ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಭಾರತದ ಸೇತುವೆ ಮನುಷ್ಯ ಗಿರೀಶ್ ಭಾರದ್ವಾಜ್ ಆಯ್ಕೆ

ಉಡುಪಿ ಜಿಲ್ಲೆಯ ಕೋಟಾದ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ, ಈ ವರ್ಷದ ಡಾ.ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿಗಾಗಿ ಭಾರತದ ಸೇತುವೆ ಪುರುಷ ಗಿರೀಶ್ ಭಾರದ್ವಾಜ್  ಸುಳ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಗ್ರಾಮೀಣ ಸಂಪರ್ಕಕ್ಕಾಗಿ ಭಾರತದಾದ್ಯಂತ 140 ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸಿದ ಕೀರ್ತಿ ಶ್ರೀ ಭಾರದ್ವಾಜ್ ಅವರಿಗೆ ಸಲ್ಲುತ್ತದೆ. ಅಕ್ಟೋಬರ್ 10 ರಂದು ಕೋಟ … Continued

ತದಡಿ-ಕಬ್ಬಿಣದ ರಾಡಿನಿಂದ ಹೊಡೆದು ವ್ಯಕ್ತಿಯ ಕೊಲೆ:ಬೇರೆಯವರ ಮನೆ ಮೇಲೆ ಮಲಗಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಕೃತ್ಯ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಸಮೀಪ ತದಡಿ ಬಂದರಿನ ಸಮೀಪ ವ್ಯಕ್ತಿಯೊಬ್ಬನ್ನು ರಾಡಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಶುಕ್ರವಾರ ಬೆಳ್ಳಂಬೆಳಿಗ್ಗೆ ಮನೆಯೊಂದರ ಟೆರೇಸ್ ಮೇಲೆ ವ್ಯಕ್ತಿಯೊಬ್ಬನಿಗೆ ಬಲವಾದ ಕಬ್ಬಿಣದ ರಾಡಿನಿಂದ ಹೊಡೆದ ಪರಿಣಾಮ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ತದಡಿಯ ವಿವೇಕಾನಂದ ಪುತ್ತು ಶ್ಯಾನಭಾಗ ಎಂದು … Continued

ಧಾರವಾಡ: ಕವಲಗೇರಿಯಲ್ಲಿ ತಪ್ಪಿಸಿಕೊಂಡ ಚಿರತೆ ಗೋವನಕೊಪ್ಪದ ಬಳಿ ಪ್ರತ್ಯಕ್ಷ..ಸೆರೆಗೆ ಕಾರ್ಯಾಚರಣೆ

ಧಾರವಾಡ: ನಿನ್ನೆ ರಾತ್ರಿ ಧಾರವಾಡದ ಕವಲಗೇರಿ ಗ್ರಾಮದ ಬಳಿ ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡು ಓಡಿ ಹೋಗಿದ್ದ ಚಿರತೆಯು ಇಂದು (ಶುಕ್ರವಾರ) ಬೆಳಿಗ್ಗೆ ಕವಲಗೇರಿ ಗ್ರಾಮಕ್ಕೆ ಗಡಿ ಹೊಂದಿಕೊಂಡಿರುವ ಗೋವನಕೊಪ್ಪದ ಬಳಿ ಪತ್ತೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅವಿತು ಕುಳಿತಿರುವ ಚಿರತೆ ತಪ್ಪಿಸಿಕೊಂಡು ಓಡಾಡುತ್ತಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗೆ … Continued

ಮುಜರಾಯಿ ಇಲಾಖೆ ದೇವಸ್ಥಾನಗಳ ಅರ್ಚಕರಿಗೆ ಆರೋಗ್ಯ ವಿಮೆ ಬಗ್ಗೆ ಶೀಘ್ರ ನಿರ್ಧಾರ: ಸಚಿವೆ ಜೊಲ್ಲೆ

ಬೆಂಗಳೂರು: ರಾಜ್ಯದಲ್ಲಿ ಮುಜರಾಯಿ ಇಲಾಖೆ ಅಧೀನದಲ್ಲಿರುವ ದೇವಸ್ಥಾನಗಳ ಸಿಬ್ಬಂದಿ ಮತ್ತು ಅರ್ಚಕರಿಗೆ ಆರೋಗ್ಯ ವಿಮೆ ಒದಗಿಸುವ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಮುಜರಾಯಿ ಇಲಾಖೆ ಅಧೀನದಲ್ಲಿ ರಾಜ್ಯದಾದ್ಯಂತ 34,000ಕ್ಕೂ ಅಧಿಕ ದೇವಸ್ಥಾನಗಳಿವೆ. ಇದರಲ್ಲಿ ಹೆಚ್ಚಿನ ಆದಾಯ ಬರುವ ದೇವಸ್ಥಾನಗಳನ್ನು “ಎ” ಗ್ರೇಡ್ ಎಂದು, ಕಡಿಮೆ ಆದಾಯ ಗಳಿಸುವ … Continued

ಕನ್ನಡ ಕಲಿಕೆ ಕಡ್ಡಾಯ: ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಬೆಂಗಳೂರು: ರಾಜ್ಯದಲ್ಲಿರುವ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಯ(ಕುಸ್ಮಾ) ವ್ಯಾಪ್ತಿಗೆ ಬರುವ ಎಲ್ಲಾ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಈ ನಿರ್ಧಾರವನ್ನು ಪ್ರಶ್ನಿಸಿ ನಾಲ್ಕನೇ ತರಗತಿ ವಿದ್ಯಾರ್ಥಿಯೊಬ್ಬರು ಕರ್ನಾಟಕ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ. … Continued

ಶಿರೂರು ಮಠಕ್ಕೆ ಪೀಠಾಧಿಪತಿ ನೇಮಕ ವಿವಾದ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು: ಉಡುಪಿಯ ಶ್ರೀಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶ್ರೀ ಶಿರೂರು ಮಠಕ್ಕೆ 16 ವರ್ಷದ ಅಪ್ರಾಪ್ತರಿಗೆ ಮಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ತೀರ್ಪುನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ಕಾಯ್ದಿರಿಸಿದೆ ಎಂದು ಬಾರ್‌ ಎಂಡ್‌ ಬೆಂಚ್‌ ವರದಿ ಮಾಡಿದೆ. ಶಿರೂರು ಮಠದ ಭಕ್ತ ಸಮಿತಿಯ ಕಾರ್ಯದರ್ಶಿ ಪಿ. ಲಾತವ್ಯ ಆಚಾರ್ಯ … Continued

ಭಾರತೀಯ ಜೈನ್ ಸಂಘಟನೆಯಿಂದ ಕೋವಿಡ್ ಮುಕ್ತ ಗ್ರಾಮ ಕಾರ್ಯಕ್ರಮಕ್ಕೆ ಚಾಲನೆ

ಯಾದಗಿರಿ: ಕೊರೊನಾ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಭಾರತೀಯ ಜೈನ್ ಸಂಘಟನೆಯು ಜಿಲ್ಲಾಡಳಿತ ಜೊತೆ ಕೈ ಜೋಡಿಸಿ ಕೊರೊನಾ ಮುಕ್ತ ಗ್ರಾಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಕೊರೊನಾ ವಿರುದ್ಧ ಹೋರಾಡಲು ಇನ್ನಷ್ಟು ಆತ್ಮವಿಶ್ವಾಸ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅಭಿಪ್ರಾಯಪಟ್ಟರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾರತೀಯ ಜೈನ್ ಸಂಘಟನೆಯ ವತಿಯಿಂದ ನಡೆದ … Continued

ಕಲಬುರಗಿ: ಬಿಜೆಪಿ ಸೇರಿದ ಪಾಲಿಕೆ ಪಕ್ಷೇತರ ಸದಸ್ಯ

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಜೆಡಿಎಸ್ ಜೊತೆ ಮೈತ್ರಿಗೆ ಕೈಚಾಚಿರುವ ಬಿಜೆಪಿ ಕಲಬುರಗಿಯ ಪಕ್ಷೇತರ ಕಾರ್ಪೊರೇಟರ್ ಒಬ್ಬರನ್ನು ಕಮಲ  ಪಕ್ಷ ತನ್ನ ಪಾಳಯಕ್ಕೆ ಸೆಳೆದಿದೆ. ಕಲಬುರಗಿಯ 36ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಡಾ. ಶಂಭುಲಿಂಗ ಬಳಬಟ್ಟಿ ಶಾಸಕ ದತ್ತಾತ್ರೇಯ ಪಾಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು ವರದಿಯಾಗಿದೆ. ಪಕ್ಷದ ಜಗನ್ನಾಥ … Continued

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು:ಕೇಂದ್ರದ ಪೂರ್ವಾನುಮತಿಗೆ ಸಂಪೂರ್ಣ ಮಾಹಿತಿ ಕಳುಹಿಸಲು ಸಿಎಂ ಸೂಚನೆ

ಬೆಂಗಳೂರು: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಶರಾವತಿ ಜಲ ವಿದ್ಯುತ್ ಯೋಜನೆಯಿಂದಾಗಿ ಮುಳುಗಡೆಯಾಗಿರುವ ಪ್ರದೇಶದ ಸಂತ್ರಸ್ತರ ಸಮಸ್ಯೆಗಳ ಕುರಿತು ಇಂದು … Continued

ಧಾರವಾಡ ಕವಲಗೇರಿಯಲ್ಲಿ ಚಿರತೆ ಪತ್ತೆಗೆ ಡ್ರೋನ್‌ ಬಳಕೆ, ಕೂಂಬಿಂಗ್‌ ಕಾರ್ಯಾಚರಣೆ

ಧಾರವಾಡ/ಹುಬ್ಬಳ್ಳಿ: ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡಿದ್ದ ಚಿರತೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಇದೀಗ ಡ್ರೋನ್‌ ಕ್ಯಾಮೆರಾ ಬಳಕೆ ಮಾಡುತ್ತಿದ್ದಾರೆ.ಕೂಂಬಿಂಗ್‌ ಕಾರ್ಯಾಚರಣೆ ನಡೆಯುತ್ತಿದೆ. ಇದಕ್ಕಾಗಿ ಪರಿಣಿತರು ಆಗಮಿಸಿದ್ದಾರೆ. ಇತ್ತ ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತಮುತ್ತಲೂ ಕಾರ್ಯಾಚರಣೆ ಮುಂದುವರಿದೆ. ಆದರೆ ಚಿರತೆ ಮಾತ್ರ ಪತ್ತೆಯಾಗಿಲ್ಲ. ಆದರೆ ಕವಲಗೇರಿ ಗ್ರಾಮದಲ್ಲಿ ಡ್ರೋನ್‌ ಬಳಕೆಯ ನಂತರ … Continued