ಆರ್ ಆ್ಯಂಡ್ ಡಿ ಹೊಸನೀತಿ ರೂಪಿಸಲು ಕಾರ್ಯಪಡೆ ರಚನೆ, ಅಧ್ಯಕ್ಷರನ್ನಾಗಿ ಡಾ.ಅಶೋಕ ಶೆಟ್ಟರ್ ನೇಮಕಕ್ಕೆ ಚಿಂತನೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೃಷಿ, ತೈಲ, ಕೈಗಾರಿಕೆ ಮತ್ತಿತರ ಎಲ್ಲ ರಂಗಗಳಲ್ಲಿ ಇಂದು ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಆ್ಯಂಡ್ ಡಿ) ಅಗತ್ಯವಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದ 180 ಆರ್ ಆ್ಯಂಡ್ ಡಿ ಕೇಂದ್ರಗಳಿದ್ದು, ಅವುಗಳಿಗೆ ಹೆಚ್ಚು ಮಹತ್ವ ನೀಡಲಾಗುವುದು. ಈ ಕ್ಷೇತ್ರಗಳಲ್ಲಿ ಆರ್ ಆ್ಯಂಡ್ ಡಿ ಬಳಕೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಉದ್ದೇಶಿಸಿದ್ದು, … Continued

ಕರ್ನಾಟಕದಲ್ಲಿ ಭಾನುವಾರ ಕೊರೊನಾ ಸೋಂಕು, ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆ

ರಾಜ್ಯದಲ್ಲಿ ಭಾನುವಾರ ಹೊಸದಾಗಿ 775 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 9 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ 860 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,213ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 29,73,395 ಕ್ಕೆ ಏರಿಕೆಯಾಗಿದೆ ಹಾಗೂ ಚೇತರಿಸಿಕೊಂಡವರ ಸಂಖ್ಯೆ 29,22,427 ಕ್ಕೆ ಹೆಚ್ಚಳವಾಗಿದೆ. … Continued

ಭಾರತ್‌ ಬಂದ್‌: ಕರ್ನಾಟಕ ವಿವಿ ಪರೀಕ್ಷೆಗಳು ಮುಂದೂಡಿಕೆ

ಧಾರವಾಡ: ರೈತ ಸಂಘಟನೆಗಳು ಸೋಮವಾರ ಭಾರತ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ಸೋಮವಾರ (27-09-2021) ನಡೆಸಬೇಕಿದ್ದ ಸ್ನಾತಕ ಮತ್ತು ಸ್ನಾತಕೋತ್ತರ, ವಿವಿಧ ಸೆಮಿಸ್ಟರ್ ವಿಷಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ನಂತರ ಪ್ರಕಟಿಸಲಾಗುವದು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎಚ್ ನಾಗರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೊಂಟಕ್ಕೆ ವೇಲು ಸುತ್ತಿಕೊಂಡು ಬೆಟ್ಟದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

ರಾಮನಗರ: ಇಲ್ಲೊಬ್ಬ ಕಾರ್ ಡ್ರೈವರ್​ ಸೊಂಟಕ್​ ವೇಲು ಸುತ್ತಿಕೊಂಡು, ತನ್ನ ಪ್ರೀತಿಯ ಹುಡುಗಿಯೊಂದಿಗೆ ಬೆಟ್ಟದ್​ ಮೇಲಿಂದ ಹಾರಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳನ್ನು ತಮಿಳುನಾಡು ಮೂಲದ ಸತೀಶ್​ (21) ಹಾಗೂ ಕನಕಪುರದ ಚಂದನಾ (21) ಎಂದು ಗುರುತಿಸಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಬ್ಬಾಳು ಬೆಟ್ಟದಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದ್ದು, ಮೂರು … Continued

ಇಂದು ರೈತ ಸಂಘಟನೆಗಳಿಂದ ಭಾರತ್‌ ಬಂದ್‌: ಕರ್ನಾಟಕದಲ್ಲಿ ಏನಿರುತ್ತೆ ? ಏನಿರಲ್ಲ ?

ಬೆಂಗಳೂರು : ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘ ಕರೆ ನೀಡಿರುವ ಇಂದಿನ ಭಾರತ್‌ ಬಂದ್‌ ಗೆ ಕರ್ನಾಟಕದಲ್ಲಿ ಹಲವು ಸಂಘಟನೆಗಳು ಬೆಂಬಲ ನೀಡಿದರೆ ಇನ್ನೂ ಹಲವು ಸಂಘಟನೆಗಳು ಕೇವಲ ನೈತಿಕ ಬೆಂಬಲವನ್ನಷ್ಟೇ ನೀಡಿವೆ. ಸಂಯುಕ್ತ ಕಿಸಾನ್ ಮೋರ್ಚಾದ (ಎಸ್‌ಕೆಎಂ) ಸೋಮವಾರ ಭಾರತ್ ಬಂದ್‌ಗೆ ಹಲವಾರು ಸಂಘಟನೆಗಳು ತಮ್ಮ ಬೆಂಬಲವನ್ನು ನೀಡುತ್ತಿದ್ದು, ಮೂರು ‘ವಿವಾದಾತ್ಮಕ’ … Continued

ಕೆಎಲ್‌ಇ ಸಂಸ್ಥೆ ಬಿವಿಬಿ ಇಂಜಿನಿಯರಿಂಗ್‌ ಕಾಲೇಜಿಗೆ ವಜ್ರ ಮಹೋತ್ಸವದ ಸಂಭ್ರಮ, ಕೆಎಲ್ಇ ಟೆಕ್ ಪಾರ್ಕ್‌ ಉದ್ಘಾಟನೆ: ಸಂಸ್ಥೆ ನಡೆದುಬಂದ ದಾರಿಯ ಕಿರುನೋಟ

(ಇಂದು (೨೭-೦೯-೨೦೨೧) ಮುಂಜಾನೆ ೯.೦೦ ಗಂಟೆಗೆ ಬಿ.ವಿ.ಬಿ ವಜ್ರ ಮಹೋತ್ಸವದ ಆರಂಭ ಮತ್ತು ಕೆ.ಎಲ್.ಇ. ಟೆಕ್ ಪಾರ್ಕ್‌ ಉದ್ಘಾಟನೆ ಆಗಲಿದ್ದು, ಬಿ.ವಿ.ಭೂಮರೆಡ್ಡಿ ಕಾಲೇಜ್‌ ಆಫ್ ಇಂಜಿನಿಯರಿಂಗ್ ಕಾಲೇಜು ನಡೆದು ಬಂದ ದಾರಿ ಕುರಿತು ನಿವೃತ್ತ ಗ್ರಂಥಪಾಲಕರಾದ ಬಿ.ಎಸ್.‌ ಮಾಳವಾಡ ಲೇಖನ ಬರೆದಿದ್ದಾರೆ) ಶಿಕ್ಷಣವು ಸಾಮಾಜಿಕ ಪ್ರಗತಿ, ಆರ್ಥಿಕ ಅಭಿವೃದ್ಧಿಗೆ ಮೂಲ ಎಂದು ಅರಿತ ಏಳು ಜನ … Continued

ಅಂಕೋಲಾ: ಸಮುದ್ರದಲ್ಲಿ ಮೀನು ಹಿಡಿಯುತ್ತಿದ್ದ ನೌಕಾನೆಲೆ ಉದ್ಯೋಗಿ ಮುಳುಗಿ ಸಾವು

ಅಂಕೋಲಾ : ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರದಲ್ಲಿ ಮುಳುಗಿ ನೌಕಾನೆಲೆ ಉದ್ಯೋಗಿಯೋರ್ವ ಮೃತ ಪಟ್ಟ ಘಟನೆ ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೇಲೇಕೇರಿಯಲ್ಲಿ ನಡೆದಿದೆ. ನೌಕಾನೆಲೆ ಉದ್ಯೋಗಿಯಾಗಿರುವ ತಾಲೂಕಿನ ಬಾವಿಕೇರಿ ಗ್ರಾಮದ ನಿವಾಸಿ ಪುರಂದರ ಶಿವಾನಂದ ನಾಯ್ಕ ಎಂಬಾತನೇ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಭಾನುವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತರೊಂದಿಗೆ … Continued

ಪಾರ್ಟಿ ಗುಂಗಿಲ್ಲಿ ವಿದ್ಯಾರ್ಥಿಗಳ ಹುಚ್ಚಾಟ: ಕ್ರಿಕೆಟ್‌ ಬ್ಯಾಟಿನಿಂದ 14 ಕಾರುಗಳ ಗಾಜು ಪುಡಿ

ಬೆಂಗಳೂರು: ಸ್ನೇಹಿತನ ಜನ್ಮದಿನದ ಪಾರ್ಟಿಯಲ್ಲಿ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳು ಕ್ರಿಕೆಟ್ ಬ್ಯಾಟ್ ನಿಂದ ಸುಮಾರು 13 ಕಾರುಗಳ ಗಾಜು ಪುಡಿಮಾಡಿ ಪುಂಡಾಟ ಪ್ರದರ್ಶಿಸಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಂದಿರಾನಗರದಲ್ಲಿ ಮಧ್ಯಾರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಎರಡು ಬೈಕ್ ಗಳಲ್ಲಿ ಬಂದಿದ್ದ ಐವರು ಯುವಕರು ರಸ್ತೆ ಅಕ್ಕಪಕ್ಕ … Continued

ಚಾಮರಾಜನಗರ: ಜಾನುವಾರುಗಳ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಚಾಮರಾಜನಗರ: ತಾಲೂಕಿನ ವೀರನಪುರ ಬಳಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ಜನರಿಗೆ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. ಹೀಗಾಗಿ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ ದಿನಗಳಿಂದ ಚಿರತೆಯು ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಚಿರತೆ ಹಾವಳಿ ತಡೆಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಕಳೆದ … Continued

ಬಂಗಾಳಕೊಲ್ಲಿಯಲ್ಲಿ ಗುಲಾಬ್‌ ಚಂಡಮಾರುತದ ಪರಿಣಾಮ : ಕರ್ನಾಟಕದಲ್ಲಿಯೂ ಇಂದಿನಿಂದ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಅದು ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಹಾಗೂ ಒರಿಸ್ಸಾದಲ್ಲಿ ಗುಲಾಬ್‌ ಚಂಡಮಾರುತದ ಭೀತಿ ಎದುರಾಗಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ … Continued