ಫೆಬ್ರುವರಿ 16 ರಿಂದ ಪಿಯು, ಪದವಿ ಕಾಲೇಜುಗಳು ಆರಂಭ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಬುಧವಾರದಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಕಾಲೇಜುಗಳ ಆರಂಭ ಮಾಡುವ ಕುರಿತು ಇಂದು, ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೇಸ್‍ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಸಭೆ ನಂತರ ಮಾತನಾಡಿದ ಗೃಹ ಸಚಿವರು, ಬುಧವಾರದಿಂದ ಪಿಯು ಮತ್ತು ಡಿಗ್ರಿ ಕಾಲೇಜ್ ಗಳು ಆರಂಭವಾಗಲಿದೆ ಎಂದು … Continued

ಕನ್ನಡ ಚಿತ್ರ ರಂಗದ ಹಿರಿಯ ನಟಿ, ರಂಗ ಕಲಾವಿದೆ ಭಾರ್ಗವಿ ನಾರಾಯಣ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ರಂಗ ಕಲಾವಿದೆ ಭಾರ್ಗವಿ ನಾರಾಯಣ ಸೋಮವಾರ (ಫೆ.14) ರಾತ್ರಿ 7:30ಕ್ಕೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು ಹಾಗೂ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ಸಾವಿನ ಕುರಿತು ಅವರ ಮೊಮ್ಮಗಳು, ನಟಿ ಸಂಯುಕ್ತಾ ಹೊರನಾಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಭಾರ್ಗವಿ ನಾರಾಯಣ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಭಾರೀ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ ಕಂಡಿದೆ. ಇಂದು, ಸೋಮವಾರ 1,568 ಹೊಸ ಸೋಂಕು ದಾಖಲಾಗಿದ್ದು, ಇದೇವೇಳೆ 25ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ ರಾಜ್ಯದಲ್ಲಿ ರಾಜ್ಯದಲ್ಲಿ ಒಟ್ಟು 6,025 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,215 ಇದೆ. ಕೋವಿಡ್-19 ಮರಣ ಪ್ರಮಾಣ ಶೇ.1.59% ರಷ್ಟಿದೆ. … Continued

ಹೈಕೋರ್ಟ್‌ನಲ್ಲಿ ಹಿಜಾಬ್ ವಿವಾದ: ಹಿಜಾಬ್ ನಿಷೇಧಿಸುವ ಬಗ್ಗೆ ಕಾಲೇಜುಗಳು ನಿರ್ಧರಿಸಲು ಸಾಧ್ಯವಿಲ್ಲ-ವಕೀಲ ಕಾಮತ್‌

ಬೆಂಗಳೂರು: ಶಾಸಕರನ್ನು ಒಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯು (ಸಿಡಿಸಿ) ಸಾರ್ವಜನಿಕ ಸುವ್ಯವಸ್ಥೆ ಮತ್ತು ಮೂಲಭೂತ ಹಕ್ಕುಗಳ ಕುರಿತು ನಿರ್ಧರಿಸಲಾಗದು. ಅದು ಸರ್ಕಾರದ ಕೆಲಸ” ಎಂದು ಹೈಕೋರ್ಟಿನಲ್ಲಿ ಹಿಜಾಬ್‌ ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಾದ ದೇವದತ್‌ ಕಾಮತ್‌ ಸೋಮವಾರ ಬಲವಾಗಿ ಪ್ರತಿಪಾದಿಸಿದರು. ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದ … Continued

ಜಮೀರ್ ಹೇಳಿಕೆಯನ್ನು ಕಾಂಗ್ರೆಸ್‌ ಒಪ್ಪುವುದಿಲ್ಲ, ಅವರು ಕ್ಷಮೆ ಕೇಳಬೇಕು ಕೇಳ್ತೇನೆ:ಡಿಕೆಶಿ

ಬೆಂಗಳೂರು: ಬುರ್ಖಾ ಧರಿಸದ ಕಾರಣಕ್ಕೆ ದೇಶದಲ್ಲಿ ಅತ್ಯಾಚಾರಗಳು ಹೆಚ್ಚಾಗುತ್ತವೆ ಎಂಬ ಜಮೀರ್ ಅಹ್ಮದ್ ಖಾನ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಅವರು ಆ ಮಾತನ್ನು ಹಿಂಪಡೆಯಲು ಹೇಳುತ್ತೇನೆ ಹಾಗೂ ಅವರು ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ಯಾರೂ ಮಾತನಾಡಬಾರದು ಎಂದು ಎಂದು ಸೂಚಿಸಿದ್ದೆ. ಆದರೂ … Continued

ಕನ್ನಡದ ಹಿರಿಯ ನಟ ರಾಜೇಶ್​ ಆರೋಗ್ಯ ಸ್ಥಿತಿ ಗಂಭೀರ; ಖಾಸಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ರಾಜೇಶ್​ ಅವರಿಗೆ 84 ವರ್ಷ ವಯಸ್ಸಾಗಿದೆ. ಹಲವು ದಶಕಗಳಿಂದ ಚಿತ್ರರಂಗದಲ್ಲಿ ಅನುಭವ ಹೊಂದಿರುವ ಅವರು ವಯಸ್ಸಾದ ನಂತರ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ … Continued

ಹಿಜಾಬ್ ಕುರಿತು ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಲಾಗಿದೆ: ಜಮೀರ್ ಅಹಮದ್ ಸ್ಪಷ್ಟನೆ

ಹುಬ್ಬಳ್ಳಿ: ಸೌಂದರ್ಯ ಕಾಣದಿರಲು ಹಾಗೂ ತಮ್ಮ ರಕ್ಷಣೆಗಾಗಿ ಹಿಜಾಬ್‍ ಧರಿಸುತ್ತಾರೆ ಎಂದಿದ್ದೆ. ಈ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಗೊಂದಲ ಸೃಷ್ಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಜಮೀರ ಅಹ್ಮದ್ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಜಾಬ್ ಹಾಕದಿದ್ದರೆ ಅತ್ಯಾಚಾರ ಆಗುತ್ತದೆಯೆಂದು ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಹೇಳಿಕೆ ತಪ್ಪಾಗಿ ಅರ್ಥಯಸಿ ಗೊಂದಲ … Continued

ಹಿಜಾಬ್ ಧರಿಸಿ ತರಗತಿಗೆ ಬಂದ ವಿದ್ಯಾರ್ಥಿನಿಯರು..

ಕಲಬುರಗಿ: ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಭಾವನೆಯನ್ನು ಬಿಂಬಿಸುವ ವಸ್ತ್ರಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ, ಇಂದು ಸೋಮವಾರ ಕಲಬುರಗಿ ನಗರದ ಉರ್ದು ಶಾಲೆಯ ವಿದ್ಯಾರ್ಥಿನಿಯರು ಶಾಲೆಗೆ ಹಿಜಬ್ ಧರಿಸಿ ಆಗಮಿಸಿದ ಘಟನೆ ವರದಿಯಾಗಿದೆ. ಇಂದಿನಿಂದ ಪ್ರೌಢ ಶಾಲೆಯ ಪ್ರಾರಂಭದ ಹಿನ್ನಲೆ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಉರ್ದು ಪ್ರೌಢ ಶಾಲೆಯ 10ಕ್ಕೂ ಹೆಚ್ಚು … Continued

ಶಿವಮೊಗ್ಗ: ಹಿಜಾಬ್​ ಧರಿಸಲು ಅವಕಾಶ ನೀಡದ್ದಕ್ಕೆ ಪರೀಕ್ಷೆ ಬಹಿಷ್ಕರಿಸಿದ 13 ವಿದ್ಯಾರ್ಥಿನಿಯರು

ಶಿವಮೊಗ್ಗ: ನಗರದಲ್ಲಿ ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಬಹಿಷ್ಕರಿಸಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್​​ನಲ್ಲಿ ಇಂದು, ಸೋಮವಾರ ಎಸ್​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿತ್ತು. ಹೈಕೋರ್ಟ್‌ ಮಧ್ಯಂತರ ಆದೇಶದ ಮಧ್ಯೆಯೂ 13 ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿಯೇ ಪರೀಕ್ಷೆಗೆ ಬಂದಿದ್ದರು. ಹೈಕೋರ್ಟ್‌ ಮಧಯಂತರ ಆದೇಶದ ಹಿನ್ನೆಲೆಯಲ್ಲಿ ಸಿಬ್ಬಂದಿ … Continued

ರಾಜ್ಯದಲ್ಲಿ ಆನ್‌ಲೈನ್ ಜೂಜು ನಿಷೇಧ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಆನ್‌ಲೈನ್‌ ಜೂಜಾಟ ನಿಷೇಧಿಸುವ ಸಂಬಂಧ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಪೊಲೀಸ್‌ (ತಿದ್ದುಪಡಿ) ಕಾಯಿದೆ-2021 ಅನ್ನು ಹೈಕೋರ್ಟ್‌ ರದ್ದು ಪಡಿಸಿದೆ. ಸರ್ಕಾರದ ಕ್ರಮ ಸಂವಿಧಾನ ಬದ್ಧವಾಗಿಲ್ಲ. ಆನ್​ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಸರ್ಕಾರ ಸಂವಿಧಾನ ಬದ್ಧವಾದ ಶಾಸನ ರೂಪಿಸಲು ಸ್ವತಂತ್ರವಿದೆ. ಆದರೆ ಈಗಿನ ಆದೇಶ ಕಾನೂನುಬಾಹಿರ ಎಂದು ಹೈಕೋರ್ಟ್ ತಿಳಿಸಿದೆ. … Continued