ಟೋಕಿಯೊ ಪ್ಯಾರಾಲಿಂಪಿಕ್ಸ್ :ಜಾವಲಿನ್ ಥ್ರೋದಲ್ಲಿ ದೇವೇಂದ್ರ ಜಜಾರಿಯಾಗೆ ಬೆಳ್ಳಿ, ಗುರ್ಜರಗೆ ಕಂಚು

ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ದೇವೇಂದ್ರ ಜಜಾರಿಯಾ ಮತ್ತು ಸುಂದರ್ ಸಿಂಗ್ ಗುರ್ಜರ್ ಪುರುಷರ ಜಾವೆಲಿನ್ ಥ್ರೋನಲ್ಲಿ ಕ್ರಮವಾಗಿ ಬೆಳ್ಳಿ ಮತ್ತು ಕಂಚು ಗೆಲ್ಲುವ ಮೂಲಕ ಒಂದು ಕಂಚಿನ ಪದಕ ಪಡೆಯುವ ಮೂಲಕ ಭಾರತ ಆರು ಪದಕಗಳನ್ನು ತಲುಪಿದೆ. ಅಥೆನ್ಸ್ 2004 ಮತ್ತು ರಿಯೊ 2016 ರಲ್ಲಿ ಚಿನ್ನ ಗೆದ್ದ ಜಜಾರಿಯಾದ ಮೂರನೇ ಪ್ಯಾರಾಲಿಂಪಿಕ್ ಪದಕ … Continued

ಅವನಿ ಲೇಖಾರಾ ಪ್ಯಾರಾಲಿಂಪಿಕ್ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ, 10 ಮೀಟರ್ ಏರ್ ರೈಫಲ್‌ ನಲ್ಲಿ ಚಿನ್ನದ ಪದಕ

ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಮೊದಲ ಚಿನ್ನದ ಪದಕವನ್ನು ಅವನಿ ಲೇಖಾರಾ ಗೆದ್ದಿದ್ದಾರೆ. ಅವರು ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಮತ್ತು ಕ್ರೀಡಾಕೂಟದಲ್ಲಿ ಅಗ್ರ ಪದಕ ಗೆದ್ದ ಐದನೇ ಭಾರತೀಯರಾಗಿದ್ದಾರೆ. ಲೇಖಾರಾ ಫೈನಲ್‌ನಲ್ಲಿ ಒಟ್ಟು 249.6 ಅಂಕಗಳನ್ನು ಗಳಿಸಿದರು, ಡಿಸೆಂಬರ್ 2018 ರಲ್ಲಿ ಉಕ್ರೇನ್‌ನ ಇರಿನಾ ಶ್ಚೆಟ್ನಿಕ್ ಸ್ಥಾಪಿಸಿದ ವಿಶ್ವ ದಾಖಲೆಯನ್ನು ಸರಿಗಟ್ಟಿದರು. … Continued

58 ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳ ನಿರ್ಮಾಣಕ್ಕೆ ಟೆಂಡರ್ ಕರೆದ ರೈಲ್ವೆ

ನವದೆಹಲಿ: ಭಾರತೀಯ ರೈಲ್ವೆ ಇನ್ನೂ 58 ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳ ನಿರ್ಮಾಣಕ್ಕೆ ಟೆಂಡರ್ ಕರೆದಿದೆ. ಮುಂದಿನ ವರ್ಷ ಆಗಸ್ಟ್​ 23ರ ಒಳಗೆ 75 ಹೊಸ ರೈಲುಗಳನ್ನು ಓಡಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ. ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 75 ಹೊಸ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲುಗಳನ್ನು ಆರಂಭಿಸುವುದಾಗಿ ಘೋಷಿಸಿದ್ದರು. … Continued

ರಾಂಚಿಯಲ್ಲಿ 13 ವರ್ಷದ ಬಾಲಕಿ ಮೇಲೆ 7 ಜನರ ಸಾಮೂಹಿಕ ಅತ್ಯಾಚಾರ; 4 ಅಪ್ರಾಪ್ತರ ಬಂಧನ..!

ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಏಳು ಜನರು ಗುರುವಾರ 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ವರದಿಯಾಗಿದೆ. ರಾಂಚಿಯ ಮಂದಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಏಕಾಂತ ಸ್ಥಳದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳಲ್ಲಿ ಒಬ್ಬ ಅಪ್ರಾಪ್ತ ಹುಡುಗಿಯ ಸ್ನೇಹಿತ ಎಂದು ಹೇಳಲಾಗಿದೆ. ರಾಂಚಿ (ಗ್ರಾಮಾಂತರ) ಪೊಲೀಸ್ ಅಧೀಕ್ಷಕ ನೌಶಾದ್ ಆಲಂ … Continued

ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಹೈಜಂಪ್​ನಲ್ಲಿ ಬೆಳ್ಳಿ ಗೆದ್ದ ನಿಶಾದ್ ಕುಮಾರ್

ಟೋಕಿಯೊ: ಟೋಕಿಯೊ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ನಿಶಾದ್ ಕುಮಾರ್ ಪುರುಷರ ಟಿ 47 ಎತ್ತರ ಜಿಗಿತದಲ್ಲಿ 2.06 ಮೀಟರ್ ಜಿಗಿದು ಭಾರತಕ್ಕೆ ಬೆಳ್ಳಿ ಪದಕ ಪದಕ ತಂದುಕೊಟ್ಟಿದ್ದಾರೆ. ಅವರು ತಮ್ಮ ಎರಡನೇ ಪ್ರಯತ್ನದಲ್ಲಿ ಈ ಸಾಧನೆ ಮಾಡಿದರು. ಟೋಕಿಯೊ ಪ್ಯಾರಾ ಒಲಿಂಪಿಕ್ಸ್ -2020 ರಲ್ಲಿ ಭಾರತಕ್ಕೆ ಈ ಮೊದಲು ಭಾವಿನಾ ಪಟೇಲ್‌ ಟೇಬಲ್‌ ಟೆನ್ನಿಸ್‌ನಲ್ಲಿ ಬೆಳ್ಳಿ ಪದಕ … Continued

ಡ್ರಗ್ ಪ್ರಕರಣ: ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಬಂಧನ

ಮುಂಬೈ: ಬಾಲಿವುಡ್ ಡ್ರಗ್ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಎನ್‍ಸಿಬಿ ಅಧಿಕಾರಿಗಳು ಬಾಲಿವುಡ್‌ ನಟ ಅರ್ಮಾನ್ ಕೋಹ್ಲಿ ಅವರನ್ನು ಬಂಧಿಸಿದ್ದಾರೆ. ಬಾಲಿವುಡ್ ಡ್ರಗ್ ಕೇಸ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದ ಎನ್‍ಸಿಬಿ ಅಧಿಕಾರಿಗಳು ಅರ್ಮಾನ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಅವರ ಮನೆಯಲ್ಲಿದ್ದ ನಿಷೇಧಿತ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದರು. ಇಂದು ಅರ್ಮಾನ್ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ … Continued

ಪ್ಯಾರಾ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಭಾವಿನಾಗೆ ಗುಜರಾತ್‌ ಸರ್ಕಾರಿದಂದ 3 ಕೋಟಿ ರೂ. ನಗದು ಬಹುಮಾನ

ಅಹಮದಾಬಾದ್:ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಪಟೇಲ್ ಅವರಿಗೆ ದಿವ್ಯಾಂಗ್ ಖೇಲ್ ಪ್ರತಿಭಾ ಪ್ರೊತ್ಸಾಹನ್‌ ಪುರಸ್ಕಾರ್‌ ಯೋಜನೆಯಡಿ ಗುಜರಾತ್‌ ಸರ್ಕಾರ 3 ಕೋಟಿ ರೂ. ರೂಪಾಯಿ ನಗದು ಬಹುಮಾನ ನೀಡುವುದಾಗಿ ಹೇಳಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಭಾವಿಕಾ ಪಟೇಲ್‌ ಅಭಿನಂದಿಸಿದ್ದಾರೆ. … Continued

ಆಗ್ರಾ: ಪ್ರೆಶರ್‌ ಕುಕ್ಕರಿನಲ್ಲಿ ಸಿಲುಕಿಕೊಂಡ ಪುಟ್ಟ ಮಗುವಿನ ತಲೆ ಹೊರ ತೆಗೆದ ವೈದ್ಯರ ತಂಡ

ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿರುವ ಖಾಸಗಿ ಆಸ್ಪತ್ರೆಯ ವೈದ್ಯರ ತಂಡವು ಎರಡು ಗಂಟೆಗಳ ಕಠಿಣ ಪರಿಶ್ರಮದ ನಂತರ ಪ್ರೆಶರ್ ಕುಕ್ಕರ್‌ನಲ್ಲಿ ಸಿಲುಕಿಕೊಂಡಿದ್ದ ಮಗುವಿನ ತಲೆಯನ್ನು ಹೊರ ತೆಗೆದಿದೆ. ಕುಟುಂಬ ಸದಸ್ಯರ ಪ್ರಕಾರ, ಒಂದೂವರೆ ವರ್ಷದ ಬಾಲಕ ಶನಿವಾರ ನಗರದ ತನ್ನ ಚಿಕ್ಕಪ್ಪನ ಮನೆಯಲ್ಲಿ ಆಟವಾಡುತ್ತಿದ್ದಾಗ ತಲೆ ಕುಕ್ಕರ್ ಒಳಗೆ ಸಿಲುಕಿಕೊಂಡಿದೆ. ಕುಟುಂಬದ ಸದಸ್ಯರು ಮನೆಯಲ್ಲಿ ಮಗುವಿನ … Continued

ಬದುಕ್ಕಿದ್ದಾಗಲೇ ತಾವು ಸತ್ತಿದ್ದೇವೆ ಎಂದು ಪರಿಹಾರ ಪಡೆದಿದ್ದ ಗ್ರಾಮಸ್ಥರು..!

ಚಿಂದ್ವಾರಾ: ಬದುಕಿದ್ದರೂ ತಮ್ಮ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ ಕೂಲಿ ಕಾರ್ಮಿಕರ ಯೋಜನೆಯಡಿ ಪರಿಹಾರ ಪಡೆದು ವಂಚಿಸಿರುವ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮಧ್ಯಪ್ರದೇಶ ಕೃಷಿ ಸಚಿವ ಕಮಲ್ ಪಟೇಲ್ ತಿಳಿಸಿದ್ದಾರೆ. ಚಿಂದ್ವಾರಾ ಜಿಲ್ಲೆಯ 23ಕ್ಕೂ ಹೆಚ್ಚು ಮಂದಿ ತಾವು ಬದುಕಿದ್ದರೂ ತಮ್ಮ ಸಾವಿನ ನಕಲಿ ಮರಣ … Continued

ಸೆಪ್ಟೆಂಬರ್‌ 15ರಿಂದ ವಾಹನಗಳಿಗಾಗಿ ಹೊಸ BH ಸಂಖ್ಯೆ ಸರಣಿ ಜಾರಿಗೆ: ಅದು ಜನರಿಗೆ ಹೇಗೆ ಅನುಕೂಲ?

ನವದೆಹಲಿ: ಭಾರತದ ರಾಜ್ಯಗಳಾದ್ಯಂತ ತಡೆರಹಿತ ವರ್ಗಾವಣೆ ಖಚಿತಪಡಿಸಿಕೊಳ್ಳಲು ಕೇಂದ್ರವು ಹೊಸ ವಾಹನ ನೋಂದಣಿ ಸರಣಿಯನ್ನು ಪರಿಚಯಿಸಿದೆ. BH (ಭಾರತ್ ಸರಣಿ) ಎಂದು ಕರೆಯಲ್ಪಡುವ ಇದು ವಾಹನ ಮಾಲೀಕರು ಒಂದು ರಾಜ್ಯ/ಕೇಂದ್ರಾಡಳಿತ ಪ್ರದೇಶದಿಂದ ಇನ್ನೊಂದು ರಾಜ್ಯಕ್ಕೆ ಸ್ಥಳಾಂತರಗೊಂಡಾಗ ಮರು ನೋಂದಣಿ ಪ್ರಕ್ರಿಯೆಯಿಂದ ಅವರನ್ನು ಮುಕ್ತಗೊಳಿಸುತ್ತದೆ. ಈ ಸರಣಿಯನ್ನು ರಸ್ತೆ ಸಾರಿಗೆ ಸಚಿವಾಲಯ ಪರಿಚಯಿಸಿದೆ ಮತ್ತು ಕೇಂದ್ರ ಸರ್ಕಾರದಿಂದ … Continued