ಕರ್ನಾಟಕದಲ್ಲಿ ಪೆಟ್ರೋಲ್‌, ಡಿಸೇಲ್‌ ಬೆಲೆ ಇಳಿಕೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ತೈಲ ಬೆಲೆ ಏರಿಕೆಯಿಂದ ಜನ ಎಲ್ಲ ಸಾಮಗ್ರಿಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಈಗ ಕೊಂಚ ನಿಟ್ಟುಸಿರು ಬಿಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಬಂದಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಮತ್ತು ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಬಗ್ಗೆ ಅವರು ಸುಳಿವು ನೀಡಿದ್ದಾರೆ. ರಾಜ್ಯದ ಆರ್ಥಿಕತೆ ಸುಧಾರಣೆಯಾದರೆ ಉಪಚುನಾವಣೆ ಬಳಿಕ ಬೆಲೆ … Continued

ಮಹಾತ್ಮರ ಬಿಡದ ಟೀಕಾಕಾರರು, ನನ್ನಂಥ ಹುಲು ಮಾನವರನ್ನು ಬಿಡುತ್ತಾರೆಯೇ:ಎಚ್‌ಡಿಕೆಗೆ ಮಾರ್ಮಿಕವಾಗಿ ತಿವಿದ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರನ್ನು ಬಿಡದ ಟೀಕಾಕಾರರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮತ್ತೊಬ್ಬ ಮಾಝಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಈ ಕುಎಇರು ಟ್ವೀಟ್‌ ಮಾಡಿರುವ ಅವರು, ಮಾಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದುಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ … Continued

ಬಸ್-ಮ್ಯಾಕ್ಸಿ ಕ್ಯಾಬ್‌ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು, ಇಬ್ಬರ ಸ್ಥಿತಿ ಗಂಭೀರ

ತುಮಕೂರು: ತುಮಕೂರು-ಶಿವಮೊಗ್ಗ ಹೆದ್ದಾರಿಯಲ್ಲಿ ಬಸ್-ಮ್ಯಾಕ್ಸಿ ಕ್ಯಾಬ್‌ ಮಧ್ಯೆ ಮಧ್ಯೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಗೊಲ್ಲಹಳ್ಳಿಯ ಬಳಿ ಇಂದು ಬೆಳಗಿನ ಜಾವ 5.30ರ ಸಮಯದಲ್ಲಿ ಸಂಭವಿಸಿದೆ. ಮೃತರನ್ನು ಕವಿತಾ(38), ದರ್ಶನ್(22), ದಿವಾಕರ್(25), ಕೃಷ್ಣಮೂರ್ತಿ(25)ಎಂದು ಗುರುತಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಮೃತರು ಮ್ಯಾಕ್ಸಿ ಕ್ಯಾಬ್​ನಲ್ಲಿ ತುಮಕೂರಿನ ಮಾರುಕಟ್ಟೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಹೋಗುತ್ತಿದ್ದಾಗ ಅಪಘಾತ … Continued

ಬೆಂಗಳೂರು ವಿವಿಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ನಾಲ್ಕು ವರ್ಷಗಳ ಬಿಎ, ಬಿಎಸ್ಸಿ ಪದವಿ ಕೋರ್ಸ್ ಆರಂಭ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಾಲ್ಕು ವರ್ಷಗಳ ಬಿಎ ಹಾಗೂ ಬಿಎಸ್ಸಿ ಆನರ್ಸ್ ಪದವಿ ಕೋರ್ಸ್ ಗಳನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲಾಗುವುದು ಎಂದು ಬೆಂಗಳೂರು ವಿವಿ ಕುಲಪತಿ ವೇಣುಗೋಪಾಲ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮದಡಿ ಭಾರತದಲ್ಲೇ ಮೊದಲ ಬಾರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಾಲ್ಕು ವರ್ಷಗಳ … Continued

ಪಶ್ಚಿಮ ಶಿಕ್ಷಕರ ಕ್ಷೇತ್ರ ಮತದಾರರ ನೋಂದಣಿಗೆ ನವೆಂಬರ್ 6ರ ವರೆಗೆ ಅವಕಾಶ

ಹುಬ್ಬಳ್ಳಿ: ರಾಜ್ಯದ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹರಿರುವ ಪ್ರತಿಯೊಬ್ಬರು ಸಹ ನವೆಂಬರ್ 6ರ ಒಳಗಾಗಿ ಹೆಸರು ನೋಂದಾಯಿಸಬಹುದಾಗಿದೆ. ನಮೂನೆ 19 ರಲ್ಲಿ ಅರ್ಜಿಯನ್ನು 2021 ನವೆಂಬರ್ 6 ರೊಳಗಾಗಿ ಮತದಾರರ ನೋಂದಣಾಧಿಕಾರಿಗಳು , ಸಹಾಯಕ ಮತದಾರರ ನೋಂದಣಾಧಿಕಾರಿಗಳ / ನಿಯೋಜಿತ ಅಧಿಕಾರಿಗಳ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ವಿವರಗಳಿಗಾಗಿ … Continued

ಕರ್ನಾಟಕದಲ್ಲಿ ಶನಿವಾರ 264 ಜನರಿಗೆ ಹೊಸದಾಗಿ ಕೊರೊನಾ ದೃಢ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಶನಿವಾರ) 264 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ ಸೋಂಕಿನಿಂದ 6 ಸಾವು ಸಂಭವಿಸಿದೆ. 421 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಒಟ್ಟು 29,35,659 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ . ಅದರಂತೆ, … Continued

ವಿದ್ಯಾರ್ಥಿಗಳಿಗೆ ಭಾನುವಾರವೂ ತರಗತಿ, 1-5ನೇ ತರಗತಿ ಆರಂಭ:ಎರಡು ದಿನಗಳಲ್ಲಿ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿ ಆರಂಭಿಸುವ ಕುರಿತು ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೊರೊನಾ ಕಾರಣದಿಂದಾಗಿ ಶಾಲೆ ತಡವಾಗಿ ಆರಂಭವಾಗುತ್ತಿರುವುದರಿಂದ ಶೈಕ್ಷಣಿಕ ಪಠ್ಯಕ್ರಮ ಪೂರ್ತಿಗೊಳಿಸಲು ಶನಿವಾರ, ಭಾನುವಾರವೂ ತರಗತಿ ನಡೆಸಲು ಚಿಂತನೆ ನಡೆದಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ … Continued

ತಮಿಳುನಾಡಿನಲ್ಲಿ ನಾಲ್ವರನ್ನು ಕೊಂದಿದ್ದ ಹುಲಿ ಸೆರೆ; ಮೈಸೂರಿಗೆ ಸ್ಥಳಾಂತರ

ಮೈಸೂರು: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮದುಮಲೈ ವನ್ಯಧಾಮದಲ್ಲಿ ನಾಲ್ಕು ಜನರನ್ನು ಕೊಂದು ಹಾಕಿದ್ದ 13 ವರ್ಷದ ಗಂಡು ಹುಲಿ ಶುಕ್ರವಾರ ಬೆಳಿಗ್ಗೆ ಸೆರೆಯಾಗಿದ್ದು, ಈಗ ಅದನ್ನು ಮೈಸೂರಿನ ಮೃಗಾಲಯದ ಪುನರ್ವಸತಿ ಕೇಂದ್ರಕ್ಕೆ ತರಲಾಗಿದೆ. 21ನೇ ದಿನ ನಡೆದ ದೀರ್ಘ ಕಾರ್ಯಾಚರಣೆಯಲ್ಲಿ ಹುಲಿಯನ್ನು ಮೊಯಾರ್ ರಸ್ತೆಯ ಬಳಿ ಸೆರೆ ಹಿಡಿಯಲಾಯಿತು. ಶುಕ್ರವಾರ ಮಧ್ಯರಾತ್ರಿ ಹುಲಿಯನ್ನು ಮೈಸೂರಿನ ಕೂರ್ಗಳ್ಳಿ … Continued

ಗಡಿಕೇಶ್ವಾರದ ಗ್ರಾಮದಲ್ಲಿ ಮತ್ತೆ ಕಂಪಿಸಿದ ಭೂಮಿ..!

ಕಲಬುರಗಿ: ಕಳೆದ ಕೆಲ ವಾರಗಳಿಂದ ಭೂಕಂಪನದಿಂದಾಗಿಯೇ ಸುದ್ದಿಯಾಗುತ್ತಿರುವ ಗಡಿಕೇಶ್ವಾರದಲ್ಲಿ ಇಂದು (ಶನಿವಾರ( ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಗ್ರಾಮಸ್ಥರ ಪ್ರಕಾರ, ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವಾರದಲ್ಲಿ‌ ಇಂದು (ಶನಿವಾರ) ಬೆಳಿಗ್ಗೆ 11.20ರ ಸುಮಾರಿನಲ್ಲಿ ಭೂಮಿಯಿಂದ ಜೋರು ಸದ್ದು ಕೇಳಿಬಂದಿದ್ದು, ಭೂಮಿ ಕಂಪಿಸಿದ ಅನುಭವವಾಗಿದೆ. ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ಓಡಿದ್ದಾರೆ. ಕಲಬುರಗಿಯಿಂದ … Continued

ಹಾನಗಲ್‌, ಸಿಂಧಗಿ ಉಪಚುನಾವಣೆ: ಪ್ರಚಾರಕ್ಕೆ ಘಟಾನುಘಟಿ ನಾಯಕರ ಎಂಟ್ರಿ…ರಂಗೇರುತ್ತಿದೆ ಕಣ

ಬೆಂಗಳೂರು: ಪ್ರತಿಷ್ಠೆಯ ಕಣವಾಗಿರುವ ಸಿಂಧಗಿ ಹಾಗೂ ಹಾನಗಲ್ ಉಪಚುನಾವಣೆ ಕಾವೇರುತ್ತಿದ್ದು, ಪ್ರಚಾರದ ಕಣಕ್ಕೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಘಟಾನುಘಟಿ ನಾಯಕರು ಧುಮುಕಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಉಪಚುನಾವಣೆ ಪ್ರತಿಷ್ಠೆಯಾಗಿದ್ದರೆ ಕಾಂಗ್ರೆಸ್ಸಿಗೆ ಇದು ಮುಂದಿನ ಚುನಾವಣೆಗೆ ಸವಾಲಾಗಿದೆ. ಹಾಗೂ ಜೆಡಿಎಸ್‍ಗೆ ಉತ್ತರ ಕರ್ನಾಟಕದಲ್ಲಿ ಅಸ್ತಿತ್ವದ ಪ್ರಶ್ನೆಯಾಗಿದೆ. ಹೀಗಾಗಿಯೇ ಮೂರೂ ಪಕ್ಷಗಳು ಘಟನಾನುಘಟಿ ನಾಯಕರು ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. … Continued