ಮಾ.೨೦ರಂದು ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌

ನವ ದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ಇದೀಗ ದಕ್ಷಿಣ ಭಾರತದ ಕಡೆ ವಿಸ್ತರಿಸಲು ರೈತರು ಮುಂದಾಗಿದ್ದಾರೆ. ಮಾರ್ಚ್ 20 ರಂದು ಮೊದಲ ಮಹಾ ಪಂಚಾಯತ್ ಶಿವಮೊಗ್ಗದಲ್ಲಿ ನಡೆಯಲಿದೆ. ಶಿವಮೊಗ್ಗದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‍ಗೆ 20 ಸಾವಿರ ರೈತರು ಸೇರುವ ನಿರೀಕ್ಷೆಯಿದೆ. ಮಹಾಪಂಚಾಯತ್‍ನಲ್ಲಿ ಭಾಗವಹಿಸುವಂತೆ ಕರ್ನಾಟಕದ … Continued

ಕಾನೂನುಗಳ ನಡುವೆ ಇರುವ ಅಸ್ಪಷ್ಟತೆ ನಿವಾರಣೆಯಾಗಬೇಕು: ಬೊಮ್ಮಾಯಿ

ಬೆಂಗಳೂರು: ನ್ಯಾಯಾಲಯಗಳಲ್ಲಿ ವಿವಿಧ ಇಲಾಖೆಗಳ ನಡುವೆ ಸಾವಿರಾರು ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಕಾರಣವಾಗಿರುವ ಪರಸ್ಪರ ದ್ವಂದ್ವಕಾರಿ  ಕಾನೂನುಗಳನ್ನು ಸರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶನಿವಾರ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ವಿವಾದ ಪರಿಹಾರ ನೀತಿ ಬಿಡುಗಡೆ ಸಮಾರಂಭದಲ್ಲಿ ಕಾಫಿ ಟೇಬಲ್ … Continued

ಮೂರು ದಿನದೊಳಗೆ ಸ್ಪೋಟಕ ಹಿಂತಿರುಗಿಸಿ; ಸಚಿವ ನಿರಾಣಿ ಸೂಚನೆ 

ಕೊಪ್ಪಳ: ಕಲ್ಲು ಕ್ವಾರಿ ಹಾಗೂ  ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಪೋಟಕ ವಸ್ತುಗಳನ್ನು ಮೂರು ದಿನದೊಳಗೆ ಸಂಬಂಧಪಟ್ಟ ಅಧಿಕಾರಿಗಳಿಗೆ  ಹಿಂದಿತಿರುಗಿಸಬೇಕೆಂದು ಎಂದು ರಾಜ್ಯ ಗಣಿ ಸಚಿವ ಮುರುಗೇಶ ನಿರಾಣಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಲ್ಲು ಶನಿವಾರ ಸಭೆ ನಡೆಸಿ ಮಾತನಾಡಿದ ಅವರು, ಯಾರ್ಯಾರು  ತಮ್ಮ ತಮ್ಮ ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ನಡೆಯುವ ಸ್ಥಳಗಳಲ್ಲಿ ಸ್ಫೋಟಕ್ಕಾಗಿ … Continued

ವಿಜಯಾನಂದ ಕಾಶಪ್ಪನವರಷ್ಟು ದೊಡ್ಡ ನಾಯಕ ನಾನಲ್ಲ:ನಿರಾಣಿ ವ್ಯಂಗ್ಯ

ಕೊಪ್ಪಳ: ಪಂಚಮಸಾಲಿ ಹೋರಾಟದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ.  ಮಾಜಿ ಶಾಸಕ ವಿಜಯ ಕಾಶಪ್ಪನವರಷ್ಟು ದೊಡ್ಡ  ನಾಯಕ ನಾನಲ್ಲ. ಅವರು ರಾಷ್ಟ್ರೀಯ ಅಧ್ಯಕ್ಷರು. ಅವರೇ ನಾಯಕತ್ವ ತೆಗೆದುಕೊಂಡು ಹೋರಾಟ ಮಾಡಲಿ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು. ಶನಿವಾರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು … Continued

ಕಾಂಗ್ರೆಸ್‌ನಲ್ಲಿ ಒಡಕಿದೆ ಎಂಬ ಸಂದೇಶ ರವಾನೆ: ಡಾ. ಯತೀಂದ್ರ

ಮೈಸೂರು: ಮೇಯರ್‌ ಆಯ್ಕೆ ಸಂದರ್ಭದಲ್ಲಿ ನಡೆದ ಬೆಳವಣಿಗೆಗಳಿಂದ ಕಾಂಗ್ರೆಸ್‌ನಲ್ಲಿ ಒಡಕಿದೆ ಎಂಬ ಸಂದೇಶ ರವಾನೆಯಾಗಿದೆ ಎಂದು ವರುಣಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಹೇಳಿದರು. ಮೇಯರ್‌ ಚುನಾವಣೆ ಸಂದರ್ಭದಲ್ಲಿ ನಡೆದ ಬೆಳವಣಿಗೆಗೆಳು ದುರದೃಷ್ಟಕರ. ಪಕ್ಷದ ನಾಯಕರೊಬ್ಬರಿಗೆ ಹಿನ್ನಡೆಯಾಗಬೇಕೆಂಬ ಏಕೈಕ ಉದ್ದೇಶದಿಂದ ನಮ್ಮ ಪಕ್ಷದ ಮುಖಂಡರೇ ಮಾಡಿದ ಕೆಲಸ … Continued

ಮೀಸಲಾತಿ ಹಕ್ಕೊತ್ತಾಯಕ್ಕೆ ಬೆಂಗಳೂರಿನಲ್ಲಿ ಒಕ್ಕಲಿಗರ ಸಭೆ

ಬೆಂಗಳೂರು: ಒಕ್ಕಲಿಗ ಮೀಸಲಾತಿ ಹೋರಾಟವನ್ನು ತೀವ್ರಗೊಳಿಸುವ ಕುರಿತು ಮಹತ್ವದ ಸಭೆ ನಗರದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆಯಿತು.ಒಕ್ಕಲಿಗ ಸಮುದಾಯದ ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಮುಖಂಡರು, ಸಮುದಾಯದ ಹಿರಿಯರು ಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಹಿಂದೆ ನಮಗೆ 14 ಪರ್ಸೆಂಟ್೧೪% ಮೀಸಲಾತಿ ನೀಡಲಾಗಿತ್ತು. ಆದರೆ ಅದನ್ನು ಈಗ ೪% ಇಳಿಸಲಾಗಿದೆ. ರಾಜ್ಯದಲ್ಲಿರುವ ಒಕ್ಕಲಿಗ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ … Continued

ಒಂದು ವಾರದಲ್ಲಿ ರಾಜ್ಯ ನಾಲ್ಕು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದ ಒಂದು ಲೋಕಸಭೆ ಮತ್ತು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಮುಂದಿನ ವಾರ ವೇಳಾ ಪಟ್ಟಿ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗದ ರಾಜ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಆಯಾ ರಾಜ್ಯಗಳಲ್ಲಿ ತೆರವಾಗಿರುವ ಲೋಕಸಭಾ … Continued

೩ ದಿನಗಳಿಂದ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಕಲಬುರ್ಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಚಾಮನೂರು ನರಿಬೋಳ ಗ್ರಾಮದ ಬಳಿಯ ನಿರ್ಮಾಣ ಹಂತದ ಬ್ರಿಡ್ಜ್‌ ಬಳಿ ಶನಿವಾರ ಕೊಳೆತ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಬಾಲಕನನ್ನು ನರಿಬೋಳ ಗ್ರಾಮದ ಮಹೇಶ (೧೪) ಎಂದು ಗುರುತಿಸಲಾಗಿದೆ. ಈತ ಕಳೆದ ೩ ದಿನಗಳಿಂದ ಗ್ರಾಮದಿಂದ ನಾಪತ್ತೆಯಾಗಿದ್ದ. ಈತನ ಮರ್ಮಾಂಗಕ್ಕೆ ಗಾಯ ಮಾಡಿ ಗೋಣಿಚೀಲದಲ್ಲಿ ಹಾಕಿ ಭೀಮಾ ನದಿಗೆ ಎಸೆಯಲಾಗಿದೆ. … Continued

ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜನರು ತಕ್ಕ ಪಾಠ ಕಲಿಸ್ತಾರೆ:ಶ್ರೀನಿವಾಸ ಪ್ರಸಾದ ಎಚ್ಚರಿಕೆ

ಮೈಸೂರು: ಚುನಾವಣೆಗೆ ಇನ್ನೂ ಸಮಯವಿದೆ ಎಂದುಕೊಂಡು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಕಣ್ಮುಚ್ಚಿ ಕುಳಿತುಕೊಂಡರೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಸಂಸದ ವಿ. ಶ್ರೀನಿವಾಸಪ್ರಸಾದ ಅವರು ಸಿಎಂ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸದೇ ಟೀಕೆ ಮಾಡಿದರು. ಅಧಿಕಾರದ ಅಮಲನ್ನು ತಲೆಗೇರಿಸಿಕೊಂಡರೆ ಜನರು ಪಾಠ ಕಲಿಸುವುದರಲ್ಲಿ ಸಂಶಯವಿಲ್ಲ. ಪಕ್ಷಕ್ಕೆ ದುಡಿಯುವವರು ಕೆಲವರಾದರೆ, ಸ್ವಾರ್ಥಕ್ಕಾಗಿ ಮಾಡಿಕೊಳ್ಳುವವರು … Continued

ಮೈಸೂರು: ಎಸಿಬಿ ಬಲೆಗೆ ಬಿದ್ದ ಪಿಡಿಒ-ಎಸ್‌ಡಿಎ

ಮೈಸೂರು: ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲೂಕಿನಲ್ಲಿ ಲಂಚ ಪಡೆಯುತ್ತಿದ್ದ ಪಂಚಾಯತ ಅಭಿವೃದ್ಧಿ ಅಧಿಕಾರಿ ಹಾಗೂ ದ್ವಿತಿಯ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಿವೇಶನವೊಂದರ ಖಾತೆ ಬದಲಾವಣೆಗೆ ೩೦,೦೦೦ರೂ. ಲಂಚ ಕೇಳಿದ್ದರು. ಈ ಕುರಿತು ಕೇಶರಾಮ್‌ ಎಂಬುವವರು ಎಸಿಬಿಗೆ ದೂರು ನೀಡಿದ್ದರು. ಶುಕ್ರವಾರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ … Continued