ಕಾಡಿನಲ್ಲಿದ್ದ ಇನ್ನೋವಾ ಕಾರಿನಲ್ಲಿ 52 ಕೆಜಿ ಚಿನ್ನ, ₹ 10 ಕೋಟಿ ನಗದು ಪತ್ತೆ…!

ಭೋಪಾಲ್: ಆದಾಯ ತೆರಿಗೆ ಇಲಾಖೆ ಮತ್ತು ಲೋಕಾಯುಕ್ತ ಪೊಲೀಸರು ಭೋಪಾಲ್‌ನಲ್ಲಿ ನಡೆಸಿದ ಪ್ರತ್ಯೇಕ ದಾಳಿಯಲ್ಲಿ ಕೋಟ್ಯಂತರ ಮೌಲ್ಯದ ಚಿನ್ನ ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ. ಬಿಟ್ಟುಹೋದ ಇನ್ನೋವಾ ಕಾರಿನಲ್ಲಿ ₹ 40 ಕೋಟಿಗೂ ಹೆಚ್ಚು ಮೌಲ್ಯದ 52 ಕೆಜಿ ಚಿನ್ನದ ಬಿಸ್ಕತ್‌ಗಳು ಮತ್ತು ₹ 10 ಕೋಟಿ ನಗದು ಪತ್ತೆಯಾಗಿರುವುದು ಗಮನ ಸೆಳೆದಿದೆ. ನಗರದ ಹೊರವಲಯದಲ್ಲಿರುವ ಮೆಂಡೋರಿ … Continued

ವೀಡಿಯೊ…| ದೊಡ್ಡ ಸ್ಫೋಟ, ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ : 11 ಮಂದಿ ಸಾವಿಗೀಡಾದ ಗ್ಯಾಸ್ ಟ್ಯಾಂಕರ್ ಅಪಘಾತದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಜೈಪುರ : ಶುಕ್ರವಾರ ಬೆಳಗ್ಗೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಪೆಟ್ರೋಲ್ ಪಂಪ್‌ನ ಮುಂದೆ ಗ್ಯಾಸ್ ಟ್ಯಾಂಕರ್ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಸ್ಫೋಟ ಸಂಭವಿಸಿ ಉಂಟಾದ ಬೆಂಕಿ ಅನಾಹುತದಲ್ಲಿ 11 ಜನರು ಸಾವಿಗೀಡಾಗಿದ್ದಾರೆ ಹಾಗೂ 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಗ್ಯಾಸ್‌ ಟ್ಯಾಂಕರ್‌ ಹೆದ್ದಾರಿಯಲ್ಲಿ ಅನೇಕ ವಾಹನಗಳಿಗೆ ಡಿಕ್ಕಿ ಹೊಡೆದ ಕೆಲವೇ … Continued

ನನ್ನ ಕೊಲೆಗೆ ಯತ್ನಿಸಿದ ಸಚಿವೆ ಹೆಬ್ಬಾಳ್ಕರ್‌ : ಪ್ರತಿದೂರು ದಾಖಲಿಸಿದ ಸಿ.ಟಿ.ರವಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಸದನದಲ್ಲಿ ನನಗೆ ಕೊಲೆಗಡುಕ ಎಂದು ನಿಂದನೆ ಮಾಡಿ ತಮ್ಮ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ … Continued

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲು

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ ಮುಖಂಡ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ವಿರುದ್ಧ ದೆಹಲಿ ಪೊಲೀಸರು ಗುರುವಾರ (ಡಿ. 19) ಎಫ್‌ಐಆರ್‌ ದಾಖಲಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಘರ್ಷಣೆಯಲ್ಲಿ ಇಬ್ಬರು ಬಿಜೆಪಿ ನಾಯಕರು ಗಾಯಗೊಂಡ ಹಿನ್ನೆಲೆಯಲ್ಲಿ ಅವರ ವಿರುದ್ಧ ಬಿಜೆಪಿ ದೂರು ದಾಖಲಿಸಿತ್ತು. ಸೆಕ್ಷನ್ 117 (ಸ್ವಯಂ ಪ್ರೇರಿತವಾಗಿ ತೀವ್ರ ಗಾಯ … Continued

ದೂರು-ಪ್ರತಿದೂರು: ಸಂಸತ್ತಿ ಹೊರಗೆ ‘ಹಲ್ಲೆ’ ವಿವಾದ ತೀವ್ರ ; ಪೊಲೀಸ್‌ ಠಾಣೆ ಕದ ತಟ್ಟಿದ ಬಿಜೆಪಿ, ಕಾಂಗ್ರೆಸ್…

ನವದೆಹಲಿ: ಸಂಸತ್ತಿನ ಹೊರಗೆ ಆಪಾದಿತ ಘರ್ಷಣೆಯ ನಂತರಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಪರಸ್ಪರರ ಮೇಲೆ ಹಲ್ಲೆ ಮತ್ತು ದುರ್ನಡತೆಯ ಆರೋಪದ ಮೇಲೆ ಪೊಲೀಸ್ ದೂರುಗಳನ್ನು ದಾಖಲಿಸಿವೆ. ಮಂಗಳವಾರ ಸಂಸತ್ತಿನಲ್ಲಿ ಅಮಿತ್ ಶಾ ತಮ್ಮ ಭಾಷಣದಲ್ಲಿ ಡಾ.ಅಂಬೇಡ್ಕರ ಕುರಿತಾದ ಹೇಳಿಕೆಯು ಅವರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿ ವಿಪಕ್ಷಗಳ ಪ್ರತಿಭಟನೆ ಭುಗಿಲೆದ್ದಿತು. ಅವರ ಹೇಳಿಕೆಗಳು ಕಾಂಗ್ರೆಸ್ ಸೇರಿದಂತೆ … Continued

ಕೊನೆಗೂ ಹೈಬ್ರಿಡ್‌ ಮಾದರಿಯಲ್ಲೇ ಚಾಂಪಿಯನ್ಸ್ ಟ್ರೋಫಿ-2025 ; ದೃಢಪಡಿಸಿದ ಐಸಿಸಿ, ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟ

ನವದೆಹಲಿ: ಐಸಿಸಿ (ICC) ಚಾಂಪಿಯನ್ಸ್ ಟ್ರೋಫಿ 2025 ರ ಆಟದ ಸ್ಥಳದ ಸುತ್ತಲಿನ ಗೊಂದಲ ಕೊನೆಗೊಂಡಿದೆ. ತಿಂಗಳ ವಿಳಂಬದ ನಂತರ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC)ಅಂತಿಮವಾಗಿ ಕಾರ್ಯಕ್ರಮದ ಸ್ಥಳಗಳನ್ನು ಅಧಿಕೃತವಾಗಿ ಘೋಷಿಸಿದೆ. “ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯನ್ನು ಪಾಕಿಸ್ತಾನ ಮತ್ತು ತಟಸ್ಥ ಸ್ಥಳದಲ್ಲಿ ಆಡಲಾಗುವುದು” ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ. ಮತ್ತೊಂದು ಪ್ರಮುಖ … Continued

ಅಮಿತ್ ಶಾ ಹೇಳಿಕೆಯಿಂದ ಕೋಲಾಹಲ | ಸಂಸತ್‌ ಬಳಿ ಬಿಜೆಪಿ-ಇಂಡಿಯಾ ಪ್ರತಿಭಟನೆ ; ಬಿಜೆಪಿ ಸಂಸದರಿಗೆ ಗಾಯ; ರಾಹುಲ್‌ ಗಾಂಧಿ ತಳ್ಳಿರುವ ಆರೋಪ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ರಾಜ್ಯಸಭೆಯಲ್ಲಿ ಮಾತನಾಡುವಾಗ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ (BR Ambedkar) ಅವರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸಿ ಎರಡು ದಿನಗಳಿಂದ ಪ್ರತಿಭಟನೆಗಳು ನಡೆಸುತ್ತಿವೆ. ಇಂದು, ಗುರುವಾರ (ಡಿ.19) ಕೂಡ ಸಂಸತ್ ಭವನದ ಎದುರು ಅಮಿತ್ ಶಾ … Continued

ಕುಲ್ಗಾಂನಲ್ಲಿ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು…

ಕಾಶ್ಮೀರ : ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ. ಈ ವೇಳೆ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಕಡ್ಡರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ನೀಡಿದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಆಗ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ನಂತರ ಎನ್‌ಕೌಂಟರ್‌ … Continued

‌ಪರಾರಿಯಾಗಿರುವ ವಿಜಯ ಮಲ್ಯ, ನೀರವ್ ಮೋದಿಯಿಂದ 15,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಆಸ್ತಿ ವಸೂಲಿ ಮಾಡಿದ ಇ.ಡಿ.

ನವದೆಹಲಿ: ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯಗೆ ಸೇರಿದ್ದ ₹ 14,131 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ತಿಳಿಸಿದ್ದಾರೆ. ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ವಾಂಟೆಡ್ ವ್ಯಕ್ತಿಗಳ ಸಾಲವನ್ನು ಮರುಪಾವತಿಸಲು ಜಾರಿ ನಿರ್ದೇಶನಾಲಯವು ಒಟ್ಟು ₹ 22,280 … Continued

ವೀಡಿಯೊ…| ನಿಯಂತ್ರಣ ಕಳೆದುಕೊಂಡು ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ ; ಇಬ್ಬರು ಸಾವು

ಮಂಗಳವಾರ ಕೆ ಇನೌಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ವಿಮಾನವು ಹೆದ್ದಾರಿಯೊಂದರ ಮೇಲೆ ಹಾರುತ್ತಿದ್ದಾಗ ನಿಯಂತ್ರಣವನ್ನು ಕಳೆದುಕೊಳ್ಳುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಹವಾಯಿ ನ್ಯೂಸ್ ನೌ ಪ್ರಕಾರ, ಕಾಮಕಾ ಏರ್ ಸೆಸ್ನಾ 208 ಕಾರವಾನ್ ವಿಮಾನವು ತರಬೇತಿ ಹಾರಾಟವನ್ನು ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ವಿಮಾನವು … Continued