ಜೆಡಿಎಸ್​​ಗೆ ಮಾಜಿ ಸಚಿವ ಜಿ.ಟಿ ದೇವೇಗೌಡ ಗುಡ್​​ ಬೈ ..!

ಮೈಸೂರು: ಬಹುದಿನಗಳಿಂದ ಜೆಡಿಎಸ್‌ನಿಂದ ಮಾನಸಿಕವಾಗಿ ದೂರವಾಗಿದ್ದ ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ ದೇವೇಗೌಡ ಜೆಡಿಎಸ್​​ಗೆ ಗುಡ್​​ ಬೈ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತಾಡಿದ ಜಿ.ಟಿ ದೇವೇಗೌಡ, ಕಾಂಗ್ರೆಸ್​ ಸೇರ್ಪಡೆಯಾಗುವ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ನನ್ನನ್ನ ಕ್ಷಮಿಸಿ ಅಪ್ಪಾಜಿ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡ ಅವರಿಗೆ ಹೇಳಿದ್ದಾರೆ. … Continued

ಗೋಕರ್ಣ:ಸಮುದ್ರದ ಅಲೆಗೆ ಸಿಲುಕಿ ವೈದ್ಯಕೀಯ ವಿದ್ಯಾರ್ಥಿ ಸಾವು

ಕಾರವಾರ:- ಸಮುದ್ರದಲ್ಲಿ ಈಜಲು ಹೋದ ಯುವಕನೊಬ್ಬ ಅಲೆಗಳ ಅಬ್ಬರಕ್ಕೆ ಸಿಲುಕಿ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೆ ಕಡಲತೀರದಲ್ಲಿ ಇಂದು (ಮಂಗಳವಾರ) ನಡೆದ ವರದಿಯಾಗಿದೆ. ಮೃತಪಟ್ಟವನನ್ನು ಬೀದರ್ ಜಿಲ್ಲೆಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಮಿಕ್ರಮ ಎಂದು ಗುರುತಿಸಲಾಗಿದೆ. ಆರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದರು. ಈ ವೇಳೆ … Continued

ಬ್ರಿಟನ್‌, ಯುರೋಪ್, ಮಧ್ಯಪ್ರಾಚ್ಯದಿಂದ ಕರ್ನಾಟಕ ವಿಮಾನ ನಿಲ್ದಾಣಕ್ಕೆ ಬಂದವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಈಗ ಕಡ್ಡಾಯವಲ್ಲ

ಬೆಂಗಳೂರು: ಬ್ರಿಟನ್‌, ಯುರೋಪ್ ಮತ್ತು ಮಧ್ಯಪ್ರಾಚ್ಯದಿಂದ ಹಿಂದಿರುಗಿದವರು ಕರ್ನಾಟಕ ವಿಮಾನ ನಿಲ್ದಾಣಗಳಿಗೆ ಆಗಮಿಸಿದಾಗ ಆರ್‌ಟಿ-ಪಿಸಿಆರ್ ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ. Circular-Conducting RT-PCR Test for International Returnees to Karnataka ಬ್ರಿಟನ್‌, ಯುರೋಪ್ ಮತ್ತು ಮಧ್ಯಪ್ರಾಚ್ಯದಿಂದ ಆಗಮಿಸುವ ಪ್ರಯಾಣಿಕರಿಗೆ ಕರ್ನಾಟಕ ವಿಮಾನ ನಿಲ್ದಾಣಗಳಿಗೆ ಆಗಮಿಸಿದಾಗ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ” ಎಂದು ರಾಜ್ಯ ಸರ್ಕಾರ … Continued

ಪುಣೆಯಲ್ಲಿ ತಮ್ಮ ಗುರು ಬೆಂಗಳೆ ಕಾಶೀನಾಥ ನಾಯ್ಕ ಮನೆಗೆ ಭೇಟಿ ನೀಡಿದ ಒಲಿಂಪಿಕ್ಸ್‌ ಚಿನ್ನದ ಹುಡುಗ ನೀರಜ್​ ಚೋಪ್ರಾ

ಕಾರವಾರ: ಒಲಿಂಪಿಕ್ಸ್ ನಲ್ಲಿ ಜಾವೆಲಿನ್‌ ಎಸೆತದಲ್ಲಿ ಚಿನ್ನ ಗೆದ್ದ ನೀರಜ್ ಛೋಪ್ರಾ ಇಂದು (ಮಂಗಳವಾರ) ಉತ್ತರ ಕನ್ನಡ ಜಿಲ್ಲೆಯ ಮೂಲದ ತಮ್ಮ ಗುರುವಿಗೆ ಧನ್ಯವಾದ  ಸಲ್ಲಿಸಿದ್ದಾರೆ. ನೀರಜ್​ ಚೋಪ್ರಾ (neeraj chopra). ತಮ್ಮ ಮಾಜಿ ಕೋಚ್​ ಕಾಶಿನಾಥ್ (kashinath)​ ಅವರನ್ನು ಭೇಟಿಯಾಗಿ ಗಮನ ಸೆಳೆದಿದ್ದಾರೆ. 2015ರಿಂದ ಸುಮಾರು ಮೂರು ವರ್ಷಗಳ ಕಾಲ ಜಾವಲಿನ್ ಎಸೆತದ ತರಬೇತಿ … Continued

ಕರ್ನಾಟಕದ 11 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಂಜೆ ಕಾಲೇಜು ಪ್ರಾರಂಭಕ್ಕೆ ಅನುಮೋದನೆ

ಬೆಂಗಳೂರು: ರಾಜ್ಯದ 11 ಮಹಾನಗರ ಪಾಲಿಕೆ ವ್ಯಾಪ್ತಿಯ 11 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಂಜೆ ಕಾಲೇಜುಗಳನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿದೆ. 11 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಮೂಲಸೌಕರ್ಯ ಬಳಸಿಕೊಂಡು ವಿದ್ಯಾರ್ಥಿಗಳು ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುವ ಹಾಗೂ ಉತ್ತಮ ಉದ್ಯೋಗ ಅವಕಾಶಗಳಿಗೆ ಎಡೆ ಮಾಡಿಕೊಡುವ ಬಿಕಾಂ ಮತ್ತು ಬಿಸಿಎ ಕೋರ್ಸ್‍ಗಳನ್ನು ಪ್ರಾರಂಭಿಸಲು ಉನ್ನತ … Continued

ಆಹಾರ ತಯಾರಿಕಾ ಫ್ಯಾಕ್ಟರಿ ಬಾಯ್ಲರ್ ಸ್ಫೋಟ ಘಟನೆ: ಮೃತರ ಸಂಖ್ಯೆ 4ಕ್ಕೆ ಏರಿಕೆ

ಬೆಂಗಳೂರು: ನಗರದ ಆಹಾರ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಬಾಯ್ಲರ್ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಎಂಎಂ ಫುಡ್ ಕಾರ್ಖಾನೆಯಲ್ಲಿ ಸೋಮವಾರ ಮಧ್ಯಾಹ್ನ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಇಂದು (ಮಂಗಳವಾರ) ಮುಂಜಾನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. … Continued

ನಾಳೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಬುಧವಾರ) ದೆಹಲಿಗೆ ತೆರಳಲಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ನಾಳೆ ಸಂಜೆ ದೆಹಲಿಗೆ ತೆರಳಿ ಹಲವು ನಾಯಕರ ಭೇಟಿಯಾಗಿ, ಉಳಿದಿರುವ ನಾಲ್ಕು ಸಚಿವ ಸ್ಥಾನಗಳ ವಿಚಾರವಾಗಿ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರದ ಆರೋಗ್ಯ ಸಚಿವರು, ವಿತ್ತ ಸಚಿವರು, ಜಲಶಕ್ತಿ ಸಚಿವರು ಮತ್ತು ಕೃಷಿ ಸಚಿವರನ್ನು … Continued

ಸ್ಯಾಂಡಲ್‌ವುಡ್‌ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ: ಡ್ರಗ್ ಸೇವಿಸಿದ್ದು ಎಫ್‌ಎಸ್‌ಎಲ್‌ ವರದಿಯಲ್ಲಿ ದೃಢ

ಬೆಂಗಳೂರು; ಸಿನೆಮಾ ನಟಿಯರಾದ ಸಂಜನಾ, ರಾಗಿಣಿ ಡ್ರಗ್ಸ್​ ಸೇವಿಸಿರುವುದು ಎಫ್​ಎಸ್​ಎಲ್ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ವರದಿಯಾಗಿದೆ. ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಡ್ರಗ್ಸ್ ಸೇವಿಸಿರುವುದು ಎಫ್‌ಎಸ್‌ಎಲ್‌ (FSL) ಪರೀಕ್ಷೆಯಲ್ಲಿ ದೃಡಪಟ್ಟಿದೆ ಎಂದು ಟಿವಿ9 ಕನ್ನಡ.ಕಾಮ್‌ ವರದಿ ಮಾಡಿದೆ. ಡ್ರಗ್​ ಜಾಲದಲ್ಲಿ ಸಿಲುಕಿ ಸದ್ದು ಮಾಡಿದ್ದ ಚಂದನವನದ ನಟಿಯರಾದ ಸಂಜನಾ, ರಾಗಿಣಿ ತಲೆ ಕೂದಲನ್ನು 2020ರ ಅಕ್ಟೋಬರ್​​ನಲ್ಲಿ … Continued

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ : ಒಟ್ಟು 577 ನಾಮಪತ್ರಗಳು ಸಲ್ಲಿಕೆ 

ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಸೋಮವಾರ (ಆ.23) 478 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಮಹಾನಗರಪಾಲಿಕೆಯ 82 ವಾರ್ಡ್‍ಗಳಿಗೆ ಒಟ್ಟು ಇಲ್ಲಿಯವರೆಗೆ 577 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಮಹಾನಗರ ಪಾಲಿಕೆಯ 1 ನೇಯ … Continued

ಮೇಕೆದಾಟು ಯೋಜನೆ: ಎನ್‌ಜಿಟಿ ಆದೇಶದ ವಿರುದ್ಧ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸುವ ತಮಿಳುನಾಡು

ಚೆನ್ನೈ: ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ (ಎನ್ ಜಿಟಿ) ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ ಮುಂದೆ ಮೇಲ್ಮನವಿ ಸಲ್ಲಿಸುವುದಾಗಿ ಸೋಮವಾರ ಹೇಳಿದೆ. ಅಣೆಕಟ್ಟು ನಿರ್ಮಾಣದ ಪ್ರಸ್ತಾವನೆಯನ್ನು ನೆರೆಯ ಕರ್ನಾಟಕವು ಮುಂದುವರಿಸುವುದನ್ನು ತಡೆಯಲು ಸರ್ಕಾರ ಕೈಗೊಂಡ ಕ್ರಮವನ್ನು ವಿವರಿಸಿ, ತಮಿಳುನಾಡು ವಿಧಾನಸಭೆಯಲ್ಲಿ ಜಲಸಂಪನ್ಮೂಲ ಸಚಿವ ದುರೈಮುರುಗನ್ ಮಂಡಿಸಿದ ನೀತಿ ಟಿಪ್ಪಣಿಯು, ತಮಿಳುನಾಡು … Continued