ಇದೇ ಮೊದಲ ಬಾರಿಗೆ ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರ ಹುದ್ದೆಗಳಲ್ಲಿ ತೃತೀಯ ಲಿಂಗಿಗಳಿಗೆ ಶೇಕಡಾ 1% ಮೀಸಲು ನಿಗದಿ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ತೃತೀಯ ಲಿಂಗಿಗಳಿಗೆ ಶೇಕಡಾ 1%ರಷ್ಟು ಮೀಸಲಾತಿಯೊಂದಿಗೆ ಕರ್ನಾಟಕವು ಸಮುದಾಯದಿಂದ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೊದಲ ರಾಜ್ಯವಾಗಿದೆ. ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾಗಿದ್ದು, ಕೆಲವೆಡೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಡಿಸೆಂಬರ್ 2021 ರಲ್ಲಿ, ಹಣಕಾಸು ಇಲಾಖೆಯು ತನ್ನ … Continued

ಹೈಕೋರ್ಟಿನಲ್ಲಿ ಹಿಜಾಬ್‌ ಪ್ರಕರಣ: ಭಾರತವು ಹಿಂದೂ ರಾಷ್ಟ್ರವೂ, ಇಸ್ಲಾಮಿಕ್‌ ರಾಷ್ಟ್ರವೂ ಅಲ್ಲ, ಇದು ಜಾತ್ಯತೀತ ರಾಷ್ಟ್ರ, ಇಸ್ಲಾಂನಲ್ಲಿ ಹಿಜಾಬ್ ಕಡ್ಡಾಯ : ವಕೀಲ ಧರ್‌ ವಾದ

ಬೆಂಗಳೂರು: ಭಾರತವು ಹಿಂದೂ ರಾಷ್ಟ್ರವೂ ಅಲ್ಲ, ಇಸ್ಲಾಮಿಕ್‌ ಗಣರಾಜ್ಯವೂ ಅಲ್ಲ. ಇದು ಪ್ರಜಾಸತ್ತಾತ್ಮಕ, ಜಾತ್ಯತೀತ, ಗಣರಾಜ್ಯವಾಗಿದ್ದು, ಇಲ್ಲಿ ಕಾನೂನು ಜಯ ಸಾಧಿಸಬೇಕು ಎಂದು ಹಿರಿಯ ವಕೀಲ ಎ ಎಂ ಧರ್‌ ಗುರುವಾರ ಹೈಕೋರ್ಟ್‌ ಮುಂದೆ ವಾದ ಮಂಡಿಸಿದರು. ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ ತಮ್ಮನ್ನು ಕಾಲೇಜಿಗೆ ಪ್ರವೇಶಿಸಲು … Continued

ಕರ್ನಾಟಕದಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳಲ್ಲಿ ಭಾರೀ ಇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ರಾಜ್ಯದಲ್ಲಿ ಗುರುವಾರ ಹೊಸದಾಗಿ ಕೇಸ್ 588 ಕೊರೊನಾ ಸೋಂಕು ಮತ್ತು 19 ಮರಣ ದಾಖಲಾಗಿದೆ. ಇದೇವೇಳೆ 1,692 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,255 ಇಳಿಕೆ ಕಂಡಿದ್ದು, ಪಾಸಿಟಿವಿಟಿ ದರ 0.84%ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 353 ಹೊಸದಾಗಿ ಸೋಂಕು … Continued

ಹಿಜಾಬ್ ಪ್ರಕರಣ: ಹೈಕೋರ್ಟ್‌ಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಗ್ಗೆ ವಿವರ ಸಲ್ಲಿಸಿದ ಸರ್ಕಾರ

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಕೆಲವು ಶಿಕ್ಷಕರಿಗೆ ಬೆದರಿಕೆ ಹಾಕಿರುವ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಸದಸ್ಯರ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಗುರುವಾರ ಹೈಕೋರ್ಟ್‌ಗೆ ತಿಳಿಸಿದೆ. ಕಲಾಪ ಆರಂಭವಾದ ಕೂಡಲೇ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೈಕೋರ್ಟ್‌ನ … Continued

ಕರ್ನಾಟಕದ ಕನಿಷ್ಠ 10 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿದ್ದಾರೆ, ಅವರನ್ನು ಕರೆತರಲು ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಕನಿಷ್ಠ ಹತ್ತು ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಅವರನ್ನು ಸುರಕ್ಷಿತವಾಗಿ ಮನೆಗೆ ಕರೆತರಲು ಅಲ್ಲಿನ ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದೊಂದಿಗೆ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ಈ ಸಂಬಂಧ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೂ ಮಾತನಾಡುವುದಾಗಿ ಹೇಳಿದರು. ರಷ್ಯಾ ಮತ್ತು ಉಕ್ರೇನ್ … Continued

ಪಿಆರ್ ಒ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ: ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

ಕುಂದಾಪುರ: ವಿದ್ಯಾರ್ಥಿನಿಯರಿಗೆ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ಅವರನ್ನು ತಕ್ಷಣವೇ ವಜಾಗೊಳಿಸಲು ಆಗ್ರಹಿಸಿ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಗುರುವಾರ (ಫೆ.24) ಪ್ರತಿಭಟನೆ ನಡೆಸಿದರು. ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ವಿದ್ಯಾರ್ಥಿನಿಯರಿಗೆ ರಾತ್ರಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ಈ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿದರೂ ಶಿಸ್ತು ಕ್ರಮ … Continued

ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

ಹಾಸನ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಹೇಮಾವತಿ ನಗರದ ಸತ್ಯಪ್ರಸಾದ, ಪತ್ನಿ ಅನ್ನಪೂರ್ಣ, ಹಾಗೂ ಮಗ ಗೌರವ ಆತ್ಮಹತ್ಯೆಗೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಹಾಸನ ನಗರ ನಿವಾಸಿಯಾದ ಸತ್ಯ ಪ್ರಸಾದ ಬೇಲೂರು ರಸ್ತೆಯಲ್ಲಿ ಪೆಟ್ರೋಲ್ ಬಂಕ್ ಮಾಲೀಕತ್ವ ಹೊಂದಿದ್ದಾರೆ. ಗೌರವ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. … Continued

ಫೆಬ್ರವರಿ ೨೭, ೨೮ರಂದು ಕಾಂಗ್ರೆಸ್‌ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ

ಬೆಂಗಳೂರು: ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಇದೇ ತಿಂಗಳ ೨೭ ಮತ್ತು ೨೮ ರಂದು ರಾಜ್ಯಾದ್ಯಂತ ಹೋರಾಟ ನಡೆಸಲು ನಿರ್ಧರಿಸಿದೆ. ಫೆಬ್ರುವರಿ ೨೭ರಂದು ಕಾಂಗ್ರೆಸ್‌ನ ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ಆರಂಭವಾಗಿತ್ತಿದ್ದು, ಈಗ ಬಿಜೆಪಿಯ ಸಹ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಜನ ವಿರೋಧಿ, ಸದನ ವಿರೋಧಿಯಾದ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು … Continued

ಹೈಕಮಾಂಡ್‌ ಬುಲಾವ್‌: ದೆಹಲಿಗೆ ತೆರಳಿದ ರಾಜ್ಯ ಕಾಂಗ್ರೆಸ್ ನಾಯಕರು

ಬೆಂಗಳೂರು: ರಾಜ್ಯದ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಇರುವಾಗಲೇ ಕಾಂಗ್ರೆಸ್ ಅದಕ್ಕಾಗಿ ತಯಾರಿಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಕೆಲವು ನಾಯಕರಿಗೆ ಹೈಕಮಾಂಡ್ ಬುಲಾವ್ ಮಾಡಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ದೆಹಲಿ ವಿಮಾನ ಹತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ ನ 15 ನಾಯಕರು ದೆಹಲಿಗೆ … Continued

ವಿದ್ಯಾರ್ಥಿಗಳ ಬೇಸಿಗೆ ರಜೆ ಅವಧಿ ಕಡಿತ; ಬೇಗನೆ ಶಾಲೆ ಆರಂಭಿಸಲು ಸರ್ಕಾರದ ನಿರ್ಧಾರ- ಯಾವಾಗ ಆರಂಭ ? ಇಲ್ಲಿದೆ ಮಾಹಿತಿ

ಬೆಂಗಳೂರು: ಬದಲಾದ ಕೋವಿಡ್‌ ಪರಿಸ್ಥಿತಿಗೆ ಅನುಗುಣವಾಗಿ ಮಕ್ಕಳ ಶೈಕ್ಷಣಿಕ ಪ್ರಗತಿ ಗಮನದಲ್ಲಿಟ್ಟು ಈ ವರ್ಷ ಶಾಲೆಯನ್ನು ಬೇಗನೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ಮೇ 16ರಿಂದ 2022-23ರ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಮುಕ್ತಾಯಗೊಳಿಸುವ ಮತ್ತು 2022-23ನೇ ಸಾಲಿನ ಶೈಕ್ಷಣಿಕ … Continued