ಕುಮಟಾ: ಬೈಕ್ ಅಪಘಾತದಲ್ಲಿ ಪಿಡಿಒ ಸಾವು

ಕುಮಟಾ : ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಗ್ರಾಮ ಪಂಚಾಯತ ಪಿ‌ಡಿಒ ಒಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ  ದುಂಡಕುಳಿ ಸಮೀಪ ನಡೆದಿದೆ ಎಂದು ವರದಿಯಾಗಿದೆ. ಹೊನ್ನಾವರ ತಾಲೂಕಿನ ಇಡಗುಂಜಿ ಗ್ರಾಮ ಪಂಚಾಯತ್ ಪಿಡಿಒ ಪ್ರಶಾಂತ ಕೃಷ್ಣ ಶೆಟ್ಟಿ ಎಂಬವರೇ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಜಿಲ್ಲಾ ಕೇಂದ್ರ ಕಾರವಾರದಲ್ಲಿ ನಡೆಯಲಿದ್ದ ಕಂಪ್ಯೂಟರ್ … Continued

ಯಲ್ಲಾಪುರ: ತುಡುಗುಣಿಯಲ್ಲಿ ಚಾಕುವಿನಿಂದ ಇರಿದು ಮಹಿಳೆ ಕೊಲೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ತುಡುಗುಣಿಯಲ್ಲಿ ಮಹಿಳೆಯೊಬ್ಬಳನ್ನು ಗುರುವಾರ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕೊಲೆಯಾದವರನ್ನು ಸರೋಜಾ ಅಶೋಕ ನಾಯರ್ (೪೫) ಎಂದು ಗುರುತಿಸಲಾಗಿದೆ. ಶಿರಸಿ ಕೆರೆಕೊಪ್ಪದ ಹಾಲಿ ಗೋವಾ ಮಾಪ್ಸಾದ ನಿವಾಸಿ ಕೃಷ್ಣ  ನಾಯ್ಕ (೪೬) ಕೊಲೆಗೈದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಸರೋಜಾ ನಾಯರ್ ಅಂಗನವಾಡಿ … Continued

ವಿಪಕ್ಷಗಳ ಸಭಾತ್ಯಾಗದ ನಡುವೆ ಪರಿಷತ್ತಿನಲ್ಲಿ ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು: ಗ್ರಾಮ ಪಂಚಾಯತ, ತಾಲ್ಲೂಕು ಹಗೂ, ಜಿಲ್ಲಾ ಪಂಚಾಯತ ಕ್ಷೇತ್ರಗಳ ಮೀಸಲಾತಿ ನಿಗದಿ ಹಾಗೂ ಕ್ಷೇತ್ರ ವಿಂಗಡಣೆ ಅಧಿಕಾರವನ್ನು ರಾಜ್ಯ ಚುನಾವಣೆ ಆಯೋಗದಿಂದ ಹಿಂಪಡೆದು, ರಾಜ್ಯ ಸರ್ಕಾರ ತನ್ನಲ್ಲೇ ಉಳಿಸಿಕೊಳ್ಳುವ ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ಕಾಂಗ್ರೆಸ್ ಹಾಗೂ ಜೆಡಿಸ್‌ ಸದಸ್ಯರ ಸಭಾತ್ಯಾಗದ ನಡುವೆ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ … Continued

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ‌ ಸೆಲ್, ಬಜೆಟ್ಟಿನಲ್ಲಿ ಕೆಕೆಆರಡಿಬಿಗೆ ಮೂರು ಸಾವಿರ ಕೋಟಿ ಅನುದಾನ :ಸಿಎಂ ಬೊಮ್ಮಾಯಿ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ‌ನಗರದ ಡಿ.ಎ.ಆರ್‌. ಪೊಲೀಸ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಕಲ್ಯಾಣ ಕನಾ೯ಟಕ ಅಭಿವೃದ್ಧಿ ಮಂಡಳಿಗೆ ಮುಂದಿನ ಬಜೆಟ್ಟಿನಲ್ಲಿ 3 ಸಾವಿರ ಕೋಟಿ ರೂ.ಗಳ ಅನುದಾನ ನೀಡಲಾಗುವುದು ಎಂದು ಅವರು ಘೋಷಿಸಿದರು. ಕೆಕೆಆರ್​ಡಿಬಿಗೆ (Kalyana Karnataka Region … Continued

56 ನಗರ ಸ್ಥಳೀಯ ಸಂಸ್ಥೆಗಳಿಗೆ 2 ತಿಂಗಳಲ್ಲಿ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಿ: ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಎರಡು ತಿಂಗಳ ಒಳಗೆ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ಆದೇಶಿಸಿದೆ. ಅವಧಿ ಪೂರ್ಣಗೊಂಡಿರುವ ರಾಜ್ಯದ ಕೆಲ ನಗರ ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ … Continued

ಬೆಂಗಳೂರು; ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಗುಂಡು ಹಾರಿಸಿಕೊಂಡು ಮೃತಪಟ್ಟ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬನ ಶವ ನಗರದಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ನಗರದ ಸಂಜಯನಗರ ಮುಖ್ಯ ಬಸ್ ನಿಲ್ದಾಣದ ಸಮೀಪ ಶವ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತ ವಿದ್ಯಾರ್ಥಿಯನ್ನು ರಾಹುಲ್ ಭಂಡಾರಿ (17) ಎಂದು ಗುರುತಿಸಲಾಗಿದೆ. ರಾಹುಲ್ ಮಿಲಿಟರಿ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ ಎಂದು ಹೇಳಲಾಗಿದೆ. … Continued

ಕೆಆರ್‌ಎಸ್‌ ಸುತ್ತಮುತ್ತ ಕಲ್ಲು ಗಣಿಗಾರಿಕೆ: ಕ್ವಾರಿಗಳ ಪರವಾನಗಿ ರದ್ದು ಮಾಡಿದ್ದ ಡಿಸಿ ಆದೇಶ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು: ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್) ಸುತ್ತಮುತ್ತಲಿನ 28 ಕಲ್ಲುಗಣಿಗಾರಿಕೆ ಘಟಕಗಳ ಪರವಾನಗಿ ರದ್ದುಗೊಳಿಸಿ ಮಂಡ್ಯ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದು ಮಾಡಿದೆ. ಆದರೆ, ಟ್ರಯಲ್‌ ಸ್ಫೋಟ ನಡೆಸುವವರೆಗೆ ಉದ್ಯಮವನ್ನು ಪುನಾರಂಭಿಸಲಾಗದು. ಈ ಸಂಬಂಧದ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್‌ 24ಕ್ಕೆ ನಡೆಸಲಾಗುವುದು ಎಂದು ಪೀಠ ಹೇಳಿದೆ. ಮಂಡ್ಯ ಜಿಲ್ಲಾಧಿಕಾರಿ ಆದೇಶ … Continued

ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಸ್ವಯಂ ನಿವೃತ್ತಿಗೆ ಅರ್ಜಿ

ಬೆಂಗಳೂರು: ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಅವರು ಸ್ವಯಂ ನಿವೃತ್ತಿಗೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಈಗ ಅವರು ರೈಲ್ವೆ ಇಲಾಖೆ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1990ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್, ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೇ ನಿವೃತ್ತಿ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಭಾಸ್ಕರ್ ರಾವ್ ಅವರ … Continued

ಕರ್ನಾಟಕದಲ್ಲಿ ಗುರುವಾರ 1,108 ಜನರಿಗೆ ಹೊಸದಾಗಿ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು (ಗುರುವಾರ) ಸಹ ಒಂದು ಸಾವಿರಕ್ಕೂ ಹೆಚ್ಚು ಹೊಸ ಸೋಂಕುಗಳು ದಾಖಲಾಗಿವೆ. ಇಂದು 1,108 ಮಂದಿಗೆ ಕೊರೊನಾ ದೃಢಪಟ್ಟಿದ್ದು, 18 ಮಂದಿ ಮೃತಪಟ್ಟಿದ್ದಾರೆ ಹಾಗೂ 809 ಜನ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,174ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ರೇಟ್ 0.66% ಗೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ … Continued

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಪತ್ತೆಯಾಯ್ತು ಡ್ರಗ್ ಫ್ಯಾಕ್ಟರಿ, 2 ಕೋಟಿ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ

ಬೆಂಗಳೂರು: ರಾಜ್ಯ ಪೊಲೀಸರು ರಾಜಧಾನಿಯಲ್ಲಿ ಮಾದಕವಸ್ತು ಕಾರ್ಖಾನೆಯನ್ನು ಪತ್ತೆ ಮಾಡಿದ್ದಾರೆ ಮತ್ತು ಗುರುವಾರ 2 ಕೋಟಿ ರೂ. ಮೌಲ್ಯದ 4 ಕಿಲೋಗ್ರಾಂಗಳಷ್ಟು ಎಂಡಿಎಂಎ ಸಿಂಥೆಟಿಕ್ ಔಷಧಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನೈಜೀರಿಯನ್ ಪ್ರಜೆಯನ್ನು ಬಂಧಿಸಲಾಗಿದೆ. ತನಿಖೆಯು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಸುಸ್ಥಾಪಿತ ಜಾಲವನ್ನು ಬಹಿರಂಗಪಡಿಸಿದೆ. ನಿಷೇಧಿತ ಎಂಡಿಎಂಎ ಡ್ರಗ್ಸ್‌ ಅನ್ನು ಶೂಗಳ ಒಳಗೆ ಇರಿಸಿ ನಗರ … Continued