ಹಿಜಾಬ್ ಗಲಾಟೆ: ಬಿಜೆಪಿ ಬೆಂಬಲಿಸುತ್ತಿರುವ ಎಸ್‌ಡಿಪಿಐ- ಕಾಂಗ್ರೆಸ್‌ ಆರೋಪ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)  ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ರಹಸ್ಯವಾಗಿ ಬೆಂಬಲಿಸುತ್ತಿದೆ ಎಂದು ಆರೋಪಿಸಿದೆ. ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂಬ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಆರೋಪಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ, ಬಿಜೆಪಿ ತನ್ನ ಕಾರ್ಯಸೂಚಿಯನ್ನು ಜಾರಿಗೆ ತರಲು ಎಸ್‌ಡಿಪಿಐ ಮೇವು ನೀಡುತ್ತಿದೆ … Continued

ಹೈಕೋರ್ಟಿನಲ್ಲಿ ಹಿಜಾಬ್‌ ಪ್ರಕರಣ: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ- ರಾಜ್ಯ ಸರ್ಕಾರ

ಬೆಂಗಳೂರು: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಕರ್ನಾಟಕ ಸರ್ಕಾರ ಶುಕ್ರವಾರ ಹೈಕೋರ್ಟ್‌ನಲ್ಲಿ ವಾದಿಸಿದೆ. ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಶುಕ್ರವಾರ ಸರ್ಕಾರದ ಪರವಾಗಿ ವಾದ ಮಂಡಿಸಿ, ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಅನಿವಾರ್ಯವಲ್ಲ ಎಂಬ ನಿಲುವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದರು. ಶಬರಿಮಲೆ ಮತ್ತು ತ್ರಿವಳಿ ತಲಾಕ್‌ ಪ್ರಕರಣಗಳ ತೀರ್ಪುಗಳಲ್ಲಿ ಸುಪ್ರೀಂ … Continued

ಶಾಲೆಯಲ್ಲಿ ಕಿರುಕುಳ ಆರೋಪ; ಡೆತ್‌ನೋಟ್ ಬರೆದಿಟ್ಟು ರೈಲಿಗೆ ತಲೆಕೊಟ್ಟು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಖಾಸಗಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ ಯಶವಂತಪುರ ರೈಲ್ವೆ ಟ್ರಾಕ್‍ನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವಳನ್ನು 9ನೇ ತರಗತಿ ವಿದ್ಯಾರ್ಥಿನಿ ರಮ್ಯಾ ಮೂರ್ತಿ ಎಂದು ಗುರುತಿಸಲಾಗಿದ್ದು, ಟಿ.ದಾಸರಹಳ್ಳಿಯ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು.ರಮ್ಯಾ ಶಾಲೆಗೆ ಸ್ನಾಕ್ಸ್ … Continued

ಹಣೆಗೆ ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ವಿಜಯಪುರ: ಹಿಜಾಬ್ ವಿವಾದ ಇನ್ನೂ ತಣ್ಣಗಾಗುವ ಮೊದಲೆ ಈಗ ಸಿಂಧೂರ ವಿವಾದ ಉಂಟಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜಿನಲ್ಲಿ ಸಿಂಧೂರ ಕುಂಕುಮ ಇಟ್ಟುಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿದ್ಯಾರ್ಥಿಗೆ ತರಗತಿ ಪ್ರವೇಶ ನಿರಾಕರಿಸಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಜಿಲ್ಲೆಯ ಇಂಡಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಕುಂಕುಮ … Continued

ಹುಬ್ಬಳ್ಳಿ: ಎರಡು ವರ್ಷದ ಮಗು ಸಾವು, ಕಿಮ್ಸ್ ಎದುರು ಸಂಬಂಧಿಕರ ಪ್ರತಿಭಟನೆ

ಹುಬ್ಬಳ್ಳಿ: ಚಿಕಿತ್ಸೆಯಲ್ಲಿ ವೈದ್ಯರ ನಿರ್ಲಕ್ಯದ ಕಾರಣದಿಂದ ಎರಡು ವರ್ಷದ ಮಗು ಮೃತಪಟ್ಟಿದೆ ಎಂದು‌ ಆರೋಪಿಸಿ ಪಾಲಕರು ಹಾಗೂ ಕುಟುಂಬದವರು ಶುಕ್ರವಾರ ಕಿಮ್ಸ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ರಕ್ತನಾಳ ಗಂಟು ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದರು. ಅದು ವಿಫಲವಾಗಿ ಮಗು ಮೃತ ಪಟ್ಟಿದೆ ಎಂಬುದು ಪಾಲಕರ … Continued

ಅಣ್ಣ-ತಂಗಿ ನಡುವೆ ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಯನ್ನೇ ಕೊಲೆ ಮಾಡಿದರು…!

ತುಮಕೂರು :ಸಂಬಂಧದಲ್ಲಿ ಅಣ್ಣನಾಗುವವನ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಮಗಳು ತನ್ನ ತಾಯಿಯನ್ನ ಕೊಂದ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಘಟನೆ ಕೊರಟಗೆರೆಯಲ್ಲಿ ನಡೆದಿದ್ದು, ಸಾವಿತ್ರಮ್ಮ(೪೫) ಕೊಲೆಯಾದವರು. ಇವರು ನೀರಿನ ಸಂಪಿನಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಕುರಿತು ಪೊಲೀಸ್‌ ಪ್ರಕರಣವೂ ದಾಖಲಿಸಲಾಗಿತ್ತು. ಆದರೆ ಪೊಲೀಸರು ಮಗಳು … Continued

ಸಚಿವ ಈಶ್ವರಪ್ಪ ಹೇಳಿಕೆಗೆ ಸದನದಲ್ಲಿ ಮುಂದವರಿದ ಕಾಂಗ್ರೆಸ್‌ ಪ್ರತಿಭಟನೆ: ಕಲಾಪವನ್ನು ಸೋಮವಾರ ಬೆಳಗ್ಗೆ 11ಕ್ಕೆ ಮುಂದೂಡಿದ ಸ್ಪೀಕರ್

ಬೆಂಗಳೂರು: ವಿಧಾನಸಭೆಯಲ್ಲಿ ಕಾಂಗ್ರೆಸ್ ನಿಂದ ಅಹೋರಾತ್ರಿ ಧರಣಿ, ಗದ್ದಲ ಮುಂದುವರಿದಿರುವ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ವಿಧಾನಸಭೆ ಅಧಿವೇಶನದ ಕಲಾಪವನ್ನು ಸೋಮವಾರ ಬೆಳಗ್ಗೆ 11ಕ್ಕೆ ಮುಂದೂಡಿದ್ದಾರೆ. ಮುಂದೊಂದು ದಿನ ಕೆಂಪುಕೋಟೆಯಲ್ಲಿ ಭಗವಾಧ್ವಜ ಹಾರಿಸಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪ ವಜಾಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, … Continued

ಕಾಂಗ್ರೆಸ್‌ನಿಂದ ಮತ್ತೆ ಮೇಕೆದಾಟು ಹೋರಾಟ; ಫೆ.27ರಿಂದ ರಾಮನಗರದಿಂದ ಪಾದಯಾತ್ರೆ ಆರಂಭ

ಬೆಂಗಳೂರು: ಕಾಂಗ್ರೆಸ್ಸಿನ ಮೇಕೆದಾಟು ಹೋರಾಟ ಫೆಬ್ರವರಿ 27 ರಿಂದ ಮತ್ತೆ ಆರಂಭಗೊಳ್ಳಲಿದ್ದು, ರಾಮನಗರದಿಂದ ಪಾದಯಾತ್ರೆ ಆರಂಭವಾಗಲಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಗಮದಿಂದ ಜ.9 ರಂದು ಆರಂಭಿಸಿ ಮಧ್ಯೆ ನಿಲ್ಲಿಸಿದ್ದ ಮೇಕೆದಾಟು ಪಾದಯಾತ್ರೆ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಐದು ದಿನಗಳ ಕಾಲ ನಡೆಸಿ ಕೋವಿಡ್ … Continued

ಹಿಜಾಬ್‌ ವಿವಾದ: ಕೆಲಸಕ್ಕೆ ರಾಜೀನಾಮೆ ನೀಡಿದ ಕಾಲೇಜ್‌ ಉಪನ್ಯಾಸಕಿ

ತುಮಕೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ತುಮಕೂರು ಅತಿಥಿ ಉಪನ್ಯಾಸಕಿಯೊಬ್ಬರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಚಾಂದಿನಿ ಎಂಬವರು ರಾಜೀನಾಮೆ ನೀಡಿದ ಅತಿಥಿ ಉಪನ್ಯಾಸಕಿ. ತುಮಕೂರಿನ ತಿಪಟೂರು ಮೂಲದ ಚಾಂದಿನಿ ಅವರು ಜೈನ್ ಪಿಯು ಕಾಲೇಜು, ವಿದ್ಯಾವಾಹಿನಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಿಜಾಬ್‌ ವಿವಾದ ಉಂಟಾದ ನಂತರ ಕಾಲೇಜು ಆಡಳಿತ ಮಂಡಳಿ ಅವರಿಗೆ ಹಿಜಾಬ್‌ ಧರಿಸಿ … Continued

ಇನ್ಮುಂದೆ ಕೇರಳ, ಗೋವಾದಿಂದ ಬರುವವರಿಗೆ ಆರ್ ಟಿ-ಪಿಸಿಆರ್ ವರದಿ ಬೇಕಾಗಿಲ್ಲ

ಬೆಂಗಳೂರು: ನೆರೆಯ ರಾಜ್ಯಗಳಾದ ಕೇರಳ ಮತ್ತು ಗೋವಾದ ಪ್ರಯಾಣಿಕರಿಗೆ ಋಣಾತ್ಮಕ ಆರ್‌ಟಿ-ಪಿಸಿಆರ್‌ (RT-PCR) ಕೋವಿಡ್‌-19 ಪರೀಕ್ಷಾ ಫಲಿತಾಂಶವನ್ನು ಕಡ್ಡಾಯಗೊಳಿಸಿದ್ದ ಕರ್ನಾಟಕ ಸರ್ಕಾರವು ನಿಯಮವನ್ನು ಹಿಂತೆಗೆದುಕೊಂಡಿದೆ ಮತ್ತು ಅಂತಹ ಪ್ರಯಾಣಿಕರು ಇನ್ನು ಮುಂದೆ ಋಣಾತ್ಮಕ ಆರ್‌ಟಿ-ಪಿಸಿಆರ್‌ ವರದಿ ಅಗತ್ಯವಿಲ್ಲ ಎಂದು  ಸರ್ಕಾರ ಫೆಬ್ರವರಿ 17 ರ ಗುರುವಾರ ಪ್ರಕಟಿಸಿದೆ. ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿರುವ ಟಿಕೆ ಅನಿಲ್ … Continued