ಕೋವಿಡ್ ಸಕ್ರಿಯ ಪ್ರಕರಣ: ಮೊದಲ ಬಾರಿಗೆ 4ನೇ ಸ್ಥಾನಕ್ಕೆ ಕುಸಿದ ಕರ್ನಾಟಕ

ನವದೆಹಲಿ: ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯಲ್ಲಿ ಹಿಂದೆ ಬಿದ್ದಿದ್ದ ಕರ್ನಾಟಕದಲ್ಲಿ ಈಗ ಸುಧಾರಣೆ ಕಂಡು ಬಂದಿದೆ. ಸಕ್ರಿಯ ಪ್ರಕರಣಗಳಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಇದೀಗ 4ನೇ ಸ್ಥಾನಕ್ಕೆ ಕುಸಿದಿದೆ. 4ನೇ ಸ್ಥಾನದಲ್ಲಿದ್ದ ತಮಿಳುನಾಡು ಇದೀಗ ಮೂರನೇ ಸ್ಥಾನಕ್ಕೆ ಏರಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ ಹೊಸ ಸೋಂಕು ಪ್ರಕರಣಗಳು ಕಡಿಮೆಯಾಗಿರುತ್ತಿರುವುದರಿಂದ 3ರಿಂದ … Continued

ತಂದೆ-ಮಗನ ಜೋಡಿಯಿಂದ ಸ್ಕ್ರ್ಯಾಪ್ ನಿಂದ ತಯಾರಾಯಿತು 14 ಅಡಿ ಎತ್ತರದ ಮೋದಿ ಪ್ರತಿಮೆ ..!:ನಾಳೆ ಬೆಂಗಳೂರಲ್ಲಿ ಸ್ಥಾಪನೆ

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿರುವ ಅಪ್ಪ-ಮಗನ ಜೋಡಿ ಪ್ರಧಾನಿ ನರೇಂದ್ರ ಮೋದಿಯವರ 14 ಅಡಿ ಪ್ರತಿಮೆಯನ್ನು ಸಂಪೂರ್ಣವಾಗಿ ಸ್ಕ್ರ್ಯಾಪ್ ವಸ್ತುಗಳನ್ನು ಬಳಸಿ ನಿರ್ಮಿಸಿದ್ದಾರೆ. ಈ ಪ್ರತಿಮೆಯನ್ನು ಬೆಂಗಳೂರಿನ ಉದ್ಯಾನವನದಲ್ಲಿ ಸೆಪ್ಟೆಂಬರ್ 16 ರಂದು ಬಿಜೆಪಿ ಕಾರ್ಪೋರೇಟರ್ ಮೋಹನ್ ರಾಜು ಸ್ಥಾಪಿಸಲಿದ್ದಾರೆ. ಗುಂಟೂರಿನ ತೆನಾಲಿ ಪ್ರದೇಶದಲ್ಲಿ ವಾಸಿಸುತ್ತಿರುವ ಶಿಲ್ಪಿ ಕೆ. ವೆಂಕಟೇಶ್ವರ ರಾವ್ ಮತ್ತು ಅವರ ಪುತ್ರ ಕೆ..ರವಿ … Continued

ಬೆಳಗಾವಿಯಲ್ಲಿ ಕುಂದಾಪುರ ಮೂಲದ ವ್ಯಕ್ತಿಯ ಕೊಲೆ

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಪಾನ್‌ ಬೀಡಾ ಅಂಗಡಿಯವನನ್ನು ಕೊಲೆಗೈದ ಘಟನೆ ಮಂಗಳವಾರ ರಾತ್ರಿ ಇಲ್ಲಿ ನಡೆದಿದೆ. ಬಾಲಕೃಷ್ಣ ಶೆಟ್ಟಿ (52) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.. ವಡಗಾವಿ ಲಕ್ಷ್ಮೀನಗರದಲ್ಲಿ ಪಾನ್ ಬೀಡಾ ಅಂಗಡಿ ನಡೆಸುತ್ತಿದ್ದ ಬಾಲಕೃಷ್ಣ ಶೆಟ್ಟಿ ಅವರೊಂದಿಗೆ ನಿನ್ನೆ (ಮಂಗಳವಾರ) ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ ವ್ಯಕ್ತಿ ರಾತ್ರಿ ಅವರ ಮನೆಗೆ … Continued

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ: ಕರಾವಳಿ ಜಿಲ್ಲೆಗಳಲ್ಲಿ ಅಧಿಕ

ಬೆಂಗಳೂರು: ಮುಂದಿನ ಮೂರು ದಿನಗಳು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರವಾಗಲಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಹಾಗೂ ನೈಋತ್ಯ ಭಾಗದೆಡೆಗೆ ಮಾರುತಗಳು ಚಲಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಟಕದ ಕರಅವಲಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ … Continued

ಜೆಇಇ ಮೇನ್‌ ಪರೀಕ್ಷೆ ಫಲಿತಾಂಶ ಪ್ರಕಟ, ಕರ್ನಾಟಕದ ಗೌರ‌ವ್ ದಾಸಗೆ ಮೊದಲ ಸ್ಥಾನ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಇಂದು (ಬುಧವಾರ) ಜೆಇಇ ಮುಖ್ಯ ಫಲಿತಾಂಶ 2021 ಅನ್ನು ಪ್ರಕಟಿಸಿದೆ. 44 ಅಭ್ಯರ್ಥಿಗಳು 100 ಪರ್ಸಟೇಜ್ ಮತ್ತು 18 ಅಭ್ಯರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ. ಗೌರವ್ ದಾಸ್ (ಕರ್ನಾಟಕ), ವೈಭವ್ ವಿಶಾಲ್ (ಬಿಹಾರ), ದುಗ್ಗಿನೇನಿ ವೆಂಕಟ ಪನೀಶ್ (ಆಂಧ್ರಪ್ರದೇಶ), ಸಿದ್ಧಾಂತ್ ಮುಖರ್ಜಿ, ಅಂಶುಲ್ … Continued

ಗದಗ: ಕಲಕೇರಿ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವ

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಮಂಗಳವಾರ ರಾತ್ರಿ 8:25 ರ ಸುಮಾರಿಗೆ ಲಘು ಭೂಕಂಪನವಾದ ಅನುಭವವಾಗಿದೆ. ಸುಮಾರು 8ರಿಂದ 10 ಸೆಕೆಂಡ್ ಭೂಮಿ ಕಂಪಿಸಿದ ಅನುಭವವಾಗಿದ್ದು, ಕ್ಷಣಕಾಲ ಶಬ್ದ ಕೇಳಿಸಿದ್ದು, ಬಳಿಕ ಭೂಮಿ ಕಂಪಿಸಿದ ಅನುಭವವಾಗಿದೆ. ಮಣ್ಣಿನ ಮನೆಗಳ ಮೇಲ್ಛಾವಣಿಯಿಂದ ಮಣ್ಣು ಉದುರಿದೆ. ಇದರಿಂದ ಆತಂಕಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದರು. … Continued

ಬಂಡೀಪುರದಲ್ಲಿ ಹುಲಿ ಶವವಾಗಿ ಪತ್ತೆ: ಬಲೆಗೆ ಸಿಲುಕಿ ಸತ್ತಿರುವ ಶಂಕೆ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದ ಆನೆ ಪ್ರೂಫ್ ಟ್ರೆಂಚ್ (ಇಪಿಟಿ) ಬಳಿ ಪೊದೆಯೊಂದರಲ್ಲಿ ಹುಲಿ ಕಳೆಬರ ಪತ್ತೆಯಾಗಿದೆ. ಹೆಡಿಯಾಲ ಉಪವಿಭಾಗದ ಗುಂಡ್ರೆ ವ್ಯಾಪ್ತಿಯ ಹೊಸಹಳ್ಳಿ ಶಾಖೆಯ ಗಂಡೆತ್ತೂರು ಬೀಟ್‌ಗೆ ಸೇರಿಕೊಂಡ ಸಿಬ್ಬಂದಿಗ ಮೃತದೇಹವನ್ನು ಗಮನಿಸಿದರು. ಐದರಿಂದ ಆರು ವರ್ಷ ವಯಸ್ಸಿನ ಗಂಡು ಹುಲಿ ಬಲೆಗೆ ಸಿಕ್ಕಿ ಮೆದುಳಿನಲ್ಲಿ ರಕ್ತಸ್ರಾವವಾಗಿ ಮೃತಪಟ್ಟಿರಬಹುದು ಎಂದು ಊಹಿಸಲಾಗಿದೆ. ಅದಕ್ಕಿಂತ … Continued

ಐಟಿಐ ಕಲಿಯುವವರಿಗೆ ಸಿಹಿ ಸುದ್ದಿ..ಈ ವರ್ಷದಿಂದಲೇ ಆರು ಹೊಸ ಕೋರ್ಸ್​ಗಳ ಪ್ರವೇಶಾತಿಗೆ ಅವಕಾಶ

ಬೆಂಗಳೂರು: ಟಾಟಾ ಕಂಪನಿಯ ಸಹಯೋಗದಲ್ಲಿ ರಾಜ್ಯದ 150 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಉನ್ನತೀಕರಿಸುವ ಕಾರ್ಯಕ್ರಮದಡಿ ಈಗಿನ ಬೇಡಿಕೆಗಳಿಗೆ ಅನುಗುಣವಾಗಿ 6 ಹೊಸ ಕೋರ್ಸ್​ಗಳಿಗೆ ರಾಜ್ಯ ವೃತ್ತಿಶಿಕ್ಷಣ ಪರಿಷತ್ (ಎಸ್.ವಿ.ಸಿ.ಟಿ.) ಮಂಗಳವಾರ ಅನುಮೋದನೆ ನೀಡಿದೆ. ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಶಿಕ್ಷಣ ಸಚಿವ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯಗಳ ಇಲಾಖೆ … Continued

ಸೆ.17ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ: ಒಂದೇ ದಿನ 30 ಲಕ್ಷ ಲಸಿಕೆ ನೀಡುವ ಗುರಿ ನಿಗದಿ

ಬೆಂಗಳೂರು: ಸೆಪ್ಟೆಂಬರ್ 17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಿದ್ದು, ಈ ಕಾರ್ಯಕ್ರಮದಡಿ 30 ಲಕ್ಷ ಲಸಿಕೆ ಹಾಕಬೇಕು ಎಂದು ನಿರ್ಧರಿಸಲಾಗಿದೆ. ಅದಕ್ಕೆ ಸೂಕ್ತ ತಯಾರಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು (ಮಂಗಳವಾರ) ಬೃಹತ್ ಲಸಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ರಾಜ್ಯದಲ್ಲಿ … Continued

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗೀಕರಣ ಪ್ರಶ್ನಿಸಿದ್ದ ಮನವಿ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಶ್ನಿಸಿ ವಿಮಾನ ನಿಲ್ದಾಣಗಳ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ವಜಾ ಮಾಡಿದೆ. ವಿಮಾನ ನಿಲ್ದಾಣಗಳನ್ನು ಗುತ್ತಿಗೆ ನೀಡುವ ನೀತಿ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಇದರಲ್ಲಿ ನ್ಯಾಯಾಲಯದ ಮಧ್ಯಪ್ರವೇಶದ ಅಗತ್ಯವಿಲ್ಲ ಎಂದು ಹೇಳಿದ್ದ ಕೇರಳ ಹೈಕೋರ್ಟ್‌ ನಿರ್ಧಾರವನ್ನು ಆಧರಿಸಿ ಹಂಗಾಮಿ … Continued