ಅಲ್ಲಿ ನಮ್ಮ ಸ್ಮಶಾನ ಮಾಡಿದ್ರೂ ನಾವು ಪ್ರತಿಭಟನಾ ಸ್ಥಳ ಬಿಟ್ಟು ಕದಲಲ್ಲ: ರೈತ ಮಹಾಪಂಚಾಯತದಲ್ಲಿ ಟಿಕಾಯತ್‌ ಪ್ರತಿಜ್ಞೆ

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್‌ ಭಾನುವಾರ ಪ್ರತಿಜ್ಞೆ ಮಾಡಿದ್ದಾರೆ. ‘ಕಿಸಾನ್ ಮಹಾಪಂಚಾಯತ್’ ಇಂದು (ಭಾನುವಾರ) ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ನಡೆಯುತ್ತಿದ್ದು, ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಅಂಗೀಕರಿಸಲಾದ ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಲು 15 … Continued

ಅವರು ನಮ್ಮದೇ ರಕ್ತ-ಮಾಂಸ ಹಂಚಿಕೊಂಡವರು: ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಿ ಎಂದು ಬಿಜೆಪಿ ಸಂಸದ ವರುಣ್‌ ಗಾಂಧಿ ಸಲಹೆ

ನವದೆಹಲಿ: ಬಿಜೆಪಿ ಸಂಸದ ವರುಣ್ ಗಾಂಧಿ ಭಾನುವಾರ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು “ನಮ್ಮದೇ ಮಾಂಸ ಮತ್ತು ರಕ್ತ” ಎಂದು ಹೇಳಿದ್ದಾರೆ ಹಾಗೂ ಸರ್ಕಾರವು ಒಂದು ಸಾಮಾನ್ಯ ಅಭಿಪ್ರಾಯಕ್ಕೆ ತಲುಪಲು ಅವರೊಂದಿಗೆ ಮತ್ತೆ ಮಾತುಕತೆಗೆ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಅವರ ಹೇಳಿಕೆಗೆ ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ ಬೆಂಬಲ ನೀಡಿದ್ದಾರೆ. ಉತ್ತರ … Continued

ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಕಾಮೆಂಟ್ಸ್‌: ಛತ್ತೀಸಗಡ ಸಿಎಂ ತಂದೆ ವಿರುದ್ಧ ಪ್ರಕರಣ ದಾಖಲು

ರಾಯ್ಪುರ: ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾರಣಕ್ಕಾಗಿ ಛತ್ತೀಸಗಡ ಸಿಎಂ ಭೂಪೇಶ್ ಬಘೇಲ್ ಅವರ ತಂದೆ ನಂದಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ರಾಯಪುರ ಪೊಲೀಸರು ನಂದಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ವ ಬ್ರಾಹ್ಮಣ ಸಮಾಜದ ದೂರಿನ ಹಿನ್ನೆಲೆಯಲ್ಲಿ ಶನಿವಾರ 75 ವರ್ಷದ ನಂದಕುಮಾರ್ ವಿರುದ್ಧ ದೂರು ದಾಖಲಾಗಿದೆ. ಬ್ರಾಹ್ಮಣರು ವಿದೇಶಿಯರು. ಹೀಗಾಗಿ ಬ್ರಾಹ್ಮಣರನ್ನು … Continued

ಭಾರತ ಕ್ರಿಕೆಟ್‌ ತಂಡದ ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್-ಮೂವರು ಸಹಾಯಕ ಸಿಬ್ಬಂದಿಗೆ ಕ್ವಾರಂಟೈನ್‍

ಓವೆಲ್: ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡದ ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈ ಬೆನ್ನಲ್ಲೇ ಅವರ ಸಂಪರ್ಕದಲ್ಲಿದ್ದ ಮೂವರು ಸಹಾಯಕ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಇಂಗ್ಲೆಂಡ್ ವಿರುದ್ಧ ಓವಲ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ನಲ್ಲಿ ಕೊರೊನಾ ವೈರಸ್‌ಗೆ ಧನಾತ್ಮಕ ಪರೀಕ್ಷೆ ಮಾಡಿದ ನಂತರ ಭಾರತದ ಕೋಚ್ ರವಿಶಾಸ್ತ್ರಿ ತಂಡದ ಹೋಟೆಲ್‌ನಲ್ಲಿ ಉಳಿಯುವಂತೆ ಒತ್ತಾಯಿಸಲಾಗಿದೆ … Continued

ಕಾಶ್ಮೀರ ಪ್ರತ್ಕೇಕತಾವಾದಿ ನಾಯಕ ಗೀಲಾನಿ ಮೃತದೇಹಕ್ಕೆ ಪಾಕ್ ಧ್ವಜ ಹೊದೆಸಿದ ಕುಟುಂಬಸ್ಥರ ವಿರುದ್ಧ ಎಫ್‌ಐಆರ್‌

ಭಾರತ ವಿರುದ್ಧ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಮತ್ತು ಪ್ರತ್ಯೇಕತಾವಾದಿ ನಾಯಕನ ದೇಹದ ಮೇಲೆ ಪಾಕಿಸ್ತಾನದ ಧ್ವಜವನ್ನು ಹಾಕಿದಕ್ಕಾಗಿ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗೀಲಾನಿ ಕುಟುಂಬಸ್ಥರು ಮತ್ತು ಇತರರ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಯುಎಪಿಎ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಅವರ ಸಾವಿನ ನಂತರ, ಪೊಲೀಸ್ ಮೂಲಗಳು ಹೇಳಿವೆ. ಪ್ರತ್ಯೇಕತಾವಾದಿ ನಾಯಕನ ಸಾವಿನ … Continued

ಕೋಜಿಕ್ಕೋಡ್‌: ನಿಪಾಹ್‌ ವೈರಸ್‌ ಸೋಂಕಿನಿಂದ ಮೃತಪಟ್ಟ ಕೋವಿಡ್‌ನಿಂದ ಚೇತರಿಸಿಕೊಂಡ 12 ವರ್ಷದ ಬಾಲಕ

ಕೋಜಿಕ್ಕೋಡ್ : ಕೋಜಿಕ್ಕೋಡ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 12 ವರ್ಷದ ಬಾಲಕ ನಿಪಾ ವೈರಸ್‌ಗೆ ಮೃತಪಟ್ಟಿದ್ದಾನೆ. ಇಂದು ಮುಂಜಾನೆ 4.45 ರ ಸುಮಾರಿಗೆ ನಿಧನವಾಗಿದ್ದಾನೆ. ನಿಪಾಹ್ ವೈರಸ್‌ ಬಅಲಕನ ಸಾವಿಗೆ ಕಾರಣ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಖಚಿತಪಡಿಸಿದ್ದಾರೆ. ತ್ರಿಶೂರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವರು, ಭಯಪಡುವ ಅಗತ್ಯವಿಲ್ಲ, ಮತ್ತು ಕ್ರಿಯಾ … Continued

ಟೋಕಿಯೋ ಪ್ಯಾರಾಲಿಂಪಿಕ್ಸ್: ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್‌ ನಲ್ಲಿ ಚಿನ್ನ ಗೆದ್ದ ಕೃಷ್ಣ ನಾಗರ

ಟೋಕಿಯೊ: ಭಾನುವಾರ ನಡೆದ ಟೋಕಿಯೊ ಪ್ಯಾರಾಲಿಂಪಿಕ್ಸ್ -2020 ರಲ್ಲಿ ಹಾಂಗ್ ಕಾಂಗ್‌ನ ಚು ಮನ್ ಕೈ ಅವರನ್ನು ಸೋಲಿಸುವ ಮೂಲಕ ಭಾರತದ ಪ್ಯಾರಾ-ಶಟ್ಲರ್ ಕೃಷ್ಣ ನಾಗರ ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ SH6 ಈವೆಂಟ್‌ನ ಫೈನಲ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತವು ತನ್ನ ಪದಕದ ಪಟ್ಟಿಯನ್ನು 19 ಕ್ಕೆಹೆಚ್ಚಿಸಿಕೊಂಡಿತು. ಕೃಷ್ಣ ನಾಗರ 21-17, 16-21 … Continued

ಟೋಕಿಯೊ ಪ್ಯಾರಾಲಿಂಪಿಕ್ಸ್‌: ಬ್ಯಾಡ್ಮಿಂಟನ್ ನಲ್ಲಿ ಐಎಎಸ್‌ ಅಧಿಕಾರಿ, ಕನ್ನಡಿಗ ಸುಹಾಸಗೆ ಬೆಳ್ಳಿ

ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾನುವಾರ ಬೆಳಿಗ್ಗೆ ನಡೆದ ಪುರುಷರ ಬ್ಯಾಡ್ಮಿಂಟನ್‌ (ಎಸ್‌ಎಲ್‌-4) ಫೈನಲ್‌ನಲ್ಲಿ ಫ್ರಾನ್ಸ್‌ನ ಲೂಕಾಸ್‌ ಮಜೂರ್‌ ಎದುರು ಭಾರತದ ಸುಹಾಸ್ ಯತಿರಾಜ್ ಸೋಲು ಅನುಭವಿಸಿದರು. ಆದರೆ ಈ ಬೆಳ್ಳಿ ಪದಕ ಪಡೆದಿದ್ದಾರೆ. ಪ್ರಸ್ತುತ ನೋಯ್ಡಾದ ಗೌತಮ ಬುದ್ಧ ನಗರದ ಜಿಲ್ಲಾಧಿಕಾರಿಯಾಗಿರುವ (ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್‌) ಕನ್ನಡಿಗ ಸುಹಾಸ್ ಯತಿರಾಜ್, ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರುವ ಭಾರತದ ಮೊದಲ … Continued

ಟಿಎಂಸಿ ಸೇರಿದ ಬಿಜೆಪಿ ಶಾಸಕ ಸೌಮೆನ್ ರಾಯ್; 4 ವಾರಗಳಲ್ಲಿ ನಾಲ್ವರು ಬಿಜೆಪಿ ಶಾಸಕರು ಪಕ್ಷಾಂತರ..!

ಕೋಲ್ಕತ್ತಾ: ಚುನಾವಣಾ ಆಯೋಗವು ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಉಪಚುನಾವಣೆಯ ದಿನಾಂಕ ಘೋಷಿಸಿದ ದಿನವೇ ಬಿಜೆಪಿ ಶಾಸಕ ಸೌಮೆನ್ ರಾಯ್ ಶನಿವಾರ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಸಿಗೆ ಸೇರಿದ್ದಾರೆ. ಕಲಿಯಗಂಜ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಸೌಮೆನ್ ರಾಯ್ ಅವರು ಈ ಹಿಂದೆ ಟಿಎಂಸಿಯ ಸದಸ್ಯರಾಗಿದ್ದರು. “ಬಿಜೆಪಿ ಶಾಸಕ ಸೌಮೆನ್ ರಾಯ್ ಬಂಗಾಳ ಮತ್ತು ಉತ್ತರ ಬಂಗಾಳದ … Continued

ನಾಯಿಗಳ ಬಾಯಿಗೆ ಆ್ಯಸಿಡ್ ಹಾಕಿ ಕೊಲೆ: ಮಾನವೀಯತೆಯನ್ನೇ ಕೊಂದ ಪಾಪಿಗಳು

ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದಿದೆ. ನಗರದ ಪ್ರಮುಖ ರಸ್ತೆಯಲ್ಲಿದ್ದ ಓಡಾಡುತ್ತಿದ್ದ ಬೀದಿ ನಾಯಿಗಳನ್ನು ಆ್ಯಸಿಡ್ ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಈ ಬಗ್ಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾದ ನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉಜ್ಜೈನಿಯ ನಾಗಜಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ಬೀದಿ ನಾಯಿಗಳ ಬಾಯಿಗೆ ಕೆಲವು ಅಪರಿಚಿತ ವ್ಯಕ್ತಿಗಳು ಆ್ಯಸಿಡ್ ಹಾಕಿದ್ದಾರೆ … Continued