ಸಿಎಎ ವಿರುದ್ಧ ಪ್ರತಿಭಟನೆ ಪ್ರಕರಣ: ದರ್ಗಾ ಮುಖ್ಯಸ್ಥನ ಬಂಧನ, ರಾಂಪುರ ಜಿಲ್ಲೆ ಉದ್ವಿಗ್ನ

ಲಕ್ನೋ: 2019ರ ಡಿಸೆಂಬರ್ 21ರಂದು ಜಿಲ್ಲೆಯಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಶನಿವಾರ ಪ್ರಸಿದ್ಧ ಹಫೀಜ್ ಷಾ ದರ್ಗಾ ಮುಖ್ಯಸ್ಥ ಶಾ ಫರ್ಹತ್ ಅಹ್ಮದ್ ಜಮಾಲಿ ಮತ್ತು ಇತರ ಮೂವರನ್ನು ಬಂಧಿಸಿದ ನಂತರ ರಾಂಪುರ್ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟಾಗಿದೆ. 2019 ರ ಡಿಸೆಂಬರ್ 21 ರಂದು ಪೌರತ್ವ … Continued

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೃತರ ಸಂಖ್ಯೆ ೧೫ಕ್ಕೆ ಏರಿಕೆ

ತಮಿಳುನಾಡಿನ ವಿರುಧ್‌ನಗರ ಜಿಲ್ಲೆಯಲ್ಲಿ ನಡೆದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ೧೫ಕ್ಕೇರಿದೆ. 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ವಿರುಧ್‌ ನಗರ್ ಜಿಲ್ಲೆಯ ಸತ್ತೂರು ಬಳಿಯ ಅಚಂಕುಲಂನಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ 1:45ಕ್ಕೆ ಸ್ಫೋಟ ಸಂಭವಿಸಿತ್ತು. ಅಗ್ನಿಶಾಮಕ ದಳದ ಸುಮಾರು ೩೦ ಸಿಬ್ಬಂದಿ ಬೆಂಕಿ … Continued

ಸೂಕ್ತ ಸಮಯಕ್ಕೆ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಪಟ್ಟ: ಅಮಿತ್‌ ಶಾ

ನದೆಹಲಿ: ಸೂಕ್ತ ಸಂದರ್ಭದಲ್ಲಿ ಜಮ್ಮು ಹಾಗೂ ಕಾಶ್ಮೀರಕ್ಕೆ ರಾಜ್ಯದ ಸ್ಥಾನ ನೀಡಲಾಗುವುದು ಎಂದು ಹೇಳಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಜಮ್ಮು-ಕಾಶ್ಮೀರ ಪುನರ್‌ ಸಂಘಟನೆ ತಿದ್ದುಪಡಿ ಮಸೂದೆಗೂ ರಾಜ್ಯದ ಸ್ಥಾನ ನೀಡುವುದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದರು. ಅವರು ಲೋಕಸಭೆಯಲ್ಲಿ ಮಾತನಾಡಿ, ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನ ನೀಡುವುದರ ಬಗ್ಗೆ ಸಂಸದರಲ್ಲಿ ಯಾವುದೇ ಸಂದೇಹಬೇಡ. ಸೂಕ್ತ ಸಮಯದಲ್ಲಿ … Continued

ವಿವಾದಾತ್ಮಕ ತೀರ್ಪು ನೀಡಿದ ನ್ಯಾಯಮೂರ್ತಿ ಬಾಂಬೆ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶೆ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ವಿವಾದಾತ್ಮಕ ತೀರ್ಪು ನೀಡಿದ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಬಾಂಬೆ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾಗ್ಪುರ ನ್ಯಾಯಪೀಠದ ಹಿರಿಯ ನ್ಯಾಯಮೂರ್ತಿ ನಿತಿನ್ ಜಮರ್ ಪ್ರಮಾಣ ವಚನ ಬೋಧಿಸಿದರು. ಈ ಹಿಂದೆ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗಣದೇವಾಲಾ ಅವರನ್ನು … Continued

ರೈತ ಹೋರಾಟದಲ್ಲಿ ಭಿನ್ನಾಭಿಪ್ರಾಯ

ಲಖನೌ: ರೈತರ ಆಂದೋಲನವನ್ನು ಇನ್ನಷ್ಟು ತೀವ್ರಗೊಳಿಸುವ ದಿಸೆಯಲ್ಲಿ ರೈತ ಸಂಘಟನೆಗಳ ಮಧ್ಯೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, ಭಾರತೀಯ ಕಿಸಾನ್‌ ಯೂನಿಯನ್‌ ರೈಲ್‌ ರೋಕೊ ಕರೆ ನೀಡಿದ್ದರೆ, ಇದಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ವಿರೋಧ ವ್ಯಕ್ತಪಡಿಸಿದೆ. ನಾವು ರೈಲು ಅಥವಾ ಬಸ್ಸುಗಳ ಸಂಚಾರ ಸ್ಥಗಿತಗೊಳಿಸಲು ಇಚ್ಛಿಸುವುದಿಲ್ಲ. ಸಾರ್ವಜನಿಕರಿಗೆ ತೊಂದರೆ ನೀಡುವುದು ನಮ್ಮ ಉದ್ದೇಶವಲ್ಲ. ನಮ್ಮದು ಶಾಂತಿಯುತ ಹೋರಾಟ ಎಂದು … Continued

ರೈತ ವಿರೋಧಿ ಕಾನೂನುಗಳು ದೇಶವಾಸಿಗಳ ಮೇಲೆ ನಡೆಸಿದ ದಾಳಿ: ರಾಹುಲ್‌ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ದಾಳಿ ಮುಂದುವರೆಸಿದ ರಾಹುಲ್‌ ಗಾಂಧಿ, ರೈತ ವಿರೋಧಿ ಮೂರು ಕಾನೂನುಗಳು ಕೇವಲ ರೈತರ ಮೇಲಷ್ಟೇ ಅಲ್ಲ, ದೇಶದ ಶೇ.೪೦ರಷ್ಟು ಜನರ ಮೇಲೆ ನಡೆಸಿದ ಆಕ್ರಮಣವಾಗಿದೆ ಎಂದು ತಿಳಿಸಿದ್ದಾರೆ. ಅವರು ರಾಜಸ್ಥಾನದಲ್ಲಿ ರೈತರ ಆಂದೋಲನ ಬೆಂಬಲಿಸಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿ, ಉತ್ತಮ ಭವಿಷ್ಯ ಖಚಿತಪಡಿಸಿಕೊಳ್ಳಲು … Continued

ರೈತರ ಪ್ರತಿಭಟನಾ ಸ್ಥಳದಲ್ಲಿ ಪ್ರತ್ಯೇಕ ಇಂಟರ್‌ನೆಟ್‌, ಸಿಸಿಟಿವಿ ಅಳವಡಿಕೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ಪ್ರತ್ಯೇಕ ಇಂಟರ್‌ನೆಟ್‌ ಹಾಗೂ ಸಿಸಿಟಿವಿ ಅಳವಡಿಸಿಕೊಳ್ಳುವ ಮೂಲಕ ಕೇಂದ್ರ ಸರಕಾರಕ್ಕೆ ಪ್ರತಿಭಟನಾನಿರತ ರೈತರು ಸವಾಲೆಸೆದಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಇಂಟರ್‌ನೆಟ್‌ ಕಡಿತಗೊಳಿಸಿದ ಕ್ರಮವನ್ನು ಖಂಡಿಸಿದ ಹೋರಾಟಗಾರರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಕಾನೂನು ರದ್ದುಪಡಿಸುವುದು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ … Continued

ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಿ: ಕೇಂದ್ರಕ್ಕೆ ಶಿವಸೇನಾ ಆಗ್ರಹ

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್‌ ಕೋಶ್ಯಾರಿ ಬಿಜೆಪಿ ದಾರಿಯಲ್ಲಿ ಸಾಗುತ್ತಿದ್ದು, ಸಂವಿಧಾನ ಎತ್ತಿಹಿಡಿಯಬೇಕಾದರೆ ಕೇಂದ್ರ ಸರಕಾರ ಕೂಡಲೇ ರಾಜ್ಯಪಾಲರನ್ನು ವಾಪಸ್‌ ಕರೆಸಿಕೊಳ್ಳಬೇಕೆಂದು ಮಹಾರಾಷ್ಟ್ರ ಆಡಳಿತ ನಡೆಸುತ್ತಿರುವ ಶಿವಸೇನೆ ಆಗ್ರಹಿಸಿದೆ. ಮಹಾವಿಕಾಸ್‌ ಅಘಾಡಿ ಸರಕಾರ ಸ್ಥಿರ ಮತ್ತು ದೃಢವಾಗಿದೆ. ರಾಜ್ಯ ಸರಕಾರವನ್ನು ಗುರಿಯಾಗಿಸಲು ಕೇಂದ್ರವು ರಾಜ್ಯಪಾಲರ ಹೆಗಲು ಬಳಸುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ. ರಾಜ್ಯಪಾಲ ಭಗತ್‌ಸಿಂಗ್‌ ಕೋಶ್ಯಾರಿ … Continued

ಪೆಟ್ರೋಲ್‌, ಡೀಸೆಲ್‌ ಮತ್ತೆ ತುಟ್ಟಿ

ನವದೆಹಲಿ: ಸತತ ೫ನೇ ದಿನ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯಲ್ಲಿ ಹೆಚ್ಚಳವಾಗಿದ್ದು, ಮುಂಬೈನಲ್ಲಿ ಪೆಟ್ರೋಲ್‌ ಬೆಲೆ ೯೫ರೂ. ತಲುಪಿದೆ. ಸರಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿ ಅಧಿಸೂಚನೆನ್ವಯ ಶನಿವಾರ ಪೆಟ್ರೋಲ್‌ ದರ ಲೀಟರ್‌ಗೆ ೩೦ ಪೈಸೆ ಹಾಗೂ ಡೀಸೆಲ್‌ ಪ್ರತಿ ಲೀಟರ್‌ಗೆ ೩೬ ಪೈಸೆ ಹೆಚ್ಚಳಗೊಂಡಿದೆ. ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ ೯೪.೯೩ ರೂ. ತಲುಪಿದ್ದರೆ, ಡೀಸೆಲ್‌ … Continued

ಪ್ರತಿಭಟಿಸುವ ಸ್ವಾತಂತ್ರ್ಯ ಎಲ್ಲ ಸಮಯದಲ್ಲಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಪ್ರತಿಭಟಿಸುವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಎಲ್ಲ ಸಮಯದಲ್ಲಿ ಮತ್ತು ಎಲ್ಲೆಡೆ ಇರಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ. ಪೌರತ್ವ ಕಾಯಿದೆ ವಿರೋಧಿಸಿ ದೆಹಲಿಯ ಶಹೀನ್‌ಭಾಗ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಈ ಹಿಂದೆ ಸರ್ವೋಚ್ಚ ನ್ಯಾಯಾಲಯ ಕಾನೂನುಬಾಹಿರ ಎಂದು ಹೇಳಿತ್ತು. ಇದನ್ನು ಮರುಪರಿಶೀಲನೆ ಮಾಡುವಂತೆ ಕೋರಿ 12 ಸಾಮಾಜಿಕ ಕಾರ್ಯಕರ್ತರು ಸುಪ್ರೀಂ ಕೋರ್ಟ್‌ ಮೊರೆ … Continued