ವೀಡಿಯೊ..| ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಸಫಾರಿ ವೇಳೆ ಜೀಪು ಬೆನ್ನಟ್ಟಿ ಬಾಲಕನಿಗೆ ಪರಚಿದ ಚಿರತೆ….!

ಬೆಂಗಳೂರು : ಬನ್ನೇರುಘಟ್ಟದ ಜೈವಿಕ ಉದ್ಯಾನವನದ ಸಫಾರಿ ವೇಳೆ ಚಿರತೆಯೊಂದು ಬಾಲಕನ ಮೇಲೆ ದಾಳಿ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಶುಕ್ರವಾರ ಸಫಾರಿ ಮಾಡುತ್ತಿದ್ದಾಗ ಚಿರತೆಯೊಂದು ದಾಳಿ ಮಾಡಲು ಯತ್ನಿಸಿದ್ದು, 13 ವರ್ಷದ ಬಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ. ಬೊಮ್ಮಸಂದ್ರ ನಿವಾಸಿ 13 ವರ್ಷದ ಸುಹಾಸ ಎಂಬ ಬಾಲಕ ಮಧ್ಯಾಹ್ನ ತನ್ನ ತಂದೆ-ತಾಯಿ … Continued

ಶಾಸಕ ಸತೀಶ ಸೈಲ್ ಮನೆ ಮೇಲೆ ಇಡಿ ದಾಳಿ ವೇಳೆ ಕೋಟಿಗೂ ಹೆಚ್ಚು ನಗದು, ಕೆಜಿಗಟ್ಟಲೆ ಚಿನ್ನ ಜಪ್ತಿ

ಕಾರವಾರ: ಬೇಲೇಕೇರಿ ಬಂದರಿನಿಂದ ಕಬ್ಬಿಣದ ಅದಿರು ಕಳ್ಳ ಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದ್ದ ವೇಳೆ ಅಪಾರ ನಗದು, ಚಿನ್ನ ಮತ್ತು ಬ್ಯಾಂಕ್ ಠೇವಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ತಿಳಿಸಿದೆ. ಈ ಕುರಿತು … Continued

ಶಿರಸಿ | ಕೂಲಿ ಹಣ ಕೊಡಲಿಲ್ಲವೆಂದು ಸಲಾಕೆಯಿಂದ ಹೊಡೆದು ವ್ಯಕ್ತಿಯ ಕೊಲೆ

ಶಿರಸಿ : ಕೂಲಿ ಹಣ ನೀಡಿಲ್ಲ ಎಂದು ಸಲಾಕೆಯಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಮಾಟಗೇರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಮಾಟಗೇರಿಯ ರವೀಶ ಗಣಪತಿ ಚನ್ನಯ್ಯ (40) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಮಾಟಗೇರಿಯ ಮಂಜುನಾಥ ಬಸ್ಯಾ ಚನ್ನಯ್ಯ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದು, ಪೊಲೀಸರು ಈತನನ್ನು … Continued

ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಶಿವೈಕ್ಯ

ಕಲಬುರಗಿ: ನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಸಂತ, ಜ್ಞಾನ ದಾಸೋಹಿ ಹಾಗೂ ಕಲಬುರಗಿಯ (Kalaburagi) ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಶಿವೈಕ್ಯರಾಗಿದ್ದಾರೆ. ಶ್ರೀ ಡಾ. ಶರಣಬಸವಪ್ಪ ಅಪ್ಪ (Dr.Sharanabasappa Appa) ಗುರುವಾರ (ಆಗಸ್ಟ್‌ 14) ಶಿವೈಕ್ಯರಾದರು. ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಕಳೆದ ತಿಂಗಳು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯಾದ್ಯಂತ  ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಇರುವುದರಿಂದ ದೇಶದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆಗಸ್ಟ್​ 19ರ ವರೆಗೂ … Continued

ಕಾರವಾರ | ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ ; ಬೈಕಿಗೆ ಪಿಕ್‌ಅಪ್‌ ಡಿಕ್ಕಿ ; ಬೈಕ್‌ ಸವಾರ ಸಾವು

ಕಾರವಾರ: ಸರಣಿ ಅಪಘಾತದಿಂದ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ದಿವೇಕರ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸದಾಶಿವಗಡ ಮೂಲದ ಮೈಕಲ್ ಮಾರ್ಷಲ್ ನರೋನಾ (42) ಎಂಬವರು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಸದಾಶಿವಗಡದಿಂದ ಕಾರವಾರಕ್ಕೆ ಬರುತ್ತಿದ್ದ ವೇಳೆ, ದಿವೇಕರ ಕಾಲೇಜಿನ ಬಳಿ … Continued

ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನನನ್ನು ಮತ್ತೆ ಬಂಧಿಸಿದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Actor Darshan) ಮತ್ತು ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್‌ ಗುರುವಾರ (ಆಗಸ್ಟ್‌ 14) ರದ್ದುಗೊಳಿಸಿದೆ. ಹೈಕೋರ್ಟ್ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್ ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ … Continued

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್, ಪವಿತ್ರಾ ಗೌಡ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಹಾಗೂ ಇತರ ಐವರಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರಿದ್ದ ಪೀಠವು … Continued

ಬೆಳಗಾವಿ | ನಕಲಿ ದಾಖಲೆ ಸೃಷ್ಟಿಸಿ 16 ಕೋಟಿ ರೂ. ಜಿಎಸ್‌ಟಿ ವಂಚಿಸಿದ್ದ ಆರೋಪಿಯ ಬಂಧನ

ಬೆಳಗಾವಿ: ಕೋಟ್ಯಂತರ ರೂಪಾಯಿ ಜಿಎಸ್‌ಟಿ ವಂಚನೆ ಮಾಡಿದ್ದ ವ್ಯಕ್ತಿಯನ್ನು ಆರೋಪಿಯನ್ನು ಕೇಂದ್ರ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ವಿವಿಧ ಕಂಪನಿಗಳ ನಕಲಿ ಹೆಸರುಗಳನ್ನು ಸೃಷ್ಟಿಸಿ ಈತ ನಕಲಿ ಒಪ್ಪಂದ ಮತ್ತು ನಕಲಿ ಬಿಲ್ ಸೃಷ್ಟಿಸಿದ್ದ. ಇದಕ್ಕಾಗಿ ತನ್ನ ಕಚೇರಿಯ ನೌಕರರ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಗಳನ್ನು ಬಳಸಿಕೊಂಡಿರುವ ಮಾಹಿತಿ ಈಗ ಬಹಿರಂಗವಾಗಿದೆ. … Continued

ಸಿದ್ದಾಪುರ | ಆಗಸ್ಟ್‌ 15ರಂದು ಅನಂತೋತ್ಸವ-2025 ; ʼಕೊಳಗಿ ಅನಂತಣ್ಣʼ ಕೃತಿ ಲೋಕಾರ್ಪಣೆ, ಅನಂತ ಶ್ರೀ ಪ್ರಶಸ್ತಿ ಪ್ರದಾನ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಅನಂತ ಯಕ್ಷಕಲಾ ಪ್ರತಿಷ್ಠಾನದ ವತಿಯಿಂದ ಅನಂತೋತ್ಸವ-2025 ಪಟ್ಟಣದ ಟಿಎಂಎಸ್‌ ಸಭಾಂಗಣದಲ್ಲಿ ಆಗಸ್ಟ್‌ 15ರಂದು ಸಂಜೆ 4:30ರಿಂದ ನಡೆಯಲಿದೆ. ಈ ಸಂದರ್ಭದಲ್ಲಿ ಪತ್ರಕರ್ತ ಹಾಗೂ ಲೇಖಕ ಗಂಗಾಧರ ಕೊಳಗಿ ಬರೆದ ʼಕೊಳಗಿ ಅನಂತಣ್ಣʼ ಕೃತಿ ಲೋಕಾರ್ಪಣೆ, ಖ್ಯಾತ ಮದ್ದಲೆ ವಾದಕರಾದ ಶಂಕರ ಭಾಗವತ ಯಲ್ಲಾಪುರ ಅವರಿಗೆ ಅನಂತ ಶ್ರೀ ಪ್ರಶಸ್ತಿ … Continued