ಉಡುಪಿ : ಮಹೇಶ ಶೆಟ್ಟಿ ತಿಮರೋಡಿಗೆ ಜಾಮೀನು

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಿ.ಎಲ್.ಸಂತೋಷ ವಿರುದ್ಧ ತಿಮರೋಡಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಉಡುಪಿ ಗ್ರಾಮಾಂತರ ಘಟಕದ ಅಧ್ಯಕ್ಷ ರಾಜೀವ … Continued

ಧರ್ಮಸ್ಥಳ ಶವ ಹೂತ ಪ್ರಕರಣ : ದೂರುದಾರ(ಮಾಸ್ಕ್‌ಮ್ಯಾನ್‌)ನನ್ನು 10 ದಿನ ಎಸ್‌ಐಟಿ ಕಸ್ಟಡಿಗೆ ನೀಡಿದ ನ್ಯಾಯಾಲಯ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂಳಿರುವುದಾಗಿ ಹೇಳಿಕೆ ನೀಡಿದ್ದ ಹಾಗೂ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಕಾರಣನಾಗಿದ್ದ ಸಾಕ್ಷಿ ದೂರುದಾರನಾದ ಸಿ.ಎನ್‌. ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯವು 10 ದಿನ ವಿಶೇಷ ತನಿಖಾ ದಳ(ಎಸ್‌ಐಟಿ)ದ ವಶಕ್ಕೆ ನೀಡಿದೆ. ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾಗ ಅನೇಕ ಶವಗಳನ್ನು … Continued

ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣ : ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್ ಮ್ಯಾನ್ ಬಂಧನ

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಹೊಸ ತಿರುವು ಸಿಗುತ್ತಿದೆ. ಹಲವು ವರ್ಷಗಳ ಹಿಂದೆ ಅನೇಕ ಶವಗಳನ್ನು ಶವಗಳನ್ನು ತಾನು ಹೂತಿದ್ದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಶೋಧಕಾರ್ಯಕ್ಕೆ ಹೋಗುತ್ತಿದ್ದ ಮುಖವಾಡ ತೊಟ್ಟ ಅನಾಮಿಕನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುಳ್ಳು ಮಾಹಿತಿ ನೀಡಿದ್ದ … Continued

ಹೊನ್ನಾವರ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ : ಆಗಸ್ಟ್‌ 24 ರಂದು ಬಂಗಾರಮಕ್ಕಿಯಲ್ಲಿ ವಿಚಾರಗೋಷ್ಠಿ

ಹೊನ್ನಾವರ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಸಾಧಕ-ಬಾಧಕಗಳ ಕುರಿತು ಆಗಸ್ಟ್‌ 24 ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ವಿಚಾರಗೋಷ್ಠಿ ನಡೆಯಲಿದೆ ಎಂದು ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ಹೇಳಿದ್ದಾರೆ. ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವಸ್ಥಾನದ ಸಭಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಗಿರೀಶ ಮಟ್ಟಣ್ಣನವರ ಮೇಲೆ ಪ್ರಕರಣ ದಾಖಲು

ಮಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಅಡಿ ಗಿರೀಶ ಮಟ್ಟಣ್ಣನವರ ಸೇರಿದಂತೆ ಹಲವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗುರುವಾರ ಮಹೇಶ ಶೆಟ್ಟಿ ತಿಮರೋಡಿ ಬಂಧನ ಮಾಡಲು ಬ್ರಹ್ಮಾವರ ಪೊಲೀಸರು ತಿಮರೋಡಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಗಿರೀಶ ಮಟ್ಟಣ್ಣನವರ, ಜಯಂತ ಮತ್ತು ಇತರರು ಪೊಲೀಸರಿಗೆ ಅಡ್ಡಿ ಪಡಿಸಿದ್ದರು. … Continued

ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕರಿಂದ ಈ ಬಾರಿಯ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು (Mysuru Dasara) ಈ ಬಾರಿ ಬೂಕರ್ ಪ್ರಶಸ್ತಿ ಪುರಸ್ಕೃತ ಕನ್ನಡದ ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, … Continued

ಗಣೇಶ ಹಬ್ಬ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್

ಹುಬ್ಬಳ್ಳಿ: 2025 ನೇ ಸಾಲಿನ ಗಣೇಶ ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 265 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಓಡಿಸಲಾಗುತ್ತಿದೆ. ಆಗಸ್ಟ್‌ 22ರಂದು ಶುಕ್ರವಾರ, 23ರಂದು ಬೆನಕನ … Continued

ಧರ್ಮಸ್ಥಳ ಪ್ರಕರಣ : ಯೂ ಟ್ಯೂಬರ್ ಸಮೀರಗೆ ಕೋರ್ಟಿನಿಂದ ನಿರೀಕ್ಷಣಾ ಜಾಮೀನು

ಮಂಗಳೂರು : ಧರ್ಮಸ್ಥಳ ಪ್ರಕರಣದ ಬಗ್ಗೆ ಎಐ ವೀಡಿಯೊ ಮಾಡಿ ಜನರಲ್ಲಿ ಕೋಮು ವೈಷಮ್ಯ ಮೂಡಿಸಲು ಪ್ರಯತ್ನಿಸಿದ ಆರೋಪದ ಮೇರೆಗೆ ಧರ್ಮಸ್ಥಳ ಪೊಲೀಸರು ದಾಖಲಿಸಿದ್ದ ಸುಮಟೋ ಕೇಸ್ ಗೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಯೂಟ್ಯೂಬರ್‌ ಸಮೀರ್‌ ಎಂ.ಡಿ.ಗೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು … Continued

ಅಡಿಕೆ ಬೆಳೆಗಾರರ ಸಮಸ್ಯೆ ; ದೆಹಲಿಯಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿದ ಕರ್ನಾಟಕದ ಸಂಸದರ ನಿಯೋಗ

ನವದೆಹಲಿ: ಅಡಿಕೆಗೆ ಕೊಳೆ ರೋಗ  ಹರಡಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈ ಸಂಬಂಧ ಕರ್ನಾಟಕದ ಸಂಸದರು ಇಂದು (ಆಗಸ್ಟ್ 21) ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ (Shivraj Singh Chauhan) ಅವರನ್ನು ಭೇಟಿ ಮಾಡಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕರ್ನಾಟಕದ ಕೇಂದ್ರ ಸಚಿವರು, ಕರ್ನಾಟಕದ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ … Continued

ಮಹೇಶ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

ಬೆಳ್ತಂಗಡಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿ.ಎಲ್. ಸಂತೋಷ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದ್ದು, ಉಡುಪಿ … Continued