ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ: ಎಎಪಿ

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷ ಗುರುವಾರ ಸ್ಪಷ್ಟಪಡಿಸಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತ ಎಂದು ಪಕ್ಷದ ದೆಹಲಿ ಸಂಚಾಲಕ ಗೋಪಾಲ ರೈ ಹೇಳಿದ್ದಾರೆ. 2025ರ ಆರಂಭದಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ … Continued

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ದೀವ್ಸ್‌ ಅಧ್ಯಕ್ಷರಿಗೂ ಆಹ್ವಾನ

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಮಾರಂಭಕ್ಕೆ ಮಾಲ್ದೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರಿಗೂ ಆಮಂತ್ರಣ ನೀಡಲಾಗಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ವು ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆದ ನಂತರ ಮೋದಿಯನ್ನು ಅಭಿನಂದಿಸಿದ ಒಂದು ದಿನದ ನಂತರ ಮುಯಿಜ್ಜು ಅವರನ್ನು ಆಹ್ವಾನಿಸಲಾಯಿತು. ಇದೇ … Continued

ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ರಣಾವತ್‌ ಗೆ ಕಪಾಳಮೋಕ್ಷ ಮಾಡಿದ ಭದ್ರತಾ ಸಿಬ್ಬಂದಿ

ನವದೆಹಲಿ: ಹಿಮಾಚಲ ಪ್ರದೇಶದ ಮಂಡಿಯಿಂದ ನೂತನವಾಗಿ ಆಯ್ಕೆಯಾದ ಸಂಸದೆ ಸಂಸದೆ ಮತ್ತು ನಟಿ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕಾನ್‌ಸ್ಟೆಬಲ್ ಒಬ್ಬರು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಕಂಗನಾ ರಣಾವತ್ ಅವರು‌ ಚಂಡೀಗಢ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ವಿಮಾನ … Continued

3ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅವರು ಜೂನ್ 9ರಂದು ಭಾನುವಾರ ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಇದಕ್ಕೂ ಮುನ್ನ ಜೂನ್ 8ರಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಸುದ್ದಿಯಾಗಿತ್ತು. ಮೋದಿ ಬುಧವಾರ ತಮ್ಮ … Continued

ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ (Legislative Council) ನಡೆದ ಚುನಾವಣೆಯಲ್ಲಿ ಎಲ್ಲ 11 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3, ಜೆಡಿಎಸ್‌ನಿಂದ 1 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಅಧಿಕೃತ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ನಿಂದ ಬೋಸರಾಜು, ಐವಾನ್ ಡಿಸೋಜಾ, ವಸಂತಕುಮಾರ, ಬಿಲ್ಕೀಸ್ ಬಾನು‌, ಜಗದೇವ ಗುತ್ತೇದಾರ, … Continued

ʼಅಗ್ನಿವೀರʼ ಯೋಜನೆ ಮರುಪರಿಶೀಲಿಸುವಂತೆ ಎನ್‌ಡಿಎ ಸರ್ಕಾರ ರಚನೆಗೆ ಮೊದಲೇ ಜೆಡಿಯು ಒತ್ತಾಯ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯು ಮೊದಲ ಎರಡಕ್ಕಿಂತ ಭಿನ್ನವಾಗಿರಬಹುದು ಎಂಬ ಮೊದಲ ಸಂಕೇತವಾಗಿ, ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರದ ಅಗ್ನಿಪಥ ಯೋಜನೆಯನ್ನು ಮರುಪರಿಶೀಲಿಸಲು ಪಕ್ಷವು ಬಯಸುತ್ತದೆ ಎಂದು ಜೆಡಿಯು ನಾಯಕರೊಬ್ಬರು ಹೇಳಿದ್ದಾರೆ. ಬಿಜೆಪಿ ಮಿತ್ರ ಪಕ್ಷ ಜೆಡಿಯುನ ಮುಖ್ಯ ವಕ್ತಾರ ಕೆ.ಸಿ. ತ್ಯಾಗಿ, ಹಲವಾರು ರಾಜ್ಯಗಳಲ್ಲಿ ಯೋಜನೆಯ ವಿರುದ್ಧ ಅಸಮಾಧಾನವಿದೆ ಎಂದು ಹೇಳಿದ್ದಾರೆ. … Continued

ಲೋಕಸಭೆ ಚುನಾವಣೆ ಫಲಿತಾಂಶ : ಸ್ಪರ್ಧಿಸಿದ್ದ 12 ಮಾಜಿ ಸಿಎಂಗಳಲ್ಲಿ ಗೆದ್ದವರು ಯಾರು..? ಸೋತವರು ಯಾರು..?

ನವದೆಹಲಿ : ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಹಲವಾರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿದ್ದರು. ಪ್ರಮುಖ ಸ್ಪರ್ಧಿಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಚರಂಜಿತ್ ಸಿಂಗ್ ಚನ್ನಿ, ಮನೋಹರ್ ಲಾಲ್ ಖಟ್ಟರ್, ಬಸವರಾಜ ಬೊಮ್ಮಾಯಿ, ಭೂಪೇಶ ಬಾಘೇಲ್, ಜಗದೀಶ ಶೆಟ್ಟರ್, ಅಖಿಲೇಶ ಯಾದವ್, ಶಿವರಾಜ್ ಸಿಂಗ್ ಚೌಹಾಣ್, ಎಚ್‌.ಡಿ.ಕುಮಾರಸ್ವಾಮಿ ಮತ್ತು ದಿಗ್ವಿಜಯ್ ಸಿಂಗ್ … Continued

ಲೋಕಸಭೆ ಚುನಾವಣೆ ಫಲಿತಾಂಶ : ಬಿಜೆಪಿಗೆ ಸ್ವಂತ ಬಲದ ಬಹುಮತ ತಪ್ಪಿಸಿದ 32 ಕ್ಷೇತ್ರಗಳ ಕೇವಲ 6 ಲಕ್ಷ ಮತಗಳು…! ಕ್ಷೇತ್ರಗಳ ಪಟ್ಟಿ ಇಲ್ಲಿದೆ…

ಈ ಲೋಕಸಭಾ ಚುನಾವಣೆಯಲ್ಲಿ 543 ಸ್ಥಾನಗಳಲ್ಲಿ ಎನ್‌ಡಿಎ (NDA) 293 ಸ್ಥಾನಗಳನ್ನು ಪಡೆಯುವ ಮೂಲಕ ಬಹುಮತ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಆದರೆ, 240 ಸ್ಥಾನಗಳನ್ನು ಪಡೆದ ಬಿಜೆಪಿ ತನ್ನದೇ ಆದ ಬಹುಮತ ಸಾಧಿಸಲು ವಿಫಲವಾಗಿದೆ. ಇದು 2014 ಹಾಗೂ 2019ರಲ್ಲಿ ಅದರ ಅದ್ಭುತ … Continued

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ : ಸಮಾರಂಭದಲ್ಲಿ ಬಾಂಗ್ಲಾ ಪ್ರಧಾನಿ, ಶ್ರೀಲಂಕಾ ಅಧ್ಯಕ್ಷರು ಭಾಗಿ

ನವದೆಹಲಿ: ಸತತ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವ ವಿದೇಶಿ ನಾಯಕರಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಸೇರಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಬಿಜೆಪಿ ನೇತೃತ್ವದ ಎನ್‌ಡಿಎ ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನಗಳನ್ನು ಗೆಲ್ಲುವ ಸತತ ಮೂರನೇ ಅವಧಿಗೆ … Continued

ಭಾರತದಲ್ಲಿ ದೀರ್ಘ ಕಾಲ ಪ್ರಧಾನಿಯಾದವರಲ್ಲಿ ಮೋದಿಗೆ 3ನೇ ಸ್ಥಾನ; ಉಳಿದ ನಾಲ್ವರು ಇವರೇ ನೋಡಿ…

ಬಿಜೆಪಿ ನೇತೃತ್ವದ ಮೈತ್ರಿಕೂಟವು ಲೋಕಸಭೆಯಲ್ಲಿ ಬಹುಮತಕ್ಕೆ ಬೇಕಾದ 272 ಸ್ಥಾನಗಳನ್ನು ದಾಟಿದ್ದರೂ, ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಏಕಪಕ್ಷೀಯವಾಗಿ ಇದ್ದಂತೆ ತೋರುತ್ತಿದ್ದ ಚುನಾವಣೆಯನ್ನು “ಕಾಂಟೆ ಕಿ ಟಕ್ಕರ್” ಆಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ಎರಡು ಚುನಾವಣೆಗಳಿಗಿಂತ ಭಿನ್ನವಾಗಿ, ಜೂನ್ 4 ರ ಮಂಗಳವಾರದ ಮತ ಎಣಿಕೆಯ ಪ್ರಕಾರ, ಸಂಸತ್ತಿನ 543 ಸ್ಥಾನಗಳ ಲೋಕಸಭೆಯಲ್ಲಿ 272 ಬಹುಮತದ ಸಂಖ್ಯೆಯನ್ನು … Continued