ಹಿಜಾಬ್‌ ವಿವಾದ: ತಕ್ಷಣವೇ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಮುಂದಾಗಿ-ಹೊರಟ್ಟಿ

ಹುಬ್ಬಳ್ಳಿ: ಹಿಜಾಬ್‌ ಪ್ರಕರಣದ ಕುರಿತು ನಾವು ನ್ಯಾಯಾಲಯದ ತೀರ್ಪಿನ ಮೇಲೆ ನಂಬಿಕೆಯನ್ನು ಇಡಬೇಕಾಗುತ್ತದೆ. ವಿವಾದದಿಂದ ಮಕ್ಕಳ ಮನಸ್ಸಿನ ಮೇಲೆ ಉಂಟಾಗುವ ದ್ವೇಷ, ಸಿಟ್ಟು ಮನಸ್ಸಿನಲ್ಲಿಯೇ ಉಳಿಯಬಹುದು. ಈ ಬಗ್ಗೆ ಮುಂದಾಲೋಚನೆಯಿಂದ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಂಡು ಶಾಂತಿ ಕಾಪಾಡುವುದು, ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆಯನ್ನು ಮಾಡುವುದು ಅತ್ಯಂತ ಮುಖ್ಯ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ … Continued

ಹಿಜಾಬ್ ವಿವಾದದಲ್ಲಿ ಲಾಭ ಪಡೆಯಲು ಯತ್ನ: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಕರ್ನಾಟಕದಲ್ಲಿನ ಬೆಳವಣಿಗೆಗಳಿಗೆ ಸರ್ಕಾರ, ಮುಖ್ಯವಾಗಿ ಬಿಜೆಪಿ ಸದಸ್ಯರು ಜವಾಬ್ದಾರರು ಮತ್ತು ಈಗ ಚುನಾವಣೆ ನಡೆಯುತ್ತಿರುವುದರಿಂದ ಅವರು ಲಾಭ ಪಡೆಯಲು ಅವರು ಬಯಸುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ರಾಜ್ಯಸಭೆಯಲ್ಲಿ ಉಪಸ್ಥಿತರಿದ್ದರು, ನಾವು ಹಣದುಬ್ಬರ, ನಿರುದ್ಯೋಗ, ರೈತರು, ಜಿಡಿಪಿ, ರಾಷ್ಟ್ರೀಯ ಭದ್ರತೆ ಮತ್ತು ಏಕತೆಯ … Continued

ಬಿಕಿನಿ ಬೀಚಿಗೆ ವಿನಃ ಕಾಲೇಜಿಗಲ್ಲ, ಎಲ್ಲದಕ್ಕೂ ಡ್ರೆಸ್ ಕೋಡ್ ಇರುತ್ತದೆ: ಸುಮಲತಾ ಅಂಬರೀಶ

ಬೆಂಗಳೂರು : ಪ್ರತಿ ಸ್ಥಳಕ್ಕೂ ಅದರದ್ದೇ ಆದ ಡ್ರೆಸ್ ಕೋಡ್ ಇರುತ್ತದೆ. ನೀವು ಬೀಚ್ ಅಥವಾ ಸ್ವಿಮ್ಮಿಂಗ್ ಪೂಲ್​ನಲ್ಲಿ ಬಿಕಿನಿ ಧರಿಸಬಹುದು. ಆದ್ರೆ, ಅದನ್ನ ಶಾಲೆಯಲ್ಲಿ ಧರಿಸಲು ಸಾಧ್ಯವಿಲ್ಲ” ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್‌ ನಾಯಕ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಹಿಜಾಬ್ ವಿವಾದದ ಬಗ್ಗೆ ಮಾತನಾಡಿದ ಅವರು “ನಾವು … Continued

ಗುಡ್ ನ್ಯೂಸ್ : 11ಇ, ಹದ್ದುಬಸ್ತು ಅರ್ಜಿ ಶುಲ್ಕ ಇಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಾರ್ವಜನಿಕರಿಂದ ಅಳತೆಗಾಗಿ ಮೋಜಿಣಿ ವ್ಯವಸ್ಥೆಯಡಿಯಲ್ಲಿ ಸ್ವೀಕರಿಸುವ ಹದ್ದುಬಸ್ತು ಅರ್ಜಿಗಳಿಗೆ ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶಗಳಿಗೆ ವಿಧಿಸಲಾಗುತ್ತಿದ್ದ ಶುಲ್ಕವನ್ನು ಇಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದೇ ರೀತಿ 11 ಇ, ಆಲಿನೇಷನ್ ಪೂರ್ವನಕ್ಷೆ, ಮತ್ತು ತತ್ಕಾಲ್ ಪೋಡಿ ಅರ್ಜಿಗಳಿಗೆ ನಿಗದಿಪಡಿಸಲಾದ ಅರ್ಜಿ ಶುಲ್ಕಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ … Continued

ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 5,019 ಸೋಂಕು ದಾಖಲು, 39 ಜನರು ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಗುರುವಾರ ಹೊಸದಾಗಿ 5,019 ಕೊರೊನಾ ಸೋಂಕುಗಳು ದಾಖಲಾಗಿವೆ. ಇದೇವೇಳೆರಾಜ್ಯದಲ್ಲಿ 39 ಮರಣ ಪ್ರಕರಣ ದಾಖಲಾಗಿದೆ. ನಿನ್ನೆ 5,339 ಸೋಂಕು ದಾಖಲಾಗಿತ್ತು. ಇಂದು ಗುರುವಾರ ರಾಜ್ಯದಲ್ಲಿ ಒಟ್ಟು 13,923 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕಾರಾತ್ಮಕ ದರ 4.25%ಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 52,013 ಕುಸಿತವಾಗಿದೆ. ಬೆಂಗಳೂರಿನಲ್ಲಿ ಒಟ್ಟು … Continued

ಸೋಮವಾರದಿಂದ ರಾಜ್ಯಾದ್ಯಂತ ಹೈಸ್ಕೂಲ್ ಪುನರಾರಂಭ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಾಗಿ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ತ್ರಿ ಸದಸ್ಯ ಪೀಠ ಶೀಘ್ರವೇ ಕಾಲಾ-ಕಾಲೇಜು ಆರಂಭಿಸಿ ಎಂದು ಸೂಚಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿ ತೀರ್ಮಾನಿಸಿದ್ದು, ಸೋಮವಾರ ಫೆ. 14 ರಿಂದ 10 ನೇ ತರಗತಿಯವರೆಗೆ ಮಾತ್ರ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದ್ದಾರೆ. ಮಹತ್ವದ … Continued

ಶಾಲೆಗಳನ್ನು ಶೀಘ್ರ ಆರಂಭಿಸಿ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ಬೆಂಗಳೂರು: ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ ಎಂದು ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಗುರುವಾರ ಸೂಚಿಸಿದ್ದಾರೆ. ಹಿಜಾಬ್ ವಿವಾದ ಸಂಬಂಧ ಮೂರನೇ ದಿನ ವಿಚಾರಣೆ ಇಂದು, ಗುರುವಾರ ಮಧ್ಯಾಹ್ನ ಆರಂಭವಾಯಿತು. ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ, ನ್ಯಾ.ಖಾಜಿ ಜೈಬುನ್ನೀಸಾ, ನ್ಯಾ.ಕೃಷ್ಣ ಎಸ್.​ ದೀಕ್ಷಿತ್​ ಅವರಿರುವ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. … Continued

ವಜಾಗೊಂಡಿದ್ದ ಸಾರಿಗೆ ಸಂಸ್ಥೆ ಚಾಲಕರು- ನಿರ್ವಾಹಕರ ಮರು ನೇಮಕ: ಸಚಿವ ಶ್ರೀರಾಮುಲು

ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕೋರಿ ಮುಷ್ಕರದಲ್ಲಿ ಭಾಗಿಯಾಗಿದ್ದ ಕಾರಣಕ್ಕೆ ಕೆಲಸದಿಂದ ವಜಾ ಮಾಡಲಾಗಿದ್ದ ಸಾರಿಗೆ ನೌಕರರನ್ನು ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಪ್ರತಿಭಟನೆ ವೇಳೆ ಭಾಗಿಯಾಗಿದ್ದ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇಂದು, ಗುರುವಾರ 100 ನೌಕರರು, ನಾಳೆ 200 ನೌಕರರ ಮರು … Continued

ಹಿಜಾಬ್‌ ಪ್ರಕರಣ: ವಿಚಾರಣೆ ಮುಗಿಯವರೆಗೂ ಯಾವುದೇ ಧಾರ್ಮಿಕ ಉಡುಪು ಧರಿಸುವಂತಿಲ್ಲ- ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಹಿಜಾಬ್‌ ನಿಷೇಧಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮನವಿಗಳ ಕುರಿತು ನಿರ್ಧಾರ ಮಾಡುವವರೆಗೆ ಶಿಕ್ಷಣ ಸಂಸ್ಥೆಗಳು ಆರಂಭವಾಗಬೇಕು. ಆದರೆ, ಯಾವುದೇ ಧಾರ್ಮಿಕ ಸಂಕೇತ ಇರುವ ಉಡುಪನ್ನು ಯಾರೂ ಧರಿಸದಂತೆ ಮಧ್ಯಂತರ ಆದೇಶ ಮಾಡುವುದಾಗಿ ಕರ್ನಾಟಕ ಹೈಕೋರ್ಟ್‌ ಗುರುವಾರ ಹೇಳಿದ್ದು (ಇನ್ನೂ ಆದೇಶ ಹೊರಡಿಸಿಲ್ಲ) ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಸೋಮವಾರ ಮುಂದುವರಿಸಲಾಗುವುದು ಎಂದು ಹೈಕೋರ್ಟ್‌ … Continued

ಕರ್ನಾಟಕ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ನಲಪಾಡ್‌ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕ ಪ್ರದೇಶ‌ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪ್ರಮುಖ ನಾಯಕರ ಸಮ್ಮುಖದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ, ದೇಶದಲ್ಲಿ ಬಿಜೆಪಿ-ಕಾಂಗ್ರೆಸ್ … Continued