ಹಿಜಾಬ್ ವಿವಾದದ ನಡುವೆ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಇಬ್ಬರ ಬಂಧನ, ಕೆಲವರು ಪರಾರಿ

ಕುಂದಾಪುರ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಕುಂದಾಪುರ ಜೂನಿಯರ್ ಕಾಲೇಜ್ ಪರಿಸರದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ನಾಲ್ವರು ಪರಾರಿಯಾಗಿದ್ದಾರೆ. ಗಂಗೊಳ್ಳಿಯ ಹಾಜಿ ಅಬ್ದುಲ್ ಮಜೀದ್ (32) ಹಾಗು ರಜಬ್ (41) ಎಂಬವರು ಬಂಧಿತರಾಗಿದ್ದು, ಇತರ ನಾಲ್ವರು ಪರಾರಿಯಾಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಬಂಧಿತ ಆರೋಪಿಗಳ ಕೈಯಿಂದ ಪೊಲೀಸರು … Continued

ಗೋವು ಕಳ್ಳರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ: ಗೋವು ಕಳ್ಳತನ ಕಡಿವಾಣಕ್ಕೆ ಸಚಿವ ಚವ್ಹಾಣ ಖಡಕ್‌ ಸೂಚನೆ

ಕಾರವಾರ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳುವು ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕೂಡಲೇ ಕ್ರಮಕೈಗೊಳ್ಳಬೇಕು. ಪದೇಪದೇ ಗೋವುಗಳನ್ನು ಕಳವು ಮಾಡುವವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿ, ಗಡಿ ಪಾರು ಮಾಡುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಿ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಗೋ ರಕ್ಷಣಾ ಸಮಿತಿ … Continued

ಕರ್ನಾಟಕದಲ್ಲಿ ಶನಿವಾರ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ..

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಶನಿವಾರ ಮತ್ತಷ್ಟು ಕಡಿಮೆಯಾಗಿದೆ. ಇಂದು ಹೊಸದಾಗಿ 12,009 ಕೊರೊನಾ ಸೋಂಕು ದಾಖಲಾಗಿದೆ. ಇದೇವೇಳೆ ರಾಜ್ಯದಲ್ಲಿ ಸೋಂಕಿಗೆ 50 ಜನರು ಮೃತಪಟ್ಟಿದ್ದಾರೆ ಹಾಗೂ 25,854 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 1,09,203 ಸಕ್ರಿಯ ಪ್ರಕರಣಗಳಿವೆ. ಕೋವಿಡ್-19 ಮರಣ ಪ್ರಮಾಣ ಶೇ.0.41% ರಷ್ಟಿದೆ. ಪಾಸಿಟಿವಿಟಿ … Continued

ಮಹತ್ವದ ಸುದ್ದಿ ..ಹಿಜಾಬ್ ವಿವಾದ ನಡುವೆಯೇ ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಸರ್ಕಾರದಿಂದ ಆದೇಶ

ಬೆಂಗಳೂರು: ಕರ್ನಾಟಕದಲ್ಲಿ ಹಿಜಾಬ್ ವಿವಾದ ಭುಗಿಲೆದ್ದ ಬೆನ್ನಲ್ಲೇ ವಿವಾದಕ್ಕೆ ಸರ್ಕಾರ ತಾರ್ಕಿಕ ಅಂತ್ಯ ನೀಡಲು ಮುಂದಾಗಿದ್ದು, ಎಲ್ಲ ಸರ್ಕಾರಿ ಖಾಸಗಿ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆಗೆ ಸಂಬಂಧಪಟ್ಟಂತೆ ಶಿಕ್ಷಣ ಇಲಾಖೆಯಿಂದ ಶನಿವಾರ ಸಂಜೆ ಆದೇಶ ಹೊರಡಿಸಲಾಗಿದ್ದು, ವಿವಿಧ ರಾಜ್ಯಗಳ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ … Continued

ಜೆಡಿಎಸ್ ಸೇರುವೆ, ಶೀಘ್ರದಲ್ಲಿ ದಿನಾಂಕ ಪ್ರಕಟಿಸುವೆ : ಸಿಎಂ ಇಬ್ರಾಹಿಂ

ಬೆಂಗಳೂರು: ಜೆಡಿಎಸ್ ಪಕ್ಷ ಸೇರುತ್ತೇನೆ. ಶೀಘ್ರದಲ್ಲಿ ದಿನಾಂಕ ತಿಳಿಸುತ್ತೇನೆ ಎಂದು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ. ಇದೇ ಜನವರಿ 14ರ ನಂತರ ಜೆಡಿಎಸ್ ಯಾವಾಗ ಸೇರಬೇಕು ಎಂಬುದನ್ನು ತೀರ್ಮಾನ ಮಾಡುತ್ತೇನೆ. ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ತಿರ್ಮಾನ … Continued

ಕುಂದಾಪುರದಲ್ಲಿ ತೀವ್ರಗೊಂಡ ಹಿಜಾಬ್‌ ವಿವಾದ: ಬೇರೆ ಕಾಲೇಜುಗಳಿಗೂ ವಿಸ್ತರಣೆ.. ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳ ಮೆರವಣಿಗೆ

ಉಡುಪಿ:ಕುಂದಾಪುರದಲ್ಲಿ ಹಿಜಾಬ್ ವಿವಾದ ಸಂಘರ್ಷ 4ನೇ ದಿನಕ್ಕೆ ಕಾಲಿಟ್ಟಿದ್ದು ಈಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕುಂದಾಪುರದಲ್ಲಿ ಹಿಜಬ್ ವಿವಾದ ಮುಂದುವರೆದಿದ್ದು, ಹಿಜಾಬ್ ಧರಿಸುವುದನ್ನು ವಿರೋಧಿಸಿ ಆರ್. ಎನ್. ಶೆಟ್ಟಿ ಮತ್ತು ಬಂಡಾರ್ಕಾರ್ಸ್ ಕಾಲೇಜಿವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಮೆರವಣಿಗೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಂದಾಪುರದ ಆರ್‌.ಎನ್‌.ಶೆಟ್ಟಿ ಕಾಲೇಜಿಗೆ ಶನಿವಾರ ದಿಢೀರ್‌ ರಜೆ ಘೋಷಿಸಲಾಗಿದೆ ಎಂದು … Continued

ವಿಧಾನಸಭೆಗೆ ಹಿಜಾಬ್ ಧರಿಸಿಯೇ ಹೋಗ್ತೇನೆ, ಧೈರ್ಯವಿದ್ದರೆ ನನ್ನನ್ನು ತಡೆಯಲಿ: ಸರ್ಕಾರಕ್ಕೆ ಕಾಂಗ್ರೆಸ್ ಶಾಸಕಿ ಸವಾಲು

ಕಲಬುರಗಿ: ಹಿಜಾಬ್ ಧರಿಸುವುದು ಮುಸ್ಲಿಂ ಮಹಿಳೆಯರ ಸಂಪ್ರದಾಯ, ಅದು ನಮ್ಮ ಹಕ್ಕು. ವಿಧಾನಸೌಧದಲ್ಲಿ ಹಿಜಾಬ್ ಧರಿಸಿಯೇ ಕೂರುತ್ತೇನೆ, ಧೈರ್ಯವಿದ್ದರೆ ತಡೆಯಲಿ ಎಂದು ಕಲಬುರಗಿ ಉತ್ತರ ಮತಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜಾ ಫಾತೀಮಾ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶನಿವಾರ ಹಿಜಾಬ್ ವಿರೋಧ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ … Continued

ಡಾ. ಅಂಬೇಡ್ಕರ್ ಫೋಟೋ ವಿವಾದಕ್ಕೆ ಅಂತ್ಯ ಹಾಡಿದ ಹೈಕೋರ್ಟ್ : ನ್ಯಾಯಾಲಯಗಳ ಅಧಿಕೃತ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಇರಿಸಲು ಸೂಚನೆ

ಬೆಂಗಳೂರು: ಅಧಿಕೃತ ಕಾರ್ಯಕ್ರಮಗಳಲ್ಲಿ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡಲು, ಕರ್ನಾಟಕ ಹೈಕೋರ್ಟ್ ಮುಖ್ಯ ನಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದಲ್ಲಿ ಆಡಳಿತಾತ್ಮಕ ಪೂರ್ಣ ನ್ಯಾಯಾಲಯ ಸಭೆ ನಿರ್ಣಯ ಕೈಗೊಂಡಿದೆ. ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ನ್ಯಾಯಾಲಯದ ಎಲ್ಲಾ ಅಧಿಕೃತ ಕಾರ್ಯಕ್ರಮಗಳಲ್ಲಿ ಇರಿಸಲು ಕರ್ನಾಟಕ ಹೈಕೋರ್ಟ್‍ನ … Continued

ಕನ್ನಡದ ಕಬೀರ, ಭಾವೈಕ್ಯತೆ ಹರಿಕಾರ ಪದ್ಮಶ್ರೀ ಇಬ್ರಾಹಿಂ ಸುತಾರ ನಿಧನ

ಬಾಗಲಕೋಟೆ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ (76) ಇಂದು, ಶುಕ್ರವಾರ ಮುಂಜಾನೆ  ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಹಾಲಿಂಗಪುರದ ನಿವಾಸಿ ಇಬ್ರಾಹಿಂ ಸುತಾರರಿಗೆ ಬೆಳಗ್ಗೆ 6:30ಕ್ಕೆ ನಿಧನರಾಗಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಇಬ್ರಾಹಿಂ ಸುತಾರ ಎದೆ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು,ಶುಕ್ರವಾರ ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ. ತಕ್ಷಣ ಇಬ್ರಾಹಿಂ ಸುತಾರ ಅವರನ್ನು ಕುಟುಂಬಸ್ಥರು … Continued

ಹಿಜಾಬ್ ವಿವಾದ: ಸಿಎಂ ಬೊಮ್ಮಾಯಿ ಸಭೆ, ಹೈಕೋರ್ಟ್ ತೀರ್ಪಿನವರೆಗೂ ಈಗಿನ ಸಮವಸ್ತ್ರ ನಿಯಮ ಮುಂದುವರಿಕೆಗೆ ಸೂಚನೆ

ಬೆಂಗಳೂರು: ಹಿಜಾಬ್’ (ಶೀರ್ಷವಸ್ತ್ರ) ಗದ್ದಲದ ಹಿನ್ನೆಲೆಯಲ್ಲಿ,ಮುಂದಿನ ವಾರ ಈ ಸಂಬಂಧ ಹೈಕೋರ್ಟ್ ಆದೇಶ ಹೊರಬೀಳುವವರೆಗೆ ರಾಜ್ಯ ಸರ್ಕಾರವು ಶಿಕ್ಷಣ ಸಂಸ್ಥೆಗಳಿಗೆ ಅಸ್ತಿತ್ವದಲ್ಲಿರುವ ಸಮವಸ್ತ್ರ ಸಂಬಂಧಿತ ನಿಯಮಗಳನ್ನು ಅನುಸರಿಸುವಂತೆ ಸೂಚಿಸಿದೆ. ಈ ವಿಚಾರ ದೊಡ್ಡ ವಿವಾದವಾಗಿ ಇತರ ಶಿಕ್ಷಣ ಸಂಸ್ಥೆಗಳಿಗೂ ವ್ಯಾಪಿಸಿದ್ದು, ಹೈಕೋರ್ಟ್ ಮೆಟ್ಟಿಲೇರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ … Continued