ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಪ್ರಕಟ

ಬೆಂಗಳೂರು: ಅವಧಿ ಮುಗಿದ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸೋಮವಾರ ವೇಳಾಪಟ್ಟಿ ಪ್ರಕಟಿಸಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದೆ. ಡಿಸೆಂಬರ್ 30 ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಡಿಸೆಂಬರ್ 15 ಕೊನೆ ದಿನವಾಗಿದ್ದು, ಡಿ.18 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಚುನಾವಣೆ ಸಂಬಂಧ ಡಿ.8ರಂದು ಜಿಲ್ಲಾಧಿಕಾರಿಗಳು … Continued

ಕೋವಿಡ್‌ ಲಸಿಕೆ ಪಡೆದ ನಂತರ ಆಗುವ ದುಷ್ಪರಿಣಾಮಕ್ಕೆ ಜಿಲ್ಲಾಡಳಿತ ಹೊಣೆ ಎಂದು ಆಶ್ವಾಸನಾಪತ್ರ ಪಡೆದ ನಂತ್ರ ಲಸಿಕೆ ಹಾಕಿಸಿಕೊಂಡ ವ್ಯಕ್ತಿ..!

ಹುಬ್ಬಳ್ಳಿ: ಕೆಲವೆಡೆ ಹಲವರು ಲಸಿಕೆ‌ ಪಡೆಯಲು‌ ಹಿಂದೇಟು ಹಾಕುತ್ತಿದ್ದು, ಹೀಗಾಗಿ ಲಸಿಕೆ ನೀಡುವವರಿಗೆ ನೂರೆಂಟು ಸವಾಲು ಎದುರಾಗಿದೆ. ಹುಬ್ಬಳ್ಳಿಯಲ್ಲಿ ಇಂಥದ್ದೊಂದು ಘಟನೆ ನಡೆದ ಬಗ್ಗೆ ವರದಿಯಾಗಿದ್ದು, ವ್ಯಕ್ತಿಯೊಬ್ಬ ಸ್ವತಃ ಜಿಲ್ಲಾಧಿಕಾರಿಗಳೇ ಆಶ್ವಾಸನಾ ಪತ್ರ ನೀಡಿದರೆ‌ ಮಾತ್ರ ಲಸಿಕೆ ಹಾಕಿಸಿಕೊಳ್ಳುವುದಾ ಪಟ್ಟು‌ ಹಿಡಿದ ಘಟನೆ ನಡೆದಿದೆ. ನಂತರ ಜಿಲ್ಲಾಧಿಕಾರಿಗಳು ಆಶ್ವಾಸನಾ ಪತ್ರ ನೀಡಿದ ನಂತರ ಈ ವ್ಯಕ್ತಿ … Continued

ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡುವ ಚಿಂತನೆ ಇಲ್ಲ: ಶಿಕ್ಷಣ ಸಚಿವ ನಾಗೇಶ

ತುಮಕೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸದ್ಯಕ್ಕೆ ಶಾಲೆಗಳನ್ನು ಬಂದ್ ಮಾಡುವ ಚಿಂತನೆ ಇಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರುರಾಜ್ಯದಲ್ಲಿ ಒಂದು ವೇಳೆ ಕೋವಿಡ್ ಸೋಂಕು ಹೆಚ್ಚಾದರೆ ತಾಂತ್ರಿಕ ಸಲಹಾ ಸಮಿತಿ ನಿರ್ಧಾರದ … Continued

ಕರ್ನಾಟಕದಲ್ಲಿ ಲಾಕ್‌ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ: ಡಾ.ಸುಧಾಕರ

ಬೆಂಗಳೂರು: ದೇಶದೆಲ್ಲೆಡೆ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಉಂಟಾಗಿದ್ದು, ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ಎಂಬುದು ಸುಳ್ಳು ಸುದ್ಧಿ ಈ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಲಾಗುತ್ತದೆ. ಜನತೆ ಆತಂಕಕ್ಕೀಡಾಗುವ ಅವಶ್ಯಕತೆಯಿಲ್ಲ .ಲಾಕ್‌ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು … Continued

ಕೈವಾರದಲ್ಲಿ ನಡೆಯಿತು ಅಪರೂಪದ ಮದುವೆ.. ಗಮನ ಸೆಳೆದ ಕುಳ್ಳ-ಕುಳ್ಳಿಯ ವಿವಾಹ..!

ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಶ್ರೀ ಕ್ಷೇತ್ರದಲ್ಲಿ ಭಾನುವಾರ ನಡೆದ ಮದುವೆಯೊಂದು ಎಲ್ಲರ ಗಮನ ಸೆಳೆದಿದೆ. ದೇವಸ್ಥಾನಕ್ಕೆ ಬಂದವರು ನೂತನ ವಧು ವರರಿಗೆ ಆಶಿರ್ವಾದ ಮಾಡಿ ನೂರು ಕಾಲ ಚೆನ್ನಾಗಿರಲಿ ಎಂದು ನಗುತ್ತಲೇ ಹಾರೈಸಿದ್ದಾರೆ. ಈ ಮುದುವೆ ವಿಶೇಷವೇನೆಂದರೆ ಿದು ಕುಳ್ಳ-ಕುಳ್ಳಿಯ ಮದವೆ. ಟಿ ದಾಸರಹಳ್ಳಿ ಮೂಲದ ಹಾಗೂ ಎನ್‌ಜಿಒದಲ್ಲಿ ಕೆಲಸ ಮಾಡುತ್ತಿರುವ … Continued

ಬಸ್-ಫಾರ್ಚುನರ್ ಕಾರು ಢಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ವಿಜಯಪುರ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಫಾರ್ಚುನರ್ ಕಾರು ಮಧ್ಯೆ ಮುಖಾಮುಖಿ ಡಿಕ್ಕಿಯಲ್ಲಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಭಾನುವಾರ ರಾತ್ರಿ ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಜುಮನಾಳ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಮೃತರಲ್ಲಿ ಜಿಲ್ಲೆಯ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಅವರ … Continued

ಜಲಾಶಯದ ನೀರಿನಲ್ಲಿ ಆಟವಾಡುತ್ತಿದ್ದಾಗ ಕೊಚ್ಚಿಹೋದ ನಾಲ್ವರು…!

ತುಮಕೂರು: ಕುಣಿಗಲ್ ತಾಲೂಕಿನ ಗಡಿಭಾಗದಲ್ಲಿನ ಮಾರ್ಕೋನಹಳ್ಳಿ ಜಲಾಶಯದ ಕೋಡಿ ನೀರಿನಲ್ಲಿ ಆಟವಾಡಲು ಹೋದ ನಾಲ್ವರು ಕೊಚ್ಚಿ ಹೋದ ದುರಂತ ಘಟನೆ ಭಾನುವಾರ ನಡೆದಿದೆ. ಪರ್ವಿನ್‍ತಾಜ್ (23) ಮತ್ತು ಸಾದೀಯ(17) ರಾಜು(23) ಮತ್ತು ಅಪ್ಪು(20) ನೀರಿನಲ್ಲಿ ಕೊಚ್ಚಿಹೋಗಿರುವ ಮೃತದುರ್ದೈವಿಗಳು. ಜಲಾಶಯದ ಕೋಡಿ ನೀರಿನಲ್ಲಿ ಆಟವಾಡಲು ಹೋದ ನಾಲ್ವರು ಕೊಚ್ಚಿ ಹೋಗಿದ್ದಾರೆ. ಮಾಕೋರ್ನಹಳ್ಳಿ ಜಲಾಶಯವು ತುಂಬಿಕೊಂಡಿರುವ ಹಿನ್ನಲೆಯಲ್ಲಿ ಜಲಾಶಯಕ್ಕೆ … Continued

ಆಸ್ತಿ ಆಸೆಗೆ ಬಾಂಡ್ ಪೇಪರ್ ಮೇಲೆ ಮೃತ ಮಹಿಳೆ ಹೆಬ್ಬೆಟ್ಟು ಒತ್ತಿಸಿಕೊಂಡ ಸಂಬಂಧಿಗಳು..!

ಮೈಸೂರು: ಆಸ್ತಿಯ ಹುಚ್ಚು ಜನರಿಂದ ಏನೆಲ್ಲಾ ಮಾಡಿಸುತ್ತದೆ ಎಂಬುದಕ್ಕೆ ನಿದರ್ಶನವಾಗಬಲ್ಲ ಘಟನೆಯೊಂದು ನಗರದಲ್ಲಿ ನಡೆದಿದ್ದು, ಆಸ್ತಿ ಸಲುವಾಗಿ ಖಾಲಿ ಬಾಂಡ್ ಪೇಪರ್ ಮೇಲೆ ಮೃತದೇಹದ ಹೆಬ್ಬೆಟ್ಟು ಒತ್ತಿಸಿಕೊಂಡ ಅಮಾನವೀಯ ಘಟನೆ ನಗರದ ಶ್ರೀರಾಂಪುರದಲ್ಲಿ ಬೆಳಕಿಗೆ ಬಂದಿದೆ ಎಂದು ವರದಿಗಳು ತಿಳಿಸಿವೆ. ನಗರದ ಶ್ರೀರಾಂಪುರ ನಿವಾಸಿ ಜಯಮ್ಮ(63) ಕೆಲ ದಿನಗಳ ಹಿಂದೆ ವಯೋಸಹಜವಾಗಿ ಕಾಯಿಲೆಯಿಂದ ಮೃತಪಟ್ಟಿದ್ದರು. ಆಸ್ತಿ … Continued

ಕೋವಿಡ್‌ ಲಸಿಕೆ ನಿರಾಕರಿಸಿ ಮನೆ ಏರಿದ ವ್ಯಕ್ತಿ, ದೇವರು ಮೈಮೇಲೆ ಬಂದಂತೆ ವರ್ತಿಸಿದ ಮತ್ತೊಬ್ಬ

ಕೊಪ್ಪಳ:ರಾಜ್ಯದಲ್ಲಿ ಕೋವಿಡ್‌ ಲಸಿಕೆ ಪಡೆಯಲು ಜನ ನಿರಾಕರಿಸುತ್ತಿದ್ದಾರೆ. ಕೊಪ್ಪಳದಲ್ಲಿ ಅಧಿಕಾರಿಗಳು ವಿವಿಧ ರೀತಿಯ ಸವಾಲು ಎದುರಿಸುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೂದಗುಂಪಾದಲ್ಲಿ ಹುಚ್ಚಪ್ಪ ಛಲವಾದಿ ಎಂಬ ವ್ಯಕ್ತಿ ಲಸಿಕೆಗೆ ಹೆದರಿ ಮನೆಯ ಮೇಲೆ ಏರಿದ್ದಾರೆ…! ಮತ್ತೊಂದೆಡೆ ಕೊರೊನಾ ಲಸಿಕೆ ಹಾಕಲು ಹೋಗುತ್ತಿದ್ದಂತೆ ವ್ಯಕ್ತಿಯೊಬ್ಬ ದೇವರು ಬಂದಂತೆ ವಿಲಕ್ಷಣ ವರ್ತನೆ ತೋರಿದ್ದಾರೆ. ಇನ್ನೊಂದು ಕಡೆ ನಾನು … Continued

ಧಾರವಾಡ: ಬಿಜೆಪಿ ನಾಯಕ ರಾಜೇಂದ್ರ ಗೋಖಲೆ ನಿಧನ

ಧಾರವಾಡ: ಬಿಜೆಪಿ ಮುಖಂಡ, ರಾಮನಗರ ನಿವಾಸಿ ರಾಜೇಂದ್ರ ಗೋಖಲೆ (63) ಭಾನುವಾರ ಪುಣೆಯಲ್ಲಿ ನಿಧನರಾದರು. ಕಳೆದ ಮೂರು ತಿಂಗಳುಗಳಿಂದ ಅವರು ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಅವರನ್ನು ಪುಣೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಬಾಲ್ಯದಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ, ಬಿಜೆಪಿ … Continued