ಆದಿತ್ಯ ಠಾಕ್ರೆ Vs ಮಿಲಿಂದ ದಿಯೋರಾ ; ಮಹಾರಾಷ್ಟ್ರದಲ್ಲಿ ಜಿದ್ದಾಜಿದ್ದಿ ಕದನಕ್ಕೆ ವೇದಿಕೆ ಸಿದ್ಧ

ಮುಂಬೈ : ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣವು ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ರಾಜ್ಯಸಭಾ ಸಂಸದ ಮಿಲಿಂದ ದಿಯೋರಾ ಅವರನ್ನು ವರ್ಲಿಯಿಂದ ಕಣಕ್ಕಿಳಿಸಿದೆ. ಮಾಜಿ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರ ಪುತ್ರ, ದಿಯೋರಾ ಶಿವಸೇನಾ (ಯುಬಿಟಿ) ಅಭ್ಯರ್ಥಿ ಆದಿತ್ಯ ಠಾಕ್ರೆ ವಿರುದ್ಧ ಸ್ಪರ್ಧಿಸಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಆದಿತ್ಯ ಠಾಕ್ರೆ ನಾಮಪತ್ರ ಸಲ್ಲಿಸಿದ … Continued

ವೀಡಿಯೊ…| ಸಿನೆಮಾದಲ್ಲಿ ಪ್ರೇಮಿಗಳನ್ನು ಬೇರ್ಪಡಿಸಿದ್ದಕ್ಕೆ ಕೋಪಗೊಂಡು ಥಿಯೇಟರ್‌ನಲ್ಲಿ ಖ್ಯಾತ ನಟನಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ…!

ಆಘಾತಕಾರಿ ಘಟನೆಯೊಂದರಲ್ಲಿ, ತೆಲುಗು ನಟ ಎನ್‌.ಟಿ. ರಾಮಸ್ವಾಮಿ ನಟಿಸಿದ ಲವ್ ರೆಡ್ಡಿ ಚಿತ್ರವನ್ನು ವೀಕ್ಷಿಸಿದ ನಂತರ ಮಹಿಳೆಯೊಬ್ಬರು ಅವರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಚಿತ್ರತಂಡವು ಗುರುವಾರ ಹೈದರಾಬಾದ್‌ನಲ್ಲಿ ಚಿತ್ರ ಪ್ರದರ್ಶನಗೊಳ್ಳುತ್ತಿರುವ ಥಿಯೇಟರ್‌ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಘಟನೆಯ ವೀಡಿಯೋ ಈಗ ವೈರಲ್ ಆಗಿದ್ದು, ಚಿತ್ರತಂಡವು ಚಿತ್ರವನ್ನು ವೀಕ್ಷಿಸಿದ ನಂತರ ಥಿಯೇಟರ್‌ನಲ್ಲಿ … Continued

ಜಗನ್ ಮೋಹನ್ ರೆಡ್ಡಿ vs ವೈಎಸ್ ಶರ್ಮಿಳಾ | ಕುಟುಂಬದ ಒಡೆತನದ ಷೇರುಗಳ ವರ್ಗಾವಣೆ ; ಸಹೋದರಿ, ತಾಯಿ ವಿರುದ್ಧ ಎನ್‌ಸಿಎಲ್‌ಟಿಗೆ ಜಗನ್ ರೆಡ್ಡಿ ಮೊರೆ

ಹೈದರಾಬಾದ್‌ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ಅವರ ಸಹೋದರಿ ವೈ.ಎಸ್. ಶರ್ಮಿಳಾ ನಡುವಿನ ಆಸ್ತಿ ಜಗಳ ಉಲ್ಬಣಗೊಂಡಿದ್ದು, ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಕುಟುಂಬದ ಒಡೆತನದ ಷೇರುಗಳ ವರ್ಗಾವಣೆಗೆ ಸಂಬಂಧಿಸಿದಂತೆ ತಮ್ಮ ಸಹೋದರಿ ಮತ್ತು ತಾಯಿ ವೈ.ಎಸ್. ವಿಜಯ ರಾಜಶೇಖರ ರೆಡ್ಡಿ ವಿರುದ್ಧ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ … Continued

ಕಾಶ್ಮೀರ : ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮ, ಇಬ್ಬರು ಕಾರ್ಮಿಕರು ಸಾವು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಗುರುವಾರ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಳಿಯಲ್ಲಿ ಸೇನೆಗಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಕೂಡ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಬಾರಾಮುಲ್ಲಾದ ಬುತಪತ್ರಿಯ ಸಾಮಾನ್ಯ ಪ್ರದೇಶದಲ್ಲಿ ಸೈನಿಕರು … Continued

ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ ಖನ್ನಾ ನೇಮಕ

ನವದೆಹಲಿ: ನ್ಯಾಯಮೂರ್ತಿ ಸಂಜೀವ  ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ಅಧಿಸೂಚನೆ ಹೊರಡಿಸಿದ್ದಾರೆ. ಸಿಜೆಐ ಚಂದ್ರಚೂಡ್‌ ಅವರು ಶಿಫಾರಸ್ಸು ಮಾಡಿದ್ದ ನ್ಯಾ. ಸಂಜೀವ್‌ ಖನ್ನಾ ಅವರ ಹೆಸರನ್ನು ಕೇಂದ್ರ ಸರ್ಕಾರವು ಅನುಮೋದಿಸಿದ ನಂತರ ರಾಷ್ಟ್ರಪತಿ ಭವನದಿಂದ ಅಧಿಕೃತವಾಗಿ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. ಕಾನೂನು ಮತ್ತು ನ್ಯಾಯ … Continued

ಕ್ರಿಕೆಟ್‌ | ಇತಿಹಾಸ ನಿರ್ಮಿಸಿದ ಆರ್ ಅಶ್ವಿನ್…! ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ನಲ್ಲಿ ಈಗ ಅತಿಹೆಚ್ಚು ವಿಕೆಟ್‌ ಪಡೆದ ಆಟಗಾರ…!!

ಪುಣೆ: ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ವಿಶ್ವದಲ್ಲಿ ನಂ. 2 ಸ್ಥಾನದಲ್ಲಿರುವ ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಗುರುವಾರ (ಅಕ್ಟೋಬರ್ 24) ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ (ಡಬ್ಲ್ಯುಟಿಸಿ) ಅಗ್ರಗಣ್ಯ ವಿಕೆಟ್ ಪಡೆದವರಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಆಸ್ಟ್ರೇಲಿಯಾದ ನಾಥನ್ ಲಿಯಾನ್ ಅವರ 187 ವಿಕೆಟ್‌ಗಳ ದಾಖಲೆಯನ್ನು ಅವರು ಮುರಿದಿದ್ದಾರೆ. ಅಶ್ವಿನ್ ಅವರಿಗೆ ನಾಥನ್ ಲಿಯಾನ್ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಮಹಾ ವಿಕಾಸ್ ಅಘಾಡಿ ಪಕ್ಷಗಳ ನಡುವೆ 85-85-85 ಸೀಟುಗಳ ಹಂಚಿಕೆ

ಮುಂಬೈ: ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ತನ್ನ ಸೀಟು ಹಂಚಿಕೆ ಒಪ್ಪಂದಕ್ಕೆ ಬಂದಿವೆ. ಮಿತ್ರಪಕ್ಷಗಳು ತಲಾ 85 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ, ಅಂತಿಮ ಒಪ್ಪಂದಕ್ಕೆ ಮುದ್ರೆಯೊತ್ತಲು ಇನ್ನೂ ಚರ್ಚೆಗಳು ನಡೆಯುತ್ತಿವೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿವಸೇನಾ (ಯುಬಿಟಿ) ಸಂಸದ ಸಂಜಯ ರಾವತ್, ನವೆಂಬರ್ 20 … Continued

ಹೈ-ಟೆನ್ಷನ್ ವಿದ್ಯುತ್‌ ಕಂಬ ಏರಿದ ವ್ಯಕ್ತಿ ; ಪ್ರಧಾನಿ ಮೋದಿ, ಮುಖ್ಯ ನ್ಯಾಯಾಧೀಶರೊಂದಿಗೆ ಮಾತನಾಡುವುದಾಗಿ ಪಟ್ಟು…

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ, ಬುಧವಾರ ದೆಹಲಿಯ ಯಮುನಾ ಖಾದರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಹೈಟೆನ್ಷನ್ ವೋಲ್ಟೇಜ್ ವಿದ್ಯುತ್ ಕಂಬವನ್ನು ಏರಿದ ಘಟನೆ ನಡೆದಿದೆ. ಈ ಸಂಬಂಧ ಗೀತಾ ಕಾಲೋನಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದರು. ನಂತರ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ವ್ಯಕ್ತಿಯನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. … Continued

ವಯನಾಡು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ಆಸ್ತಿ ಘೋಷಣೆ ; ಇವರಿಗಿಂತ ಪತಿಯ ಆಸ್ತಿ 5 ಪಟ್ಟು ಹೆಚ್ಚು

 ವಯನಾಡು : ವಯನಾಡು ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿರುವ ಪ್ರಿಯಾಂಕಾ ತಮ್ಮ ಬಳಿ ಇರುವ ಆಸ್ತಿಯ ಮೌಲ್ಯವನ್ನು ಘೋಷಿಸಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಸುಮಾರು 12 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಚುನಾವಣಾ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಅವರ ಪತಿ ರಾಬರ್ಟ್ ವಾದ್ರಾ ಅವರು ಸುಮಾರು 66 ಕೋಟಿ ರೂಪಾಯಿ ಮೌಲ್ಯದ ಆಸ್ತಿ … Continued

ವಯನಾಡು ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡು : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಅವರು ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, … Continued