ಮಾಧ್ಯಮ ಲೋಕದಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ಡಿಜಿಟಲ್ ಮೀಡಿಯಾ ಫೋರಂ

ಬೆಂಗಳೂರು: ಡಿಜಿಟಲ್‌ ಯುಗದಲ್ಲಿ ಮಾಧ್ಯಮ ಲೋಕದಲ್ಲಿ ಕ್ರಾಂತಿಕಾರಿ ಬದಲಾವಣೆಗಳು ನಡೆಯುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ನೂತನವಾಗಿ ಕರ್ನಾಟಕ ಡಿಜಿಟಲ್‌ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು, ಹಿರಿಯ ಪತ್ರಕರ್ತ ಸಮೀವುಲ್ಲಾ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ರಚಿಸಲಾಗಿದೆ. … Continued

ಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕಿ ನಾಪತ್ತೆ

ಬೆಂಗಳೂರು: ತನ್ನ ಹ್ಯಾಕಿಂಗ್ ಕೌಶಲ್ಯದಿಂದ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹ್ಯಾಕರ್ ಶ್ರೀಕಿ ಮತ್ತೊಮ್ಮೆ ಈಗ ಮತ್ತೊಮ್ಮೆ ನಾಪತ್ತೆಯಾಗಿದ್ದಾನೆ ಎಂದು ಪೊಲೀಸ್‌ ಮೂಲಗಳು ಉಲ್ಲೇಖಿಸಿ ಹಲವು ಹಲವು ವರದಿಗಳು ತಿಳಿಸಿವೆ. ತಿಂಗಳ ಹಿಂದೆ ಬಿಟ್‌ಕಾಯಿನ್‌ ಹ್ಯಾಕರ್ ಆರೋಪಿ ಜೀವನಭೀಮಾ ನಗರ ಪೊಲೀಸರಿಂದ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ಶ್ರೀಕಿ ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಪೊಲೀಸ್ ಠಾಣೆಗೆ … Continued

ಬೆಳಗಾವಿ-ಕಿತ್ತೂರು-ಧಾರವಾಡ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲು ಸಿಎಂ ಬೊಮ್ಮಾಯಿಗೆ ಸಂಸದೆ ಮಂಗಲಾ ಅಂಗಡಿ ಮನವಿ

ಬೆಳಗಾವಿ :ಕುಂಟುತ್ತ ಸಾಗಿರುವ ಕಿತ್ತೂರು- ಧಾರವಾಡ ರೈಲು ಮಾರ್ಗಕ್ಕೆ ಶೀಘ್ರ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಸಂಸದೆ ಮಂಗಲಾ ಅಂಗಡಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಮಾಡಿದ್ದಾರೆ. ಬೆಳಗಾವಿ-ಕಿತ್ತೂರು-ಧಾರವಾಡ ನೂತನ ರೈಲ್ವೆ ಮಾರ್ಗ ಈ ಭಾಗದ ಜನರ ದಶಕಗಳ ಕನಸು. ಈ ಮಾರ್ಗ ನಿರ್ಮಾಣದಿಂದ ಜನತೆಗೆ ಸಾಕಷ್ಟು ಅನುಕೂಲ ಆಗುತ್ತದೆ. ಶೈಕ್ಷಣಿಕ, ಆರ್ಥಿಕ, ಕೈಗಾರಿಕಾ ದೃಷ್ಟಿಯಿಂದಲೂ … Continued

ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭ: ಸ್ಪೀಕರ್ ಕಾಗೇರಿಯಿಂದ ಸಿದ್ಧತೆ ಪರಿಶೀಲನೆ

ಬೆಳಗಾವಿ : ಸೋಮವಾರದಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜಾಗಿದ್ದು, ಇಂದು, ಭಾನುವಾರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಿದ್ಧತೆ ಪರಿಶೀಲಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾಳೆಯಿಂದ ಆರಂಭವಾಗುವ ಚಳಿಗಾಲದ ಅಧಿವೇಶನಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ನಾಳೆ, ಸೋಮವಾರ ಬೆಳಗ್ಗೆ 10:30ಕ್ಕೆ ಕಾರ್ಯಕಲಾಪಗಳ ಸಮಿತಿಯ ಸಭೆ ನಡೆಯಲಿದೆ. … Continued

ಜನರಲ್‌ ಬಿಪಿನ್ ರಾವತ್ ಸಾವಿನ ಕುರಿತು ಆಕ್ಷೇಪಾರ್ಹ ಪೋಸ್ಟ್ : ವ್ಯಕ್ತಿ ಬಂಧನ

ಬೆಂಗಳೂರು: ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಸಾವಿನ ಕುರಿತು ಫೇಸ್‍ಬುಕ್‍ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಟಿ.ಕೆ.ವಂಸತಕುಮಾರ್ (೪೦) ಬಂಧಿತ ಆರೋಪಿಯಾಗಿದ್ದಾನೆ. ಈತ ಖಾಸಗಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಆರೋಪಿ ಜನರಲ್‌ ಬಿಪಿನ್ ರಾವತ್ ಸಾವಿನ ಬಗ್ಗೆ … Continued

ಕೊಡಗಿನಲ್ಲಿ 34 ವಿದ್ಯಾರ್ಥಿಗಳು ಸೇರಿ 49 ಜನರಿಗೆ ಕೊರೊನಾ ಸೋಂಕು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇಂದು ಒಂದೇ ದಿನ 34 ವಿದ್ಯಾರ್ಥಿಗಳು ಸೇರಿದಂತೆ 49 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ವರದಿಯಾಗಿದೆ. ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲ್ಲೂರು ಸಿದ್ಧಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 24 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು … Continued

ವಿವಾಹ ನೋಂದಣಿಯಂತೆ ಮತಾಂತರಕ್ಕೂ ನೋಂದಣಿ ಪದ್ಧತಿ ಜಾರಿಗೆ ಚಿಂತನೆ:ಸಚಿವ ಮಾಧುಸ್ವಾಮಿ

ತುಮಕೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಸೋಮವಾರದಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧೀವೇಶನದಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಮಂಡನೆ ಮಾಡಲು ಸಿದ್ಧತೆ ನಡೆಸಿದೆ. ಈ ಮಧ್ಯೆ ತುಮುಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಜ್ಯ ಕಾನೂನು ಸಚಿವ ಜೆ.ಮಾಧುಸ್ವಾಮಿ ವಿವಾಹ ನೋಂದಣಿ ಮಾಡುವಂತೆ … Continued

ಕರ್ನಾಟಕದಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ದೃಢ: ರಾಜ್ಯದಲ್ಲಿ ಮೂರಕ್ಕೇರಿದ ಸಂಖ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಮೂರು ಓಮಿಕ್ರಾನ್ ಪ್ರಕರಣಗಳು ಪತ್ತೆಯಾದಂತಾಗಿದೆ. ದಕ್ಷಿಣ ಆಫ್ರಿಕಾದಿಂದ ವಾಪಸಾಗಿರುವ 34 ವರ್ಷದ ವ್ಯಕ್ತಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಓಮಿಕ್ರಾನ್ ಸೋಂಕಿತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿ ಐವರು, ದ್ವಿತೀಯ … Continued

ಇಂದಿನಿಂದ ಡಿ.15ರ ವರೆಗೆ ಕರ್ನಾಟಕದಲ್ಲಿ ಹಗುರ ಮಳೆ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಡಿ. 15ರ ವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 15ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮಂಡ್ಯ, … Continued

ಕಾರ್ಮಿಕ ಇಲಾಖೆಯಿಂದ ಶ್ರಮಿಕ ವರ್ಗಕ್ಕೆ ಭರ್ಜರಿ ಗಿಫ್ಟ್: ರಾಜ್ಯಾದ್ಯಂತ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಯೋಜನೆ

ಬೆಂಗಳೂರು: ರಾಜ್ಯದ ಕಾರ್ಮಿಕ ಇಲಾಖೆ ಈಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಜಾರಿ ತರಲು ಹೊರಟಿದೆ. ಕಾರ್ಮಿಕ ಇಲಾಖೆ ಈಗ ಕಾರ್ಮಿಕರು ತಮ್ಮ ಕೆಲಸದ ಪ್ರದೇಶಗಳಿಗೆ ತೆರಳಲು ಅನುವಾಗುವಂತೆ ಉಚಿತ ಸಾರಿಗೆ ಸೇವೆ ಒದಗಿಸಲು ನಿರ್ಧರಿಸಿದೆ. ಬೆಂಗಳೂರು ಮಹಾನಗರದಲ್ಲಿ ಈಗಾಗಲೇ ಈ ಉಚಿತ ಸೇವೆ ಜಾರಿ ಮಾಡಿರುವ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿ ಈಗ ಈ ಯೋಜನೆ … Continued