ರಾಜ್ಯ ಜನತೆಗೆ ಮತ್ತೊಂದು ಶಾಕ್‌ ; ಇಂದಿನಿಂದ ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಡಬಲ್‌…!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು ಇಂದಿನಿಂದಲೇ (ಆಗಸ್ಟ್‌ 31) ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟಾಗಿದೆ. ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಶುಲ್ಕ ಶೇ.1 ರಿಂದ ಶೇ.2 ರಷ್ಟು ಏರಿಕೆ … Continued

ಬೆಳಗಾವಿ | ಕ್ಯಾಂಪ್‌ ಪೊಲೀಸರ ಭರ್ಜರಿ ಕಾರ್ಯಾಚರಣೆ ; 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಬೆಳಗಾವಿ : ಇಲ್ಲಿನ ಕ್ಯಾಂಪ್ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಮನೆ ಕಳ್ಳರನ್ನು ಬಂಧಿಸಿ 85 ಲಕ್ಷ ಮೌಲ್ಯದ ಬಂಗಾರ ಆಭರಣಗಳು ವಶಕ್ಕೆ ಪಡೆದಿದ್ದಾರೆ. ಶ್ರಮೇಶ ಸುರೇಶ ರೇಡೆಕರ ಎಂಬವರು ತಮ್ಮ ಮನೆಯಲ್ಲಿ ಒಟ್ಟು 981.1 ಗ್ರಾಂ ತೂಕದ ಬಂಗಾರದ ಆಭರಣಗಳು ಕಳ್ಳತನವಾದ ಬಗ್ಗೆ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ದೂರು ದಾಖಲಿಸಿದ … Continued

ನಿವೃತ್ತ ಪ್ರಾಂಶುಪಾಲ ಶ್ರೀಪತಿ ರಾವ್‌ ನಿಧನ

ಪುತ್ತೂರು : ನಗರದ ಕೊಂಬೆಟ್ಟು ನಿವಾಸಿ ನಿವೃತ್ತ ಪ್ರಾಂಶುಪಾಲರಾಗಿದ್ದ ಎಂ. ಶ್ರೀಪತಿ ರಾವ್ ಅವರು ಬುಧವಾರ (ಆಗಸ್ಟ್‌) ನಿಧನರಾಗಿದ್ದಾರೆ. ಇವರು ಪತ್ನಿ ಮೋಹಿನಿ ರಾವ್ ಮಕ್ಕಳಾದ ಸರಿತಾ, ಸುಪ್ರಿತಾ ಹಾಗೂ ಅಳಿಯಂದಿರಾದ ಸಂತೋಷ, ಶ್ರೀಧರ ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಸಂಖ್ಯೆಯ ಬಂಧು ವರ್ಗ ಹಾಗೂ ಶಿಷ್ಯ ಸಮೂಹವನ್ನು ಅಗಲಿದ್ದಾರೆ.ಕನ್ಯಾನ ಮೂಲದವರಾದ ಶ್ರೀಪತಿ ತಾವ್‌ ಅವರು … Continued

ಕಿತ್ತೂರು | ಬೆಳ್ಳಂಬೆಳಗ್ಗೆ ಆರೋಪಿಗೆ ಪೊಲೀಸರಿಂದ ಗುಂಡೇಟು

ಬೆಳಗಾವಿ : ಬೆಳಗಾವಿ : ಇಂದು, ಶನಿವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿದ್ದ ಆರೋಪಿಗೆ ಪೊಲೀಸರು ಗುಂಡಿಹಾರಿಸಿದ ವರದಿಯಾಗಿದೆ.. ಪೊಲೀಸರು ಆರೋಪಿ ರಮೇಶ ಕಿಲಾರಿ ಎಂಬಾತನನ್ನು ಹಿಡಿಯಲು ಪ್ರಯತ್ನಿಸಿದಾಗ, ಆತ ಸಿಪಿಸಿ ಷರೀಫ್ ದಫೇದಾರ್ ಅವರನ್ನು ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾನೆ. ಆತನಿಗೆ ಎಚ್ಚರಿಕೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರ ವರೆಗೂ ಭಾರೀ ಮಳೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದು ಸೆಪ್ಟೆಂಬರ್ 5ರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್‌ 30ರಂದು ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಆಗಸ್ಟ್‌ 30ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅತಿ ಭಾರಿ ಮಳೆ ಬೀಳುವ … Continued

ಭಾರಿ ಮಳೆ ; ಈ ಜಿಲ್ಲೆಗಳಲ್ಲಿ ಇಂದು (ಆಗಸ್ಟ್‌ 30) ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರ ವರೆಗೂ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶನಿವಾರ (ಆಗಸ್ಟ್ 30) ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ … Continued

ವೀಡಿಯೊ…| ಕಾಂಗ್ರೆಸ್‌ ಪಕ್ಷದ ಮತಗಳ್ಳತನ ಬಯಲು ಮಾಡಿದ ಸಿದ್ದರಾಮಯ್ಯ ; ಇದಕ್ಕೇನಂತೀರಿ ಎಂದು ಬಿಜೆಪಿ ವಾಗ್ದಾಳಿ

ಬೆಂಗಳೂರು :ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿದಾಗ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಚುನಾವಣೆಯಲ್ಲಿ ವಂಚನೆಯಿಂದಾಗಿ ಸೋತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿಕೊಂಡಿದ್ದಾರೆ. ಇದು ಬಿಹಾರದಲ್ಲಿ “ಮತ ಅಧಿಕಾರ ಯಾತ್ರೆ” ಆಯೋಜಿಸಿರುವ ಕಾಂಗ್ರೆಸ್‌ ಮೇಲೆ ವಾಗ್ದಾಳಿ ನಡೆಸಲು ಬಿಜೆಪಿಗೆ ಅವಕಾಶ ನೀಡಿದೆ. 1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ (Siddaramaiah) … Continued

ʼಹುಬ್ಬಳ್ಳಿ-ಜೋಧಪುರʼ ನೇರ ರೈಲು ಸಂಚಾರಕ್ಕೆ ಸಮ್ಮತಿ

ನವದೆಹಲಿ: ಕೇಂದ್ರ ಸರ್ಕಾರ ಗಣೇಶ ಹಬ್ಬದ ವೇಳೆ ʼಹುಬ್ಬಳ್ಳಿ-ಜೋಧಪುರʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದು ಹೇಳಿದೆ. ʼಹುಬ್ಬಳ್ಳಿ-ಜೋಧಪುರʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ … Continued

ಹೊನ್ನಾವರ | ಗೇರುಸೊಪ್ಪ ಅಣೆಕಟ್ಟಿನಿಂದ ಶರಾವತಿ ನದಿಗೆ ನೀರು ಬಿಡುಗಡೆ

ಕಾರವಾರ : ಕರ್ನಾಟಕದಾದ್ಯಂತ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಲಿಂಗನಮಕ್ಕಿ ಹಾಗೂ ಗೇರುಸೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಸಂಗ್ರಹ ಹೆಚ್ಚಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಡ್ಯಾಂನಿಂದ ಒಟ್ಟಾರೆ 75000 ಕ್ಯೂಸೆಕ್‌ … Continued

ಮಂಗಳೂರು | ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು, ಹಲವರಿಗೆ ಗಾಯ

ಮಂಗಳೂರು : ಕೆ ಸಿರೋಡ್‌ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ನಿಯಂತ್ರಣ ತಪ್ಪಿ ಬಸ್ ತಂಗುದಾಣ ಹಾಗೂ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬ ಐವರು … Continued