ವೀಡಿಯೊ..| ಅಸ್ಸಾಂನಲ್ಲಿ ಬೈಕ್ ಸವಾರನನ್ನು ಅಟ್ಟಾಡಿಸಿಕೊಂಡು ಹೋಗಿ ಕೊಂದುಹಾಕಿದ ಘೇಂಡಾಮೃಗ…

ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಪೊಬಿತೋರಾ ವನ್ಯಜೀವಿ ಅಭಯಾರಣ್ಯದ ಬಳಿ ಘೇಂಡಾಮೃಗವೊಂದು ಅಟ್ಟಿಸಿಕೊಂಡು ಹೋಗಿ ದಾಳಿ ಮಾಡಿದ ನಂತರ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತ ವ್ಯಕ್ತಿಯನ್ನು ಸದ್ದಾಂ ಹುಸೇನ್ (37 ವರ್ಷ) ಘಟನೆಯ ಸ್ಥಳದಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ಕಾಮ್ರೂಪ್ ಮೆಟ್ರೋಪಾಲಿಟನ್ ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದೆ. ಅವರು ತಮ್ಮ ದ್ವಿಚಕ್ರ … Continued

ಖ್ಯಾತ ನಟ ಮಿಥುನ್ ಚಕ್ರವರ್ತಿಗೆ `ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಘೋಷಣೆ

ನವದೆಹಲಿ: ಬಾಲಿವುಡ್ ನ ಹಿರಿಯ ನಟ ಮಿಥುನ್ ಚಕ್ರವರ್ತಿ (74) ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು X ನಲ್ಲಿ ಸುದ್ದಿ ಹಂಚಿಕೊಂಡಿದ್ದಾರೆ. 2024ರ ಅಕ್ಟೋಬರ್ 8ರಂದು ನಡೆಯಲಿರುವ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ನಟ ಮಿಥುನ್‌ ಚಕ್ರವರ್ತಿ ಅವರಿಗೆ … Continued

ಚುನಾವಣಾ ಪ್ರಚಾರದ ವೇಳೆ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ ; ಫೋನ್‌ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾನುವಾರ (ಸೆಪ್ಟೆಂಬರ್ 29) ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರದ ರ್ಯಾಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಖರ್ಗೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಮುನ್ನ ಕಥುವಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ಕಾಂಗ್ರೆಸ್ ಅಧ್ಯಕ್ಷ … Continued

ವೀಡಿಯೊ..| ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ರ‍್ಯಾಲಿ ವೇಳೆ ವೇದಿಕೆ ಮೇಲೆಯೇ ಅಸ್ವಸ್ಥಗೊಂಡ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾನುವಾರ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಅವರು ಭಾಷಣವನ್ನು ಮಧ್ಯದಲ್ಲೇ ನಿಲ್ಲಿಸಬೇಕಾಯಿತು. ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದ್ದು, ಪ್ರಚಾರದ ಸಮಾವೇಶದಲ್ಲಿ ಭಾಷಣ ಮಾಡುವಾಗ ಅವರಿಗೆ ತಲೆಸುತ್ತು … Continued

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಭಾರತದ ತಂಡ ಪ್ರಕಟ ; 156.7 ಕಿಮೀ ವೇಗದಲ್ಲಿ ಬೌಲ್‌ ಮಾಡುವ ಮಯಾಂಕ್‌ ತಂಡಕ್ಕೆ ಆಯ್ಕೆ

ನವದೆಹಲಿ: ಬಾಂಗ್ಲಾದೇಶ ವಿರುದ್ಧ ಮುಂಬರುವ ಮೂರು ಪಂದ್ಯಗಳ ಟಿ 20 ಪಂದ್ಯಾವಳಿಗೆ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಯುವ ವೇಗಿ ಮಯಾಂಕ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕೆಕೆಆರ್ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಕೂಡ ಸುಮಾರು ಮೂರು ವರ್ಷಗಳ ನಂತರ ಟಿ 20 ಪಂದ್ಯಾವಳಿಗೆ ಪುನರಾಗಮನ ಮಾಡುತ್ತಿದ್ದಾರೆ. … Continued

ತಮಿಳುನಾಡಿನ ಉಪಮುಖ್ಯಮಂತ್ರಿಯಾಗಿ ಪುತ್ರ ಉದಯನಿಧಿಯನ್ನು ನೇಮಕ ಮಾಡಿದ ಸಿಎಂ ಎಂ.ಕೆ.ಸ್ಟಾಲಿನ್‌

ಚೆನ್ನೈ: ಇತ್ತೀಚಿನ ಬೆಳವಣಿಗೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಭಾನುವಾರ ಮಧ್ಯಾಹ್ನ 3:30ಕ್ಕೆ ರಾಜಭವನದಲ್ಲಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಉದಯನಿಧಿ ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ ಜೊತೆಗೆ ಯೋಜನೆ ಮತ್ತು ಅಭಿವೃದ್ಧಿ ಖಾತೆಯನ್ನು ನೀಡಲಾಗಿದೆ. ಅವರ ಬಳಿ … Continued

ವೀಡಿಯೊ..| ಹೃದಯ ವಿದ್ರಾವಕ ; ಆಸ್ಪತ್ರೆಗೆ ಹೋಗಲು ನಾಲೆಯ ಮೇಲೆ ಉಕ್ಕಿ ಹರಿದ ಹೊಳೆಯಲ್ಲೇ ಗರ್ಭಿಣಿಯನ್ನು ಹೆಗಲ ಮೇಲೆ ಹೊತ್ತೊಯ್ದ ವ್ಯಕ್ತಿ…!

ಹೈದರಾಬಾದ್: ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ವ್ಯಕ್ತಿಯೊಬ್ಬ ತನ್ನ ಭುಜದ ಮೇಲೆ ಹೊತ್ತುಕೊಂಡು ತುಂಬಿ ಹರಿಯುತ್ತಿರುವ ಅಣೆಕಟ್ಟಿನ ಮೇಲೆ ರಭಸವಾಗಿ ಹರಿಯುವ ಹೊಳೆ ದಾಟುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯಲ್ಲಿ ನೆಲೆಸಿರುವ ಬುಡಕಟ್ಟು ಜನಾಂಗದ ಜನವಸತಿ ಪ್ರದೇಶದ ಪಿಂಜರಿಕೊಂಡ ಎಂಬ ಪುಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. … Continued

ವೀಡಿಯೊ| ಹಿಂದಿನ ರಾಜ್ಯಪಾಲರ ಕ್ರಮ ಸಮರ್ಥಿಸಿಕೊಂಡಿದ್ದ ಸಿದ್ದರಾಮಯ್ಯನವರ ಹಳೆ ವೀಡಿಯೊ ಹಂಚಿಕೊಂಡು ಟಾಂಗ್‌ ನೀಡಿದ ಸ್ನೇಹಮಯಿ ಕೃಷ್ಣ…!

ಬೆಂಗಳೂರು : ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಕಾರ್ಯ ವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌‍ ನಾಯಕರು ಟೀಕಿಸುತ್ತಿರುವ ಬೆನ್ನಲ್ಲೇ ಈಗ, ಸಿದ್ದರಾಮಯ್ಯ ಈ ಹಿಂದೆ ರಾಜ್ಯಪಾಲರ ಪಾತ್ರದ ಕುರಿತು ಆಡಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ದೂರುದಾರ ಸ್ನೇಹಮಯಿ‌ ಕೃಷ್ಣ (Snehamayi Krishna) ಅವರು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಅವರ 2011ರ ವೀಡಿಯೊ … Continued

ಮನೆಯಲ್ಲಿ ತಂದೆ, 4 ಹೆಣ್ಣುಮಕ್ಕಳ ಶವ ಪತ್ತೆ

ನವದೆಹಲಿ : ವ್ಯಕ್ತಿ ಮತ್ತು ಆತನ ನಾಲ್ವರು ಪುತ್ರಿಯರು ದೆಹಲಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ತಂದೆಯೇ ಮೊದಲು ಮಕ್ಕಳನ್ನು ಕೊಂದು ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಶುಕ್ರವಾರ ಕಟ್ಟಡದ ಮಾಲೀಕರಿಂದ ಕರೆ ಮಾಡಿ ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಲೀಕರು ಹಾಗೂ … Continued

ಕಾರ್ಮಿಕರ ಕನಿಷ್ಠ ವೇತನ ದರ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಅಸಂಘಟಿತ ನೌಕರರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವೇರಿಯಬಲ್ ಡಿಯರ್ನೆಸ್ ಭತ್ಯೆ (ವಿಡಿಎ)ಯನ್ನು ಪರಿಷ್ಕರಣೆ ಮಾಡುವ ಮೂಲಕ ಕನಿಷ್ಠ ವೇತನ ದರ ಹೆಚ್ಚಿಸಿದೆ. ಇದು ಕಾರ್ಮಿಕರು ಹೆಚ್ಚುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕಟ್ಟಡ ನಿರ್ಮಾಣ, ಲೋಡಿಂಗ್ ಮತ್ತು ಅನ್‌ಲೋಡಿಂಗ್, … Continued