ಕೊವಿಡ್‌ ಲಸಿಕೆಯಷ್ಟೇ ಅಲ್ಲ,ಕೆಲವು ರಾಜ್ಯಗಳಲ್ಲಿ ರೆಮ್ಡೆಸಿವಿರ್ ಕೊರತೆ ..!?

ನವ ದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ಅಭಿಯಾನ ವಿಸ್ತರಣೆ ಮಾಡುತ್ತಿರುವ ಸಂದರ್ಭದಲ್ಲಿ ತಮ್ಮ ರಾಜ್ಯಗಳಲ್ಲಿ ಲಸಿಕೆ ಕೊರತೆಯುಂಟಾಗಿದೆ ಎಂದು ರಾಜಸ್ತಾನ ಮತ್ತು ಆಂಧ್ರ ಪ್ರದೇಶ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದಲ್ಲಿ ಅನೇಕ ಕಡೆ ಲಸಿಕಾ ಕೇಂದ್ರಗಳನ್ನು ಕೊರತೆ ಕಾರಣದಿಂದ ಮುಚ್ಚಲಾಗಿದೆ ಎಂದು ತಿಳಿಸಲಾಗಿದೆ.ಈಗ ರೆಮ್ಡೆಸಿವಿರ್ ಲಸಿಕೆಯ ಕೊರತೆ ಬಗ್ಗೆ ಕೆಲ ರಾಜ್ಯಗಳಲ್ಲಿ ವರದಿಯಾಗಿದೆ. … Continued

ಆರೆಸ್ಸೆಸ್‌ ಮುಖ್ಯಸ್ಥ ಮೋಹನ ಭಾಗವತ್‌ಗೆ ಕೊರೊನಾ ಸೋಂಕು

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕೊವಿಡ್-19 ಸೋಂಕು ತಗುಲಿರುವು ಹಿನ್ನೆಲೆ ಮೋಹನ್ ಭಾಗವತ್ ಅವರನ್ನು ನಾಗ್ಪುರದಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇತ್ತೀಚಿನ ದಿನಗಳಲ್ಲಿ ಅವರ ಜೊತೆಗೆ ಸಂಪರ್ಕಕ್ಕೆ … Continued

ಭಾರತದ ಅತಿಹೆಚ್ಚು ಏಕದಿನದ ಸ್ಟ್ರೈಕ್‌..1.45 ಲಕ್ಷಕ್ಕೂ ಹೆಚ್ಚು ದೈನಂದಿನ ಸೋಂಕು..ಸೆಪ್ಟೆಂಬರ್‌ ನಂತರ 10 ಲಕ್ಷ ದಾಟಿದ ಸಕ್ರಿಯ ಪ್ರಕರಣ

ನವ ದೆಹಲಿ: ಭಾರತದಲ್ಲಿ ದೈನಂದಿನ ಕೊರೊನಾ ಸೋಂಕು ಹೆಚ್ಚಳ ಮುಂದುವರಿದಿದ್ದು ಶನಿವಾರ 1,45,384 ತಾಜಾ ಪ್ರಕರಣಗಳನ್ನು ವರದಿ ಮಾಡಿದೆ, ಇದುವರೆಗಿನ ಏಕೈಕ ಏಕದಿನದ ಅತಿ ಹೆಚ್ಚು ಸ್ಪೈಕ್ ಆಗಿದೆ, ಇದು ಒಟ್ಟಾರೆ ಸೋಂಕಿತರ ಸಂಖ್ಯೆ 1,32,05,926 ಕ್ಕೆ ತಲುಪಿದೆ. 2020 ರಲ್ಲಿ ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರ ಇದು ಐದನೇ ಬಾರಿಗೆ ಭಾರತದ 24 ಗಂಟೆಗಳ … Continued

ನಾಗ್ಪುರ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ನಾಲ್ವರ ಸಾವು

ಮಹಾರಾಷ್ಟ್ರದ ನಾಗ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಗರದ ವಾಡಿ ಪ್ರದೇಶದಲ್ಲಿರುವ ಆಸ್ಪತ್ರೆಯಲ್ಲಿ ರಾತ್ರಿ 8.10 ಕ್ಕೆ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದರು. ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಐಸಿಯುನ ಎಸಿ ಘಟಕದಿಂದ ಬೆಂಕಿ ಪ್ರಾರಂಭವಾಗಿದೆ ಎಂದು ವರದಿಯಾಗಿದೆ. ಬೆಂಕಿ … Continued

ಕೊರೊನಾ ಲಸಿಕೆ ರಫ್ತು ವಿರೋಧಿಸಿದ ರಾಹುಲ್‌ ಗಾಂಧಿ

ನವದೆಹಲಿ: ವಿದೇಶಗಳಿಗೆ ಕೋವಿಡ್-19 ಲಸಿಕೆಗಳನ್ನು ರಫ್ತು ಮಾಡುತ್ತಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶವಾಸಿಗಳು ಅಪಾಯದಲ್ಲಿರುವಾಗ ಲಸಿಕೆಗಳನ್ನು ರಫ್ತು ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. ಲಸಿಕೆ ನೀಡುವಿಕೆಯಲ್ಲಿ ಕೇಂದ್ರ ಸರ್ಕಾರ ಪಕ್ಷಪಾತ ಮಾಡಬಾರದು. ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಕೆಲಸ ಮಾಡಬೇಕು. ದೇಶದಲ್ಲಿ ಕೊರೋನಾ ಸೋಂಕು … Continued

ರೈತರಿಗೆ ಸಿಹಿ ಸುದ್ದಿ.. ರಸಗೊಬ್ಬರ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಬ್ರೇಕ್‌..!

  ನವದೆಹಲಿ: ರಸಗೊಬ್ಬರದ ಬೆಲೆಯನ್ನು ಇಫ್ಕೊ ಕಂಪನಿ ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದ್ದಕ್ಕೆ ರೈತ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಹೀಗಾಗಿ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆಗೆ ಬ್ರೇಕ್‌ ಹಾಕಿದೆ. ಯಾವುದೇ ಕಾರಣಕ್ಕೂ ರಸಗೊಬ್ಬರದ ದರಗಳಲ್ಲಿ ಹೆಚ್ಚಳ ಮಾಡದಂತೆ ಕಂಪನಿಗಳಿಗೆ ನಿರ್ದೇಶನ ನೀಡಿದೆ. ಯೂರಿಯಾ ಅಲ್ಲದ ರಸಗೊಬ್ಬರಗಳ ಎಂ.ಆರ್.ಪಿ.ಯನ್ನು ಹೆಚ್ಚಳ ಮಾಡದಂತೆ ಕೇಂದ್ರ ಸರ್ಕಾರ … Continued

ಧಾರ್ಮಿಕ ಮತಾಂತರ: ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್

ನವ ದೆಹಲಿ: 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮ ಆಯ್ಕೆಮಾಡಿಕೊಳ್ಳಲು ಮುಕ್ತರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೂಢನಂಬಿಕೆ, ಪ್ರಚೋದನೆ, ಮಾಟ-ಮಂತ್ರ, ಆರ್ಥಿಕ ಲಾಭದ ಹೆಸರಿನಲ್ಲಿ ಮತಾಂತರ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಅಶ್ವಿನಿ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, … Continued

ಕೇಂದ್ರ ಸರ್ಕಾರ ೧೦ ಕೋಟಿ ರೂ. ಪರಿಹಾರದ ಠೇವಣಿ ಇರಿಸಿದರೆ ಮಾತ್ರವೇ ಇಟಲಿ ನಾವಿಕರಿಗೆ ಮುಕ್ತಿ: ಸುಪ್ರೀಂಕೋರ್ಟ್‌

ನವ ದೆಹಲಿ: ಕೇಂದ್ರ ಸರ್ಕಾರವು ತನ್ನ ಮುಂದೆ 10 ಕೋಟಿ ರೂಪಾಯಿ ಪರಿಹಾರದ ಠೇವಣಿ ಇರಿಸಿದರೆ ಮಾತ್ರವೇ ಇಟಲಿಯ ಇಬ್ಬರು ನಾವಿಕರ ವಿರುದ್ಧದ ಅಪರಾಧ ಪ್ರಕರಣವನ್ನು ಅಂತ್ಯಗೊಳಿಸುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ತಿಳಿಸಿದೆ. ಕೇರಳದ ಕರಾವಳಿ ತೀರದಲ್ಲಿ ಭಾರತದ ಇಬ್ಬರು ಮೀನುಗಾರರರನ್ನು 2012ರಲ್ಲಿ ಹತ್ಯೆ ಮಾಡಿದ ಪ್ರಕರಣದಲ್ಲಿ ಇಟಲಿಯ ನೌಕಾಪಡೆಯ ಸಾಲ್ವಟೊರ್ ಗಿರೊನ್ ಮತ್ತು ಮಿಸ್ಸಿಮಿಲಿಯಾನೊ ಲಾಟೊರ್ರೆ … Continued

ಕೊವಿಡ್ ಲಸಿಕೆ ಬದಲು ಮೂವರು ಮಹಿಳೆಯರಿಗೆ ‌ರೇಬೀಸ್‌ ಲಸಿಕೆ…!!

ಮುಜಫರ್‌ನಗರ: ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೂವರು ಮಹಿಳೆಯರಿಗೆ ಕೋವಿಡ್ -19 ಲಸಿಕೆ ಬದಲು ರೇಬೀಸ್ ವಿರೋಧಿ ಚುಚ್ಚುಮದ್ದನ್ನು ನೀಡಲಾಗಿದೆ ಎಂದು ಅವರ ಕುಟುಂಬಗಳು ಶುಕ್ರವಾರ ಹೇಳಿಕೊಂಡಿವೆ. ಕೊರೊನಾ ವೈರಸ್ ವಿರುದ್ಧ ಲಸಿಕೆ ಪಡೆಯಲು ಸರೋಜ (70), ಅನಾರ್ಕಲಿ (72) ಮತ್ತು ಸತ್ಯವತಿ (60) ಎಂಬ ಮಹಿಳೆಯರು ಗುರುವಾರ ಕಾಂಧ್ಲಾದ ಸರ್ಕಾರಿ ಸಮುದಾಯ … Continued

ಏರ್‌ಏಷ್ಯಾ ವಿಮಾನದಲ್ಲಿ ಬೆತ್ತಲಾಗಿ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿದ ಕುಡುಕ…!

ಬೆಂಗಳೂರು: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ವಿಮಾನದಲ್ಲಿಯೇ ಬೆತ್ತಲಾಗಿ, ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿದ ಘಟನೆ ಇತ್ತೀಚಿಗೆ ಬೆಂಗಳೂರಿನಿಂದ ನವದೆಹಲಿಗೆ ತೆರಳುತ್ತಿದ್ದ ಏರ್ ಏಷ್ಯಾ ಇಂಡಿಯಾ ವಿಮಾನದಲ್ಲಿ ನಡೆದಿದೆ. ದೆಹಲಿಯಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಈ ವ್ಯಕ್ತಿಯ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 6 ರಂದು i5-722 ವಿಮಾನದಲ್ಲಿ ಈ ಘಟನೆ ನಡೆದಿದ್ದು, ಅಂದು … Continued