ಅದಾನಿ ಕುರಿತ ಹಿಂಡೆನ್‌ಬರ್ಗ್‌ ವರದಿ: ಆಗಸ್ಟ್ 14ರೊಳಗೆ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸಲು ಸೆಬಿಗೆ ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: ಅದಾನಿ ಸಮೂಹ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಹಿಂಡೆನ್‌ ಬರ್ಗ್‌ ವರದಿಯ ಸುತ್ತಲಿನ ವಿವಾದ ಮತ್ತು ಆ ಸಂಸ್ಥೆಯ ವಿರುದ್ಧದ ಆರೋಪಗಳ ಕುರಿತು ನಡೆಸಿರುವ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸಲು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ(ಸೆಬಿ)ಗೆ ಸುಪ್ರೀಂ ಕೋರ್ಟ್‌ ಆಗಸ್ಟ್ 14ರ ವರೆಗೆ ಕಾಲಾವಕಾಶ ನೀಡಿದೆ. ಅದಾನಿ ಸಮೂಹದ ವ್ಯವಹಾರಗಳ ತನಿಖೆ ಹೆಚ್ಚು ಸಂಕೀರ್ಣಮಯವಾಗಿದ್ದು ತನಿಖೆ ಮಾಡಲು … Continued

ಪ್ರೇಮ ವಿವಾಹವಾದವರಲ್ಲೇ ಹೆಚ್ಚಿನ ವಿಚ್ಛೇದನಗಳಾಗುತ್ತಿವೆ : ಸುಪ್ರೀಂ ಕೋರ್ಟ್

ನವದೆಹಲಿ: ಪ್ರೇಮ ವಿವಾಹವಾದವರಲ್ಲೇ ಹೆಚ್ಚಿನ ವಿಚ್ಛೇದನಗಳು ಉಂಟಾಗುತ್ತಿವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಟೀಕಿಸಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂಜಯ ಕರೋಲ್ ಅವರ ಪೀಠವು ವೈವಾಹಿಕ ವಿವಾದದಿಂದ ಉದ್ಭವಿಸಿದ ವರ್ಗಾವಣೆ ಅರ್ಜಿಯ ವಿಚಾರಣೆ ನಡೆಸುತ್ತಿದ್ದಾಗ ಪ್ರಕರಣದ ವಕೀಲರು ವಿವಾಹವು ಪ್ರೇಮ ವಿವಾಹವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ನ್ಯಾಯಮೂರ್ತಿ ಗವಾಯಿ ಅವರು ಪ್ರತಿಕ್ರಿಯಿಸಿ, ಹೆಚ್ಚಿನ … Continued

ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಸ್ಸಾಂ ಕಾಂಗ್ರೆಸ್‌ ಯುವ ಘಟಕದ ಉಚ್ಚಾಟಿತ ನಾಯಕಿಯೊಬ್ಬರ ಗೌರವಕ್ಕೆ ಧಕ್ಕೆ ತಂದ ಆರೋಪದಲ್ಲಿ ಕರ್ನಾಟಕ ಮೂಲದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ. ತನಗೆ ಮಾನಸಿಕ ಹಿಂಸೆ ನೀಡಿದ್ದಾರೆಂದು ಆರೋಪಿಸಿ ಅಸ್ಸಾಂ ಕಾಂಗ್ರೆಸ್‌ ಯುವ ಘಟಕದ … Continued

ಭಯೋತ್ಪಾದಕರೊಂದಿಗೆ ನಂಟು: 6 ರಾಜ್ಯಗಳ 122 ಸ್ಥಳಗಳಲ್ಲಿ ಎನ್‌ಐಎ ದಾಳಿ

ನವದೆಹಲಿ: ಪಾಕಿಸ್ತಾನ ಮತ್ತು ಕೆನಡಾ ಸೇರಿದಂತೆ ವಿದೇಶಗಳಲ್ಲಿ ನೆಲೆಸಿರುವ ಗ್ಯಾಂಗ್‌ಸ್ಟರ್‌ಗಳು , ಮಾದಕವಸ್ತು ಕಳ್ಳಸಾಗಣೆದಾರರು ಮತ್ತು ಭಯೋತ್ಪಾದಕ ಗುಂಪುಗಳ ನಡುವಿನ ನಂಟು ಪ್ರಕರಣಗಳಿಗೆ ಸಂಬಂಧಿಸಿದಂತೆ ಹರಿಯಾಣ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಧ್ಯಪ್ರದೇಶ ರಾಜ್ಯಗಳ 122ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶೋಧ ಕಾರ್ಯವನ್ನು ತೀವ್ರಗೊಳಿಸಿದೆ. ಈವರೆಗೆ ಲಭ್ಯವಿರುವ … Continued

ಲೇಡಿ ಸಿಂಘಂ ಖ್ಯಾತಿಯ ಪೊಲೀಸ್ ಅಧಿಕಾರಿ ಅಪಘಾತದಲ್ಲಿ ಸಾವು : ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ

ಅಸ್ಸಾಂನಲ್ಲಿ ‘ಲೇಡಿ ಸಿಂಘಂ’ ಎಂದೇ ಹೆಸರು ಗಳಿಸಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನಾಗೂನ್‌ ನಗರದ ಸಮೀಪ ರಾಜ್ಯ ಹೆದ್ದಾರಿಯಲ್ಲಿ 30 ವರ್ಷ ವಯಸ್ಸಿನ ಜುನ್ಮೋನಿ ರಾಭಾ ಅವರು ಪ್ರಯಾಣಿಸುತ್ತಿದ್ದ ಕಾರು ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಜುನ್ಮೋನಿ ರಾಭಾ ಅವರು ಒಬ್ಬರೇ … Continued

ಉತ್ತರ ಪ್ರದೇಶ ನ್ಯಾಯಾಲಯದಲ್ಲಿ ಗುಂಡಿನ ಚಕಮಕಿ: ಇಬ್ಬರು ಕೊಲೆ ಆರೋಪಿಗಳ ಮೇಲೆ ಗುಂಡು ಹಾರಿಸಿದ ಇಬ್ಬರು

ಜೌನ್ಪುರ : : ಮಂಗಳವಾರ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತಂದಿದ್ದ ಇಬ್ಬರು ಕೊಲೆ ಆರೋಪಿಗಳ ಮೇಲೆ ಇಬ್ಬರು ವ್ಯಕ್ತಿಗಳು ಮನಬಂದಂತೆ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಜೌನ್‌ಪುರ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. 2022ರ  ಮೇ 6 ರಂದು ಧರ್ಮಪುರದಲ್ಲಿ ಕುಸ್ತಿಪಟು ಬಾದಲ್ ಯಾದವ್ ಅವರನ್ನು ಕೊಂದ ಇಬ್ಬರು ಆರೋಪಿಗಳಾದ ಸೂರ್ಯ ಪ್ರಕಾಶ್ ಮತ್ತು ಮಿಥಿಲೇಶ್ … Continued

ತನ್ನ ಒಂದು ವರ್ಷದ ಮಗುವನ್ನು ಸಿಎಂ ಇದ್ದ ವೇದಿಕೆಯ ಮೇಲೆ ಎಸೆದ ವ್ಯಕ್ತಿ..! ಕಾರಣ ತಿಳಿದರೆ ನಿಮ್ಮ ಕರುಳು ಕಿತ್ತು ಬರುತ್ತದೆ

ಸಾಗರ : ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ಅವರು ಸಾಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ವ್ಯಕ್ತಿಯೊಬ್ಬರು ತನ್ನ ಒಂದು ವರ್ಷದ ಮಗುವನ್ನು ವೇದಿಕೆಯ ಮೇಲೆ ಎಸೆದಿರುವ ಘಟನೆ ನಡೆದಿದೆ. ಇದು ಮಗುವಿನ ಜೀವ ಉಳಿಸಲು ತಂದೆಯ ಹತಾಶ ಪ್ರಯತ್ನವಾಗಿತ್ತು. ವೃತ್ತಿಯಲ್ಲಿ ಕೂಲಿ ಕಾರ್ಮಿಕರಾಗಿರುವ ಮುಖೇಶ ಪಟೇಲ್ ಎಂಬವರು ತಮ್ಮ ಸಂಕಷ್ಟದ ಬಗ್ಗೆ ಮುಖ್ಯಮಂತ್ರಿಗಳು ಗಮನ … Continued

ದೇವಸ್ಥಾನದಿಂದ ಕದ್ದ ಎಲ್ಲ ಆಭರಣಗಳನ್ನು 9 ವರ್ಷಗಳ ಬಳಿಕ ಹಿಂದಿರುಗಿಸಿದ ಕಳ್ಳ…ಕ್ಷಮೆಯಾಚನೆ ಪತ್ರದ ಜೊತೆಗೆ ಪ್ರಾಯಶ್ಚಿತಕ್ಕೆ ದಂಡದ ಹಣವನ್ನೂ ಇಟ್ಟುಹೋದ..!

ಭುವನೇಶ್ವರ : ದೇವಸ್ಥಾನದಿಂದ ಕಳ್ಳತನ ಮಾಡಿದ್ದ ಆಭರಣಗಳನ್ನು ಅನಾಮಧೇಯ ಕಳ್ಳನೊಬ್ಬ 9 ವರ್ಷಗಳ ಬಳಿಕ ಅದನ್ನು ಹಿಂತಿರುಗಿಸಿದ ಅಪರೂಪದ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ರಾಜಧಾನಿ ಭುವನೇಶ್ವರದ ಧೌಲಿ ಪ್ರದೇಶದಲ್ಲಿರುವ ಗೋಪಿನಾಥಪುರದ ಗೋಪಿನಾಥ ದೇವಸ್ಥಾನದಿಂದ 2014ರ ಮೇ ತಿಂಗಳಿನಲ್ಲಿ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಕಿವಿಯೋಲೆ, ಬಳೆಗಳು, ಕೊಳಲು ಮತ್ತು ತಲೆಯ ಕವಚ ಸೇರಿದಂತೆ ಒಟ್ಟು ₹4 … Continued

ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 7 ಮಂದಿ ಸಾವು

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಮಂಗಳವಾರ ಅನಧಿಕೃತ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೂರ್ವ ಮಿಡ್ನಾಪುರದ ಎಗ್ರಾದಲ್ಲಿರುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ನಂತರ ಸ್ಥಳದಲ್ಲಿ ಬೂದು ಹೊಗೆ ಕಾಣಿಸಿಕೊಂಡಿದೆ. ಸ್ಫೋಟದಿಂದ ಗಾಯಗೊಂಡವರಿಗೆ ಸಹಾಯ ಮಾಡಲು ಸ್ಥಳೀಯರು ಧಾವಿಸಿದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ … Continued

ಈ ವರ್ಷ ಮಾನ್ಸೂನ್‌ ಮಳೆ ಸ್ವಲ್ಪ ವಿಳಂಬವಾಗುವ ಸಾಧ್ಯತೆ : ಐಎಂಡಿ

ನವದೆಹಲಿ: ನೈಋತ್ಯ ಮಾನ್ಸೂನ್ ತನ್ನ ಸಾಮಾನ್ಯ ಸಮಯಕ್ಕಿಂತ ಮೂರು ದಿನ ವಿಳಂಬವಾಗಿ ಜೂನ್ 4 ರಂದು ಕೇರಳಕ್ಕೆ ತಲುಪುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಂಗಳವಾರ ತಿಳಿಸಿದೆ. ಸಾಮಾನ್ಯವಾಗಿ ನೈಋತ್ವ ಮಾನ್ಸೂನ್‌ ಜೂನ್‌ 1ರಂದು ಕೇರಳಕ್ಕೆ ಆಗಮಿಸುತ್ತದೆ. 2022 ರಲ್ಲಿ, ಮುಂಗಾರು ನಿಗದಿತ ಸಮಯಕ್ಕಿಂತ ಮೂರು ದಿನಗಳ ಮುಂಚಿತವಾಗಿ ಕೇರಳಕ್ಕೆ ಆಗಮಿಸಿತು. ಪತ್ರಿಕಾ … Continued