ಧರ್ಮಸ್ಥಳದಲ್ಲಿ ಶವ ಶೋಧ ಕಾರ್ಯ ತಾತ್ಕಾಲಿಕ ಸ್ಥಗಿತ : ಗೃಹ ಸಚಿವ ಡಾ. ಪರಮೇಶ್ವರ

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಶವ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರಕಟಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ದೂರುದಾರನ ಮನವಿಯಂತೆ ಧರ್ಮಸ್ಥಳದ 13 ಸ್ಥಳಗಳಲ್ಲಿ ಗುಂಡಿ ತಗೆದು ಶೋಧ ನಡೆಸಲಾಗಿದೆ. ಅವುಗಳಲ್ಲಿ ಎರಡು ಕಡೆ ಮಾನವನ ಮೂಳೆಗಳು ಸಿಕ್ಕಿವೆ. ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ … Continued

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ ಮುನ್ಸೂಚನೆ : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ಕಾರವಾರ : ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಆಗಸ್ಟ್‌ 20 ಬೆಳಗ್ಗೆ ವರೆಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ಗಣನೀಯವಾಗಿ ಏರುತ್ತಿದೆ. ಜಲಾಶಯದಿಂದ ಆಗಸ್ಟ್‌ 19 … Continued

ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಜಿಲ್ಲೆ ಬಹುತೇಕ ತಾಲೂಕುಗಳ ಶಾಲೆಗಳಿಗೆ ನಾಳೆ (ಆ.19) ರಜೆ ಘೋಷಣೆ

ಕಾರವಾರ: ಹವಾಮಾನ ಇಲಾಖೆ (IMD) ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 11 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್‌ 19ರಂದು ರಜೆ ಘೋಷಿಸಲಾಗಿದೆ. ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ರೆಡ್ ಅಲರ್ಟ್ ಘೋಷಣೆಯ ಹಿನ್ನೆಲೆಯಲ್ಲಿ, ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, … Continued

ವೀಡಿಯೊ..| ಕಾರವಾರ : ಸಮುದ್ರದ ಅಲೆಗಳ ಅಬ್ಬರಕ್ಕೆ ತೀರಕ್ಕೆ ಬಂದುಬಿದ್ದ ಡಾಲ್ಫಿನ್ ಮೀನು : ರಕ್ಷಿಸಿ ಪುನಃ ನೀರಿಗೆ ಬಿಟ್ಟ ಜನ

ಕಾರವಾರ : ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯ ಪರಿಣಾಮದಿಂದ ಉಂಟಾದ ಅಲೆಗಳ ಅಬ್ಬರಕ್ಕೆ ಕಡಲತೀರಕ್ಕೆ ಬಂದು ಸಿಲುಕ್ಕಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್‌ ತಳಿಯ ಡಾಲ್ಫಿನ್ ಮೀನನ್ನು ಕಾರವಾರ ತಾಲೂಕಿನ ದೇವಬಾಗ ಕಡಲತೀರದಲ್ಲಿ ರಕ್ಷಣೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಫಿನ್‌ ಮೀನಿನ ಮರಿಯನ್ನು ರಕ್ಷಿಸಲಾಗಿದೆ. ಸಮುದ್ರಕ್ಕೆ ಹಿಂತಿರುಗಲು ಡಾಲ್ಫಿನ್ ಒದ್ದಾಡುತ್ತಿರುವುದು ಕಂಡು ಬಂದ ನಂತರ ಅಲ್ಲಿದ್ದ ಜಂಗಲ್ … Continued

ರೆಡ್ ಅಲರ್ಟ್ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಇಂದು ರಜೆ

ಮಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣ ಸೋಮವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಪ್ರೌಢ ಶಾಲೆಗಳಿಗೆ ಆಗಸ್ಟ್‌ 18ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ, ಬಂಗಾಳ … Continued

ಕರ್ನಾಟಕದಲ್ಲಿ ಮಳೆ ಹೆಚ್ಚಳ : ಇಂದು 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 4 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಜೋರಾಗಲಿದ್ದು, ಆಗಸ್ಟ್‌ 18ರಂದು ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ … Continued

ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಜಿಲ್ಲೆ 10 ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ಆ.18ರಂದು ರಜೆ ಘೋಷಣೆ

ಕಾರವಾರ: ಹವಾಮಾನ ಇಲಾಖೆ (IMD) ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್‌ 18ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯ ಕಾರವಾರ, ಅಂಕೋಲಾ ಕುಮಟಾ ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ, ದಾಂಡೇಲಿ ತಾಲೂಕುಗಳಲ್ಲಿ ವಿಪರೀತ ಮಳೆಯಾಗುವ ಮುನ್ಸೂಚನೆ … Continued

ಕಾಂಗ್ರೆಸ್‌ ಶಾಸಕ ಶಿವಗಂಗಾ ಬಸವರಾಜುಗೆ ಶೋಕಾಸ್ ನೋಟಿಸ್

ಬೆಂಗಳೂರು: ಪದೇ ಪದೇ ಮುಖ್ಯಮಂತ್ರಿ ಬದಲಾವಣೆಯ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ ಕಾರಣಕ್ಕೆ ಶಾಸಕ ಬಸವರಾಜು ಶಿವಗಂಗಾ (Basavaraj Shivaganga) ಅವರಿಗೆ ಕಾರಣ ಕೇಳಿ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ (KPCC) ನೀಡಿದೆ. ಇವರು ಚನ್ನಗಿರಿಯ ಕಾಂಗ್ರೆಸ್ ಶಾಸಕರಾಗಿದ್ದು, ಡಿಕೆ ಶಿವಕುಮಾರ ಅವರ ಆಪ್ತಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಅವರಿಗೆ … Continued

ಆರ್‌ ಎಸ್‌ ಎಸ್‌ ಭಾರತದ ತಾಲಿಬಾನ್ : ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕ ಬಿ.ಕೆ. ಹರಿಪ್ರಸಾದ ಹೇಳಿಕೆ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ ( (RSS)ವು ಭಾರತದ ತಾಲಿಬಾನ್‌ ಇದ್ದಂತೆ. ದೇಶದಲ್ಲಿ ಶಾಂತಿ ಕದಡುತ್ತಿದೆ ಎಂದು ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ ಆರೋಪಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಿಂದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವನ್ನು ಶ್ಲಾಘಿಸಿದ ಒಂದು ದಿನದ … Continued

ವಾಯುಭಾರ ಕುಸಿತ | ರಾಜ್ಯದ ಹಲವು ಜಿಲ್ಲೆಗಳಲ್ಲಿ ಆ.24ರ ವರೆಗೂ ವಿಪರೀತ ಮಳೆ ; ರೆಡ್-ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆ.17 ಮತ್ತು 18ರಂದು ಅತಿ ಭಾರಿ ಮಳೆಯಾಗಲಿದೆ ಎಂದು … Continued