ಕಾರವಾರ: ಗಣರಾಜ್ಯೋತ್ಸವ ಧ್ವಜಾರೋಹಣ ಮುಗಿದ ನಂತರ ಎಎಸ್‌ಐ ಹೃದಯಾಘಾತದಿಂದ ಸಾವು

.ಕಾರವಾರ: ಗಣರಾಜ್ಯೋತ್ಸವ ಧ್ವಜಾರೋಹಣದಲ್ಲಿ ಪಾಲ್ಗೊಂಡ ನಂತರ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಾರವಾರದಲ್ಲಿ ಇಂದು, ಮಂಗಳವಾರ ನಡೆದಿದೆ. ನಗರದ ಸಂಚಾರಿ ಠಾಣೆಯಲ್ಲಿ ಎಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ಖಾದರ್ ಮಹ್ಮದ್ ಶೇಖ್ (57) ಮೃತ ಅಧಿಕಾರಿಯಾಗಿದ್ದಾರೆ. ಸಂಚಾರಿ ಠಾಣೆಯಲ್ಲಿ ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಧ್ವಜಾರೋಹಣ ಮುಗಿದ ಕೆಲ ಸಮಯದ … Continued

ಕಾಡಾನೆ ದಾಳಿ: ಒಬ್ಬರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಮಂಗಳೂರು: ಕಾಡಾನೆಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ಕಡಬ‌ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ‌ ಎಂಬಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ರೇವಪ್ಪ ಎಂದು ಗುರುತಿಸಲಾಗಿದೆ. ಅವರು ಅಲ್ಲಿನ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ಹಠಾತ್ತನೆ ದಾಳಿ ನಡೆಸಿದೆ. ಅವರ ತಲೆ … Continued

ಮೂರು ತಿಂಗಳಲ್ಲಿ ಐದು ಉಪಗ್ರಹ ಉಡಾವಣೆ ಮಾಡಲಿದೆ ಇಸ್ರೋ

ಬೆಂಗಳೂರು: ಕೊರೊನಾ ವೈರಸ್ ಸಾಂಕ್ರಾಮಿಕ ಮತ್ತು ಸತತ ಲಾಕ್‌ಡೌನ್‌ಗಳಿಂದ ಉಂಟಾದ ವಿಳಂಬಗಳ ನಂತರ, ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಹೊಸ ಮುಖ್ಯಸ್ಥ ಡಾ ಎಸ್. ಸೋಮನಾಥ್‌ ಅವರ ನೇಮಕವಾಗುತ್ತಿದ್ದಂತೆ ತನ್ನ ಕಾರ್ಯಾಚರಣೆ ವೇಗ ಪಡೆದುಕೊಳ್ಳುತ್ತಿದೆ. ಮುಂಬರುವ ಮೂರು ತಿಂಗಳಲ್ಲಿ ಬಾಹ್ಯಾಕಾಶ ಸಂಸ್ಥೆ ಐದು ಪ್ರಮುಖ ಉಪಗ್ರಹ ಉಡಾವಣೆಗಳನ್ನು ನಡೆಸಲಿದೆ ಎಂದು ವಿಜ್ಞಾನ ಮತ್ತು … Continued

ರಾಜ್ಯದಲ್ಲಿ 75 ಸರ್ಕಾರಿ ಶಾಲೆಗಳು ನೇತಾಜಿ ಅಮೃತ ಶಾಲೆ ಎಂದು ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಪ್ರತಿ ಜಿಲ್ಲೆಯ ಎರಡು ಶಾಲೆಗಳಂತೆ ರಾಜ್ಯದ 75 ಶಾಲೆಗಳನ್ನು ನೇತಾಜಿ ಅಮೃತ ಶಾಲೆಗಳೆಂದು ( Netaji Ambrut School ) ರಾಜ್ಯ ಸರ್ಕಾರ ಘೋಷಿಸಿದೆ. ಈ ಶಾಲೆಗಳಲ್ಲಿ ಎನ್ ಸಿಸಿ ಘಟಕಗಳನ್ನು ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದೆ. ಈ ಬಗ್ಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ ನಡಾವಳಿ … Continued

ಜೀವಜಲ ತಂದ ಭಗೀರಥ ಅಮೈ ಮಹಾಲಿಂಗ ನಾಯ್ಕರಿಗೆ ಪದ್ಮಶ್ರೀ ಗೌರವ

ಮಂಗಳೂರು: ಬೋಳುಗುಡ್ಡೆಯಲ್ಲಿ ಜೀವಜಲವನ್ನು ತರಿಸಿದ ಭಗೀರಥ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಮೈ ಮಹಾಲಿಂಗ ನಾಯ್ಕ ಅವರು ಪದ್ಮಶ್ರೀ ಗೌರವಕ್ಕೆ ಭಾಜನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ 77ರ ಮಹಾಲಿಂಗ ನಾಯ್ಕ ಕೃಷಿ ಸಾಧಕ. ಪಂಪ್ ಸೆಟ್ ಸೌಲಭ್ಯಗಳಿಲ್ಲದ ಸಮಯದಲ್ಲಿ ಸುರಂಗ ನೀರಿನ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು, … Continued

ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈಗ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. ಈ ಪಟ್ಟಿಯಂತೆ ಮಾರ್ಜ್ 28ರಿಂದ ಪರೀಕ್ಷೆ ಆರಂಭಗೊಂಡು, ಏಪ್ರಿಲ್ 11ರಂದು ಮುಕ್ತಾಯಗೊಳ್ಳಲಿದೆ. ಮಹಾಮಾರಿ ಕೊರೊನಾ ನಡುವೆಯೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆಸುವುದಕ್ಕೆ ಈಗಾಗಲೇ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಸದ್ಯ ಈಗ ಮುಖ್ಯಪರೀಕ್ಷೆಯ … Continued

ದಾವಣಗೆರೆ: ತಡರಾತ್ರಿ ದಂಪತಿಯ ಭೀಕರ ಕೊಲೆ

ದಾವಣಗೆರೆ: ಎಲೆಬೇತೂರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧ ದಂಪತಿಯನ್ನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಯಾದವರನ್ನು ಗುರುಸಿದ್ದಯ್ಯ (80) ಮತ್ತು ಪತ್ನಿ ಸರೋಜಮ್ಮ (75) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪತಿ‌-ಪತ್ನಿ ಇಬ್ಬರೇ ವಾಸವಿದ್ದರು. ಸೋಮವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದಂಪತಿಯನ್ನು ಮಾಸಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಒಳಗೆ ಶವ ಬಿಟ್ಟು … Continued

ಕುಮಟಾ: ಗ್ಯಾಸ್ ಟ್ಯಾಂಕರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಹೊನ್ಮಾವ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಒಂದು ಪಲ್ಟಿಯಾಗಿದ್ದು, ಸಮೀಪದ ಶಾಲೆಗಳಿಗೆ ರಜೆ ನೀಡಲಾಗಿದೆ. ಗ್ಯಾಸ್‌ ಟ್ಯಾಂಕರ್‌ ಲಾರಿಯಿಂದ ಪ್ರತ್ಯೇಕಗೊಂಡು ಕೆಳಗೆ ಉರುಳಿದೆ. ನಿಂದ ಸ್ವಲ್ಪಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿರುವುದರಿಂದ ಅದರ ವಾಸನೆ ಕಿಮೀಗೂ ದೂರದ ವರೆಗೆ ವ್ಯಾಪಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. … Continued

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 19 `ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ ಸರ್ಜರಿ ಮಾಡಿದ್ದು, 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಗೊಳಿಸಿ ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳು ಯಶವಂತ ವಿ.ಗುರುಕರ್ – ಕಲಬುರ್ಗಿ ಜಿಲ್ಲಾಧಿಕಾರಿ ಡಾ.ಶ್ಯಾಮಲಾ – ಕಾರ್ಯದರ್ಶಿ ಸಾರ್ವಜನಿಕ ಉದ್ಯಮ ವಿ.ವಿ.ಜ್ಯೋತ್ಸ್ನಾ – ಕೆ ಎಸ್ ಐಸಿ – ಎಂಡಿ ಕನಗವಲ್ಲಿ – ಆಯುಕ್ತರು, ಆಹಾರ ಮತ್ತು … Continued

ಕರ್ನಾಟಕದಲ್ಲಿ ಸೋಮವಾರ 46,426 ಮಂದಿಗೆ ಕೊರೊನಾ ಸೋಂಕು, ನಿನ್ನೆಗಿಂತ ತುಸು ಕಡಿಮೆ

ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ 46,426 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 41,703 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಹಾಗೂ 32 ಜನರು ಮೃತಪಟ್ಟಿದ್ದಾರೆ. ಪ್ರಸ್ತುತ 3,62,487 ಸಕ್ರಿಯ ಪ್ರಕರಣಗಳಿವೆ. ಪ್ರಸ್ತುತ ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 32.95 ಇದ್ದು, ಸೋಂಕಿತರ ಸಾವಿನ ಸರಾಸರಿ ಶೇ 0.06 ಇದೆ. ಬೆಂಗಳೂರು ನಗರದಲ್ಲಿ ಸೋಮವಾರ ಒಟ್ಟು 21,569 … Continued