ವಿವಾದದ ಬಳಿಕ ತಮ್ಮ ಮತಾಂತರ ಹೇಳಿಕೆ ಬೇಷರತ್‌ ಹಿಂಪಡೆದ ಸಂಸದ ತೇಜಸ್ವಿ ಸೂರ್ಯ

ಉಡುಪಿ: ಹಿಂದೂ ಧರ್ಮದಿಂದ ಮತಾಂತರಗೊಂಡು ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಧರ್ಮದವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಬೇಕು ಅದನ್ನು ಮಠ ದೇವಸ್ಥಾನಗಳಲ್ಲಿ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಇದೀಗ ತಮ್ಮ ಹೇಳಿಕೆಯನ್ನು ವಾಪಸ್‌ ಪಡೆದಿದ್ದಾರೆ. ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರ್ಪಣಮ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ ಮುಸ್ಲಿಮರನ್ನ, ಕ್ರೈಸ್ತರನ್ನು … Continued

ಡ್ರಗ್ಸ್ ದಂಧೆಯಿಂದ ತನ್ನ ಮಗಳನ್ನು ರಕ್ಷಿಸುವಂತೆ ವಿಎಚ್‌ಪಿಗೆ ಪತ್ರ ಬರೆದ ಕ್ರೈಸ್ತ ಮಹಿಳೆ: ಆರೋಪಿ ಬಂಧನ

ಮಂಗಳೂರು: ಮಂಗಳೂರು: ಡ್ರಗ್ಸ್ ದಂಧೆಗೆ ಯುವತಿಯನ್ನು ದೂಡಿದ ಆರೋಪದ ಅಡಿ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರದ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬಾತನೇ ಬಂಧಿತ ಆರೋಪಿ. ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬವರು ತಮ್ಮ ಮಗಳಿಗೆ ಆಗುತ್ತಿರುವ ಸಮಸ್ಯೆ ಹಾಗೂ ತಮ್ಮ ಮಗಳಿಗೆ ಮಾದಕ ದ್ರವ್ಯ ನೀಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಶ್ವಹಿಂದೂಪರಿಷತ್ … Continued

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅಬ್ದುಲ್ ನಜೀರ್

ಮಂಗಳೂರು: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಇಂದು, ಸೋಮವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಹೈದರಾಬಾದ್‍ನಿಂದ ಮಂಗಳೂರಿಗೆ ಕುಟುಂಬ ಸಮೇತರಾಗಿ ವಿಮಾನದಲ್ಲಿ ಬಂದ ನ್ಯಾಯಮೂರ್ತಿಗಳು ಕಾರಿನಲ್ಲಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಆಶ್ಲೇಷ ಬಲಿ ಹಾಗೂ ವಿಶೇಷ ಪೂಜೆಯನ್ನು ಸಲ್ಲಿಸಿದರು. ಆಶ್ಲೇಷ ಪೂಜೆ … Continued

ಡಿಕೆ ಶಿವಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ; ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕೋಮುಭಾವನೆ ಕೆರಳಿಸುವಂತೆ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಪ್ರಶಾಂತ್ ಸಂಬರಗಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು … Continued

ಮಂಡಿ ನೋವಿಗೆ ನಾಟಿ ವೈದ್ಯರಿಂದ ಚಿಕಿತ್ಸೆ ಪಡೆದ ಸಿಎಂ ಬೊಮ್ಮಾಯಿ

ಬೆಳಗಾವಿ: ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರು ಮೂಲದ ಪ್ರಖ್ಯಾತ ನಾಟಿ ವೈದ್ಯರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳು ಮಂಡಿ ನೋವಿನ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಲಿದ್ದಾರೆ ಹಾಗೂ ಸಂಕ್ರಾಂತಿ ನಂತರ ರಾಜ್ಯದಲ್ಲಿ ಅವರ ಬದಲಿಗೆ ಮತ್ತೊಬ್ಬರು ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಊಹಾಪೋಹಗಳ ಮಧ್ಯೆಯೇ ಮುಖ್ಯಮಂತ್ರಿ ಬೊಮ್ಮಾಯಿ ನಾಟಿ ವೈದ್ಯರಿಂದ ಮೊಣಕಾಲಿಗೆ ಚಿಕಿತ್ಸೆ ಪಡೆಯುತ್ತಿರುವ … Continued

ಕರ್ನಾಟಕ ಬಿಜೆಪಿಯಲ್ಲಿಇನ್ನಷ್ಟು ಪದಾಧಿಕಾರಿಗಳ ನೇಮಕ, ಡಿಸಿಎಂ ಸ್ಥಾನ ಕಳೆದುಕೊಂಡಿದ್ದ ಲಕ್ಷ್ಮಣ ಸವದಿಗೆ ಮಹತ್ವದ ಹುದ್ದೆ

ಬೆಂಗಳೂರು: ಕರ್ನಾಟಕ ಬಿಜೆಪಿ ಮತ್ತಷ್ಟು ಪದಾಧಿಕಾರಿಗಳನ್ನ ನೇಮಕ ಮಾಡಿದೆ. ಪಕ್ಷದ ಉಪಾಧ್ಯಕ್ಷ ಜಿಲ್ಲಾಧ್ಯಕ್ಷ, ಜಿಲ್ಲಾ ಪ್ರಭಾರಿ, ಸಂಚಾಲಕರನ್ನ ನೇಮಿಸಿದೆ. ಉಪಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಲಕ್ಷ್ಮಣ ಸವದಿ ಹಾಗೂ ನಯನಾ ಗಣೇಶ ಅವರನ್ನು ನೇಮಕ ಮಾಡಲಾಗಿದೆ. ಅನಿವಾಸಿ ಭಾರತೀಯ ವಿಭಾಗದ ರಾಜ್ಯ … Continued

25 ಸಾವಿರಕ್ಕೂ ಹೆಚ್ಚು ಮಾತ್ರೆಗಳನ್ನ ಸೇವಿಸಿದ್ರೂ ಅನಾರೋಗ್ಯ ಕಡಿಮೆಯಾಗ್ಲಿಲ್ಲ; ಡೆತ್​​ನೋಟ್ ಬರೆದಿಟ್ಟು ಗುಂಡು ಹಾರಿಸಿಕೊಂಡು ಬಿಇಒ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಯಲಹಂಕ ಬಿಇಒ ಟಿ.ಎನ್. ಕಮಲಾಕರ ಎಂಬವರು ಪಿಸ್ತೂಲ್​​ನಿಂದ ಗುಂಡು ಹಾರಿಸಿಕೊಂಡು ಕಮಲಾಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯ ಪೀಡಿತರಾಗಿದ್ದ ಬಿಇಒ ಟಿ.ಎನ್​.ಕಮಲಾಕರ್ ಮನನೊಂದುಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅನಾರೋಗ್ಯದ ಸಮಸ್ಯೆ ಸಾಕಷ್ಟು ಬಳಲಿದ್ದೆ. ಇದುವರೆಗೆ 25 ಸಾವಿರಕ್ಕೂ ಹೆಚ್ಚು ಮಾತ್ರೆಗಳನ್ನ ಸೇವಿಸಿದ್ದೇನೆ. ಅನಾರೋಗ್ಯದಿಂದ ಜೀವನವೇ ಸಾಕು ಅನ್ನಿಸಿದೆ. ನನ್ನ ಕುಟುಂಬದವರು … Continued

ಹೊಸ ವರ್ಷಾಚರಣೆ ವೇಳೆ ಬಾರ್, ಪಬ್ ರೆಸ್ಟೋರೆಂಟ್ ಬಂದ್: ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ

ಉಡುಪಿ,: ಹೊಸ ವರ್ಷಾಚರಣೆ ವೇಳೆ ಬಾರ್, ಪಬ್ ರೆಸ್ಟೋರೆಂಟ್ ಅನ್ನು ನಿರ್ಬಂಧಿಸಿದ್ದು, ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾತ್ರಿ 10 ಗಂಟೆಗೆ ಬಂದ್ ಮಾಡಲು ಆದೇಶಿಸಲಾಗಿದೆ ಹಾಗೂ ಶೇ. 50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ಎಂದು ಸರ್ಕಾರ ಹೇಳಿದೆ. … Continued

ಭದ್ರಾವತಿ: ನಾಲ್ಕು ದಶಕದ ಬಳಿಕ ಹಿಂದೂ ಧರ್ಮಕ್ಕೆ ವಾಪಸ್ಸಾದ ಕುಟುಂಬ

ಶಿವಮೊಗ್ಗ: ಭದ್ರಾವತಿ ತಾಲೂಕು ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬವರು ತಮ್ಮ ಕುಟುಂಬದ ಸಮೇತ ಕ್ರೈಸ್ತ ಧರ್ಮದಿಂದ ಹಿಂದೂ‌ ಧರ್ಮಕ್ಕೆ ಮರಳಿ ಬಂದಿದ್ದಾರೆ. ಜಯಶೀಲನ್ ಅವರ ಕುಟುಂಬ ಮೂಲತಃ ಹಿಂದೂ ಧರ್ಮದವರೇ ಆಗಿದ್ದರಂತೆ. ಇವರ ತಂದೆ ಏಳುಮಲೈ 1980ರಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದರಂತೆ. ನಂತರ ಕುಟುಂಬದವರು ಯಾರೂ ಸಹ ಚರ್ಚ್​ಗೆ ಹೋಗದೆ, ಹಿಂದೂ … Continued

ಕರ್ನಾಟಕದಲ್ಲಿ ಜನವರಿ 3 ರಿಂದ 15ರಿಂದ18 ವರ್ಷದ ಮಕ್ಕಳಿಗೆ ಲಸಿಕೆ ನೀಡಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಮೊದಲನೇ ಹಂತದಲ್ಲಿ 15ರಿಂದ18 ವರ್ಷದ ಮಕ್ಕಳಿಗೆ ಲಸಿಕೆ ನೀಡಿಕೆ ಪ್ರಕ್ರಿಯೆ ಆರಂಭಿಸಲಿದ್ದು, ಜನವರಿ 3 ರಿಂದ ಮೊದಲ ಹಂತದಲ್ಲಿ ಮಕ್ಕಳಿಗೆ ಲಸಿಕೆ ನೀಡಲು ಚಾಲನೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್​ ತಿಳಿಸಿದ್ದಾರೆ. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 15-18 ವರ್ಷದ 45 ಲಕ್ಷ ಜನ ಮಕ್ಕಳಿದ್ದಾರೆ. ಅವರಿಗೆಲ್ಲ … Continued