ಹಿಜಾಬ್‍ಗೆ ಅನುಮತಿ ನೀಡಲು ಒತ್ತಾಯಿಸಿ ಈಗ ನೀಲಿ ಶಾಲು ಧರಿಸಿ ಪ್ರತಿಭಟನೆ

ಚಿಕ್ಕಮಗಳೂರು: ಹಿಜಾಬ್ ವಿವಾದ ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಇದರ ಬೆನ್ನಲ್ಲೇ ನೀಲಿ ಶಾಲು ಧರಿಸಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಚಿಕ್ಕಮಗಳೂರು ಐಡಿಎಸ್‍ಜಿ ಕಾಲೇಜಿನ ಕೆಲ ವಿದ್ಯಾರ್ಥಿಗಳು ಪ್ರತಿಭಟನೆ ಹಿಜಾಬ್ ತೆಗೆಸಬಾರದು ಎಂದು ಆಗ್ರಹಿಸಿ ನೀಲಿ ಶಾಲು ಧರಿಸಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು ಸಹ … Continued

ವಿಜಯಪುರ ಜಿಲ್ಲೆಗೂ ವ್ಯಾಪಿಸಿದ ಹಿಜಾಬ್ ವಿವಾದ; ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ವಿಜಯಪುರ: ಉಡುಪಿ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಈಗ ವಿಜಯಪುರ ‌ಜಿಲ್ಲೆಯಲ್ಲಿಯೂ ಕಾಣಿಸಿಕೊಂಡಿದೆ. ಜಿಲ್ಲೆಯ ಇಂಡಿ ಪಟ್ಟಣದ ಎರಡು ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸಿದ್ದಾರೆ. ಜಿಲ್ಲೆ ಇಂಡಿ ಪಟ್ಟಣದಲ್ಲಿ ಶಾಂತೇಶ್ವರ ಪಿಯು ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಸಮೇತ ಇಂದು, ಸೋಮವಾರ … Continued

ಮರಕ್ಕೆ ಕಾರು ಡಿಕ್ಕಿ: ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ನಡೆದ ಭೀಕರ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಮೃತರನ್ನು ಗೀತಾ (32 ವರ್ಷ), ಶಾರದಾ (60 ವರ್ಷ) ಮತ್ತು ಬಾಲಕಿ ಧೃತಿ (5 ವರ್ಷ) ಎಂದು ಗುರುತಿಸಲಾಗಿದ್ದು ಇವರು ಉಡುಪಿ ಜಿಲ್ಲೆ ಕುಂದಾಪುರದವರು … Continued

ಇಂದಿನಿಂದ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ: ವರಿಷ್ಠರ ಜೊತೆ ಸಂಪುಟದ ಬಗ್ಗೆ ಚರ್ಚೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದೆಹಲಿಗೆ ಪ್ರವಾಸ ಕೈಗೊಳ್ಳಲಿದ್ದು, ಸಂಸದರು ಹಾಗೂ ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಅದರ ಜೊತೆಗೆ ಸಂಪುಟ ವಿಸ್ತರಣೆ ಬಗ್ಗೆಯೂ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಸಂಸತ್‌ನಲ್ಲಿ ಬಜೆಟ್‌ ಅಧಿವೇಶನ ನಡೆಯುವಾಗ ಮತ್ತು ರಾಜ್ಯದ ಬಜೆಟ್‌ಗೆ ಮುನ್ನ ಸಂಸದರೊಂದಿಗೆ ಸಭೆ ನಡೆಸುವ … Continued

ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ತರಬೇತಿ ಕೋರ್ಸ್ ಶೀಘ್ರವೇ ಆರಂಭ: ಸಿಎಂ ಬೊಮ್ಮಾಯಿ

ಬೆಂಗಳೂರು: ಶಾಲಾ- ಕಾಲೇಜುಗಳ ಮಕ್ಕಳಿಗೆ ಶೀಘ್ರದಲ್ಲಿಯೇ ಆತ್ಮರಕ್ಷಣೆ ತರಬೇತಿ ಪ್ರಾರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಇಂದು, ಭಾನುವಾರ ವಿಧಾನಸೌಧದ ಮುಂಭಾಗದಲ್ಲಿ ಆಯೋಜನೆ ಮಾಡಿದ್ದ ‘ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಪೊಲೀಸ್ ತರಬೇತಿ ಶಾಲೆಗಳನ್ನು ಬಳಸಿಕೊಂಡು ಶಾಲಾ-ಕಾಲೇಜುಗಳ ಹೆಣ್ಣು … Continued

ಕರ್ನಾಟಕದಲ್ಲಿ ಬಹುದಿನಗಳ ನಂತರ 10 ಸಾವಿರಕ್ಕಿಂತ ಕಡಿಮೆ ದೈನಂದಿನ ಕೊರೊನಾ ಸೋಂಕು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಭಾನುವಾರ ಬಹುದಿನಗಳ ನಂತರ ದೈನಂದಿನ ಕೊರೊನಾ ಸೋಂಕು 10 ಸಾವಿರಕ್ಕಿಂತ ಕಡಿಮೆ ದಾಖಲಾಗಿದೆ. ರಾಜ್ಯದಲ್ಲಿ ಇಂದು 8,425 ಹೊಸ ಸೋಂಕು ದಾಖಲಾಗಿದ್ದು, ಇದೇ ಸಮಯದಲ್ಲಿ 47 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 19,800 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕಾರಾತ್ಮಕತೆ ದರ 6.51%ಕ್ಕೆ ಇಳಿದಿದೆ. ಒಟ್ಟು ರಾಜ್ಯದಲ್ಲಿ 97,781 ಸಕ್ರಿಯ … Continued

ಲತಾ ಮಂಗೇಶ್ಕರ್‌ ನಿಧನ: ಗೌರವಾರ್ಥ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ

ಬೆಂಗಳೂರು : ಮುಂಬೈನಲ್ಲಿ ಇಂದು, ಭಾನುವಾರ ನಿಧನರಾದ ಭಾರತ ರತ್ನ ಲತಾ ಮಂಗೇಶ್ಕರ್ ಅವರ ಗೌರವಾರ್ಥ ರಾಜ್ಯ ಸರ್ಕಾರ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಅವರ ನಿಧನಕ್ಕೆ ಸರ್ಕಾರ ತೀವ್ರ ದುಃಖ ವ್ಯಕ್ತಪಡಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಗಲಿದ ಆತ್ಮದ ಗೌರವಾರ್ಥವಾಗಿ ಫೆಬ್ರವರಿ 6 ಮತ್ತು 7 ರಂದು ರಾಜ್ಯಾದ್ಯಂತ ಎರಡು ಶೋಕಾಚರಣೆ ನಡೆಯಲಿದೆ. ಈ … Continued

ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಬರ್ಬರ ಕೊಲೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಗ್ರಾಮ ಬಜಾರ್‌ ಬೈಲ್‌ನಲ್ಲಿ ಒಂದೇ ಕುಟುಂಬದ ಐವರನ್ನು ಕೊಲೆ ಮಾಡಿದ್ದ ಬಗ್ಗೆ ವರದಿಯಾಗಿದೆ. ನಾಲ್ವರು ಮಕ್ಕಳು, ಹಾಗೂ ಓರ್ವ ಮಹಿಳೆಯನ್ನು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮೃತರನ್ನು ಲಕ್ಷ್ಮೀ(26), ರಾಜ್(12), ಕೋಮಲ್(7), ಕುನಾಲ್(4), ಗೋವಿಂದ(8) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೆಆರ್‌ಎಸ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ … Continued

ಐದು ದಶಕಗಳ ಹಿಂದೆ ʼಬೆಳ್ಳನೆ ಬೆಳಗಾಯಿತು…..’ ಸೇರಿ ಎರಡು ಗೀತೆಗಳ ಮೂಲಕ ಕನ್ನಡಿಗರ ಮನ ಗೆದ್ದಿದ್ದ ಲತಾ ಮಂಗೇಶ್ಕರ್​; ಇಲ್ಲಿದೆ ಕೇಳಿ..

ಬೆಂಗಳೂರು: ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ ಅವರ ನಿಧನಕ್ಕೆ ದೇಶವೇ ಕಂಬನಿ ಮಿಡಿದಿದೆ. ಭಾರತೀಯ ಚಲನಚಿತ್ರ ಕ್ಷೇತ್ರಕ್ಕೆ ಲತಾ ಅವರ ಕೊಡುಗೆ ಅಪಾರ. 36ಕ್ಕೂ ಅಧಿಕ ಭಾಷೆಗಳಲ್ಲಿ ಹಾಡುವ ಮೂಲಕ ಅವರು ಎಲ್ಲರ ಹೃದಯ ಗೆದ್ದಿದ್ದರು. ಲತಾ ಅವರ ಹಾಡಿಗೆ ತಲೆದೂಗದವರೇ ಇಲ್ಲ ಎಂದರೂ ಅತಿಶಯೋಕ್ತಿ ಆಗಲಾರದು. ಲತಾ ಮಂಗೇಶ್ಕರ್​ ಕನ್ನಡ ಸಿನೆಮಾದಲ್ಲಿಯೂ ಹಾಡಿದ್ದಾರೆ. ಅವರು … Continued

ಗ್ರಾಮ ಒನ್ ಕೇಂದ್ರಗಳಲ್ಲಿ ಬಿಪಿಎಲ್-ಎಪಿಎಲ್ ಕಾರ್ಡ್‍ಗಳ ವಿತರಣೆ: ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಸುಮಾರು 4 ಲಕ್ಷ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‍ಗಳಿಗೆ ಮಂಜೂರಾತಿ ನೀಡಲಾಗಿದ್ದು, ಇವುಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗ್ರಾಮ ಒನ್ ಯೋಜನೆಯ ಪ್ರಗತಿ ಕುರಿತು ಶನಿವಾರ ಜಿಲ್ಲಾಡಳಿತ ಹಾಗೂ ಗ್ರಾಮ ಒನ್ ಕಂಪ್ಯೂಟರ್ ಆಪರೇಟರುಗಳೊಂದಿಗೆ ನಡೆದ ವಿಡಿಯೊ ಸಂವಾದದಲ್ಲಿ ಮಾತನಾಡಿ ಅವರು, … Continued