ಬಿಹಾರ ಜಾತಿಗಣತಿಗೆ ಹೈಕೋರ್ಟ್‌ ತಡೆಯಾಜ್ಞೆ ತೆರವಿಗೆ ಸುಪ್ರೀಂ ಕೋರ್ಟ್‌ ನಕಾರ

ನವದೆಹಲಿ : ಬಿಹಾರ ಸರ್ಕಾರ ಜಾತಿ ಗಣತಿ ನಡೆಸದಂತೆ ಪಾಟ್ನಾ ಹೈಕೋರ್ಟ್ ವಿಧಿಸಿದ್ದ ತಡೆಯಾಜ್ಞೆ ತೆರವಿಗೆ ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಪಾಟ್ನಾ ಹೈಕೋರ್ಟ್ ಜುಲೈ 3 ರಂದು ಅಂತಿಮ ವಿಚಾರಣೆಗೆ ಪ್ರಕರಣವನ್ನು ಪಟ್ಟಿ ಮಾಡಿರುವುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ರಾಜೇಶ್ ಬಿಂದಾಲ್ ಅವರಿದ್ದ ಪೀಠ ಬಿಹಾರ ಸರ್ಕಾರಕ್ಕೆ ರಿಲೀಫ್‌ ನೀಡಲು ನಿರಾಕರಿಸಿತು. … Continued

ದಲಿತರನ್ನು ಉಪಮುಖ್ಯಮಂತ್ರಿ ಮಾಡದಿದ್ದರೆ…: ಕಾಂಗ್ರೆಸ್ ನಾಯಕ ಡಾ. ಪರಮೇಶ್ವರ ಹೇಳಿದ್ದೇನು..?

ಬೆಂಗಳೂರು: ದಲಿತರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡದಿದ್ದಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಿ ಪಕ್ಷಕ್ಕೆ ತೊಂದರೆಯಾಗಲಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜಿ ಪರಮೇಶ್ವರ ಅವರು ಹೇಳಿದ್ದಾರೆ. ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಾ. ಪರಮೇಶ್ವರ ಅವರು ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾಗಿ (ಎಂಟು ವರ್ಷಗಳು) … Continued

ಮೇ 28ರಂದು ನೂತನ ಸಂಸತ್ ಕಟ್ಟಡ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೇ 28 ರಂದು ಉದ್ಘಾಟಿಸಲಿದ್ದಾರೆ. ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,200 ಸಂಸದರು ಇರಬಹುದಾಗಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಪ್ರಧಾನಿಯವರನ್ನು ಭೇಟಿ ಮಾಡಿ ನೂತನ ಸಂಸತ್ ಭವನವನ್ನು ಉದ್ಘಾಟಿಸುವಂತೆ ಆಹ್ವಾನಿಸಿದರು. ಹೊಸ ಕಟ್ಟಡವು ಸ್ವಾವಲಂಬಿ ಭಾರತ ಅಥವಾ ಆತ್ಮನಿರ್ಭರ ಭಾರತದ ಚೈತನ್ಯವನ್ನು … Continued

ಜಲ್ಲಿಕಟ್ಟು, ಕಂಬಳ ಕ್ರೀಡೆಗಳಿಗೆ ಸುಪ್ರೀಂ ಕೋರ್ಟ್‌ ಅನುಮತಿ; ತಿದ್ದುಪಡಿ ಕಾಯಿದೆ ಎತ್ತಿ ಹಿಡಿದ ನ್ಯಾಯಾಲಯ

ನವದೆಹಲಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆಗೆ (ಪಿಸಿಎ) ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಗಳ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ ಗುರುವಾರ ಎತ್ತಿಹಿಡಿದಿದೆ. ಆ ಮೂಲಕ ರಾಜ್ಯದ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ನೀಡಿದೆ. ಇದೇ ವೇಳೆ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳನ್ನು ಕೂಡ ನ್ಯಾಯಾಲಯ … Continued

ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನಕ್ಕೆ ನಿಷೇಧ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನವನ್ನು ನಿಷೇಧಿಸಿ ಪಶ್ಚಿಮ ಬಂಗಾಳ ಸರ್ಕಾರ ಮೇ 8 ರಂದು ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಗುರುವಾರ ತಡೆ ನೀಡಿದೆ. ಪಶ್ಚಿಮ ಬಂಗಾಳ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಪಶ್ಚಿಮ ಬಂಗಾಳ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು … Continued

ಮುಂಬೈ 26/11 ದಾಳಿ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಕೋರ್ಟ್ ಅನುಮತಿ

ವಾಷಿಂಗ್ಟನ್: 2008ರ ಮುಂಬೈ ಭಯೋತ್ಪಾದನಾ ದಾಳಿಯಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಪಾಕಿಸ್ತಾನಿ ಮೂಲದ ಕೆನಡಾದ ಉದ್ಯಮಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಅಮೆರಿಕದ ಕ್ಯಾಲಿಫೋರ್ನಿಯಾ ನ್ಯಾಯಾಲಯ ತೀರ್ಪು ನೀಡಿದೆ. ಮೇ 16ರಂದು ಲಾಸ್ ಏಂಜಲೀಸ್‌ನ ಸೆಂಟ್ರಲ್ ಡಿಸ್ಟ್ರಿಕ್ಟ್‌ನಲ್ಲಿರುವ ಅಮೆರಿಕದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಜಾಕ್ವೆಲಿನ್ ಚೂಲ್‌ಜಿಯನ್ ಅವರು 62 ವರ್ಷದ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬಹುದೆಂದು ನ್ಯಾಯಾಲಯವು … Continued

ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ: ಕಿರಣ್ ರಿಜಿಜು ಬದಲಿಗೆ ಅರ್ಜುನ ರಾಮ ಮೇಘವಾಲ್ ಕಾನೂನು ಸಚಿವರಾಗಿ ನೇಮಕ

ನವದೆಹಲಿ: ಕೇಂದ್ರ ಸಚಿವ ಸಂಪುಟದ ಪುನರ್ರಚನೆಯಲ್ಲಿ ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜು ಅವರನ್ನು ಗುರುವಾರ ಬದಲಾಯಿಸಲಾಗಿದೆ. ರಿಜಿಜು ಅವರ ಬದಲಿಗೆ ಕಾನೂನು ಸಚಿವ ಸ್ಥಾನವನ್ನು ಅರ್ಜುನ್ ರಾಮ್ ಮೇಘವಾಲ್ ಅವರಿಗೆ ನೀಡಲಾಗಿದೆ. ಮೇಘವಾಲ್‌ ಅವರು ತಮ್ಮ ಅಸ್ತಿತ್ವದಲ್ಲಿರುವ ತಮ್ಮ ಖಾತೆಗಳಿಗೆ ಹೆಚ್ಚುವರಿಯಾಗಿ ಕಾನೂನು ಮತ್ತು ನ್ಯಾಯ ಸಚಿವಾಲಯದ ರಾಜ್ಯ ಸಚಿವರಾಗಿ ಸ್ವತಂತ್ರ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಕಿರಣ್ … Continued

ಹವಾಮಾನ ಬದಲಾವಣೆಯಿಂದ ಏಷ್ಯಾದ ಶಾಖದ ಅಲೆಗಳು 30 ಪಟ್ಟು ಹೆಚ್ಚಾಗುವ ಸಾಧ್ಯತೆ: ಅಧ್ಯಯನ

ನವದೆಹಲಿ : ಹವಾಮಾನ ಬದಲಾವಣೆಯು ಬಾಂಗ್ಲಾದೇಶ, ಭಾರತ, ಲಾವೋಸ್ ಮತ್ತು ಥೈಲ್ಯಾಂಡ್‌ನಲ್ಲಿ ಕಳೆದ ತಿಂಗಳು ಕನಿಷ್ಠ 30 ಪಟ್ಟು ಹೆಚ್ಚು ಮಾರಣಾಂತಿಕ ಶಾಖದ ಅಲೆಗಳನ್ನು ಉಂಟುಮಾಡಿದೆ ಎಂದು ಬುಧವಾರ ಪ್ರಕಟವಾದ ಅಧ್ಯಯನವೊಂದು ತಿಳಿಸಿದೆ. ಭಾರತದ ಕೆಲವು ಭಾಗಗಳು ಏಪ್ರಿಲ್ ಮಧ್ಯದಲ್ಲಿ 44 ಡಿಗ್ರಿ ಸೆಲ್ಸಿಯಸ್ (111 ಫ್ಯಾರನ್‌ಹೀಟ್) ಗಿಂತ ಹೆಚ್ಚಿನ ತಾಪಮಾನವನ್ನು ಕಂಡವು, ಶಾಖದ ಹೊಡೆತದಿಂದ … Continued

ಅಧಿಕಾರ ಹಂಚಿಕೆ ಸೂತ್ರಕ್ಕೆ ಬಹುತೇಕ ಒಪ್ಪಿಕೊಂಡ ಡಿಕೆ ಶಿವಕುಮಾರ…ಆದ್ರೂ ಮುಂದುವರಿದ ಸಿಎಂ ಆಯ್ಕೆ ಕಗ್ಗಂಟು ಯಾಕೆಂದರೆ…

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಯಾರೆಂದು ನಿರ್ಧರಿಸಲು ಚರ್ಚೆಗಳು ಮತ್ತು ಸರಣಿ ಸಭೆಗಳು ಸಭೆಗಳು ಮುಂದುವರೆದೆ. ಈ ಮಧ್ಯೆ ಕಾಂಗ್ರೆಸ್‌ ಹೈಕಮಾಂಡ್‌ ಪ್ರಸ್ತಾಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಮಧ್ಯೆ ಅಧಿಕಾರ ಹಂಚಿಕೆ ಒಪ್ಪಂದಕ್ಕೆ ಶಿವಕುಮಾರ ಒಪ್ಪಿಕೊಂಡಿದ್ದರೂ ಐದು ವರ್ಷಗಳ ಅಧಿಕಾರಾವಧಿಯ ಮೊದಲ ಅವಧಿಯಲ್ಲೇ ತನಗೆ ಮುಖ್ಯಮಂತ್ರಿ ನೀಡಬೇಕು … Continued

ಈ ಖಾರಿಫ್ ಋತುವಿನಲ್ಲಿ ರಸಗೊಬ್ಬರಗಳ ಸಬ್ಸಿಡಿಗಾಗಿ 1.08 ಲಕ್ಷ ಕೋಟಿ ರೂ.ಗಳಿಗೆ ಅನುಮೋದನೆ ನೀಡಿದ ಕೇಂದ್ರ ಸಂಪುಟ

ನವದೆಹಲಿ: ರೈತರಿಗೆ ಕೈಗೆಟುಕುವ ಮತ್ತು ಸಮಂಜಸವಾದ ಬೆಲೆಯಲ್ಲಿ ರಸಗೊಬ್ಬರಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು 2023-24 ಖಾರಿಫ್ ಋತುವಿಗೆ ರಸಗೊಬ್ಬರ ಸಬ್ಸಿಡಿ ಹಣಕ್ಕಾಗಿ 1.08 ಲಕ್ಷ ಕೋಟಿ ರೂಪಾಯಿಗಳನ್ನು ತೆಗೆದಿರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಈ ಖಾರಿಫ್ ಹಂಗಾಮಿಗೆ ಯೂರಿಯಾಕ್ಕೆ 70,000 ಕೋಟಿ ರೂಪಾಯಿ ಮತ್ತು ಡಿಎಪಿ ಮತ್ತು ಇತರ ರಸಗೊಬ್ಬರಗಳಿಗೆ 38,000 ಕೋಟಿ … Continued