ಬೆಂಗಳೂರಿನಲ್ಲಿ ಮತ್ತೊಂದು ದುರಂತ : ಸಿಲಿಂಡರ್ ಸ್ಫೋಟಕ್ಕೆ ಮೂವರು ಸಾವು, ಹಲವರಿಗೆ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮತ್ತೊಂದು ದುರಂತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಹತ್ತಾರು ಬೈಕ್ ಗಳು ಸುಟ್ಟು ಕರಕಲಾಗಿವೆ. ಈ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ನ್ಯೂ ತಗರುಪೇಟೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಸ್ಫೋಟಕ್ಕೆ ಹಲವರಿಗೆ ಗಾಯಗಳಾಗಿದ್ದು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ … Continued

ನಿಗಮ, ಮಂಡಳಿಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ: ರಾಜ್ಯ ಸರ್ಕಾರಕ್ಕೆ ಕೊನೆಯ ಅವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ರಾಜ್ಯ ಸರ್ಕಾರದ ಪ್ರಾಧಿಕಾರಗಳು ಮತ್ತು ನಿಗಮ ಮಂಡಳಿಗಳ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸುವಂತೆ ಸಲಹೆ ನೀಡುವ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ಕೊನೆಯದಾಗಿ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ ಎಂದು ಬಾರ್‌ ಎಂಡ್‌ ಬೆಂಚ್‌ ವರದಿ ಮಾಡಿದೆ. ಲೈಂಗಿಕ ಅಲ್ಪಸಂಖ್ಯಾತರು, ಎಚ್‌ಐವಿ ಪೀಡಿತರ … Continued

ಮಡಿಕೇರಿ: ಕಲ್ಲು ಬಂಡೆ-ಬಳ್ಳಿ ನಡುವೆ ಸಿಲುಕಿ ಮರಿಯಾನೆ ಸಾವು

ಮಡಿಕೇರಿ: ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಕಾಡಾನೆ ಮರಿಯೊಂದು ಮರದ ಬಳ್ಳಿ ಮತ್ತು ಕಲ್ಲು ಬಂಡೆ ನಡುವೆ ಸಿಲುಕಿ ಮೃತಪಟ್ಟ ಘಟನೆ ಮದೆನಾಡು ಸಮೀಪದ ಬೆಟ್ಟತ್ತೂರು ಗ್ರಾಮದಲ್ಲಿ ನಡೆದ ವರದಿಯಾಗಿದೆ. ಆನೆ ಮರಿಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಳೆದ ೪ ದಿನಗಳ ಹಿಂದೆಯೇ ಮೃತಪಟ್ಟಿರಬಹುದೆಂದು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಶಂಕೆ … Continued

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; 28 ದಿನಗಳ ಬಳಿಕ ಸಂತ್ರಸ್ತೆ ಹೇಳಿಕೆ ದಾಖಲು

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತ ಯುವತಿಯ ಹೇಳಿಕೆಯನ್ನು ಬುಧವಾರ (ಸೆಪ್ಟೆಂಬರ್ 22) 2ನೇ ಜೆಎಂಎಫ್‌ ಸಿ ನ್ಯಾಯಾಧೀಶರ ಎದುರು ದಾಖಲಿಸಲಾಗಿದೆ. ಹೊರವಲಯದಲ್ಲಿ 28 ದಿನಗಳ ಹಿಂದೆ ನಡೆದ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಕೊನೆಗೂ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಪೊಲೀಸರ ಮನವೊಲಿಕೆಗೆ ತಲೆಬಾಗಿ ಇಂದು ಮುಂಬೈನಿಂದ ದಿಢೀರ್ ಎಂದು ಮೈಸೂರಿಗೆ ಧಾವಿಸಿದ ಸಂತ್ರಸ್ತೆ, ಜಿಲ್ಲಾ … Continued

ಕರ್ನಾಟಕದಲ್ಲಿ ಬುಧವಾರ ಹೊಸದಾಗಿ 847 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಹೊಸದಾಗಿ 847 ಜನರಿಗೆ ಸೋಂಕು ತಗುಲಿದ್ದು, ಇದೇ ಸಮಯದಲ್ಲಿ 20 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಹಾಗೂ 946 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,70,208 ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 37,668 ಜನ ಸಾವನ್ನಪ್ಪಿದ್ದಾರೆ ಹಾಗೂ 29,18,890 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.57 ರಷ್ಟಿದ್ದು … Continued

ಸೆಪ್ಟೆಂಬರ್ 28 ರಿಂದ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಅವಕಾಶ

ಬೆಳಗಾವಿ: ಸೆಪ್ಟೆಂಬರ್ 28 ರಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತಾದಿಗಳ ದರ್ಶನಕ್ಕೆ ಅನುಮತಿ ನೀಡಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶಿಸಿದ್ದಾರೆ. ಆದರೆ ಜಿಲ್ಲಾಧಿಕಾರಿಯವರು ಸಂಪೂರ್ಣ ನಿರ್ಬಂಧ ತೆಗೆದಿಲ್ಲ. ಅದಕ್ಕೆ 16 ಷರತ್ತನ್ನು ವಿಧಿಸಿಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ 17ತಿಂಗಳಿಂದ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಅವಕಾಶ ಸ್ಥಗಿತಗೊಳಿಸಲಾಗಿತ್ತು. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ಗುಡ್ಡದಲ್ಲಿರುವ ದೇವಸ್ಥಾನಕ್ಕೆ … Continued

ಭಿಕ್ಷೆ ಬೇಡುವ 14ರ ಬಾಲಕಿಗೆ ತಿಂಡಿ ಆಸೆ ತೋರಿಸಿ ಲೈಂಗಿಕ ದೌರ್ಜನ್ಯ :ದೂರು ದಾಖಲು

ಧಾರವಾಡ: ತಿಂಡಿ-ತಿನಿಸು, ಹಣದ ಆಸೆ ತೋರಿಸಿ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಧಾರವಾಡದ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 14 ವರ್ಷದ ಬಾಲಕಿಯೊಬ್ಬಳು ಭಿಕ್ಷಾಟನೆ ಮಾಡುತ್ತಿರುವ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಪೊಲೀಸ್ ಇಲಾಖೆಯಿಂದ ಮಾಹಿತಿ … Continued

ಶಾಲೆಯಲ್ಲಿಯೇ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಹೆಡ್ ಮಾಸ್ಟರ್…!: ಈಗ ಸೇವೆಯಿಂದ ಅಮಾ‌ನತು

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಶಾಲೆಯೊಂದರಲ್ಲಿ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಮುಖ್ಯಾಧ್ಯಾಪಕರನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಕೋದಂಡರಾಮಪುರ ಪ್ರೌಢಶಾಲೆಯಲ್ಲಿ ಪ್ರಭಾರಿ ಮುಖ್ಯಾಧಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಲೋಕೇಶಪ್ಪ ಅಮಾನತುಗೊಂಡವರು ಎಂದು ತಿಳಿದುಬಂದಿದೆ. ಪಾಲಿಕೆಯ ಕೋದಂಡರಾಮಪುರ ಪ್ರೌಢಶಾಲೆಯಲ್ಲಿ ಮಗುವಿನ ದಾಖಲಾತಿಗೆಂದು ಮಹಿಳೆಯೊಬ್ಬರು ಶಾಲೆಗೆ ಬಂದಿದ್ದರು. ಈ ವೇಳೆ ಅವರು ಬ್ಯೂಟಿ ಪಾರ್ಲರ್ ನಡೆಸುತ್ತಿರುವುದು ಗೊತ್ತಾಗಿದೆ. ನನಗೂ ಮಸಾಜ್​ ಮಾಡಿ ಎಂದು … Continued

ಪಂಚೆ ಕಳಚಿದೆ ಎಂದು ಸಿದ್ದರಾಮಯ್ಯನವರ ಕಿವಿಯಲ್ಲಿ ಹೇಳಿದ ಡಿಕೆಶಿ.. ಮುಂದೇನಾಯ್ತು…!

ಬೆಂಗಳೂರು: ಇಂದು (ಬುಧವಾರ) ನಡೆಯುತ್ತಿದ್ದ ವಿಧಾನಸಭಾ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಂಚೆ ಪ್ರಸಂಗ ಕಲಾಪದಲ್ಲಿ ಎಲ್ಲರನ್ನೂ ನಗೆಗಡಲಲ್ಲಿ ತೇಲುವಂತೆ ಮಾಡಿತು. ಸದನದ ಕಲಾಪದ ವೇಳೆ ಸಿದ್ದರಾಮಯ್ಯ ಅವರ ಪಂಚೆ ಬಿಚ್ಚಿರುವುದನ್ನು ಗಮನಿಸಿದ ಡಿ.ಕೆ. ಶಿವಕುಮಾರ್ ಬಳಿಗೆ ಬಂದು ತಮ್ಮ ಪಂಚೆ ಕಳಚಿದೆ ಎಂದು ಸಿದ್ದರಾಮಯ್ಯ ಅವರ ಕಿವಿಯಲ್ಲಿ ಹೇಳಿದ್ದಾರೆ. ಆಗ ಸಿದ್ದರಾಮಯ್ಯನವರು, ನಗುನಗುತ್ತಾ … Continued

ಕೋರ್ಟ್ ಆದೇಶವಿದ್ದರೂ ಕೆಲಸಕ್ಕೆ ನೇಮಿಸಿಕೊಳ್ಳದ ಆರೋಪ: ಗ್ರಾ.ಪಂ ಕಚೇರಿ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಾಟರ್‌ಮ್ಯಾನ್

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ನೇರಳೆ ಗ್ರಾಮ ಪಂಚಾಯತದ ಮುಂಭಾಗದಲ್ಲಿ ವಾಟರ್ ಮ್ಯಾನ್ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಹಂಪಾಪುರ ಗ್ರಾಮದ ಕುಮಾರಸ್ವಾಮಿ (26) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ನೇರಳೆ ಗ್ರಾಮ ಪಂಚಾಯತದ ಹಂಪಾಪುರ ಗ್ರಾಮದ ವಾಟರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರಸ್ವಾಮಿಯವರನ್ನು ಕೆಲಸದಿಂದ ವಜಾ … Continued