲಿಕೆ, ಶಾಲಾ ಕಾಲೇಜು ರಜೆ ವಿಸ್ತರಣೆ; ಜಿಲ್ಲಾಧಿಕಾರಿ

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ನಂತರ ನಗರ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಹೇರಿದ್ದ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಶನಿವಾರ ಬೆಳಗ್ಗೆ ಆರು ಗಂಟೆಯಿಂದ ಸೋಮವಾರ ಫೆಬ್ರವರಿ 28ರ ಬೆಳಗ್ಗೆ 9 ಗಂಟೆವರೆಗೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಹೇಳಿಕೆ ನೀಡಿದ್ದಾರೆ. ಫೆಬ್ರವರಿ 26 ಶನಿವಾರ ಬೆಳಿಗ್ಗೆ 6ರಿಂದ ಸಂಜೆ … Continued

ವಿಶ್ವ ವಿದ್ಯಾಲಯಗಳಲ್ಲಿ ಇ-ಆಫೀಸ್ ಕಡ್ಡಾಯ, ಮಾರ್ಚ್ 1ರ ವರೆಗೆ ಗಡುವು ನೀಡಿದ ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ-ಕಚೇರಿ ಮೂಲಕವೇ ಅನ್‍ಲೈನ್‍ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ … Continued

ನಟ ಚೇತನ್‌ಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು: ಸಾಮಾಜಿಕ ಹೋರಾಟಗಾರ, ‘ಆ ದಿನಗಳು’ ಖ್ಯಾತಿಯ ನಟ ಚೇತನ್ ಕುಮಾರ್ ಅವರಿಗೆ ಜಾಮೀನು ಲಭಿಸಿದೆ. ನಟ ಚೇತನ್ ಕುಮಾರ್ ಅವರಿಗೆ 32ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ನಟ ಚೇತನ್ ಹೈಕೋರ್ಟ್‌ ನ್ಯಾಯಮೂರ್ತಿ ಕುರಿತು ಆಕ್ಷೇಪಾರ್ಹ ಟ್ವೀಟ್​ ಮಾಡಿದ್ದಾರೆಂಬ ಕಾರಣಕ್ಕೆ ಅವರನ್ನು ಬಂಧಿಸಿ, 8ನೇ ಎಸಿಎಂಎಂ ಕೋರ್ಟ್‌ ಮುಂದೆ ಹಾಜರುಪಡಿಸಲಾಗಿತ್ತು. ಆ ವೇಳೆ … Continued

ಉಕ್ರೇನ್​​ನಲ್ಲಿ ಸಿಲುಕಿರುವ ಕರ್ನಾಟಕದವರ ಮಾಹಿತಿ ಸಂಗ್ರಹಕ್ಕೆ ವೆಬ್ ಪೋರ್ಟಲ್ ಕಾರ್ಯಾರಂಭ

ಬೆಂಗಳೂರು : ಉಕ್ರೇನ್​​ನಲ್ಲಿ ಸಿಲುಕಿರುವ ಕರ್ನಾಟಕದವರ ರಕ್ಷಣೆಗಾಗಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ವೆಬ್ ಪೋರ್ಟಲ್​​ ಒಂದನ್ನು ಅಭಿವೃದ್ಧಿಪಡಿಸಿದೆ. ಈ ವೆಬ್ ಪೋರ್ಟಲ್ ಮೂಲಕ ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ಜನರ ಅಗತ್ಯ ಮಾಹಿತಿಗಳನ್ನು ಕಲೆ ಹಾಕಲಾಗುತ್ತದೆ ಎಂದು ತಿಳಿಸಲಾಗಿದೆ. ವೆಬ್ ಪೋರ್ಟಲ್ ಯುಆರ್​ಎಲ್- http://ukraine.karnataka.tech ಅನ್ನು ನೋಡಲ್​ ಅಧಿಕಾರಿ ಮನೋಜ … Continued

ಬಿಬಿಎಂಪಿ ಕೇಂದ್ರ ಕಚೇರಿ ಸೇರಿ 27 ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳು ಸೇರಿ 27 ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಬಿಬಿಎಂಪಿ‌ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದಾರೆ ಬಿಬಿಎಂಪಿಯಲ್ಲಿ ಭ್ರಷ್ಟಾಚಾರದ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಕಚೇರಿ ಸೇರಿದಂತೆ 27 ಬಿಬಿಎಂಪಿ ಕಚೇರಿಗಳ ಮೇಲೆ … Continued

ನಿಯಂತ್ರಣ ತಪ್ಪಿ ತಗ್ಗಿಗೆ ಬಿದ್ದ ಬೈಕ್ : ಒಂದೇ ಬೈಕ್ ತೆರಳುತ್ತಿದ್ದ ನಾಲ್ವರ ಸಾವು

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಹೊರ ವಲಯದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃಪಟ್ಟ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಗುರುವಾರ ರಾತ್ರಿ ಸುಮಾರು 11:30 ರ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಪಕ್ಕದ ಗುಂಡಿಗೆ ಬಿದ್ದು, ಈ ದರ್ಘಟನೆ ನಡೆದಿದೆ. ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ … Continued

ಉಕ್ರೇನ್‌ನಲ್ಲಿ ಸಿಲುಕಿದ ಕರ್ನಾಟಕದ 91 ವಿದ್ಯಾರ್ಥಿಗಳ ಬಗ್ಗೆ ಮಾಹಿತಿ

ಬೆಂಗಳೂರು: ಉಕ್ರೇನ್ ಮತ್ತು ರಷ್ಯಾ ಬಿಕ್ಕಟ್ಟಿನ ನಡುವೆ ಕರ್ನಾಟಕದ ವಿವಿಧ ಜಿಲ್ಲೆಯ 91 ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಈವರೆಗೆ ಮಾಹಿತಿ ಸಿಕ್ಕಿದೆ. ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ 91 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್ ಅಧಿಕಾರಿ ಡಾ ಮನೋಜ್ ರಾಜನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಖಾರಿವ್‌ … Continued